belagavi news:
ಬೆಂಗಳೂರು: ಮಧ್ಯವರ್ತಿಗಳು ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿ ಯೋಳಗೆ ಪ್ರವೇಶಿಸಲು ಅವಕಾಶ ನೀಡದೆ, ಹೊರಗೇ ಕಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಕರ್ನಾಟಕ ಆಡಳಿತ ಸೇವೆ (KAS) ಅಧಿಕಾರಿಗಳ ಸಂಘ ಬೆಂಗಳೂರು ವತಿಯಿಂದ ಇನ್ ಫೆಂಟ್ರಿ ರಸ್ತೆಯಲ್ಲಿರುವ ಸಂಘದ ನವೀಕರಿಸಿದ್ದ ಕಟ್ಟಡ ಹಾಗೂ ಹೊಸದಾಗಿ ನಿರ್ಮಿಸಲಾದ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಿ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದ ಬಳಿಕ ಅವರು ಮಾತನಾಡಿದರು.
ಅಧಿಕಾರಿಗಳು ಯಾವುದೇ ಕಾರಣಕ್ಕೂ ಕಡತಗಳ ವಿಲೇವಾರಿಯಲ್ಲಿ ವಿಳಂಬ ಮಾಡಬಾರದು ಶೀಘ್ರವಾಗಿ ಕೆಲಸ ನಿರ್ವಹಿಸಬೇಕು ವಿಳಂಬ ನೀತಿ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಅವರು ಎಚ್ಚರಿಸಿದರು.
ಕೆಎಎಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಹಾಗೂ ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಎಎಸ್ ಅಧಿಕಾರಿಗಳ ಸಂಘಕ್ಕೆ 100 ವರ್ಷಗಳ ಇತಿಹಾಸ ವಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ ಮೈಸೂರು ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದು ಸಾಮಾಜಿಕ ಆರ್ಥಿಕ ಅಭಿವೃದ್ಧಿ ಮೂಲಭೂತ ಸೌಕರ್ಯಗಳು ಮತ್ತು ಕೈಗಾರಿಕೆಗಳ ಬೆಳವಣಿಗೆಗೆ ಕಾರಣರಾಗಿದ್ದಾರೆ ಎಂದು ಸಿ ಎಂ ಸಿದ್ದರಾಮಯ್ಯ ಅವರು ಹೇಳಿದರು.
ಅವರ ಕಾಲದಲ್ಲಿ ದಿವಾನರಾಗಿದವರು ಈ ಸಂಘದ ಅಧ್ಯಕ್ಷರಾಗಿದ್ದರು ಎನ್ನುವುದು ಸಂಘದ ಹೆಗ್ಗಳಿಕೆ ಇಂತಹ ದಕ್ಷ ಆಡಳಿತಗಾರರು ತಮಗೆ ದಾರಿದೀಪವಾಗಿದ್ದಾರೆ ಎಂದು ಸಿಎಂ ಅಭಿಪ್ರಾಯಪಟ್ಟರು.
ಜನರ ಹಿತವನ್ನು ಕಾಪಾಡುವುದು ನಮ್ಮ ಕರ್ತವ್ಯ: ಜನರ ಹಿತವನು ಕಾಪಾಡುವುದು ನಮ್ಮ ಪ್ರಮುಖ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗ ಹಾಗೂ ಶಾಸಕಾಂಗ ಒಟ್ಟಾಗಿ ಕೆಲಸ ಮಾಡಬೇಕು ಈ ಎರಡು ಜನರ ಪ್ರತಿನಿಧಿಗಳಾಗಿ ಜನರ ಹಿತವನ್ನು ಕಾಪಾಡುವುದು ತಮ್ಮ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಅಧಿಕಾರಿಗಳಿಗೆ ಕಾನೂನಿನ ಅರಿವಿನ ಜೊತೆಗೆ ಸಾಮಾನ್ಯ ಜ್ಞಾನ ಮತ್ತು ಸಮಾಜದ ಬಗ್ಗೆ ಸ್ಪಷ್ಟ ತಿಳುವಳಿಕೆ ಇರಬೇಕು. ನಿವೃತ್ತಿಯಾಗುವವರೆಗೆ ಜನ ಸೇವೆಯಲ್ಲಿ ತೊಡಗಿಸಿಕೊಳ್ಳುವ ಅವಕಾಶ ಇರುವುದರಿಂದ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು. ಅಸಮಾನತೆ ಇರುವ ಸಮಾಜದಲ್ಲಿ ದುರ್ಬಲ ವರ್ಗಗಳ ಸಮಸ್ಯೆಗಳಿಗೆ ಸ್ಪಂದಿಸಬೇಕು. ಅಧಿಕಾರಿಗಳಿಗೆ ಕಾನೂನಿನ ಅರುಣ ಜೊತೆಗೆ ಸಾಮಾನ್ಯ ಜ್ಞಾನ ಸಮಾಜದ ಬಗ್ಗೆ ಅರಿವು ಇದ್ದಾಗ ಮಾತ್ರ ಜನರ ಅಗತ್ಯಗಳಿಗೆ ಸರಿಯಾಗಿ ಸ್ಪಂದಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಜನರ ಸಮಸ್ಯೆಗಳನ್ನು ಬಗೆಹರಿಸಿ: ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಬಗೆಹರಿಸುವುದೇ ಅಧಿಕಾರಿಗಳ ಮುಖ್ಯ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಮ್ಮ ಕೆಲಸವನ್ನು ನಾವು ಪ್ರೀತಿಸಬೇಕು ಗ್ರಾಮೀಣ ಜನರೊಂದಿಗೆ ಪ್ರೀತಿಯಿಂದ ಮಾತನಾಡಿಸಿ ಅವರ ಸಮಸ್ಯೆಗಳನ್ನು ಅರ್ಥೈಸಿಕೊಂಡು ಪರಿಹರಿಸಿದರೆ ಅವರು ನಮ್ಮನ್ನು ಮರೆಯುವುದಿಲ್ಲ ಎಂದು ಹೇಳಿದರು. ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದೆ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾಯಿಸಲಾಗುತ್ತಿದೆ ಎಂದರು.
ಜನಸೇವೆಗೆ ದೊರೆತಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಸರ್ಕಾರ ರೂಪಿಸುವ ನೀತಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ ಪಾತ್ರ ಅತಂತ್ಯ ಮಹತ್ವದ್ದು ಎಂದು ಹೇಳಿದರು.
ತೃಪ್ತಿದಾಯಕವಾಗಿ ಕೆಲಸ ಮಾಡಿರುವುದಕ್ಕಿಂತ ದೊಡ್ಡ ಪ್ರಮಾಣ ಪತ್ರ ಮತ್ತೊಂದಿಲ್ಲ ಅಧಿಕಾರಿಗಳು ತಮ್ಮ ಕಾರ್ಯ ಕ್ಷಮತೆಯನ್ನು ಅತ್ಯಾವಲೋಕನ ಮಾಡಿಕೊಳ್ಳಬೇಕು ಜೀವನದಲ್ಲಿ ಸಾರ್ಥಕತೆಯನ್ನು ಕಂಡುಕೊಳ್ಳುವ ಜನ ಸೇವೆ ತೃಪ್ತಿ ಕರವಾಗಿರಬೇಕು ಎಂಬ ಭಾವನೆ ಹೊಂದಿರಬೇಕು ಎಂದು ಸಿಎಂ ಸಲಹೆ ನೀಡಿದರು.
ಶೀಘ್ರವಾಗಿ ಪದೋನ್ನತಿ ಆಗಲಿದೆ: ಪದೋನ್ನತಿ ಬಗ್ಗೆ ಕಂದಾಯ ಸಚಿವರು ಕಾರ್ಯೋನ್ಮುಖರಾಗಿದ್ದು, ಶೀಘ್ರವಾಗಿ ಪದೋನ್ನತಿ ಆಗಲಿದೆ ಶೇ 33% ಅಧಿಕಾರಿಗಳಿಗೆ ಸಿಇಓಗಳಾಗಿ ಬಡ್ಡಿ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಅವರು ಇದೇ ವೇಳೆ ನೀಡಿದರು.
ಕೆ ಎ ಎಸ್ ಅಧಿಕಾರಿಗಳ ಸಂಘದಲ್ಲಿ ಹೆಚ್ಚುವರಿ 11 ಕೊಠಡಿಗಳನ್ನು ನಿರ್ಮಿಸಲಾಗಿದೆ ಹೊರಭಾಗಗಳಿಂದ ಆಗಮಿಸುವ ಅಧಿಕಾರಿಗಳಿಗೆ ಇದು ಅನುಕೂಲವಾಗಲಿದೆ. ಈ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಶಿವಾ ಸ್ವಾಮಿ ಉಪಾಧ್ಯಕ್ಷ ಚೆನ್ನಬಸಪ್ಪ ಕಾರ್ಯದರ್ಶಿಸುವ ಕುಮಾರ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
Also Read: