Belagavi News:
ವಿಧಾನ ಪರಿಷತ್ತು ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಚ್ ಕೆ ಸುರೇಶ್ ಅವರು ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನದಲ್ಲಿ ಆನೆ ಪ್ರಮಾಣ ಮಾಡುವ ಮೂಲಕ ತಮ್ಮ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.
ಬೇಲೂರಿನ ಪ್ರಸಿದ್ಧ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ಆವರಣದಲ್ಲಿರುವ ಬಲಿಕಲ್ಲು ಮುಟ್ಟಿ ಮಾತನಾಡಿದ ಶಾಸಕ ಸುರೇಶ್ ,"ನಾನು ಪಕ್ಷಕ್ಕೆ ದ್ರೋಹ ಮಾಡಿಲ್ಲ, ಅಡ್ಡ ಮತದಾನ ಮಾಡಿಲ್ಲ" ಎಂದು ಮೂರು ಬಾರಿ ಉಚ್ಚರಿಸಿ ಪ್ರಮಾಣ ಮಾಡಿದರು. ಈ ಮೂಲಕ ತಮ್ಮ ವಿರುದ್ಧ ಕೇಳಿ ಹೊಂದಿರುವ ಆರೋಪಗಳಿಗೆ ಸಾರ್ವಜನಿಕವಾಗಿ ಸ್ಪರ್ಶನೆ ನೀಡಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಕೆಲ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂಬ ಆರೋಪ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಬಿಜೆಪಿ ಶಾಸಕ ಸುರೇಶ್ ಅವರ ಈ ನಡೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ತಾವು ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಯಾವುದೇ ರೀತಿಯ ಪಕ್ಷದ್ರೋಹ ಅಥವಾ ಅಡ್ಡ ಮತದಾನ ಮಾಡಿಲ್ಲ ಎಂಬ ಸಂದೇಶವನ್ನು ಜನರಿಗೆ ಹಾಗೂ ಪಕ್ಷದ ನಾಯಕರಿಗೆ ತಲುಪುವ ಉದ್ದೇಶದಿಂದ ದೇವರ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡಿದ್ದಾಗಿ ತಿಳಿದು ಬಂದಿದೆ.
ಶಾಸಕರ ಈ ಕ್ರಮಕ್ಕೆ ರಾಜಕೀಯ ವಲಯದಲ್ಲಿ ವಿವಿಧ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಇನ್ನಷ್ಟು ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ.
ಚನ್ನಕೇಶವ ಸ್ವಾಮಿ ದೇಗುಲದಲ್ಲಿ ಆಣೆ ಪ್ರಮಾಣ ಮಾಡಿದ ಶಾಸಕ ಎಚ್.ಕೆ.ಸುರೇಶ್ :
ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಾರೆ ಎಂಬ ಆರೋಪಗಳ ಬೆನ್ನಲ್ಲೇ ಹಾಸನ ಜಿಲ್ಲೆಯ ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಎಚ್ ಕೆ ಸುರೇಶ್ ಅವರು ಮಂಗಳವಾರ ಐತಿಹಾಸಿಕ ಸೂಚಕ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವರ ಸನ್ನಿಧಿಯಲ್ಲಿ ಆನೆ ಪ್ರಮಾಣ ಮಾಡುವ ಮೂಲಕ ತಮ್ಮ ಮೇಲಿನ ಆರೋಪಗಳನ್ನು ಖಡಾಖಂಡಿತವಾಗಿ ತಳ್ಳಿ ಹಾಕಿದ್ದಾರೆ.
ಬೆಳಿಗ್ಗೆ ದೇವಾಲಯಕ್ಕೆ ಭೇಟಿ ನೀಡಿದ ಶಾಸಕ ಸುರೇಶ್, ಶ್ರೀ ಚನ್ನಕೇಶವ ಸ್ವಾಮಿ, ಸೌಮ್ಯ ನಾಯಕಿ ಹಾಗೂ ರಂಗನಾಯಕಿ ಅಮ್ಮನವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕೇಶವ ಸ್ವಾಮಿಯ ಪಾದಮಟ್ಟಿ ಭಕ್ತಿಯಿಂದ ನಮಸ್ಕರಿಸಿದವರು, "ಪೂರ್ವಜನ್ಮದ ಪುಣ್ಯದಿಂದ ನನಗೆ ಭಗವಂತನ ಬಲಭಾಗದಲ್ಲಿ ವಾಸ ಮಾಡುವ ಹಾಗೂ ಕ್ಷೇತ್ರದ ಜನರ ಸೇವೆ ಮಾಡುವ ಅಪೂರ್ವ ಅವಕಾಶ ಸಿಕ್ಕಿದೆ" ಎಂದು ಹೇಳಿದರು.
ನಂತರ ದೇವಾಲಯದ ಆವರಣದಲ್ಲಿ ಎದುರಿನ ಬಳಿಕಲ್ಲು ಮುಟ್ಟಿ ಆಣೆ ಪ್ರಮಾಣ ಮಾಡಿದ ಶಾಸಕ ಸುರೇಶ್ ,"ಈ ಕರಿಕಲ್ಲೇ ಸಾಕ್ಷಿ, ನಾನು ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಅಡ್ಡ ಮತದಾನ ಮಾಡಿಲ್ಲ" ಎಂದು ಮೂರು ಬಾರಿ ಗಟ್ಟಿಯಾಗಿ ಉಚ್ಚರಿಸಿದರು.
ಅಷ್ಟೇ ಅಲ್ಲದೆ, "ನಾನು ನನ್ನ ಜೀವವಿರುವವರೆಗೂ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ದ್ರೋಹ ಮಾಡಿಲ್ಲ" ಎಂದು ಮೂರು ಬಾರಿ ಉಚ್ಚರಿಸುವ ಮೂಲಕ ತಮ್ಮ ಪಕ್ಷ ನಿಷ್ಠೆಯನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸಿದ್ದರು.
ವಿಧಾನ ಪರಿಷತ್ ಚುನಾವಣೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಅಡ್ಡ ಮತದಾನ ಆರೋಪಗಳು ತೀವ್ರ ಚರ್ಚೆಗೆ ಗ್ರಾಸರದಲ್ಲಿ ಶಾಸಕ ಸುರೇಶ್ ಅವರ ಆಣೆ ಪ್ರಮಾಣ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡುವ ಮೂಲಕ ತಮ್ಮ ವಿರುದ್ಧದ ಆರೋಪಗಳಿಗೆ ಉತ್ತರ ನೀಡುವ ಮತ್ತು ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
'ಮೋದಿಗೆ ದ್ರೋಹ ಮಾಡಿದರೆ ಭಗವಂತ ಕ್ಷಮಿಸುವುದಿಲ್ಲ' - ಶಾಸಕ ಎಚ್ ಕೆ ಸುರೇಶ್ :
ಬೇಲೂರು ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚನ್ನಕೇಶವ ಸ್ವಾಮಿ ದೇವಾಲಯದಲ್ಲಿ ಆಣೆ ಪ್ರಮಾಣ ಮಾಡಿದ ಬಳಿಕ ಬೇಲೂರು ಬಿಜೆಪಿ ಶಾಸಕ ಎಚ್ ಕೆ ಸುರೇಶ್ ತಮ್ಮ ವಿರುದ್ಧದ ಆರೋಪಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಮಾತನಾಡಿದ ಅವರು, "ನನ್ನ ವಿರುದ್ಧ ಕೇಳಿ ಬರುತ್ತಿರುವ ಅಡ್ಡ ಮತದಾನದ ಅಪಪ್ರಚಾರ ಈ ಕ್ಷೇತ್ರದ ವಿರುದ್ಧ ನಡೆದಿರುವ ದೊಡ್ಡ ಪಿತೂರಿ ಮತ್ತು ಷಡ್ಯಂತ್ರವಾಗಿದೆ. ನಮ್ಮ ಕ್ಷೇತ್ರಕ್ಕೆ ಖುದ್ದಾಗಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಬಂದು ಪ್ರಚಾರ ಮಾಡಿದ್ದರು. ಅಂತಹ ನಾಯಕರಿಗೆ ಹಾಗೂ ಪಕ್ಷಕ್ಕೆ ನಾನು ಅನ್ಯಾಯ ಮಾಡಿದರೆ ಭಗವಂತನನ್ನು ಎಂದಿಗೂ ಕ್ಷಮಿಸುವುದಿಲ್ಲ" ಎಂದು ಹೇಳಿದರು.
ತಾವು ಪಕ್ಷದ ಸೂಚನೆಯಂತೆ ಮತ ಚಲಾವಣೆ ಮಾಡಿರುವುದಾಗಿ ಸ್ಪಷ್ಟಪಡಿಸಿದ ಅವರು, "ನಮ್ಮ ಪಕ್ಷದ ವಿರೋಧ ಪಕ್ಷದ ನಾಯಕರು ಸೂಚಿಸಿದಂತೆ ನಾನು ನಿಖರವಾಗಿ ನನ್ನ ಮತ ಚಲಾವಣೆ ಮಾಡಿದ್ದೇನೆ. ಇದಕ್ಕೆ ಆ ಪರಮಾತ್ಮನೇ ಸಾಕ್ಷಿ" ಎಂದು ತಿಳಿಸಿದರು.
ಅಲ್ಲದೆ, ತಮ್ಮನ್ನು ಯಾವುದೇ ರೀತಿಯ ಆಮಿಷ ಅಥವಾ ಒತ್ತಡದಿಂದ ಪ್ರಭಾವಿಸಲು ಸಾಧ್ಯವಿಲ್ಲ ಎಂದು ಹೇಳಿದ ಶಾಸಕ ಸುರೇಶ್, "ನನ್ನನ್ನು ಹಣದಿಂದಾಗಲಿ ಅಥವಾ ದೌರ್ಜನ್ಯದಿಂದಾಗಲಿ ಯಾರು ಖರೀದಿಸಲು ಸಾಧ್ಯವಿಲ್ಲ. ನನ್ನನ್ನು ಕೇವಲ ಜನರ ಪ್ರೀತಿಯಿಂದ ಮಾತ್ರ ಖರೀದಿಸಲು ಸಾಧ್ಯ. ಕ್ಷೇತ್ರದ ಜನರ ಪ್ರೀತಿಯೇ ನನಗೆ ಶ್ರೀರಕ್ಷೆ " ಎಂದು ಹೇಳಿದರು.
ತಮ್ಮ ವಿರುದ್ಧದ ಆರೋಪಗಳ ಹಿಂದೆ ಸಂತು ಇದೆ ಎಂದು ಆರೋಪಿಸಿದವರು, "ನನ್ನ ವಿರುದ್ಧ ನಡೆದಿರುವ ಈ ಪಿತೂರಿಯ ಹಿಂದಿನ ಷಡ್ಯಂತ್ರವನ್ನು ಭಗವಂತನೇ ಎಲ್ಲರಿಗೂ ತಿಳಿಸಲಿ ಎಂಬ ಕಾರಣಕ್ಕೆ ನಾನು ಈ ಆಣೆ ಪ್ರಮಾಣ ಮಾಡಿದ್ದೇನೆ" ಎಂದು ಆಕ್ರೋಶ ಹಾಗೂ ಬೇಸರ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನ ಆರೂಪದ ನಡುವೆಯೇ ದೇವರ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡಿ ನೀಡಿದ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
Also Read: