BELAGAVI NEWS :
ಹೆಚ್ಚಿನ ಬಡ್ಡಿ ಅಮಿಷ : ಬೆಳಗಾವಿಯಲ್ಲಿ ಮತ್ತೆರಡು ಖಾಸಗಿ ಹೂಡಿಕೆ ಕಂಪನಿಗಳ ಮೇಲೆ ಅಧಿಕಾರಿಗಳ ದಾಳಿ
ಹೆಚ್ಚಿನ ಬಡ್ಡಿ ನೀಡುವುದಾಗಿ ಸಾರ್ವಜನಿಕರಿಗೆ ಆಮಿಷ ಒಡ್ಡಿ ಕೋಟ್ಯಾಂತರ ರೂಪಾಯಿ ಹಣ ಸಂಗ್ರಹಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಮತ್ತೆರಡು ಖಾಸಗಿ ಹೂಡಿಕೆ ಕಂಪನಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶುಕ್ರವಾರ ರಾತ್ರಿ ಬೆಳಗಾವಿಯ ಟಿಲಕವಾಡಿಯಲ್ಲಿರುವ ಗ್ರೋಧನ್ ಕನ್ಸಲ್ಟಿಂಗ್ ಎಲ್‌ಎಲ್‌ಪಿ ಹಾಗೂ ಮಹಾತ್ಮ ಪುಲೆ ರಸ್ತೆಯಲ್ಲಿರುವ ಸಿಟಿ ಇಂಡೆಕ್ಸ್ ಕಂಪನಿ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.
ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಅವರ ಆದೇಶದ ಮೇರೆಗೆ ಉಪವಿಭಾಗಾಧಿಕಾರಿ ಶ್ರವಣ್ ಕುಮಾರ್ ನಾಯಕ ನೇತೃತ್ವದಲ್ಲಿ ಕಂದಾಯ, ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತು.
ದಾಳಿ ವೇಳೆ ಕಂಪನಿಗಳ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಸಾರ್ವಜನಿಕರಿಂದ ಹೂಡಿಕೆ ರೂಪದಲ್ಲಿ ಸಂಗ್ರಹಿಸಲಾದ ಹಣದ ಮೂಲ, ಸಂಸ್ಥೆಗಳ ಕಾರ್ಯವೈಕರಿ ಹಾಗೂ ಹೆಚ್ಚಿನ ಬಡ್ಡಿ ಭರವಸೆಯ ಹಿಂದಿನ ಅಂಶಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ.
ಹೆಚ್ಚಿನ ಲಾಭದ ಭರವಸೆ ನೀಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸುವ ಸಂಸ್ಥೆಗಳ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದ್ದು, ಹೂಡಿಕೆ ಮಾಡುವ ಮುನ್ನ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಹೆಚ್ಚಿನ ಬಡ್ಡಿ ಅಮಿಷ ಆರೋಪ : ಬೆಳಗಾವಿಯಲ್ಲಿ ಅನಧಿಕೃತ ಹೂಡಿಕೆ ಸಂಸ್ಥೆಗಳ ವಿರುದ್ಧ ಜಿಲ್ಲಾಡಳಿತ ಕಾರ್ಯಾಚರಣೆ ಮುಂದುವರಿಕೆ
ಹೆಚ್ಚಿನ ಬಡ್ಡಿ ನೀಡುವುದಾಗಿ ಸಾರ್ವಜನಿಕರಿಗೆ ಅಮಿಷ ಒಡ್ಡಿ ಹಣ ಸಂಗ್ರಹಿಸಿದ ಆರೋಪ ದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಅನಧಿಕೃತ ಹೂಡಿಕೆ ಸಂಸ್ಥೆಗಳ ವಿರುದ್ಧ ಜಿಲ್ಲಾಡಳಿತ ಕಾರ್ಯಾಚರಣೆ ಮುಂದುವರೆದಿದೆ.
ಇತ್ತೀಚಿಗೆ ಶಿವಂ ಅಸೋಸಿಯೇಟ್ಸ್ ಹಾಗೂ ಆದಿತ್ಯ ರಾಜ್ ಕ್ಯಾಪಿಟಲ್ ವಿರುದ್ಧ ಕೈಗೊಂಡ ಕ್ರಮದ ಬೆನ್ನೆಲ್ಲೇ , ಮತ್ತೆರಡು ಖಾಸಗಿ ಹೂಡಿಕೆ ಕಂಪನಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರಾಥಮಿಕ ತನಿಕೆಯಲ್ಲಿ ಈ ಸಂಸ್ಥೆಗಳು ಸಾರ್ವಜನಿಕರಿಗೆ ತಿಂಗಳಿಗೆ ಶೇ.4 ರಿಂದ 5ರಷ್ಟು ಹೆಚ್ಚಿನ ಬಡ್ಡಿ ನೀಡುವುದಾಗಿ ಭರವಸೆ ನೀಡಿ, ದೊಡ್ಡ ಪ್ರಮಾಣದಲ್ಲಿ ಹಣ ಸಂಗ್ರಹಿಸುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿ ವೇಳೆ ಅಧಿಕಾರಿಗಳು ಕಂಪನಿಗಳ ಹಣಕಾಸು ವ್ಯವಹಾರಗಳು, ಹೂಡಿಕೆದಾರರ ವಿವರಗಳು, ಲೆಕ್ಕಪತ್ರಗಳು ಹಾಗೂ ಇತರ ಪ್ರಮುಖ ದಾಖಲೆಗಳನ್ನು ಪರಿಶೀಲಿಸಿದರು. ತಡ ರಾತ್ರಿಯವರೆಗೂ ದಾಖಲೆಗಳ ಪರಿಶೀಲನೆ ನಡೆಸಲಾಗಿದ್ದು, ಸಂಸ್ಥೆಗಳ ಕಾರ್ಯವೈಕರಿ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ.
ಕಾರ್ಯಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಸಾರ್ವಜನಿಕರ ಹಣದ ಸುರಕ್ಷತೆ ದೃಷ್ಟಿಯಿಂದ ನಿಯಮ ಉಲ್ಲಂಘಿಸುವ ಹೂಡಿಕೆ ಸಂಸ್ಥೆಗಳ ವಿರುದ್ಧ ಮುಂದಿನ ದಿನಗಳಲ್ಲಿ ಕ್ರಮ ಮುಂದುವರಿಸಲಾಗುವುದು ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.
ಬೆಳಗಾವಿ ಹೂಡಿಕೆ ಸಂಸ್ಥೆಗಳ ದಾಳಿ : ಗ್ರೋಧನ್ ನಲ್ಲಿ 38 ಕೋಟಿ, ಸಿಟಿ ಇಂಡೆಕ್ಸ್ ನಲ್ಲಿ 30 ಕೋಟಿ ರೂ. ಹೂಡಿಕೆ ಪತ್ತೆ
ಹೆಚ್ಚಿನ ಬಡ್ಡಿ ನೀಡುವ ಭರವಸೆ ನೀಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆದ ಖಾಸಗಿ ಹೂಡಿಕೆ ಸಂಸ್ಥೆಗಳ ಮೇಲಿನ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಹೂಡಿಕೆ ವಿವರಗಳು ಪತ್ತೆಯಾಗಿವೆ.
ಉಪ ವಿಭಾಗಾಧಿಕಾರಿ ಶ್ರವಣ್ ಕುಮಾರ್ ನಾಯಕ್ ಅವರು ಮಾಹಿತಿ ನೀಡಿದು, ಗ್ರೋಧನ್ ಕನ್ಸಲ್ಟಿಂಗ್ ಎಲ್ಎಲ್‌ಪಿ ಸಂಸ್ಥೆಯಲ್ಲಿ ಸುಮಾರು 1,100 ಹೂಡಿಕೆದಾರರಿಂದ 38 ಕೋಟಿ ರೂಪಾಯಿ ಹಣ ಸಂಗ್ರಹಿಸಿರುವುದು ಪ್ರಾಥಮಿಕ ತನಿಕೆಯಲ್ಲಿ ತಿಳಿದು ಬಂದಿದೆ ಎಂದು ಹೇಳಿದ್ದಾರೆ.
ಸಂಸ್ಥೆಯು ಕೈ ಸಾಲದ ರೂಪದಲ್ಲಿ ಸಾರ್ವಜನಿಕರಿಂದ ಹಣ ಪಡೆದು ಹೂಡಿಕೆ ಮಾಡಿಸಿಕೊಂಡಿರುವ ಮಾಹಿತಿ ಲಭ್ಯವಾಗಿದ್ದು, ಈ ಸಂಬಂಧ ದಾಖಲೆಗಳ ಪರಿಶೀಲನೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಸಿಟಿ ಸಂಸ್ಥೆಯಲ್ಲಿ ಸುಮಾರು 1,500 ಹೂಡಿಕೆದಾರರು 30 ಕೋಟಿ ರೂಪಾಯಿ ಹೂಡಿಕೆ ಮಾಡಿರುವುದು ಪತ್ತೆಯಾಗಿದೆ. ಡಿಬೆಂಚರ್ ಗಳ ಮೂಲಕ ಸಾರ್ವಜನಿಕರಿಂದ ಹಣ ಸಂಗ್ರಹಿಸಿರುವುದು ದಾಖಲೆಗಳಿಂದ ಗೊತ್ತಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಿಟಿ ಇಂಡೆಕ್ಸ್ ಸಂಸ್ಥೆ ಸೆಬಿಯಲ್ಲಿ ನೋಂದಣಿ ಆಗಿರುವ ಮಾಹಿತಿ ಲಭ್ಯವಾಗಿದ್ದು, ಸಂಸ್ಥೆಯ ನೋಂದಣಿ, ಕಾನೂನು ಬದ್ಧತೆ ಹಾಗೂ ಹಣಕಾಸು ವ್ಯವಹಾರಗಳ ಕುರಿತು ಅಧಿಕಾರಿಗಳು ಸಮಗ್ರ ತನಿಕೆ ನಡೆಸುತ್ತಿದ್ದಾರೆ.
ಗ್ರೋಧನ್ ಕನ್ಸಲ್ಟಿಂಗ್ ಎಲ್‌ಎಲ್‌ಪಿ ಸಂಸ್ಥೆಯ ಪ್ರಾಥಮಿಕ ತನಿಖೆ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುವುದು. ಸಿಟಿ ಇಂಡೆಕ್ಸ್ ಸಂಸ್ಥೆಯ ಮೇಲಿನ ಪರಿಶೀಲನೆ ಶನಿವಾರವು ಮುಂದುವರೆಯಲಿದ್ದು, ಸಂಪೂರ್ಣ ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶ್ರವಣಕುಮಾರ್ ನಾಯಕ್ ತಿಳಿಸಿದ್ದಾರೆ.