belagavi news :
₹39,437 ಕೋಟಿ ಘನ ತ್ಯಾಜ್ಯ ಟೆಂಡರ್ ವಿವಾದಕ್ಕೆ ಹೊಸ ತಿರುಗು !
ಬೆಂಗಳೂರು ನಗರದ ಘನ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ₹39,437 ಕೋಟಿ ಮೊತ್ತದ ಬೃಹತ್ ಟೆಂಡರ್ ಕುರಿತು ಪರಿಶೀಲನೆ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಗೆ ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ವಿಶೇಷ ಮನವಿ ಸಲ್ಲಿಸಿದ್ದಾರೆ.
"ಯಾವುದೇ ರಾಜಕೀಯ, ಆಡಳಿತಾತ್ಮಕ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ, ಆತ್ಮಸಾಕ್ಷಿ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ ವರದಿ ನೀಡಬೇಕು" ಎಂದು ಅವರು ಆಗ್ರಹಿಸಿದ್ದಾರೆ. ಈ ವಿಚಾರ ಕೇವಲ ಒಂದು ಟೆಂಡರ್ ಗೆ ಸೀಮಿತವಾಗಿಲ್ಲ; ಬೆಂಗಳೂರಿನ ಭವಿಷ್ಯ, ತೆರಿಗೆದಾರರ ಹಣ ಮತ್ತು ಸಾರ್ವಜನಿಕರ ವಿಶ್ವಾಸಕ್ಕೆ ಸಂಬಂಧಿಸಿದ ಮಹತ್ವದ ವಿಷಯವಾಗಿದೆ ಎಂದು ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.
ಅಷ್ಟೇ ಅಲ್ಲದೆ, ರಾಜ್ಯದ ಹಣಕಾಸು ಇಲಾಖೆಯೇ ಈ ಟೆಂಡರ್ ಪ್ರಕ್ರಿಯೆ ಕುರಿತು ಗಂಭೀರ ಅನ್ವೇಷಣೆಗಳನ್ನು ದಾಖಲಿಸಿರುವುದನ್ನು ಉಲ್ಲೇಖಿಸಿದವರು, ಸಮಿತಿಯು ಎಲ್ಲಾ ಅಂಶಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ಪಾರದರ್ಶಕ ವರದಿ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಗ್ರೇಡರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಡೆಯಲಿರುವ ಈ ಬೃಹತ್ ಯೋಜನೆ ಈಗ ರಾಜಕೀಯ ವಲಯದಲ್ಲಿ ಬಾರಿ ಚರ್ಚೆಗೆ ಕಾರಣವಾಗಿದ್ದು, ಸಮಿತಿಯ ವರದಿಯತ್ತ ಎಲ್ಲರ ಗಮನ ನೆಟ್ಟಿದೆ.
ಬೆಂಗಳೂರಿಗೆ ಸಂಬಂಧಿಸಿದ ಅತ್ಯಂತ ಮಹತ್ವದ ವಿಷಯವನ್ನು ಪರಿಶೀಲಿಸಲು ರಾಜ್ಯ ಸರ್ಕಾರ ನಿಮ್ಮನ್ನು ಉತ್ತಮ ಮಟ್ಟದ ಸಮಿತಿಗೆ ನೇಮಿಸಿದೆ. ನೀವು ಕೇವಲ ಈ ಸಮಿತಿಯ ಸದಸ್ಯರಲ್ಲ. ನೀವು ಈ ನಗರದ ನಾಗರಿಕರು, ತೆರಿಗೆ ಪಾವತಿಸುವವರು, ಬೆಂಗಳೂರಿನ ಪ್ರಗತಿಯ ಪಾಲುದಾರರು ಮತ್ತು ಹಕ್ಕುದಾರರು. ನಿಮ್ಮ ಕುಟುಂಬಗಳು ಮತ್ತು ಮಕ್ಕಳ ಭವಿಷ್ಯವೂ ಇದೇ ನಗರದ ಭವಿಷ್ಯದೊಂದಿಗೆ ಬೆಸೆದುಕೊಂಡಿದೆ. ಹೀಗಾಗಿ, ನಿಮ್ಮ ಮುಂದೆ ಇರುವ ಪ್ರಶ್ನೆ ಕೇವಲ ಒಂದು ಟೆಂಡರ್ ಕಡತದ ಪ್ರಶ್ನೆಯಲ್ಲ. ಮುಂದಿನ ಮೂರು ದಶಕಗಳ ಕಾಲ ಬೆಂಗಳೂರಿನ ಜನರ ಹಣ, ನಗರದ ಆಡಳಿತ ಮತ್ತು ಸಾರ್ವಜನಿಕ ಸಂಪನ್ಮೂಲಗಳ ಭವಿಷ್ಯವನ್ನು ನಿರ್ಧರಿಸುವ ಪ್ರಶ್ನೆಯಾಗಿದೆ.
ಬೆಂಗಳೂರು ನಗರದ ಘನ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ₹39,437 ಕೋಟಿ ಮೊತ್ತದ ಬೃಹತ್ ಟೆಂಡರ್ ಕುರಿತು ಪರಿಶೀಲನೆ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಗೆ ವಿಪಕ್ಷ ನಾಯಕ ಆರ್ ಅಶೋಕ್ ವಿಶೇಷ ಮನವಿ ಸಲ್ಲಿಸಿದ್ದಾರೆ.
ರಾಜ್ಯದ ಹಣಕಾಸು ಇಲಾಖೆ ಈ ಟೆಂಡರ್ ಕುರಿತು ಗಂಭೀರ ಪರಿಶೀಲನೆಗಳನ್ನು ದಾಖಲಿಸಿರುವುದನ್ನು ಉಲ್ಲೇಖಿಸಿರುವ ಅಶೋಕ್, 'ಈಗಾಗಲೇ ಬೆಂಗಳೂರು ನಗರದ ಜನರು ಆಸ್ತಿ ತೆರಿಗೆ, ವಿವಿಧ ಸೆಸ್ ಗಳು, ಬಳಕೆದಾರರ ಶುಲ್ಕಗಳು ಹಾಗೂ ಇತರೆ ತೆರಿಗೆಗಳ ಭಾರವನ್ನು ಹೊರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕ ಹಣದ ಸಾವಿರಾರು ಕೋಟಿಗಳ ಬಳಕೆಯ ಬಗ್ಗೆ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವೂ ಅತ್ಯಂತ ಜವಾಬ್ದಾರಿತವಾಗಿರಬೇಕು" ಎಂದು ಹೇಳಿದ್ದಾರೆ.
ಸಮಿತಿಯ ವರದಿ ಕೇವಲ ಸರ್ಕಾರಕ್ಕೆ ಸಲ್ಲಿಸುವ ದಾಖಲೆಯಾಗಿರುವುದಿಲ್ಲ, ಅದು ಮುಂದಿನ ಪೀಳಿಗೆಗಳ ಮೇಲು ಪರಿಣಾಮ ಬೀರುವ ಮಹತ್ವದ ನಿರ್ಧಾರದ ಅಡಿಪಾಯವಾಗಿದೆ ಮತ್ತು ಅವರು ಅಭಿಪ್ರಾಯ ಪಟ್ಟಿದ್ದಾರೆ. ಆದ್ದರಿಂದ ಯಾವುದೇ ರಾಜಕೀಯ ಆಡಳಿತಾತ್ಮಕ ಅಥವಾ ಇತರ ಒತ್ತಡಗಳಿಗೆ ಮಣಿಯದೆ, ಆತ್ಮಸಾಕ್ಷಿಗೆ ಅನುಗುಣವಾಗಿ ಹಾಗೂ ಸಾರ್ವಜನಿಕ ಹಿತಾಸಕ್ತಿಯನ್ನು ಮಾತ್ರ ಮಾನದಂಡವನ್ನಾಗಿಸಿಕೊಂಡು ಸಂಪೂರ್ಣ ಪಾರದರ್ಶಕ, ಪ್ರಾಮಾಣಿಕ ಮತ್ತು ನಿರ್ಭೀತ ವರದಿಯನ್ನು ಸಲ್ಲಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಸಾವಿರಾರು ಕೋಟಿ ರೂಪಾಯಿಗಳ ಈ ಟೆಂಡರ್ ಕುರಿತು ಉನ್ನತ ಮಟ್ಟದ ಸಮಿತಿಯ ವರದಿಯತ್ತ ಎಲ್ಲರ ಗಮನ ನೆಟ್ಟಿದೆ.
Also Read:
RCB ಅಭಿಮಾನಿಗಳಿಗೆ ಸಿಹಿ ಸುದ್ದಿ: 55 ಸಾವಿರ ಪ್ರೇಕ್ಷಕರ ಸಾಮರ್ಥ್ಯ ಗುರಿ : KSCA ಅಧ್ಯಕ್ಷರ ಮಹತ್ವದ ಮಾಹಿತಿ.