<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಪ್ರಧಾನಿ ನಿವಾಸ ಮುತ್ತಿಗೆ ಯತ್ನದ ಬಳಿಕ ರಾಹುಲ್ ಗಾಂಧಿ ಸೇರಿ ವಿಪಕ್ಷ ನಾಯಕರು ಬಿಡುಗಡೆ

ಪ್ರಧಾನಿ ನಿವಾಸ ಮುತ್ತಿಗೆ ಯತ್ನದ ಬಳಿಕ ರಾಹುಲ್ ಗಾಂಧಿ ಸೇರಿ ವಿಪಕ್ಷ ನಾಯಕರು ಬಿಡುಗಡೆ
Summary: Lok Sabha Opposition Leader Rahul Gandhi, Congress leader Priyanka Gandhi and other opposition party leaders who were detained by the police during the protest on Tuesday in connection with the siege attempt at the Prime Minister's residence were released late on Tuesday night. The police, who had tightened security in the wake of the protest, took them into custody as a precautionary measure and released them after completing the necessary procedures.

belagavi news :

ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಇಲಾಖೆ ಚಾರ್ಜ್ ಕ್ರಮವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಹಲವು ನಾಯಕರನ್ನು ಪೊಲೀಸರು ವರ್ಷಕ್ಕೆ ಪಡೆದು, ಬಳಿಕ ಮಂಗಳವಾರ ರಾತ್ರಿ ಬಿಡುಗಡೆ ಮಾಡಿದರು.

ದೆಹಲಿ ನಗರದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ಹಾಗೂ ಅದರ ಮಿತೃಪಕ್ಷಗಳು ಭಾರಿ ಪ್ರತಿಭಟನೆ ನಡೆಸಿದವು. ಪ್ರತಿಭಟನಾಕಾರರು ಪ್ರಧಾನಿ ನಿವಾಸದತ್ತ ಮೆರವಣಿಗೆ ನಡೆಸಲು ಮುಂದಾದಾಗ, ಭದ್ರತಾ ಕಾರ್ಯಗಳಿಂದ ಪೊಲೀಸರು ಅವರನ್ನು ತಡೆದು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದರು.

ಈ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕೆ.ಸಿ.ವೇಣುಗೋಪಾಲ್, ಪಕ್ಷದ ಹಿರಿಯ ನಾಯಕ ಪವನ್ ಖೇರಾ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಪ್ರತಿಭಟನಾಕಾರರು ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನು ಖಂಡಿಸುವುದರ ಜೊತೆಗೆ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರಧಾನಿ ನಿವಾಸ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಪರಿಸ್ಥಿತಿ ನಿಯಂತ್ರಣದಲ್ಲಿದ್ದ ಬಳಿಕ ವಶಕ್ಕೆ ಪಡೆದಿದ್ದ ಎಲ್ಲಾ ಪ್ರಮುಖ ವಿಪಕ್ಷ ನಾಯಕರನ್ನು ರಾತ್ರಿ ವೇಳೆ ಬಿಡುಗಡೆ ಮಾಡಲಾಗಿದೆ.

ಪ್ರಧಾನಿ ನಿವಾಸ ಮುತ್ತಿಗೆ ಯತ್ನ ಪ್ರಕರಣ : ವಶಕ್ಕೆ ಪಡೆದಿದ್ದ ಎಲ್ಲಾ ಪ್ರಮುಖ ವಿಪಕ್ಷ ನಾಯಕರನ್ನು ರಾತ್ರಿ ವೇಳೆ ಬಿಡುಗಡೆ ಮಾಡಲಾಗಿದೆ.

ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಹಲವು ವಿಪಕ್ಷ ನಾಯಕರನ್ನು ಪೊಲೀಸರು ಬಳಿಕ ಬಿಡುಗಡೆ ಮಾಡಿದ್ದಾರೆ .

ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆಗಮಿಸಿ, ಸರ್ಕಾರದ ಪರವಾಗಿ ಮಾತುಕತೆ ನಡೆಸಲು ಪ್ರಯತ್ನಿಸಿದ್ದರು. ಆದರೆ ಕೆಲ ಸಮಯದ ಬಳಿಕ ಪ್ರಧಾನಿ ನಿವಾಸದ ಬಳಿ ಪೊಲೀಸರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಾಯಕರನ್ನು ವರ್ಷಕ್ಕೆ ಪಡೆದರು.

ವಶಕ್ಕೆ ಪಡೆದ ನಂತರ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನ ಇತರ ನಾಯಕರನ್ನು ದೆಹಲಿಯ ಛತ್ರಸಾಲ್ ಕ್ರೀಡಾಂಗಣದಿಂದ ಬಿಡುಗಡೆ ಮಾಡಲಾಯಿತು. ಮತ್ತೊಂದೆಡೆ, ಕಾಂಗ್ರೆಸ್ ನಾಯಕ ದೀಪೇಂದರ್ ಹೂಡಾ ಸೇರಿದಂತೆ ಇತರ ನಾಯಕರನ್ನು ಮಂದಿರ ಮಾರ್ಗ ಪೊಲೀಸ್ ಠಾಣೆಯಿಂದ ಬಿಡುಗಡೆ ಮಾಡಲಾಗಿದೆ.

ಪ್ರಿಯಾಂಕ ಗಾಂಧಿ ವಾದ್ರಾ ಅವರ ಬಿಡುಗಡೆಗು ಮುನ್ನ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಮಂದಿರ ಮಾರ್ಗ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪುತ್ರಿ ಪ್ರಿಯಾಂಕಾ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು. ಬಳಿಕ ಅವರು ಅಲ್ಲಿಂದ ತೆರಳಿದರು.

ಇದೇ ವೇಳೆ ಪ್ರತಿಭಟನಾ ಸ್ಥಳದಿಂದ ಪೊಲೀಸರು ಕರೆದೊಯಿದ್ಧ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಬಿಡುಗಡೆ ಮಾಡಲಾಗಿದೆ.

ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನು ಖಂಡಿಸಿ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನಿ ಆಗ್ರಹಿಸಿ ಕಾಂಗ್ರೆಸ್ ಮತ್ತು ಮಿತೃ ಪಕ್ಷಗಳ ನಾಯಕರು ಪ್ರಧಾನಿ ನಿವಾಸದತ್ತ ಪ್ರತಿಭಟನೆನಡೆಸಿದ್ದರು. ಈ ವೇಳೆ ಉಂಟಾದ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ನಾಯಕರನ್ನು ವಶಕ್ಕೆ ಪಡೆದಿದ್ದರು.

ವಿದ್ಯಾರ್ಥಿಗಳ ಪರ ದ್ವನಿ ಎತ್ತುವುದು ನಮ್ಮ ಜವಾಬ್ದಾರಿ : ಪ್ರಿಯಾಂಕ ಗಾಂಧಿ

ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಬಳಿಕ ಮಾತನಾಡಿದ ಕಾಂಗ್ರೆಸ್ ನಾಯಕಿ ಹಾಗೂ ಸಂಸದೆ ಪ್ರಿಯಾಂಕ ಗಾಂಧಿ ವಾದ್ರಾ, ದೇಶದ ಭವಿಷ್ಯವಾಗಿರುವ ಯುವಕರ ಬೇಡಿಕೆಯನ್ನು ಆಲಿಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.

ಮಂದಿರ ಮಾರ್ಗ ಪೊಲೀಸ್ ಠಾಣೆಯ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ದೇಶದ ಭವಿಷ್ಯ ವಾಗಿರುವ ನಮ್ಮ ಮಕ್ಕಳ ಮಾತನ್ನು ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ. ಅವರ ಬೇಡಿಕೆಗಳು ನ್ಯಾಯಯುತವಾಗಿವೆ. ನಾವು ಅವರ ಪ್ರತಿನಿಧಿಗಳಾಗಿದ್ದು, ಯುವಕರ ಪರವಾಗಿ ಧ್ವನಿ ಎತ್ತುವುದು ನಮ್ಮ ಕರ್ತವ್ಯ" ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಮೂಲಭೂತ ಹಕ್ಕು. ಅಗತ್ಯವಿರುವ ಸಂದರ್ಭಗಳಲ್ಲಿ ಯುವಕರು ತಮ್ಮ ಧ್ವನಿಯನ್ನು ಎತ್ತಲು ಅವಕಾಶ ಇರಬೇಕು ಎಂದು ಪ್ರಿಯಾಂಕಾ ಗಾಂಧಿ ಅಭಿಪ್ರಾಯಪಟ್ಟರು.

"ನಮ್ಮ ಬೇಡಿಕೆ ಸ್ಪಷ್ಟವಾಗಿದೆ. ಕುಸಿಯುತ್ತಿರುವ ಶಿಕ್ಷಣ ವ್ಯವಸ್ಥೆಯನ್ನು ಸರಿಪಡಿಸಬೇಕು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ರಾಜೀನಾಮೆ ನೀಡಬೇಕು. ಈ ವಿಚಾರದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಿ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಬೇಕು" ಎಂದು ಅವರು ಒತ್ತಾಯಿಸಿದರು.

ಲಾಟಿ ಬಲದಿಂದ ಯುವಕರ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ: ದೀಪೇಂದರ್ ಹೂಡಾ

ಕಾಂಗ್ರೆಸ್ ಸಂಸದ ದೀಪೇಂದರ್ ಹೂಡಾ ಮಾತನಾಡಿ, ಯುವಕರ ಮೇಲೆ ಲಾಠಿ ಚಾರ್ಜ್ ನಡೆಸಿದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದರು.

"ಯುವಕರ ಮೇಲೆ ಲಾಠಿ ಬಳಸುವ ಸರ್ಕಾರ ಅಧಿಕಾರದಿಂದ ಮುಂದುವರೆಯಲು ಯಾವುದೇ ನೈತಿಕ ಹಕ್ಕಿಲ್ಲ. ಲಾಟಿ ಬಲದ ಮೂಲಕಯುವಕರ ಧ್ವನಿಯನ್ನು ಹತ್ತಿಕ್ಕಬಹುದು ಎಂದು ಸರ್ಕಾರ ಭಾವಿಸುತ್ತಿದೆ. ಆದರೆ ಪ್ರಜಾಪ್ರಭುತ್ವದಲ್ಲಿ ಜನರ ಧ್ವನಿಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ.

ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಸರ್ಕಾರ ತಕ್ಷಣ ಗಮನಹರಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದರು.

ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿದ ಖರ್ಗೆ; ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್ ಹಾಗೂ ಶಿಕ್ಷಣ ವ್ಯವಸ್ಥೆಯ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಖರ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, "ದಬ್ಬಾಳಿಕೆಯ ಸರ್ಕಾರ ಭಯದಿಂದ ನಡುಗುತ್ತಿದೆ. ಮೊದಲು ಅವರು ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿದರು. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಯಿತು. ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣಗಳು ನಡೆದವು. ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಬೀದಿಗಿಳಿದಾಗ ಅವರ ಮೇಲೆ ಲಾಠಿಚಾರ್ಜ್ ನಡೆಸಲಾಗಿದೆ" ಎಂದು ಆರೋಪಿಸಿದ್ದಾರೆ.

"ಸಂಸತ್ತಿನ ದ್ವಾರಗಳಿಗೆ ಬೀಗ ಹಾಕಲಾಗಿದೆ, ಸಂಸದರನ್ನು ಬಂಧಿಸಲಾಗಿದೆ. ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಚರ್ಚೆ ನಡೆಸಬೇಕೆಂಬ ವಿರೋಧ ಪಕ್ಷದ ಬೇಡಿಕೆಯನ್ನು ನಿರ್ಲಕ್ಷಿಸಲಾಗಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನಿ ವಜಾಗೊಳಿಸಿಲ್ಲ. ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವಾಗಿದ್ದಾರೆ. ದೆಹಲಿ ಪೊಲೀಸರನ್ನು ನಿಯಂತ್ರಿಸಲು ಗೃಹ ಸಚಿವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ" ಎಂದು ಖರ್ಗೆ ಟೀಕಿಸಿದ್ದಾರೆ.

ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ಸಂಸದರು ಸಚಿವರ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅವರನ್ನು ಬಲವಂತವಾಗಿ ವರ್ಷಕ್ಕೆ ಪಡೆಯಲಾಗಿದೆ ಎಂದು ಆರೋಪಿಸಿದ ಖರ್ಗೆ, ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

"ತಮ್ಮ ಭವಿಷ್ಯದ ಬಗ್ಗೆ ನ್ಯಾಯಯುತ ಪ್ರಶ್ನೆಗಳನ್ನು ಕೇಳಿದ ವಿದ್ಯಾರ್ಥಿಗಳನ್ನು ಥಳಿಸಲಾಗಿದೆ. ಭಾರತದ ಯುವಕರ ಭವಿಷ್ಯದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲು ಸಾಧ್ಯವಾಗದಿದ್ದರೆ, ಅಂತ ಸಂಸತ್ತಿನ ಅಗತ್ಯವೇನು?" ಎಂದು ಖರ್ಗೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಮತ್ತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online