<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಪ್ರಜಾಪ್ರಭುತ್ವದ ಗೆಲುವು ಎಂದ ವಿರೋಧ ಪಕ್ಷಗಳು : ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಪ್ರತಿಕ್ರಿಯೆ

ಪ್ರಜಾಪ್ರಭುತ್ವದ ಗೆಲುವು ಎಂದ ವಿರೋಧ ಪಕ್ಷಗಳು : ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಪ್ರತಿಕ್ರಿಯೆ
Summary: The opposition parties have reacted to the resignation of Dharmendra Pradhan, calling it a victory for democracy. The development has led to a huge debate in the political circles.

Belagavi News :

ನೀಟ್ - ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆ ವಿಚಾರಕ್ಕೆ ವಿರೋಧ ಪಕ್ಷಗಳು ಪ್ರತಿಕ್ರಿಯೆ ನೀಡಿವೆ. ರಾಜಿನಾಮೆಯನ್ನು ಪ್ರಜಾಪ್ರಭುತ್ವದ ಹೋರಾಟದ ಗೆಲುವು ಎಂದು ಬಣ್ಣಿಸಿದರು ವಿಪಕ್ಷ ನಾಯಕರು, ಇನ್ನು ಕೆಲವು ಬೇಡಿಕೆಗಳು ಬಾಕಿ ಉಳಿದಿವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾತನಾಡಿ, ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯತ್ತ ಒಂದು ಪ್ರಮುಖ ಹೆಜ್ಜೆ ಎಂದು ಹೇಳಿದ್ದಾರೆ. ದೇಶಾದ್ಯಂತ ಹೋರಾಟ ನಡೆಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಅವರು, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಲು ಧೈರ್ಯದಿಂದ ಹೋರಾಡಿದ ಯುವಕರನ್ನು ಶ್ಲಾಘಿಸಿದ್ದಾರೆ.

ರಾಹುಲ್ ಗಾಂಧಿ ಮಹತ್ವದ ಮಾತು :

"ನಮ್ಮ ಎರಡು ಬೇಡಿಕೆಗಳು ಇನ್ನೂ ಉಳಿದಿವೆ. ಪ್ರಧಾನಮಂತ್ರಿಯವರು ವಿದ್ಯಾರ್ಥಿಗಳನ್ನು ಹಾಗೂ ಭಾರತದ ಭವಿಷ್ಯವನ್ನು ಗೌರವಿಸಿ ಕ್ಷಮೆ ಕೇಳಬೇಕು. ವಿದ್ಯಾರ್ಥಿಗಳ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು" ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

"ನಮ್ಮ ಎರಡು ಬೇಡಿಕೆಗಳು ಇನ್ನೂ ಉಳಿದಿವೆ. ಪ್ರಧಾನಮಂತ್ರಿಯವರು ವಿದ್ಯಾರ್ಥಿಗಳನ್ನು ಹಾಗೂ ಭಾರತದ ಭವಿಷ್ಯವನ್ನು ಗೌರವಿಸಿ ಕ್ಷಮೆ ಕೇಳಬೇಕು. ವಿದ್ಯಾರ್ಥಿಗಳ ಮೇಲೆ ಇಂಥಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು" ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಇದೇ ವೇಳೆ ರೈತರು, ಕಾರ್ಮಿಕರು, ಬಡವರು ಸೇರಿದಂತೆ ಸರ್ಕಾರದಿಂದ ಅನ್ಯಾಯಕ್ಕೆ ಒಳಗಾಗ ಪ್ರತಿಯೊಬ್ಬರು ಸಂವಿಧಾನಾತ್ಮಕವಾಗಿ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು ಎಂದು ಅವರು ಕರೆ ನೀಡಿದ್ದಾರೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಪ್ರತಿಕ್ರಿಯಿಸಿದ್ದು, ನೀಟ್ ವಿವಾದದ ಕುರಿತು ರಾಜಕೀಯ ಚರ್ಚೆ ಮತ್ತಷ್ಟು ತೀವ್ರಗೊಂಡಿದೆ.

ಧರ್ಮೇಂದ್ರ ಪ್ರಧಾನ್ ರಾಜಿನಾಮೆ - "ಯುವಕರ ಹೋರಾಟದ ಗೆಲುವು" ಎಂದ ಪ್ರಿಯಾಂಕಾ ಗಾಂಧಿ ; ವಿಪಕ್ಷ ನಾಯಕರ ಪ್ರತಿಕ್ರಿಯೆ :

ನೀಟ್ - ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ವಿಚಾರಕ್ಕೆ ವಿರೋಧ ಪಕ್ಷಗಳ ನಾಯಕರು ಪ್ರತಿಕ್ರಿಯಿಸಿದ್ದಾರೆ. ಈ ಬೆಳವಣಿಗೆಯನ್ನು ಯುವಜನತೆ ಮತ್ತು ಪ್ರಜಾಪ್ರಭುತ್ವದ ಗೆಲುವು ಎಂದು ಬಣ್ಣಿಸಿರುವ ವಿಪಕ್ಷ ನಾಯಕರು, ಶಿಕ್ಷಣ ವ್ಯವಸ್ಥೆಯಲ್ಲಿ ಮತ್ತಷ್ಟು ಸುಧಾರಣೆ ಅಗತ್ಯ ಎಂದು ಒತ್ತಾಯಿಸಿದ್ದಾರೆ.

'ಸರ್ಕಾರ ಕೊನೆಗೂ ತಲೆಬಾಗಿದೆ' ಎಂದ ಪ್ರಿಯಾಂಕಾ ಗಾಂಧಿ :

ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಭಾರತದ ಯುವ ಜನತೆಗೆ ಸಿಕ್ಕ ಜಯ ಎಂದು ಹೇಳಿದ್ದಾರೆ. ತಮ್ಮ ಹಕ್ಕುಗಳಿಗಾಗಿ ಹೋರಾಡಿದ ವಿದ್ಯಾರ್ಥಿಗಳು ಮತ್ತು ಯುವಕರ ಧೈರ್ಯವನ್ನು ಅವರು ಶ್ಲಾಘಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಜನರ ಧ್ವನಿಗೆ ಆಡಳಿತಗಾರರು ಕಿವಿ ಕೊಡಬೇಕು ಎಂದು ಹೇಳಿದ ಪ್ರಿಯಾಂಕಾ ಗಾಂಧಿ, ವಿದ್ಯಾರ್ಥಿಗಳ ಹೋರಾಟ ಅಹಿಂಸಾತ್ಮಕವಾಗಿತ್ತು ಎಂದು ಹೇಳಿದರು. ಪೇಪರ್ ಲೀಕ್ ಮತ್ತು ಪರೀಕ್ಷಾ ಬಿಕ್ಕಟ್ಟಿನ ವಿಚಾರವನ್ನು ರಾಹುಲ್ ಗಾಂಧಿ ಹಲವು ವರ್ಷಗಳಿಂದ ಎತ್ತಿಕೊಂಡು ಬಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆ ಬಲಪಡಿಸಬೇಕು - ಅಖಿಲೇಶ್ ಯಾದವ್ :

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಇದು ಹೊಸ ಪೀಳಿಗೆಗೆ ಸಿಕ್ಕ ದೊಡ್ಡ ಜಯ ಎಂದು ಹೇಳಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ವ್ಯವಸ್ಥೆಯಲ್ಲಿ ಸುಧಾರಣಾ ಅಗತ್ಯವಿದೆ ಎಂದು ಅವರು ಒತ್ತಾಯಿಸಿದ್ದಾರೆ.

ಯುವಜನರ ಹೋರಾಟವು ಸರ್ಕಾರದ ಗಮನ ಸೆಳೆದಿದ್ದು, ಭವಿಷ್ಯದಲ್ಲಿ ಯಾವುದೇ ಪರೀಕ್ಷಾ ಅಕ್ರಮ ನಡೆಯದಂತೆ ಬಲಿಷ್ಠ ವ್ಯವಸ್ಥೆ ರೂಪಿಸಬೇಕು ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಪ್ರಜಾಪ್ರಭುತ್ವದ ಗೆಲುವು ಎಂದ ಅರವಿಂದ್ ಕೇಜ್ರಿವಾಲ್ :

ಅಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಧರ್ಮೇಂದ್ರ ಪ್ರಧಾನ್ ರಾಜಿನಾಮೆಯನ್ನು ಪ್ರಜಾಪ್ರಭುತ್ವದ ಗೆಲುವು ಎಂದು ಬಣ್ಣಿಸಿದ್ದಾರೆ. ಯುವಕರ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

ಜನರ ಧ್ವನಿಯನ್ನು ಸರ್ಕಾರಗಳು ಸರ್ಕಾರಗಳು ಆಲಿಸಬೇಕು ಎಂಬ ಸಂದೇಶ ಈ ಬೆಳವಣಿಗೆಯಿಂದ ಸಿಕ್ಕಿದೆ ಎಂದು ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.

ಹೋರಾಟ ಮುಂದುವರೆಯಲಿದೆ ಎಂದು ದೀಪೇಂದರ್ ಹೂಡಾ :

ಕಾಂಗ್ರೆಸ್ ಸಂಸದ ದೀಪೇಂದರ್ ಹೂಡಾ, ಇದು ದೇಶದ ಯುವಶಕ್ತಿ ಮತ್ತು ವಿದ್ಯಾರ್ಥಿ ಚಳುವಳಿಗೆ ಸಿಕ್ಕ ಮೊದಲ ಜಯ ಎಂದು ಹೇಳಿದ್ದಾರೆ. ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿ ಸಂಪೂರ್ಣ ಸುಧಾರಣೆ ಆಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ದೇಶಕ್ಕೆ ಶಿಕ್ಷಣ ಕ್ರಾಂತಿ ಅಗತ್ಯ - ಮನೀಶ್ ಸಿಸೋಡಿಯಾ :

ಎಎಪಿ ನಾಯಕ ಮನೀಶ್ ಸಿಸೋಡಿಯಾ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ವಿದ್ಯಾರ್ಥಿಗಳ ಹೋರಾಟದ ಫಲ ಎಂದು ಹೇಳಿದ್ದಾರೆ. ನೀಟ್ ಪೇಪರ್ ಲೀಗ್ ಪ್ರಕರಣದ ಬಳಿಕ ದೇಶಕ್ಕೆ ದೊಡ್ಡ ಶಿಕ್ಷಣ ಕ್ರಾಂತಿಯ ಅಗತ್ಯವಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಬಳಿಕ ನೀಟ್ ವಿವಾದದ ರಾಜಕೀಯ ಚರ್ಚೆ ಮತ್ತಷ್ಟು ತೀವ್ರಗೊಂಡಿದ್ದು, ಶಿಕ್ಷಣ ಕ್ಷೇತ್ರದ ಸುಧಾರಣೆ ಕುರಿತು ಒತ್ತಾಯಗಳು ಹೆಚ್ಚಾಗಿವೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online