<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ರಾಜ್ಯದ ಹಲವೆಡೆ ಆಲಿಕಲ್ಲು ಮಳೆ : ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಹಲವೆಡೆ ಆಲಿಕಲ್ಲು ಮಳೆ : ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
Summary: A severe change in weather has been observed in Karnataka today, with the possibility of hailstorm in the state. The Meteorological Department has declared an orange alert for five districts.

Belagavi News:

ಕರ್ನಾಟಕದಲ್ಲಿ ಇಂದು ಹವಾಮಾನ ಮಹತ್ತರ ಬದಲಾವಣೆ ಕಂಡುಬಂದಿದ್ದು,ರಾಜ್ಯದ ಹೊಲಬೇಡಿ ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ಈ ಹಿನ್ನೆಲೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು,ಜನರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಮಳೆಯ ಜೊತೆಗೆ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮರದ ಕೆಳಗೆ ನಿಲ್ಲುವುದು,ಅನಗತ್ಯ ಪ್ರಯಾಣ ಮಾಡುವುದು ತಪ್ಪಿಸಲು ಸೂಚಿಸಲಾಗಿದೆ. ರೈತರ ಬೆಳೆಗಳ ರಕ್ಷಣೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.

ಇನ್ನೊಂದೆಡೆ ಕಲ್ಬುರ್ಗಿ ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ.ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಅನಗತ್ಯವಾಗಿ ಹೊರಗೆ ಬರಬಾರದು ಎಂದು ವೈದ್ಯರು ಎಚ್ಚರಿಸಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸುವುದು ,ಬಿಸಿಲಿನಲ್ಲಿ ಕೆಲಸ ಮಾಡುವವರು ವಿಶೇಷ ಜಾಗೃತಿ ವಹಿಸುವುದು ಅಗತ್ಯವಾಗಿದೆ.

ಹವಾಮಾನ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ಸುರಕ್ಷತೆ ಕ್ರಮಗಳನ್ನು ಅನುಸರಿಸುವುದು ಅತ್ಯಂತ ಮುಖ್ಯವಾಗಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವಡೆ ಕಳೆದ ಎರಡು ದಿನಗಳಿಂದ ಆಲಿಕಲ್ಲು ಮಳೆ ಆಗುತ್ತಿದ್ದು. ಇಂದು ಈ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾವಳಿ ಪ್ರದೇಶಗಳನ್ನು ಹೊರತುಪಡಿಸಿ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಆಡಿ ಕಲ್ಲು ಮಳೆಯ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ತಕ್ಷಣ ಕರ್ನಾಟಕದ ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆ ಯಾಗಲಿದ್ದು,ಉಳಿದ ಭಾಗಗಳಲ್ಲಿ ಮಿಶ್ರ ಹವಾಮಾನ ಕಾಣಿಸಿಕೊಳ್ಳಲಿದೆ. ಉತ್ತರ ಒಳನಾಡಿನ ರಾಯಚೂರು,ಯಾದಗಿರಿ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.ಆದರೆ ಇತರ ಪ್ರದೇಶಗಳಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ.

ಇನ್ನೊಂದೆಡೆ ಕಲಬುರ್ಗಿ ಮತ್ತು ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹಲಬೇಡಿ ಇಂದು ಗರಿಷ್ಠ 42 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳವರೆಗೆ ಇದೇ ಬಿಸಿಲಿನ ತೀರ್ವದಿ ಮುಂದುವರೆಯಲಿದೆ ಎಂದು ಎಚ್ಚರಿಸಲಾಗಿದೆ. ಬೆಳಿಗ್ಗೆ 10 ರಿಂದ ಸಂಜೆ ಐದರ ವರೆಗೆ ಅನಗತ್ಯವಾಗಿ ಹೊರಗೆ ಹೋಗಬಾರದು ಮತ್ತು ಹೆಚ್ಚು ನೀರು ಸೇವಿಸಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

ಹವಾಮಾನದಲ್ಲಿನ ಈ ತೀವ್ರ ಬದಲಾವಣೆಯ ಹಿನ್ನೆಲೆ ಜನರು ಎಚ್ಚರಿಕೆಯಿಂದ ಇರಬೇಕು, ಮಳೆಯ ಸಮಯದಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ದಕ್ಷಿಣ ಒಳನಾಡಿನಲ್ಲಿ ಹಾಲಿ ಕಲ್ಲು ಮಳೆಯ ಅಬ್ಬರಕ್ಕೆ ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಕೆಲವು ಕಡೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ಮಳೆ ಅಬ್ಬರ ಹೆಚ್ಚಾಗುತ್ತಿದ್ದು, ದಕ್ಷಿಣ ಒಳನಾಡಿನ ಮೈಸೂರು ಚಿಕ್ಕಮಗಳೂರು ಹಾಸನ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಗುಡುಗು ಸಿಡಿಲು ಹಾಗೂ ಆಲಿಕಲ್ಲು ಸಹಿತ ಭಾರಿ ಮಳೆ ಆಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇದಲ್ಲದೆ ಮಂಡ್ಯ ಮತ್ತು ತುಮಕೂರು ಜಿಲ್ಲೆಗಳನ್ನು ಬಾರಿ ಮಳೆಯಾಗುವ ಸಾಧ್ಯತೆಯಿದ್ದು,ಮಂಡ್ಯ ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆಯಿಂದ ಉಂಟಾದ ಆವಾಂತರಗಳು: ಬೆಂಗಳೂರಿನಲ್ಲಿ ದುರ್ಘಟನೆಗಳಾಗಿವೆ

ಬುಧವಾರ ಸಂಜೆ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆ ಅನಾಹುತಗಳಿಗೆ ಕಾರಣವಾಗಿದೆ. ಜೆಪಿ ನಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೊಂದೆಡೆ,ಶಿವಾಜಿನಗರದ ಬೌಲಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ ಏಳು ಜನರು ಮೃತಪಟ್ಟಿರುವ ದುರ್ಘಟನೆ ವರದಿಯಾಗಿದೆ.

ಮಳೆಯ ಸಮಯದಲ್ಲಿ ಸುರಕ್ಷಿತಾ ಕ್ರಮಗಳನ್ನು ಕಟ್ಟು ಹೆಚ್ಚಾಗಿ ಪಾಲಿಸಬೇಕು, ವಿಶೇಷವಾಗಿ ವಿದ್ಯುತ್ ತಂತಿಗಳಿಂದ ದೂರವಿರಬೇಕು ಮತ್ತು ದುರ್ಬಲ ಕಟ್ಟಡಗಳ ಬಳಿ ಹೋಗುವುದನ್ನು ತಪ್ಪಿಸಬೇಕು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Also Read:

ಎಕ್ಸಿಟ್ ಪೋಲ್ ಫಲಿತಾಂಶ : ಬಂಗಾಳ ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online