Belagavi News :
ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿ ಯಾನ್ ಅವರೊಂದಿಗೆ ಇಂದು ದೂರವಾಣಿ ಮೂಲಕ ಮಹತ್ವದ ಮಾತುಕತೆ ನಡೆಸಿದರು. ಈ ವೇಳೆ ಉಭಯ ನಾಯಕರು ಪ್ರದೇಶದ ಇತ್ತೀಚಿನ ಪರಿಸ್ಥಿತಿ ಹಾಗೂ ಬಿಕ್ಕಟ್ಟಿನ ಬೆಳವಣಿಗೆಗಳ ಕುರಿತು ಚರ್ಚಿಸಿದರು.
ಮಾತುಕತೆಯ ವೇಳೆ ಇರಾನ್ ಅಧ್ಯಕ್ಷ ಪೆಜಿಶ್ಕಿ ಯಾನ್ ಅವರು ಪಶ್ಚಿಮ ಏಷ್ಯಾದ ಪ್ರಸ್ತುತ ತಿದಿಗತಿ ಕುರಿತು ಪ್ರಧಾನಿ ಮೋದಿಗೆ ವಿವರಿಸಿದರು. ಇತ್ತ ಪ್ರಧಾನಿ ಮೋದಿ, ಯಾವುದೇ ಸಂಘರ್ಷ ಅಥವಾ ಯುದ್ಧವಿಲ್ಲದೆ ಸಮಸ್ಯೆಗಳನ್ನು ಕೇವಲ ರಾಜತಾಂತ್ರಿಕತೆ ಮತ್ತು ಶಾಂತಿಯುತ ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳಬೇಕು ಎಂದು ಒತ್ತಿ ಹೇಳಿದರು.
ಇದೇ ವೇಳೆ ಮೋದಿ ಅವರು ಭಾರತ ಹಾಗೂ ಜಗತ್ತಿನ ವಾಣಿಜ್ಯ ಹಡಗುಗಳ ಸುರಕ್ಷಿತ ಸಂಚಾರಕ್ಕಾಗಿ ಹಾರ್ಮೋನ್ ಜಲಸಂಧಿಯಲ್ಲಿ ಮುಕ್ತ ಸಮುದ್ರಯಾನದ ಹಕ್ಕು, ರಕ್ಷಿಸುವುದು ಅತ್ಯಂತ ಅಗತ್ಯ ಎಂದು ಅಭಿಪ್ರಾಯಪಟ್ಟರು. ಜಾಗತಿಕ ವ್ಯಾಪಾರ ಮತ್ತು ಇಂಧನ ಸರಬರಾಜಿಗೆ ಈ ಮಾರ್ಗದ ಮಹತ್ವವನ್ನು ಅವರು ವಿವರಿಸಿದ್ದರು.
ಶಾಂತಿ ಮತ್ತು ಸ್ಥಿರತೆ ಕಾಪಾಡುವುದು ಅತಿ ಮುಖ್ಯವಾಗಿದ್ದು, ಎಲ್ಲಾ ರಾಷ್ಟ್ರಗಳು ಸಮಾಜ ಮತ್ತು ಸಹಕಾರದ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಸಲಹೆ ನೀಡಿದರು.
ಈ ಮಾತುಕತೆ ರಾಜತಾಂತ್ರಿಕ ಮಟ್ಟದಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಪ್ರಾದೇಶಿಕ ಶಾಂತಿ ಸ್ಥಾಪನೆಗೆ ಎರಡು ದೇಶಗಳ ಸಹಕಾರ ಮುಂದುವರೆಯುವ ನಿರೀಕ್ಷೆ ಇದೆ.
PM Modi - Iran talks - ಪಶ್ಚಿಮ ಏಷ್ಯಾದ ಮಮತ ನಿರ್ಧಾರಕ್ಕೆ ಸ್ವಾಗತ; ಶಾಂತಿಯುತ ಪರಿಹಾರಕ್ಕೆ ಭಾರತ ಒತ್ತಾಯ :
ಪಶ್ಚಿಮ ಏಷ್ಯಾದಲ್ಲಿ ಇತ್ತೀಚೆಗೆ ಮೂಡಿ ಬಂದಿರುವ ಒಮ್ಮತದ ನಿರ್ಧಾರವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಈ ಕುರಿತು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ನಡೆದ ದೂರವಾಣಿ ಮಾತುಕತೆಯಲ್ಲಿ ಅವರು ಭಾರತದ ದೀರ್ಘಕಾಲಿನ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಮೋದಿ ಅವರು ಎಲ್ಲಾ ಪ್ರಾದೇಶಿಕ ಸಮಸ್ಯೆಗಳನ್ನು ಯುದ್ಧ ಅಥವಾ ಸಂಘರ್ಷವಿಲ್ಲದೆ ಕೇವಲ ರಾಜ್ಯ ತಾಂತ್ರಿಕತೆ ಮತ್ತು ಶಾಂತಿಯುತ ಮಾತುಕತೆಯ ಮೂಲಕವೇ ಬಗ್ಗೆ ಹರಿಸಿಕೊಳ್ಳಬೇಕು ಎಂದು ಒತ್ತಿ ಹೇಳಿದರು. ಸಂವಾದ ಮತ್ತು ಸಹಕಾರವೇ ಶಾಶ್ವತ ಪರಿಹಾರಕ್ಕೆ ದಾರಿ ಎಂದು ಅವರು ಅಭಿಪ್ರಾಯಪಟ್ಟರು.
ಮಾತುಕತೆಯ ವೇಳೆ ಪಶ್ಚಿಮ ಏಷ್ಯಾದ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚೆ ನಡೆದಿದ್ದು, ಪ್ರಾದೇಶಿಕ ಸ್ಥಿರತೆ ಕಾಪಾಡಲು ಶಾಂತಿಯುತ ಒಡನಾಟ ಅತ್ಯಂತ ಅಗತ್ಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಭೌಗೋಳಿಕವಾಗಿ ಸಮಾಧಾನ ಶೀಲವಾದ ಈ ಪ್ರದೇಶದಲ್ಲಿ ಶಾಂತಿ ಕಾಪಾಡುವುದು ಜಾಗತಿಕ ಹಿತಾಸಕ್ತಿಗೆ ಸಹಾಯಕವಾಗುತ್ತದೆ ಎಂದು ಅವರು ವಿವರಿಸಿದ್ದರು.
ಭಾರತವು ಸದಾ ಶಾಂತಿ, ಸಂವಾದ ಮತ್ತು ರಾಜತಾಂತ್ರಿಕ ಪರಿಹಾರಕ್ಕೆ ಬದ್ಧವಾಗಿದ್ದು, ಇದೇ ನಿಲುವನ್ನು ಮುಂದುವರಿಸುತ್ತದೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದರು. ಪಶ್ಚಿಮ ಏಷ್ಯಾದ ರಾಷ್ಟ್ರಗಳ ನಡುವೆ ಸಹಕಾರ ಮತ್ತು ಸಮನ್ವಯ ಹೆಚ್ಚಿಸುವುದು ಈಗಿನ ಪರಿಸ್ಥಿತಿಯಲ್ಲಿ ಅತ್ಯಂತ ಮುಖ್ಯ ಎಂದು ಅವರು ಅಭಿಪ್ರಾಯಪಟ್ಟರು.
ಈ ಬೆಳವಣಿಗೆ ರಾಜತಾಂತ್ರಿಕ ವಲಯದಲ್ಲಿ ಮಹತ್ವದ ಸಂದೇಶವಾಗಿದ್ದು, ಪ್ರಾದೇಶಿಕ ಶಾಂತಿ ಸ್ಥಾಪನೆಗೆ ಭಾರತ ತನ್ನ ಪಾತ್ರವನ್ನು ಮುಂದುವರಿಸುವ ನಿರೀಕ್ಷೆ ಇದೆ.
PM Modi on West Asia peace : ಶಾಶ್ವತ ಶಾಂತಿ, ಹಾರ್ಮುಜ್ ಜಲಸಂದಿ ಸುರಕ್ಷತೆಗೆ ಭಾರತದಿಂದ ಒತ್ತಾಯ :
ಪಶ್ಚಿಮ ಏಷ್ಯಾದಲ್ಲಿ ಶಾಶ್ವತ ಶಾಂತಿ ಮತ್ತು ಪ್ರಾದೇಶಿಕ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ನಿರಂತರ ಪ್ರಯತ್ನಗಳ ಅಗತ್ಯವಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಒತ್ತಿ ಹೇಳಿದ್ದಾರೆ. ಇತ್ತೀಚಿನ ರಾಜತಾಂತ್ರಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ನಡೆದ ದೂರವಾಣಿ ಮಾತುಕತೆಯಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೋದಿ ಅವರು ಸಮುದ್ರಯಾನದ ಸ್ವಾತಂತ್ರ್ಯ ಮತ್ತು ವಾಣಿಜ್ಯ ಹಡಗುಗಳ ಸುರಕ್ಷಿತ ಸಂಚಾರವನ್ನು ಕಾಪಾಡುವುದು ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದ್ದಾರೆ. ವಿಶೇಷವಾಗಿ ಜಾಗತಿಕ ವ್ಯಾಪಾರಕ್ಕೆ ನಿರ್ಣಾಯಕವಾಗಿರುವ ಹಾರ್ಮೋನ್ ಜಲಸಂಧಿ ಸುತ್ತಲಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಇರಾನ್ ದೇಶಗಳ ಕತಾರ್ನ ದೋಹದಲ್ಲಿ ಮತ್ತೊಂದು ಸುತ್ತಿನ ಉನ್ನತ ಮಟ್ಟದ ಮಾತುಕತೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಈ ಮಾತುಕತೆ ನಡೆಸಿರುವುದು ಮಹತ್ವ ಪಡೆದಿದೆ. ವರದಿಗಳ ಪ್ರಕಾರ, ಮುಂದಿನ ಸಂವಾದ ನಡೆಯುವವರೆಗೆ ಉಭಯ ದೇಶಗಳು ಪರಸ್ಪರರ ವಿರುದ್ಧದ ದಾಳಿಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಒಪ್ಪಿಕೊಂಡಿವೆ.
ಮಾತುಕತೆಗಳಲ್ಲಿ ಮುಖ್ಯವಾಗಿ ಕಡಲ ಭದ್ರತೆ, ಹಾರ್ಮೋಜ್ ಜಲಸಂಧಿಯ ಮೂಲಕ ವಾಣಿಜ್ಯ ಹಡಗುಗಳ ಸಂಚಾರ, ಆರ್ಟಿಕಲ್ ನಿಬಂಧಗಳು ಹಾಗೂ ಬಾಕಿ ಉಳಿದಿರುವ ರಾಜ ತಾಂತ್ರಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸುವ ನಿರೀಕ್ಷೆ ಇದೆ. ಈ ಎಲ್ಲಾ ವಿಷಯಗಳಲ್ಲಿ ಶಾಂತಿಯುತ ಪರಿಹಾರವೇ ಏಕೈಕ ಮಾರ್ಗ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.
ಭಾರತವು ಸದಾ ಶಾಂತಿ, ಸಮಾಜ ಮತ್ತು ಅಂತರಾಷ್ಟ್ರೀಯ ಸಹಕಾರಕ್ಕೆ ಬದ್ಧವಾಗಿದ್ದು, ಪ್ರಾದೇಶಿಕ ಸ್ಥಿರತೆ ಜಾಗತಿಕ ಆರ್ಥಿಕತೆಯ ಮೇಲು ನೇರ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದ್ದಾರೆ.