<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಪ್ರಧಾನಿ ಮೋದಿ ಅವರ ಎರಡು ದಿನಗಳ ಸೆಶೆಲ್ಸ್ ಪ್ರವಾಸ ಆರಂಭ: ದ್ವಿಪಕ್ಷೀಯ ಬಾಂಧವ್ಯ ಬಲಪಡಿಸುವತ್ತ ಮಹತ್ವದ ಮಾತುಕತೆ

ಪ್ರಧಾನಿ ಮೋದಿ ಅವರ ಎರಡು ದಿನಗಳ ಸೆಶೆಲ್ಸ್ ಪ್ರವಾಸ ಆರಂಭ: ದ್ವಿಪಕ್ಷೀಯ ಬಾಂಧವ್ಯ ಬಲಪಡಿಸುವತ್ತ ಮಹತ್ವದ ಮಾತುಕತೆ
Summary: Prime Minister Narendra Modi, who is on a two-day visit to Seychelles from today, will hold high-level consultations on several important issues including strengthening bilateral ties, maritime security, trade and development cooperation.

belagavi news :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಅಧಿಕೃತ ಸೆಶೆಲ್ಸ್ ಪ್ರವಾಸ ಕೈಗೊಳ್ಳುತ್ತಿದ್ದು, ಭಾರತ - ಸೆಶೆಲ್ಸ್ ನಡುವಿನ ದೀರ್ಘಕಾಲದ ಸ್ನೇಹ ಹಾಗೂ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶ ಹೊಂದಿದ್ದಾರೆ. ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭದ್ರತೆ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವದ ಆಗಿದೆ ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ.

ಪ್ರವಾಸಕ್ಕೂ ಮುನ್ನ ಪ್ರಧಾನಿ ಸಚಿವಾಲಯ ಪ್ರಕಟಿಸಿರುವ ಹೇಳಿಕೆಯಲ್ಲಿ, ಜೂನ್ 27ರಿಂದ 29 ರವರೆಗೆ ಪೂರ್ವ ಆಫ್ರಿಕಾದ ದ್ವೀಪ ರಾಷ್ಟ್ರವಾದ ಸೆಶೆಲ್ಸ್ ಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಸೆಶೆಲ್ಸ್ ಅಧ್ಯಕ್ಷ ಪ್ಯಾಟ್ರಿಕ್ ಹರ್ಮಿನಿ ಅವರೊಂದಿಗೆ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿಸಲಾಗಿದೆ.

ಈ ವರ್ಷದ ಫೆಬ್ರವರಿಯಲ್ಲಿ ಅಧ್ಯಕ್ಷ ಪ್ಯಾಟ್ರಿಕ್ ಹರ್ಮಿನಿ ಅವರು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಅದರ ಮುಂದುವರಿದ ಭಾಗವಾಗಿ ನಡೆಯುತ್ತಿರುವ ಈ ಭೇಟಿಯಲ್ಲಿ ಉಭಯ ರಾಷ್ಟ್ರಗಳ ನಡುವಿನ ಸಹಕಾರವನ್ನು ಇನ್ನಷ್ಟು ವಿಸ್ತರಿಸುವುದು, ಅಭಿವೃದ್ಧಿ ಪಾಲುದಾರಿಕೆ, ಸಾಗರ ಭದ್ರತೆ, ವ್ಯಾಪಾರ, ಹೂಡಿಕೆ ಮತ್ತು ಇಂಡೋ- ಪೆಸಿಫಿಕ್ ಪ್ರದೇಶದ ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ.

Sponsored

" ಸೆಶೆಲ್ಸ್ ನೊಂದಿಗೆ ತಮ್ಮ ಸ್ನೇಹವನ್ನು ಮತ್ತಷ್ಟು ಬಲಪಡಿಸುವ ಗುರಿ ಹೊಂದಿದ್ದೇವೆ, ನಮ್ಮ ಜನರ ಅಭಿವೃದ್ಧಿಗೆ ಹಾಗೂ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭದ್ರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ಉಭಯ ರಾಷ್ಟ್ರಗಳು ಒಟ್ಟಾಗಿ ಕಾರ್ಯನಿರ್ವಹಿಸಲಿವೆ" ಎಂದು ಪ್ರಧಾನಿ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಪ್ರವಾಸದ ವೇಳೆ ಪ್ರಧಾನಿ ಮೋದಿ ಅವರು ಸೆಶೆಲ್ಸ್ ನ ರಾಷ್ಟ್ರೀಯ ದಿನದ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಧ್ಯಕ್ಷ ಪ್ಯಾಟ್ರಿಕ್ ಹರ್ಮಿನಿ ಅವರ ಆಹ್ವಾನದ ಮೇರೆಗೆ ಈ ಭೇಟಿ ನಡೆಯುತ್ತಿದ್ದು, ಭಾರತ ಮತ್ತು ಸೆಶೆಲ್ಸ್ ರಾಜತಾಂತ್ರಿಕ ಸಂಬಂಧಗಳು ಸ್ಥಾಪನೆಯ 50ನೇ ವರ್ಷಾಚರಣೆಯ ಸಂದರ್ಭದಲ್ಲಿ ಈ ಪ್ರವಾಸಕ್ಕೆ ವಿಶೇಷ ಮಹತ್ವ ಲಭಿಸಿದೆ.

ಇದಲ್ಲದೆ, ಭಾರತದ ಪ್ರಧಾನಿಯೊಬ್ಬರು ಮೊದಲ ಬಾರಿಗೆ ಸೆಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಐತಿಹಾಸಿಕ ಗೌರವಕ್ಕೆ ಪಾತ್ರರಾಗಲಿದ್ದಾರೆ. ಇದು ಉಭಯ ದೇಶಗಳ ನಡುವಿನ ಭಾಂದವ್ಯವನ್ನು ಮತ್ತಷ್ಟು ಬಲಪಡಿಸುವ ಪ್ರಮುಖ ಘಟ್ಟವೆಂದು ಪರಿಗಣಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೆಶೆಲ್ಸ್ ಪ್ರವಾಸದ ವೇಳೆ ಅಲ್ಲಿನ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಲಿದ್ದಾರೆ. ಭಾರತೀಯ ಸಮುದಾಯವು ಭಾರತ ಮತ್ತು ಸೆಶೆಲ್ಸ್ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಪ್ರಮುಖ ಕೊಂಡಿಯಾಗಿದ್ದು, ಈ ಭೇಟಿ ಜನ-ಜನರ ನಡುವಿನ ಸಂಬಂಧಗಳಿಗೂ ಹೊಸ ಉತ್ತೇಜನ ನೀಡಲಿದೆ.

Sponsored

ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ಮೋದಿ ಹಾಗೂ ಸೆಶೆಲ್ಸ್ ಅಧ್ಯಕ್ಷ ಪ್ಯಾಟ್ರಿಕ್ ಹರ್ಮಿನಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, ಪ್ರಾದೇಶಿಕ ಹಾಗೂ ಜಾಗತಿಕ ಮಟ್ಟದ ಪರಸ್ಪರ ಹಿತಾಸಕ್ತಿಯ ವಿಚಾರಗಳ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಳ್ಳಲಿದ್ದಾರೆ.

ಇದೇ ವೇಳೆ, ಭಾರತದ ಸಶಸ್ತ್ರ ಪಡೆಗಳ ತುಕಡಿ ಹಾಗೂ ಭಾರತೀಯ ನೌಕಾಪಡೆಯ ಎರಡು ಯುದ್ಧ ನೌಕೆಗಳು ಸೆಶೆಲ್ಸ್ ರಾಷ್ಟ್ರೀಯ ದಿನಾಚರಣೆಯಲ್ಲಿ ಭಾಗವಹಿಸಲಿವೆ. ಇದು ಭಾರತ- ಸೆಶೆಲ್ಸ್ ನಡುವಿನ ರಕ್ಷಣಾ ಸಹಕಾರ ಮತ್ತು ಕಡಲ ಭದ್ರತಾ ಪಾಲುದಾರಿಕೆಯ ಬಲಿಷ್ಠ ಸಂಬಂಧವನ್ನು ಮತ್ತೊಮ್ಮೆ ಪ್ರತಿಬಿಂಬಿಸುವ ಮಹತ್ವದ ಹೆಜ್ಜೆಯಾಗಿದೆ.

Also Read:

ಮಹಾರಾಷ್ಟ್ರ ರಾಜಕೀಯಕ್ಕೆ ಹೊಸ ಟ್ವಿಸ್ಟ್? ಫಡ್ನವೀಸ್ - ಉದ್ದವ್ ಒಂದೇ ವಿಮಾನದಲ್ಲಿ ಪ್ರಯಾಣ

Sponsored
You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online