<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Trending

ಪ್ಯಾರಿಸ್ ಗೆ ಪ್ರಧಾನಿ ಮೋದಿ ಭೇಟಿ ; ಭಾರತ - ಫ್ರಾನ್ಸ್ ಬಾಂಧವ್ಯಕ್ಕೆ ಮತ್ತಷ್ಟು ಬಲ

ಪ್ಯಾರಿಸ್ ಗೆ  ಪ್ರಧಾನಿ ಮೋದಿ ಭೇಟಿ ; ಭಾರತ - ಫ್ರಾನ್ಸ್ ಬಾಂಧವ್ಯಕ್ಕೆ ಮತ್ತಷ್ಟು ಬಲ
Summary: Prime Minister Narendra Modi arrived in the French capital Paris and conveyed the message of further strengthening the strategic partnership between India and France. He stressed that the two countries need to work together in many areas including global development, technology, defence cooperation and climate change.

belagavi news :

ಜಿ 7 ಶೃಂಗಸಭೆ ಯಶಸ್ವಿಯಾಗಿ ಪೂರ್ಣಗೊಳಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ರಾಜಧಾನಿ ಫ್ಯಾರೀಸ್ ಗೆ ಆಗಮಿಸಿದ್ದು, ಭಾರತೀಯ ಸಮುದಾಯದವರು ಅವರಿಗೆ ಅದ್ದೂರಿ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಜಾಗತಿಕ ಅಭಿವೃದ್ಧಿ ಶಾಂತಿ ಮತ್ತು ಸ್ಥಿರತೆಗೆ ಭಾರತ ಫ್ರಾನ್ಸ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆ ಅತ್ಯಂತ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

ಫ್ರಾನ್ಸ್ ಬೇಟಿಯ ವೇಳೆ ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನೂಯೆಲ್ ಮ್ಯಾಕ್ರನ್ ಅವರೊಂದಿಗೆ ಹಲವು ಮಹತ್ವದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವಿಶೇಷವಾಗಿ 'ವಿವಾಟೆಕ್' ತಂತ್ರಜ್ಞಾನ ಮತ್ತು ನವೋದ್ಯಮ ಸಮ್ಮೇಳನದಲ್ಲಿ ಉಭಯ ನಾಯಕರು ಪಾಲ್ಗೊಳ್ಳಲಿದ್ದು, ಕೃತಕ ಬುದ್ಧಿಮತ್ತೆ, ಡಿಜಿಟಲ್ ಪರಿವರ್ತನೆ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಸಹಕಾರದ ಬಗ್ಗೆ ಚರ್ಚಿಸಲು ಸಾಧ್ಯತೆ ಇದೆ

ಇದಲ್ಲದೆ ಅಭಿವೃದ್ಧಿಶೀಲ ರಾಷ್ಟ್ರಗಳೊಂದಿಗೆ ಸಹಭಾಗಿತ್ವ, ರಕ್ಷಣಾ ಸಹಕಾರ, ಹವಾಮಾನ ಬದಲಾವಣೆ, ನವೀಕರಿಸಬಹುದಾದ ಇಂಧನ, ಜಾಗತಿಕ ಆರ್ಥಿಕತೆ ಹಾಗೂ ಇಂಡೋ-ಫೆಸಿಫಿಕ್ ಪ್ರದೇಶದ ಭದ್ರತೆ ಸೇರಿದಂತೆ ಹಲವು ಮಹತ್ವದ ವಿಷಯಗಳು ಉಭಯ ನಾಯಕರ ಮಾತುಕತೆಗಳ ಕೇಂದ್ರಬಿಂದು ಆಗಲಿದೆ.

Sponsored

ಭಾರತ ಮತ್ತು ಫ್ರಾನ್ಸ್ ನಡುವಿನ ಬಾಂಧವ್ಯ ಕಳೆದ ಕೆಲವು ವರ್ಷಗಳಲ್ಲಿ ಮತ್ತಷ್ಟು ಗಟ್ಟಿಯಾಗಿದ್ದು, ಜಾಗತಿಕ ಸವಾಲುಗಳಿಗೆ ಒಟ್ಟಾಗಿ ಪರಿಹಾರ ಕಂಡುಕೊಳ್ಳುವಲ್ಲಿ ಎರಡೂ ರಾಷ್ಟ್ರಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಪ್ಯಾರಿಸ್‌ನಲ್ಲಿ ಪ್ರಧಾನಿ ಮೋದಿ ನೀಡಿದ ಈ ಸಂದೇಶ, ವಿಶ್ವದ ಪ್ರಗತಿ ಮತ್ತು ಅಭಿವೃದ್ಧಿಗೆ ಭಾರತ-ಫ್ರಾನ್ಸ್ ಸಹಭಾಗಿತ್ವದ ಮಹತ್ವವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಫ್ರೆಂಚ್ ಕಮ್ಯೂನ್ ಎವಿಯನ್-ಲೆಸ್-ಬೈನ್ಸ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಅತಿಥಿ ರಾಷ್ಟ್ರವಾಗಿ ಭಾರತ ಭಾಗವಹಿಸಿತ್ತು. ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿ ಮೋದಿ ಪ್ಯಾರಿಸ್‌ಗೆ ಆಗಮಿಸಿದ್ದಾರೆ.ಪ್ಯಾರಿಸ್‌ನಲ್ಲಿ ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನೂಯೆಲ್ ಮ್ಯಾಕ್ರನ್ ಅವರೊಂದಿಗೆ ಯುರೋಪ್ ನ ಅತಿ ದೊಡ್ಡ ತಂತ್ರಜ್ಞಾನ ಮೇಳವಾದ 'ವಿವಾಟೆಕ್ 2026' ನಲ್ಲಿ ಭಾಗವಹಿಸಲಿದ್ದಾರೆ. ಜಾಗತಿಕ ಸಮೃದ್ಧಿ ಮತ್ತು ಸಮತೋಲಿತ ಅಭಿವೃದ್ಧಿಯನ್ನು ಸಾಧಿಸಲು ಅಭಿವೃದ್ಧಿಶೀಲ ರಾಷ್ಟ್ರಗಳೊಂದಿಗೆ ಮತ್ತಷ್ಟು ನಿಕಟ ಸಹಕಾರ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿದ್ದಾರೆ. ವಿಶ್ವದ ಆರ್ಥಿಕ ಬೆಳವಣಿಗೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಅಭಿವೃದ್ಧಿಶೀಲ ರಾಷ್ಟ್ರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರ ಧ್ವನಿಗೂ ಜಾಗತಿಕ ವೇದಿಕೆಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ದೊರೆಯಬೇಕು ಎಂದು ಅವರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಜಿ 7 ರಾಷ್ಟ್ರಗಳು ಹಾಗೂ ಗ್ಲೋಬಲ್ ಸೌತ್ ದೇಶಗಳ ಸಾಮರ್ಥ್ಯ ಮತ್ತು ಸಂಪನ್ಮೂಲಗಳನ್ನು ಒಗ್ಗೂಡಿಸುವ ಹೊಸ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ. ಈ ಮಾದರಿಯ ಮೂಲಕ ವ್ಯಾಪಾರ, ಹೂಡಿಕೆ, ತಂತ್ರಜ್ಞಾನ ವಿನಿಮಯ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ಅವಕಾಶಗಳು ಈಗ ಸೃಷ್ಟಿಯಾಗಲಿದ್ದು, ಜಾಗತಿಕ ಆರ್ಥಿಕತೆಗೆ ಹೊಸ ಚೈತನ್ಯ ಸಿಗಲಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ಜಾಗತಿಕ ಸವಾಲುಗಳನ್ನು ಎದುರಿಸಲು ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳು ಕೈಜೋಡಿಸುವುದು ಕಾಲದ ಅಗತ್ಯವಾಗಿದೆ. ವ್ಯಾಪಾರ ಮತ್ತು ಸಂಪರ್ಕ ವಿಸ್ತರಣೆಯ ಮೂಲಕ ಪರಸ್ಪರ ಸಹಕಾರವನ್ನು ಬಲಪಡಿಸಿದರೆ ಮಾತ್ರ ಅವರನ್ನು ಒಳಗೊಂಡ ಸಮಗ್ರ ಅಭಿವೃದ್ಧಿ ಹಾಗೂ ಜಾಗತಿಕ ಸಮೃದ್ಧಿ ಸಾಧ್ಯ ಎಂದು ಮೋದಿ ತಮ್ಮ ಸಂದೇಶದಲ್ಲಿ ಸ್ಪಷ್ಟಪಡಿಸಿದರು.

Sponsored

ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಪ್ರಮುಖ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್, ಉಕ್ರೇನ್ ಅಧ್ಯಕ್ಷ ವೊಲೊಡಿಮೀರ್ ಝೆಲೆನ್ಕ್ಸಿ , ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಹಾಗೂ ಯುಎಇ ಅಧ್ಯಕ್ಷರೊಂದಿಗೆ ಅವರು ಪ್ರತ್ಯೇಕವಾಗಿ ಭೇಟಿಯಾಗಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

ಈ ಮಾತುಕತೆಗಳಲ್ಲಿ ರಕ್ಷಣಾ ಮತ್ತು ಭದ್ರತೆ, ಬಾಹ್ಯಾಕಾಶ ಸರ್ಕಾರ, ನಾಗರಿಕ ಪರಮಾಣು ಶಕ್ತಿ ಅಭಿವೃದ್ಧಿ ಹಾಗೂ ಹವಾಮಾನ ಬದಲಾವಣೆ ತಡೆಗಟ್ಟುವ ಕ್ರಮಗಳು ಪ್ರಮುಖವಾಗಿ ಚರ್ಚಿಸಲ್ಪಟ್ಟವು. ಜಾಗತಿಕ ಸವಾಲುಗಳನ್ನು ಎದುರಿಸಲು ದೇಶಗಳ ನಡುವೆ ಬಲವಾದ ಕಾರ್ಯತಂತ್ರದ ಸಭಾಗಿತ್ವ ಅಗತ್ಯವಿದೆ ಎಂದು ಅಭಿಪ್ರಾಯವನ್ನು ನಾಯಕರು ಹಂಚಿಕೊಂಡರು.

ಭಾರತ ಮತ್ತು ಫ್ರಾನ್ಸ್ ಸೇರಿದಂತೆ ಹಲವು ರಾಷ್ಟ್ರಗಳು ಈಗಾಗಲೇ ರಕ್ಷಣಾ, ತಂತ್ರಜ್ಞಾನ ಮತ್ತು ಹವಾಮಾನ ಕ್ಷೇತ್ರಗಳಲ್ಲಿ ಗಟ್ಟಿಯಾದ ಸಹಕಾರ ಹೊಂದಿವೆ. ಇವರೊಂದಿಗೆ ಫ್ರಾನ್ಸ್ ನಲ್ಲಿ ಸುಮಾರು 1.19 ಲಕ್ಷಕ್ಕೂ ಹೆಚ್ಚು ಭಾರತೀಯರು ವಾಸಿಸುತ್ತಿದ್ದು, ಅವರು ಎರಡು ರಾಷ್ಟ್ರಗಳ ನಡುವಿನ ಸಾಂಸ್ಕೃತಿಕ ಹಾಗೂ ಆರ್ಥಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುತ್ತಿದ್ದಾರೆ.

Also Read:

Sponsored

ಆರ್. ಅಶೋಕ್ ಗೆ ಯತ್ನಾಳ್ ಭರವಸೆ: 'ನೀವು ಹೇಳಿದವರಿಗೆ ವೋಟ್ ಹಾಕುತ್ತೇನೆ'

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online