<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

PM Modi: ಮೇ 10ರಂದು ಬೆಂಗಳೂರಿಗೆ ಮೋದಿ ಆಗಮನ

PM Modi: ಮೇ 10ರಂದು ಬೆಂಗಳೂರಿಗೆ ಮೋದಿ ಆಗಮನ
Summary: Narendra Modi will visit Bengaluru on May 10. According to reports, he will arrive at HAL Airport around 9 am.

belagavi news:

ಬೆಂಗಳೂರು: ನರೇಂದ್ರ ಮೋದಿ ಅವರು ಮೇ ಹತ್ತರಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷಾಚರಣೆ ಹಾಗೂ ರವಿಶಂಕರ್ ಗುರೂಜಿ ಅವರ 70ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

ಪ್ರಧಾನಿಯವರು ವಿವಿಧ ಸಾಂಪ್ರದಾಯಿಕ ಕಳೆಗಳಿಂದ ಅಲಂಕರಿಸಲ್ಪಟ್ಟ ನೂತನ ಧ್ಯಾನ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಮೇ 10 ರಿಂದ 25ರ ವರೆಗೆ ಆಶ್ರಮದಲ್ಲಿ ವಿಶೇಷ ಅಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಮಾನಸಿಕ ಮತ್ತು ಆಧ್ಯಾತ್ಮಿಕ ಸಾಧನೆಗಳ ಮೂಲಕ ಲಕ್ಷಾಂತರ ಜನರಿಗೆ ಮಾರ್ಗದರ್ಶನ ನೀಡುತ್ತಿರುವ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ತನ್ನ 45ನೇ ವರ್ಷದ ಸಂಭ್ರಮವನ್ನು ಆಚರಿಸುತ್ತಿದೆ. ಈ ಅಂಗವಾಗಿ ದೇಶದ ನಾನಾ ಕ್ಷೇತ್ರಗಳ ಗಣ್ಯರು ಭಾಗವಹಿಸಿ ಸಂಭ್ರಮಾಚರಣೆಗೆ ಮೆರುಗು ತರುವ ನಿರೀಕ್ಷೆ ಇದೆ.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮೇ ಹತ್ತರಂದು ಎಚ್ಎಎಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಅಧಿಕಾರಕ್ಕೇರಿದ ಹಿನ್ನೆಲೆ ಹಾಗೂ ಕೇರಳದ ಮೂರು ಕ್ಷೇತ್ರಗಳಲ್ಲಿ ಪಕ್ಷದ ಗೆಲುವಿನ ಸಂಭ್ರಮಾಚರಣೆಯ ಅಂಗವಾಗಿ HAL ಏರ್ ಪೋರ್ಟ್ ಪ್ರವೇಶ ದ್ವಾರ ಬಳಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮೇ 10ರಂದು ಬೆಳಿಗ್ಗೆ 9:00ಗೆ ಪ್ರಧಾನಿ ನರೇಂದ್ರ ಮೋದಿಯವರು HAL ಏರ್ ಪೋರ್ಟ್ ಗೆ ಆಗಮಿಸಲಿದ್ದು, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಸುಮಾರು ಹತ್ತರಿಂದ ಹದಿನೈದು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.

Also Read:

ಜನಾಶೀರ್ವಾದದಿಂದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online