Belagavi News:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪಿಎಂ ಮೋದಿ 3.0 ಸರ್ಕಾರ ಎರಡನೆಯ ವರ್ಷದ ಸಂಭ್ರಮವನ್ನು ಆಚರಿಸುವ ಸಂದರ್ಭದಲ್ಲಿ, ದೇಶಿಯ ಪ್ರವಾಸ ಉದ್ಯಮಕ್ಕೆ ಉತ್ತೇಜನ ನೀಡುವ ಮಹತ್ವದ ಸಂದೇಶವನ್ನು ಪ್ರಧಾನಿ ಮೋದಿ ನೀಡಿದ್ದಾರೆ. ವಿದೇಶಿ ಪ್ರವಾಸಗಳಿಗೆ ಹೆಚ್ಚಿನ ಹಣ ಖರ್ಚು ಮಾಡುವ ಬದಲು, ಭಾರತದ ಸುಂದರ ಪ್ರವಾಸಿ ತಾಣಗಳನ್ನು ಭೇಟಿ ಮಾಡುವಂತೆ ದೇಶದ ಜನತೆಗೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.
ಭಾರತದ ವಿವಿಧ ರಾಜ್ಯಗಳಲ್ಲಿ ಅನೇಕ ಐತಿಹಾಸಿಕ, ಧಾರ್ಮಿಕ, ಪ್ರಕೃತಿ ಸೌಂದರ್ಯ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರವಾಸಿ ತಾಣಗಳಿವೆ. ದೇಶಿಯ ಪ್ರವಾಸೋದ್ಯಮವನ್ನು ಬೆಳೆಸುವುದರಿಂದ ಸ್ಥಳೀಯ ಆರ್ಥಿಕತೆ ಬಲಪಡಿಸುವುದಲ್ಲದೆ, ಸಣ್ಣ ವ್ಯಾಪಾರಿಗಳು, ಹೋಟೆಲ್ ಉದ್ಯಮ ಹಾಗೂ ಪ್ರವಾಸೋದ್ಯಮ ಕ್ಷೇತ್ರಕ್ಕೂ ಹೆಚ್ಚಿನ ಲಾಭವಾಗಲಿದೆ ಎಂದು ಮೋದಿ ಅಭಿಪ್ರಾಯಪಟ್ಟರು.
"ಮೊದಲು ಭಾರತವನ್ನು ನೋಡಿ, ನಂತರ ವಿದೇಶವನ್ನು ನೋಡಿ" ಎಂಬ ಸಂದೇಶದ ಮೂಲಕ ಪ್ರಧಾನಿ ಮೋದಿ ಯುವಜನತೆಗೆ ವಿಶೇಷ ಕರೆ ನೀಡಿದ್ದಾರೆ. ಸ್ವದೇಶಿ ಪ್ರವಾಸದಿಂದ ದೇಶದ ಸಂಸ್ಕೃತಿ, ಪರಂಪರೆ ಹಾಗೂ ವೈವಿಧ್ಯತೆಯನ್ನು ಅರಿಯುವ ಅವಕಾಶ ಸಿಗುತ್ತದೆ ಎಂದು ಅವರು ಹೇಳಿದ್ದರು.
ಪ್ರಧಾನಿ ಮೋದಿ ನೀಡಿದ ಈ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಹಲವರು ದೇಶಿಯ ಪ್ರವಾಸಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಪಿಎಂ ಮೋದಿ 3.0 ಎರಡನೇ ವರ್ಷದ ಸಂಭ್ರಮದ ನಡುವೆ ಪ್ರಧಾನಿ ನೀಡಿದ ಈ ಮನವಿ ದೇಶದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಉತ್ತೇಜಿನ ನೀಡುವ ನಿರೀಕ್ಷೆ.
ಮಧ್ಯ ಪ್ರಾಚ್ಯ ಯುದ್ಧ ಬಿಕ್ಕಟ್ಟು ನಡುವೆ ಪ್ರದೇಶ ಪ್ರವಾಸಕ್ಕೆ ಆದ್ಯತೆ ನೀಡಿ ಎಂದ ಪ್ರಧಾನಿ ಮೋದಿ:
ಪಶ್ಚಿಮ ಏಷ್ಯಾ ಭಾಗದಲ್ಲಿ ಉಂಟಾಗಿರುವ ಜಾಗತಿಕ ರಾಜತಾಂತ್ರಿಕ ಹಾಗೂ ಯುದ್ಧದ ಬಿಕ್ಕಟ್ಟಿನ ನಡುವೆಯೇ, ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ನಾಗರಿಕರಿಗೆ ಮಹತ್ವದ ಸಂದೇಶ ನೀಡಿದ್ದಾರೆ. ರಾಷ್ಟ್ರದ ಹಿತ ದೃಷ್ಟಿಯಿಂದ ಭಾರತೀಯರು ವಿದೇಶಿ ಪ್ರವಾಸಗಳಿಂದ ಸ್ವದೇಶಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪ್ರಧಾನಿ ಮೋದಿ ಮಾಡಿದ್ದಾರೆ.
ದೇಶದ ಆರ್ಥಿಕತೆ ಬಲಪಡಿಸುವುದು ಹಾಗೂ ಭಾರತೀಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರಧಾನಿ ಈ ಕರೆ ನೀಡಿದ್ದಾರೆ. ಭಾರತದಲ್ಲಿರುವ ಐತಿಹಾಸಿಕ, ಸಂಸ್ಕೃತಿಕ, ಧಾರ್ಮಿಕ ಹಾಗೂ ಪ್ರಕೃತಿ ಸೌಂದರ್ಯದ ಪ್ರವಾಸಿ ತಾಣಗಳನ್ನು ಹೆಚ್ಚು ಅನ್ವೇಷಿಸುವ ಮೂಲಕ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿ ಮೋದಿ ನೀಡಿದ ಈ ಸಂದೇಶದ ವಿಡಿಯೋವನ್ನು ಬಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಹಲವರು ಪ್ರಧಾನಿ ಮನವಿಗೆ ಬೆಂಬಲ ಸೂಚಿಸಿದ್ದಾರೆ.
ಮಧ್ಯ ಪ್ರಾಚ್ಯ ಪ್ರದೇಶದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಪ್ರವಾಸೋದ್ಯಮಕ್ಕೂ ಪರಿಣಾಮ ಬೀಳುತ್ತಿರುವ ಹಿನ್ನೆಲೆ, ದೇಶಿಯ ಪ್ರವಾಸ ಉದ್ಯಮವನ್ನು ಉತ್ತೇಜಿಸುವುದು ಸಮಯೋಚಿತ ಕ್ರಮ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
"ಮೊದಲು ಭಾರತವನ್ನು ನೋಡಿ, ನಂತರ ವಿದೇಶವನ್ನು ನೋಡಿ" ಎಂಬ ಸಂದೇಶದ ಮೂಲಕ ಪ್ರಧಾನಿ ಮೋದಿ ದೇಶದ ಜನರಲ್ಲಿ ಸ್ವದೇಶಿ ಪ್ರವಾಸದ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸಿದ್ದಾರೆ. ಪ್ರಧಾನಿ ಅವರ ಈ ಕರೆ ದೇಶದ ಪ್ರವಾಸೋದ್ಯಮ ಕ್ಷೇತ್ರಕ್ಕೂ ಹೊಸ ಚೈತನ್ಯ ನೀಡುವ ನಿರೀಕ್ಷೆ ಇದೆ.
ಭಾರತದ ವೈವಿಧ್ಯಮಯ ಪ್ರವಾಸಿ ತಾಣಗಳನ್ನು ಅನ್ವೇಷಿಸಲು ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮಹತ್ವದ ಕರೆ ನೀಡಿದ್ದಾರೆ. ದೇಶದೊಳಗಿನ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮೂಲಕ ಭಾರತದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸಬಹುದು ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.
ಭಾರತೀಯರು ವಿದೇಶಿ ಪ್ರವಾಸ ಗಳಿಗಿಂತ ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿದರೆ, ದೇಶದ ಅಮೂಲ್ಯವಾದ ವಿದೇಶಿ ವಿನಿಮಯ ಉಳಿತಾಯವಾಗುತ್ತದೆ. ಜೊತೆಗೆ, ದೇಶಿಯ ಪ್ರವಾಸ ಉದ್ಯಮಕ್ಕೆ ಉತ್ತೇಜನ ಸಿಗುವುದರಿಂದ ಸಣ್ಣ ವ್ಯಾಪಾರಿಗಳು, ಹೋಟೆಲ್ ಉದ್ಯಮ, ಸಾರಿಗೆ ಹಾಗೂ ಸ್ಥಳೀಯ ಉದ್ಯೋಗಾವಕಾಶಗಳಿಗೂ, ಹೆಚ್ಚಿನ ಲಾಭವಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಪ್ರಧಾನಿಯವರ ಮಹತ್ವಾಕಾಂಕ್ಷೆಯ 'ಆತ್ಮ ನಿರ್ಬರ ಭಾರತ' ಅಭಿಯಾನಕ್ಕೆ ದೇಶಿಯ ಪ್ರವಾಸೋದ್ಯಮವು ಹೊಸ ವೇಗ ಮತ್ತು ಬಲ ನೀಡಲಿದೆ ಎಂದು ಹೇಳಲಾಗಿದೆ. ಭಾರತ ಐತಿಹಾಸಿಕ, ಸಂಸ್ಕೃತಿಕ, ಧಾರ್ಮಿಕ ಹಾಗೂ ನೈಸರ್ಗಿಕ ಸೌಂದರ್ಯವನ್ನು ವಿಶ್ವಕ್ಕೆ ಪರಿಚಯಿಸುವಲ್ಲಿ ದೇಶದ ನಾಗರಿಕರೇ ಪ್ರಮುಖ ಪಾತ್ರ ವಹಿಸಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ.
ಇತ್ತೀಚಿನ ಜಾಗತಿಕ ಪರಿಸ್ಥಿತಿಗಳು ಹಾಗೂ ಪಶ್ಚಿಮ ಏಷ್ಯಾ ಭಾಗದಲ್ಲಿ ಉಂಟಾಗಿರುವ ಉದ್ವಿಗ್ನತೆಯ ನಡುವೆ ಪ್ರಧಾನಿ ನೀಡಿರುವ ಈ ಸಂದೇಶಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. "ಮೊದಲು ಭಾರತ ನೋಡಿ" ಎಂಬ ಪ್ರಧಾನಿ ಸಂದೇಶ ಇದೀಗ ದೇಶಿಯ ಪ್ರವಾಸ ಉದ್ಯಮಕ್ಕೆ ಹೊಸ ಉತ್ತೇಜನ ನೀಡುವ ನಿರೀಕ್ಷೆ ಮೂಡಿಸಿದೆ.
Also Read:
ಮೇ 25ಕ್ಕೆ ದೆಹಲಿಗೆ ಸಿಎಂ ಸಿದ್ದರಾಮಯ್ಯ;ಹೈಕಮಾಂಡ್ ಸಭೆ ಹಿಂದೆ ರಾಜಕೀಯ ಕುತೂಹಲ