belagavi News:
ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ಅಂಗವಾಗಿ ಸೆಶೆಲ್ಸ್ ನ ಸ್ಟೇಟ್ ಹೌಸ್ ನಲ್ಲಿ ಅವರಿಗೆ ಭವ್ಯವಾದ ಸರ್ಕಾರಿ ಗೌರವದ ಸ್ವಾಗತ ನೀಡಲಾಯಿತು. ಅಧಿಕೃತ ಕಾರ್ಯಕ್ರಮದಲ್ಲಿ ಸೆಶೆಲ್ಸ್ ಸರ್ಕಾರದ ಉನ್ನತ ನಾಯಕರು ಹಾಗೂ ಗಣ್ಯರು ಭಾಗವಹಿಸಿ ಪ್ರಧಾನಿ ಮೋದಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಸ್ಟೇಟ್ ಹೌಸ್ ನಲ್ಲಿ ನಡೆದ ಈ ಅಧಿಕೃತ ಸ್ವಾಗತ ಸಮಾರಂಭದಲ್ಲಿ ಎರಡು ದೇಶಗಳ ನಡುವಿನ ದ್ವಿಪಕ್ತಿಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆಗಳು ನಡೆದವು. ಸಮುದ್ರ ಭದ್ರತೆ, ವ್ಯಾಪಾರ, ಹೂಡಿಕೆ ಹಾಗೂ ಅಭಿವೃದ್ಧಿ ಸಹಕಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಮಾತುಕತೆ ನಡೆಯಿತು.
ಪ್ರಧಾನಿ ಮೋದಿ ಅವರು ಸೆಶೆಲ್ಸ್ ಸರ್ಕಾರದ ಆತಿಥ್ಯಕ್ಕೆ ಧನ್ಯವಾದ ಸಲ್ಲಿಸಿ, ಭಾರತ ಮತ್ತು ಸೆಶೆಲ್ಸ್ ನಡುವಿನ ಸಂಬಂಧಗಳು ಪರಸ್ಪರ ನಂಬಿಕೆ ಮತ್ತು ಸಹಕಾರದ ಆಧಾರದ ಮೇಲೆ ಮುಂದುವರೆಯುತ್ತಿವೆ ಎಂದು ಹೇಳಿದರು. ಇಂಡಿಯನ್ ಓಶನ್ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡುವಲ್ಲಿ ಎರಡು ದೇಶಗಳ ಸಹಕಾರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.
ಸೆಶೆಲ್ಸ್ ಅಧ್ಯಕ್ಷರು ಪ್ರಧಾನಿ ಮೋದಿಯನ್ನು ಆತ್ಮೀಯವಾಗಿ ಸ್ವಾಗತಿಸಿ, ಭಾರತವು ಅಭಿವೃದ್ಧಿ ಹಾಗೂ ಪ್ರಾದೇಶಿಕ ಸಹಕಾರದಲ್ಲಿ ನೀಡುತ್ತಿರುವ ಪಾತ್ರವನ್ನು ಶ್ಲಾಘಿಸಿದರು. ಈ ಬೇಟಿ ಎರಡು ದೇಶಗಳ ನಡುವಿನ ಸಂಬಂಧಕ್ಕೆ ಹೊಸ ವೇಗ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಅಧಿಕೃತ ಭೇಟಿ ಮೂಲಕ ಭಾರತ ಮತ್ತು ಸೆಶೆಲ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳು ಮತ್ತಷ್ಟು ಗಟ್ಟಿಯಾಗಲಿದ್ದು, ಮುಂದಿನ ದಿನಗಳಲ್ಲಿ ಹಲವು ಹೊಸ ಒಪ್ಪಂದಗಳು ಸಾಧ್ಯವಾಗುವ ನಿರೀಕ್ಷೆ ಇದೆ.
ಸೆಶೆಲ್ಸ್ ಸ್ಟೇಟ್ ಹೌಸ್ ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸರ್ಕಾರಿ ಗೌರವ ಸ್ವಾಗತ ; 50 ವರ್ಷಗಳ ಭಾರತ - ಸೆಶೆಲ್ಸ್ ರಾಜತಾಂತ್ರಿಕ ಭಾಂದವ್ಯಕ್ಕೆ ಮಹತ್ವ :
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಐತಿಹಾಸಿಕ ಮೂರು ದಿನಗಳ ವಿದೇಶ ಪ್ರವಾಸದ ಅಂಗವಾಗಿ ಸೆಶೆಲ್ಸ್ ಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಸೆಶೆಲ್ಸ್ ನ ಹೌಸ್ ನಲ್ಲಿ ಅವರಿಗೆ ಸಾಂಪ್ರದಾಯಿಕ ಸರ್ಕಾರಿ ಗೌರವ ವಂದನೆ ಸಲ್ಲಿಸಲಾಯಿತು.
ಅಧಿಕೃತ ಸ್ವಾಗತ ಸಮಾರಂಭವು ಭಾರತ ಮತ್ತು ಸೆಶೆಲ್ಸ್ ನಡುವಿನ 50 ವರ್ಷಗಳ ದೀರ್ಘ ರಾಜ್ಯ ತಾಂತ್ರಿಕ ಭಾಂದವ್ಯವನ್ನು ಪ್ರತಿಬಿಂಬಿಸುವ ಮಹತ್ವದ ಕ್ಷಣವಾಗಿ ಗುರುತಿಸಲಾಯಿತು. ಎರಡು ದೇಶಗಳ ನಡುವಿನ ಸ್ನೇಹ, ಸಹಕಾರ ಮತ್ತು ಪರಸ್ಪರ ನಂಬಿಕೆಯ ಸಂಕೇತವಾಗಿ ಈ ಕಾರ್ಯಕ್ರಮ ನಡೆಯಿತು.
ಸ್ಟೇಟ್ ಹೌಸ್ ನಲ್ಲಿ ಸೆಶೆಲ್ಸ್ ಅಧ್ಯಕ್ಷ ಪ್ಯಾಟ್ರಿಕ್ ಹರ್ಮಿನಿ ಅವರು ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಇಬ್ಬರು ನಾಯಕರ ನಡುವೆ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಕುರಿತು ಪ್ರಾಥಮಿಕ ಮಾತುಕತೆಗಳು ನಡೆದವು.
ಭಾರತ ಮತ್ತು ಸೆಶೆಲ್ಸ್ ನಡುವಿನ ಸಹಕಾರವು ಸಮುದ್ರ ಭದ್ರತೆ, ವ್ಯಾಪಾರ, ಹೂಡಿಕೆ ಮತ್ತು ಅಭಿವೃದ್ಧಿ ಯೋಜನೆಗಳ ಕ್ಷೇತ್ರಗಳಲ್ಲಿ ವಿಸ್ತರಿಸುತ್ತಿದೆ. ಈ ಭೇಟಿಯು ಈ ಸಂಬಂಧಗಳಿಗೆ ಹೊಸ ವೇಗ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.
ಪ್ರಧಾನಿ ಮೋದಿ ಅವರು ಸೆಶೆಲ್ಸ್ ಸರ್ಕಾರದ ಆತಿತ್ಯಕ್ಕೆ ಧನ್ಯವಾದ ಸಲ್ಲಿಸಿದ್ದು, ಇಂಡಿಯನ್ ಓಷನ್ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ಮತ್ತು ಅಭಿವೃದ್ಧಿಗೆ ಎರಡು ದೇಶಗಳ ಸಹಕಾರ ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ಈ ಐತಿಹಾಸಿಕ ಭೇಟಿ ಭಾರತ ಮತ್ತು ಸೆಶೆಲ್ಸ್ ನಡುವಿನ ರಾಜ ತಾಂತ್ರಿಕ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಮಹತ್ವದ ಹಂತವಾಗಿ ಪರಿಗಣಿಸಲಾಗಿದೆ.
ಸೆಶೆಲ್ಸ್ ಸುವರ್ಣ ಮಹೋತ್ಸವ ರಾಷ್ಟ್ರೀಯ ದಿನಾಚರಣೆ - ಪ್ರಧಾನಿ ಮೋದಿ ಮುಖ್ಯ ಅತಿಥಿ; ಜೂನ್ 29 ರವರೆಗೆ ಅಧಿಕೃತ ಪ್ರವಾಸ :
ಸೆಶೆಲ್ಸ್ ಅಧ್ಯಕ್ಷ ಪ್ಯಾಟ್ರಿಕ್ ಹರ್ಮಿನಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 29 ರವರೆಗೆ ಸೆಶೆಲ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆ ಮೂಡಿಸಿದೆ.
ಈ ಪ್ರವಾಸದ ಪ್ರಮುಖ ಭಾಗವಾಗಿ ಪ್ರಧಾನಿ ಮೋದಿ ಅವರು ಸೋಮವಾರ ನಡೆಯಲಿರುವ ಸೆಶೆಲ್ಸ್ ನ ಸುವರ್ಣ ಮಹೋತ್ಸವ ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದು ಸೆಶೆಲ್ಸ್ ಸ್ವಾತಂತ್ರ್ಯದ 50ನೇ ವರ್ಷದ ಸ್ಮರಣೋತ್ಸವವಾಗಿದ್ದು, ದೇಶದ ಇತಿಹಾಸದಲ್ಲಿ ಮಹತ್ವದ ಕ್ಷಣವಾಗಿದೆ.
ಈ ವಿಶೇಷ ಸಂದರ್ಭದಲ್ಲಿ ವಿಶ್ವದ ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆಯಿದ್ದು, ಪ್ರಧಾನಿ ಮೋದಿಯ ಉಪಸ್ಥಿತಿ ಕಾರ್ಯಕ್ರಮಕ್ಕೆ ಅಂತರಾಷ್ಟ್ರೀಯ ಮಹತ್ವವನ್ನು ನೀಡಲಿದೆ. ಭಾರತ ಮತ್ತು ಸೆಶೆಲ್ಸ್ ನಡುವಿನ ದೀರ್ಘಕಾಲದ ಸ್ನೇಹ ಮತ್ತು ಸಹಕಾರವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ಈ ಭೇಟಿ ನಡೆಯುತ್ತಿದೆ.
ಭಾರತವು ಹಿಂದಿನಿಂದಲೂ ಸೆಶೆಲ್ಸ್ ಜೊತೆ ಸಮುದ್ರ ಭದ್ರತೆ, ಅಭಿವೃದ್ಧಿ ಸಹಕಾರ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿ ಸಹಭಾಗಿತ್ವವನ್ನು ವಿಸ್ತರಿಸುತ್ತಾ ಬಂದಿದೆ. ಈ ಪ್ರವಾಸದ ವೇಳೆ ಎರಡು ದೇಶಗಳ ನಾಯಕರ ನಡುವೆ ದ್ವಿಪಕ್ಷೀಯ ಮಾತುಕತೆಗಳು ನಡೆಯಲಿವೆ.
ಪ್ರಧಾನಿ ಮೋದಿ ಅವರ ಈ ಅಧಿಕೃತ ಬೇಟಿ ಇಂಡಿಯನ್ ಓಷನ್ ಪ್ರದೇಶದಲ್ಲಿ ಶಾಂತಿ, ಚಿರತೆ ಮತ್ತು ಅಭಿವೃದ್ಧಿಗೆ ಭಾರತ ನೀಡುತ್ತಿರುವ ಮಹತ್ವವನ್ನು ಮತ್ತೊಮ್ಮೆ ತೋರಿಸುತ್ತದೆ ಎಂದು ರಾಜ ತಾಂತ್ರಿಕ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ಸೆಶೆಲ್ಸ್ ವಿಕ್ಟೋರಿಯಾ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ - ಕಚ್ ಸಂಸ್ಕೃತಿಯ ನೃತ್ಯ ಪ್ರದರ್ಶನ ಆಕರ್ಷಣೆ :
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸೆಶೆಲ್ಸ್ ನ ವಿಕ್ಟೋರಿಯಾ ನಗರಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಸೆಶೆಲ್ಸ್ ಅಧ್ಯಕ್ಷ ಪ್ಯಾಟ್ರಿಕ್ ಹರ್ಮಿನಿ, ಹಿರಿಯ ಸಚಿವರು ಹಾಗೂ ಇತರ ಗಣ್ಯರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಾಂಪ್ರದಾಯಿಕ ಸ್ವಾಗತ ಕಾರ್ಯಕ್ರಮವು ಅತ್ಯಂತ ವೈಭವದಿಂದ ನೆರವೇರಿದ್ದು, ಭಾರತ ಮತ್ತು ಸೆಶೆಲ್ಸ್ ನಡುವಿನ ಬಲವಾದ ಸ್ನೇಹ ಸಂಬಂಧವನ್ನು ಮತ್ತೊಮ್ಮೆ ತೋರಿಸಿತು. ವಿಶೇಷವಾಗಿ, ಭಾರತೀಯ ವಲಸಿಗರು ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಗುಜರಾತ್ ನ ಕಚ್ ಪ್ರಾಂತ್ಯದ ಸಾಂಪ್ರದಾಯಿಕ ನೃತ್ಯ ಪ್ರದರ್ಶನ ನಡೆಯಿತು. ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಈ ನೃತ್ಯಕ್ಕೆ ನೆರೆದಿದ್ದ ಗಣ್ಯರು ಹಾಗೂ ಸಾರ್ವಜನಿಕರು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಅವರ ಈ ಬೇಟಿಯ ಭಾರತ - ಸೆಶೆಲ್ಸ್ ನಡುವಿನ ರಾಜ ತಾಂತ್ರಿಕ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿರೀಕ್ಷೆ ಮೂಡಿಸಿದೆ. ಇಂಡಿಯನ್ ಓಷನ್ ಪ್ರದೇಶದಲ್ಲಿ ಸಹಕಾರ ಮತ್ತು ಅಭಿವೃದ್ಧಿ ಯೋಜನೆಗಳನ್ನು ವಿಸ್ತರಿಸುವ ದಿಕ್ಕಿನಲ್ಲಿ ಈ ಭೇಟಿ ಮಹತ್ವದ್ದಾಗಿದೆ ಎಂದು ರಾಜತಾಂತ್ರಿಕ ವಲಯ ಅಭಿಪ್ರಾಯಪಟ್ಟಿದೆ.
ಈ ಪ್ರವಾಸದ ವೇಳೆ ಪ್ರಧಾನಿ ಮೋದಿ ಹಲವು ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ದ್ವಿಪಕ್ಷಿಯ ಮಾತುಕತೆಗಳ ಮೂಲಕ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಸಾಧ್ಯತೆ ಇದೆ.