belagavi news :
ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರದ ಕಠಿಣ ಕ್ರಮ : ಮಕ್ಕಳ ಭವಿಷ್ಯದೊಂದಿಗೆ ಆಟವಾಡುವವರನ್ನು ಬಿಡುವುದಿಲ್ಲ ಎಂದ ಪ್ರಧಾನಿ ಮೋದಿ
ಪ್ರಶ್ನೆ ಪತ್ರಿಕೆ ಸೋರಿಕೆ ಪಿಡುಗಣ್ಣು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಮತ್ತು ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಆ ಮೂಲಾಗ್ರ ಸುಧಾರಣೆಗಳನ್ನು ತರುವುದು ಕೇಂದ್ರ ಸರಕಾರದ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಕ್ಕಳ ಭವಿಷ್ಯದೊಂದಿಗೆ ಆಟವಾಡುವವರಿಗೆ ಯಾವುದೇ ರೀತಿಯ ಕರುಣೆ ತೋರಿಸಲಾಗುವುದಿಲ್ಲ ಎಂದು ಅವರು ಕಠಿಣ ಎಚ್ಚರಿಕೆ ನೀಡಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಪರೀಕ್ಷೆ ( ಅನ್ಯಾಯ ಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026 ಅನ್ನು ಸಂಸತ್ತು ಅಂಗೀಕರಿಸಿದೆ. ಅಪರಾಧಿಗಳಿಗೆ ಇನ್ನಷ್ಟು ಕಠಿಣ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಈ ತಿದ್ದುಪಡಿಗಳನ್ನು ತರಲಾಗಿದೆ.
ಮಸೂದೆಗೆ ಸಂಸತ್ತಿನ ಅನುಮೋದನೆ ದೊರೆತ ಕೆಲವೇ ಗಂಟೆಗಳ ಬಳಿಕ ಸೋಮವಾರ ಸಂಜೆ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ, ಪ್ರಶ್ನೆ ಪತ್ರಿಕೆ ಸೋರಿಕೆ ಮಾಫಿಯಾದ ವಿರುದ್ಧ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದರು.
" ಮಕ್ಕಳ ಪರಿಶ್ರಮ, ಕನಸು ಮತ್ತು ಭವಿಷ್ಯದೊಂದಿಗೆ ಆಟವಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಮತ್ತು ನ್ಯಾಯ ಸಮ್ಮತತೆಯನ್ನು ಖಚಿತಪಡಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ", ಎಂದು ಪ್ರಧಾನಿ ಹೇಳಿದರು.
ಇತ್ತೀಚಿನ ವರ್ಷಗಳಲ್ಲಿ ವಿವಿಧ ಸ್ಪರ್ಧಾತ್ಮಕ ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಈ ಕಾನೂನು ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಬಲಪಡಿಸುವ ಮಹತ್ವದ ಹೆಜ್ಜೆ ಆಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ, ಕೇಂದ್ರ ಸರ್ಕಾರ ಹಾಗೂ ಹಲಗೂ ರಾಜ್ಯಗಳು ಹಲವು ವರ್ಷಗಳಿಂದ ಪ್ರಶ್ನೆಪತ್ರಿಕೆ ಸೋರಿಕೆ ಸಮಸ್ಯೆಯನ್ನು ಎದುರಿಸುತ್ತಿವೆ. ಈ ಪಿಡುಗು, ಲಕ್ಷಾಂತರ ವಿದ್ಯಾರ್ಥಿಗಳ ಪರಿಶ್ರಮ, ಕನಸು ಮತ್ತು ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಯನ್ನು ತರಬೇಕಾದ ಅಗತ್ಯವನ್ನು ಮತ್ತಷ್ಟು ಸ್ಪಷ್ಟಪಡಿಸಿದೆ.
ಈ ಹಿನ್ನೆಲೆಯಲ್ಲಿ ದೇಶದಲ್ಲಿ ಬಲಿಷ್ಠ, ಪಾರದರ್ಶಕ ಮತ್ತು ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸಲು ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಹೇಳಿದರು. ಪರೀಕ್ಷಾ ಪ್ರಕ್ರಿಯೆಯಲ್ಲಿ ತಂತ್ರಜ್ಞಾನದ ವ್ಯಾಪಕ ಬಳಕೆ, ಡಿಜಿಟಲ್ ಭದ್ರತಾ ಕ್ರಮಗಳು ಮತ್ತು ಮೇಲ್ವಿಚಾರಣೆಯನ್ನು ಬಲಪಡಿಸುವ ಮೂಲಕ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶ ಹೊಂದಲಾಗಿದೆ ಎಂದರು .
ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದ್ದು, ಇಂತಹ ಪ್ರಕರಣಗಳ ಪರಿತ ವಿಚಾರಣೆಗೆ ಫಾಸ್ಟ್- ಟ್ರ್ಯಾಕ್ ನ್ಯಾಯಗಳನ್ನು ಸ್ಥಾಪಿಸುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು. ಜೊತೆಗೆ, ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಹಾಗೂ ಅಕ್ರಮಗಳನ್ನು ಪರಿಣಾಮಕಾರಿಯಾಗಿ ತಡೆಯಲು ವಿವಿಧ ರಾಜ್ಯ ಸರ್ಕಾರಗಳಿಂದ ಸಲಹೆಗಳನ್ನು ಪಡೆದು ಅವುಗಳನ್ನು ಜಾರಿಗೆ ತರುವ ಪ್ರಕ್ರಿಯೆಯು ನಡೆಯುತ್ತಿದೆ ಎಂದರು.
ಲೋಕಸಭೆಯಲ್ಲಿ ಬುಧವಾರ ಮತ್ತು ರಾಜ್ಯಸಭೆಯಲ್ಲಿ ಗುರುವಾರ ಅಂಗೀಕಾರ ಪಡೆದ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ತಿದ್ದುಪಡಿ ಮಸೂದೆಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ಬಂದಿದೆ ಎಂದು ಹೇಳಿದರು. ಈ ಕಾನೂನಿನ ಮೂಲಕ ಪ್ರಶ್ನೆ ಪತ್ರಿಕೆ ಸೋರಿಕೆ ಮಾಫಿಯಾ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಲು ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಪುನರುಚ್ಚರಿಸಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ಮೋದಿ
ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವ ಗ್ಯಾಂಗ್ ಗಳು, ತೋರಿಕೆ ಮಾಫಿಯಾ ಹಾಗೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ. ವಿದ್ಯಾರ್ಥಿಗಳಿಗೆ ನ್ಯಾಯಯುತ ಮತ್ತು ಪಾರದರ್ಶಕ ಅವಕಾಶ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಈ ಪಿಡುಗಿನ ವಿರುದ್ಧದ ಹೋರಾಟ ಮುಂದೆಯೂ ನಿರಂತರವಾಗಿ ಸಾಗಲಿದೆ ಎಂದು ಪ್ರಧಾನಿ ತಿಳಿಸಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದ್ದಾರೆ.
ಹೊಸ ತಿದ್ದುಪಡಿ ಕಾನೂನಿನ ಪ್ರಕಾರ, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾದವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 50 ಲಕ್ಷದವರೆಗೆ ದಂಡ ವಿಧಿಸುವ ಅವಕಾಶ ಕಲ್ಪಿಸಲಾಗಿದೆ.
ಇದೇ ವೇಳೆ, ಜೂನ್ 20ರಂದು ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ, ಕೇಂದ್ರ ಸರ್ಕಾರದ ಕ್ರಮಗಳು ಹಾಗೂ ನಂತರದ ರಾಜಕೀಯ ಬೆಳವಣಿಗೆಗಳು ಈ ವಿಷಯವನ್ನು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ತಂದಿವೆ.