<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಬಿಸಿಎಂ ಹಾಸ್ಟೆಲ್ ನಲ್ಲಿ ಪಾರ್ಟಿ ಆರೋಪ: ವಿದ್ಯಾರ್ಥಿಗಳ ಬಿಂದಾಸ್ ಎಣ್ಣೆ ಪಾರ್ಟಿ

ಬಿಸಿಎಂ ಹಾಸ್ಟೆಲ್ ನಲ್ಲಿ ಪಾರ್ಟಿ ಆರೋಪ: ವಿದ್ಯಾರ್ಥಿಗಳ ಬಿಂದಾಸ್ ಎಣ್ಣೆ ಪಾರ್ಟಿ
Summary: A video of an alleged party held by students at BCM hostel has gone viral on social media and has sparked widespread debate. It is being said that some young men and women are seen celebrating together in the video. The question has been raised as to whether this incident is a violation of hostel rules, and the relevant authorities are investigating the report.

belagavi news :

ಕಲಬುರಗಿ (ಜೂನ್ 10): ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲೆಂದು ಸರ್ಕಾರಗಳು ವಸತಿ ನಿಯಮಗಳನ್ನು ನಿರ್ಮಿಸುತ್ತಿವೆ. ಆದರೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಪ್ರದೇಶದ ಬಿಸಿಎಂ ಮಹಿಳಾ ಹಾಸ್ಟೆಲ್ ಗೆ ಸಂಬಂಧಿಸಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಕೆಲವು ಯುವಕರು ಮತ್ತು ಯುವತಿಯರು ಹಾಸ್ಟೆಲ್ ಆವರಣದಲ್ಲಿ ಸಂಭ್ರಮಾಚರಣೆ ನಡೆಸುತ್ತಿರುವಂತೆ ಕಂಡು ಬರುತ್ತಿದೆ ಎಂದು ಹೇಳಲಾಗುತ್ತಿದೆ. ಈ ದೃಶ್ಯಗಳು ಸಾರ್ವಜನಿಕ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದ್ದು, ಹಾಸ್ಟೆಲ್ ನಿಯಮಗಳು ಹಾಗೂ ಮೇಲ್ವಿಚಾರಣೆಯ ಬಗ್ಗೆ ಚರ್ಚೆ ಆರಂಭವಾಗಿದೆ.

ಈ ವಿಡಿಯೋ ಕಡಗಂಚಿ ಬಿಸಿಎಂ ಹಾಸ್ಟೆಲ್ ನದ್ದೇ ಎಂಬ ಬಗ್ಗೆ ಇನ್ನೂ ಅಧಿಕೃತ ದೃಢೀಕರಣವಾಗಿಲ್ಲ. ಆದಾಗ್ಯೂ, ವಿಡಿಯೋವೈರಲ್ಲಾದ ಬೆನ್ನೆಲ್ಲೇ ಘಟನೆಯ ಸತ್ಯಾಸತ್ಯತೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಆಗ್ರಹಿಸುತ್ತಿವೆ.

ಪ್ರಕರಣದ ಕುರಿತು ಸಂಬಂಧಿತ ಅಧಿಕಾರಿಗಳು ತನಿಖೆ ನಡೆಸಿ ವರದಿ ನೀಡುವ ಸಾಧ್ಯತೆ ಇದ್ದು, ಸತ್ಯಾಂಶ ಹೊರಬರಬೇಕಿದೆ.

ಕಲಬುರಗಿ ಜಿಲ್ಲೆಯ ಕಡಗಂಚಿ ಬಿಸಿಎಂ ಹಾಸ್ಟೆಲ್ ಗೆ ಸಂಬಂಧಿಸಿದೆ ಎನ್ನಲಾದ ವಿಡಿಯೋ ವೈರಲ್ ಆದ ಬಳಿಕ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಗಳ ಪ್ರಕಾರ, ವಿಡಿಯೋದಲ್ಲಿ ವಿದ್ಯಾರ್ಥಿನಿಯೊಬ್ಬರು ಮಧ್ಯಪಾನ ಮಾಡುತ್ತಿರುವ ದೃಶ್ಯಗಳಿವೆ ಎಂದು ಆರೋಪ ಕೇಳಿಬಂದಿದೆ.

ಇದರ ಬೆನ್ನಲ್ಲೇ, ಪ್ರಕರಣವನ್ನು ಮುಚ್ಚಿಹಾಕುವ ನೆಪದಲ್ಲಿ ಕೆಲವರು ಹಣ ವಸೂಲಿ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪಗಳು ಸಾಮಾಜಿಕ ವಲಯದಲ್ಲಿ ಚರ್ಚೆಯಾಗುತ್ತಿವೆ. ಜೊತೆಗೆ, ಕೆಳ ವಾರ್ಡನ್ ಗಳ ವಿರುದ್ಧ ವಿದ್ಯಾರ್ಥಿನಿಯರ ದುರ್ಬಳಕೆಗೆ ಸಂಬಂಧಿಸಿದ ಆರೋಪಗಳು ಕೇಳಿಬಂದಿವೆ.

ಇನ್ನೊಂದೆಡೆ, ವಾರ್ಡನ್ ಹಾಗೂ ವಿದ್ಯಾರ್ಥಿನಿಯ ನಡುವಿನ ಸಂಭಾಷಣೆ ಎನ್ನಲಾದ ಆಡಿಯೋ ಕ್ಲಿಪ್ ಕೂಡ ವೈರಲ್ ಆಗಿದ್ದು, ಪ್ರಕರಣದ ಕುರಿತು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ. ಆದರೆ ಈ ಆಡಿಯೋ ಮತ್ತು ವಿಡಿಯೋಗಳ ಸತ್ಯಾಸತ್ಯತೆ ಬಗ್ಗೆ ಇನ್ನು ಅಧಿಕೃತ ದೃಡೀಕರಣ ಲಭ್ಯವಾಗಿಲ್ಲ.

ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ವಾಸ್ತವಾಂಶ ಬಹಿರಂಗಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಅಧಿಕಾರಿಗಳ ತನಿಖೆಯ ಬಳಿಕವೇ ಆರೋಪಗಳ ಸತ್ಯಾಸತ್ಯತೆ ಸ್ಪಷ್ಟವಾಗಲಿದೆ.

Also Read:

ಮಮತಾ ಬ್ಯಾನರ್ಜಿ ಪಕ್ಷಕ್ಕೆ ಮತ್ತೊಂದು ಹಿನ್ನಡೆ : ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online