belagavi news>
ಸ್ಪೋಟವಾಗುವ ದೃಶ್ಯ ಹೊಂದಿರುವ ರೀಲ್ಸ್ ಮಾಡಿರುವ ಹಿನ್ನಲೆಯಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಸನ್ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ. ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡುವ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತ ವಿಷಯಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆ ಸೋಶಿಯಲ್ ಮೀಡಿಯಾ ಬಳಕೆದಾರರಿಗೆ ಎಚ್ಚರಿಕೆಯ ಸಂದೇಶವಾಗಿದ್ದು ಅಪಾಯಕಾರಿ ಮತ್ತು ತಪ್ಪು ಸಂದೇಶ ನೀಡುವ ವಿಷಯಗಳಿಂದ ದೂರವಿರಲು ಸೂಚಿಸುತ್ತದೆ.
ರಾಮನಗರ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಮತ್ತೆ ಕಾನೂನು ಸಂಕಷ್ಟಕ್ಕೆ ಸುಲುಕಿದ್ದಾರೆ. ಪೆಟ್ರೋಲ್ ಬಾಂಬ್ ಮಾದರಿಯ ವಸ್ತು ಬ್ಲಾಸ್ಟ್ ವಾಗುವ ದೃಶ್ಯ ಹೊಂದಿರುವ ರೀಲ್ಸ್ ಮಾಡಿರುವ ಆರೋಪದ ಹಿನ್ನೆಲೆ, ಕನಕಪುರದ ಕಗ್ಗಲಿಪುರ ತಾನೇ ಪೊಲೀಸರು ಅವರ ವಿರುದ್ಧ ಸ್ವಯಂ-ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ.
ಕೆಲ ದಿನಗಳ ಹಿಂದೆ ರಜತ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ರೀಲ್ಸ್ ಅಪ್ಲೋಡ್ ಮಾಡಿದ್ದರು. ವಿಡಿಯೋದಲ್ಲಿ ಬೈಕ್ ಮೇಲೆ ಸ್ಟೈಲಾಗಿ ಬರುತ್ತಿರುವ ರಜತ್ ಅವರ ಹಿಂದೆ ಪೆಟ್ರೋಲ್ ಬಾಂಬ್ ಮಾದರಿಯ ವಸ್ತು ಸ್ಪೋಟವಾಗುವಂತೆ ತೋರಿಸಲಾಗಿತ್ತು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದಂತೆ ಹಲವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
ನಂತರ ತಮ್ಮ ತಪ್ಪು ಅರಿತು ರಜತ್ ಕ್ಷಮೆ ಸಹ ಕೇಳಿದ್ದರು. ಆದರಿಗ ಬಿಗ್ ಬಾಸ್ ಮ್ಯಾಜಿಕ್ ಸ್ಪರ್ಧಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ರಸ್ತೆಯ ವಡ್ಡೇರಹಳ್ಳಿಯ ಸಾರ್ವಜನಿಕರ ರಸ್ತೆಯಲ್ಲಿ ರಜತ ಕಿಶನ್ ಹಾಗು ತಂಡ ರೀಲ್ಸ್ ಶೂಟಿಂಗ್ ಮಾಡಿದ್ದರು. ರೀಲ್ಸ್ ಇನ್ನಷ್ಟು ಆಕರ್ಷಕವಾಗಿ ಮೂಡಿ ಬರಲೆಂದು ಲಾಸ್ಟ್ ದೃಶ್ಯವನ್ನು ಬಳಸಲಾಗಿತ್ತು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಕಗ್ಗಲೀಪುರ ಪೊಲೀಸರು ರಜತ್ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಇದೇ ದಿನ ರಜತ್ ರೀಲ್ಸ್ ಶೂಟಿಂಗ್ ಮಾಡಿದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನೆಕೆಯನ್ನು ಸಹ ನಡೆಸಿದ್ದಾರೆ. ಇದಲ್ಲದೆ, ರಜತ್ ಕಿಶನ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದ್ದು ಪ್ರಕರಣದ ಸಂಬಂಧ ಇನ್ನಷ್ಟು ಮಾಹಿತಿ ಹೊರಬರುವ ನಿರೀಕ್ಷೆ ಇದೆ.
ಡಿವೈಎಸ್ ಪಿ ಪ್ರತಿಕ್ರಿಯೆ: ಈ ಘಟನೆ ಕುರಿತು ಡಿ ವೈ ಎಸ್ ಪಿ ಶ್ರೀನಿವಾಸ್ ಅವರು ಮಾಧ್ಯಮದೊಂದಿಗೆ ಮಾತನಾಡಿ, ರಜತ್ ಅವರು ಸಾರ್ವಜನಿಕ ಶಾಂತಿಗೆ ಭಂಗ, ಅನುಚಿತ ವರ್ತನೆ, ರಸ್ತೆ ನಿಯಮ ಉಲ್ಲಂಘನೆ, ಸಾರ್ವಜನಿಕ ಆಸ್ತಿಗೆ ನಷ್ಟ ಮಾಡಿದ್ದಾರೆ. ಬಿಎನ್ ಎಸ್ ನ ವಿವಿಧ ಕಲಂಗಳ ಅಡಿಯಲ್ಲಿ ರಜತ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಿದ್ದೇವೆ. ರಜತ್ ಅವರಿಗೆ ನೋಟಿಸ್ ನೀಡಿ ವಿಚಾರಣೆ ಮಾಡಲಾಗುವುದೆಂದು ತಿಳಿಸಿದ್ದಾರೆ.
ಈ ಹಿಂದಿನ ಪ್ರಕರಣ: ರಜತ್ ಕಿಶನ್ ಹಿಂದಿ ಕೂಡ ಮಚ್ಚು ಹಿಡಿದು ರೀಲ್ಸ್ ಮಾಡಿದ ಕಾರಣ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದರು. ಮಾರಕಾಸ್ತ್ರವನ್ನು ಹಿಡಿದು ಸಾರ್ವಜನಿಕ ಸ್ಥಳದಲ್ಲಿ ವಿಡಿಯೋ ಚಿತ್ರೀಕರಿಸಿ. ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಕಳೆದ ಮಾರ್ಚ್ ತಿಂಗಳಲ್ಲಿ ಬಸವೇಶ್ವರನಗರ ಠಾಣೆ ಪೋಲೀಸರು ಶಸ್ತ್ರಾಸ್ತ್ರ ಕಾಯ್ದೆಯಡಿ ದೂರು ದಾಖಲಿಸಿ ಇಬ್ಬರನ್ನು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು ನಂತರ ನ್ಯಾಯಾಲಯ ಇಬ್ಬರಿಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
Also Read:
ದೇಶದಲ್ಲೇ ಮೊದಲು: ಬೆಂಗಳೂರು ಪೊಲೀಸ್ '112' ಸೇವೆ ಬಹು ಭಾಷೆಯಲ್ಲಿ ಆರಂಭ