<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ರಸ್ತೆ ತೆರವು ಕಾರ್ಯಾಚರಣೆಯಲ್ಲೇ ಪೊಲೀಸರ ನಿಯಮ ಉಲ್ಲಂಘನೆ : ಸಾರ್ವಜನಿಕರಿಂದ ಪ್ರಶ್ನೆ

ರಸ್ತೆ ತೆರವು ಕಾರ್ಯಾಚರಣೆಯಲ್ಲೇ ಪೊಲೀಸರ ನಿಯಮ ಉಲ್ಲಂಘನೆ : ಸಾರ್ವಜನಿಕರಿಂದ ಪ್ರಶ್ನೆ
Summary: There have been allegations that the police violated rules while the operation was underway to clear abandoned vehicles parked on the side of the road. Read the full news to know the details of the incident and the public's reaction ...

Belagavi News:

ರಸ್ತೆ ಬದಿಯಲ್ಲಿ ಅಕ್ರಮವಾಗಿ ನಿಲ್ಲಿಸಿದ್ದ ಬಿಡಾಡಿ ವಾಹನಗಳ ವಿರುದ್ಧ ಪೊಲೀಸರು ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ, ಪೊಲೀಸರಿಂದಲೇ ಟ್ರಾಫಿಕ್ ನಿಯಮ ಉಲ್ಲಂಘನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ಚರ್ಚೆಯಾಗುತ್ತಿದೆ.

ನಗರದಲ್ಲಿ ಸಂಚಾರದಟ್ಟನೆ ಕಡಿಮೆ ಮಾಡುವ ಹಾಗೂ ರಸ್ತೆ ಬದಿಯಲ್ಲಿ ಅಕ್ರಮವಾಗಿ ನಿಲ್ಲಿಸಲಾದ ವಾಹನಗಳನ್ನು ತೆರವುಗೊಳಿಸುವ ಉದ್ದೇಶದಿಂದ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಹಲವು ವಾಹನಗಳನ್ನು ವಶಪಡಿಸಿಕೊಂಡು ನಿಯಮ ಉಲ್ಲಂಘಿಸಿದ ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಯಿತು.

ಆದರೆ ಕಾರ್ಯಾಚರಣೆ ಮಧ್ಯೆ ಕೆಲ ಪೊಲೀಸ್ ಸಿಬ್ಬಂದಿ ಟ್ರಾಫಿಕ್ ನಿಯಮಗಳನ್ನು ಪಾಲಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಸಾರ್ವಜನಿಕರು, "ಸಾಮಾನ್ಯರಿಗೆ ಒಂದು ನಿಯಮ , ಅಧಿಕಾರಿಗಳಿಗೆ ಮತ್ತೊಂದು ನಿಯಮವೇ ? " ಎಂದು ಪ್ರಶ್ನಿಸಿದ್ದಾರೆ.

ಘಟನೆಯ ವಿಡಿಯೋ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನಿಯಮ ಜಾರಿಗೊಳಿಸುವವರು ಮೊದಲು ತಾವೇ ನಿಯಮ ಪಾಲಿಸಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಸಂಚಾರ ನಿಯಮಗಳ ಪರಿಣಾಮಕಾರಿ ಜಾರಿಗೆ ಎಲ್ಲರು ಸಮಾನವಾಗಿ ಹೊಣೆಗಾರರು. ಕಾನೂನು ಜಾರಿ ಮಾಡುವ ಸಂಸ್ಥೆಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಾಗ ಮಾತ್ರ ಸಾರ್ವಜನಿಕರಲ್ಲಿ ವಿಶ್ವಾಸ ಮೂಡುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ರಸ್ತೆ ಬದಿ ಬಿಡಾಡಿ ವಾಹನಗಳ ವಿರುದ್ಧ ಜಂಟಿ ಕಾರ್ಯಾಚರಣೆ - ಗ್ರೇಟರ್ ಬೆಂಗಳೂರು ಅಥಾರಿಟಿ - ಸಂಚಾರ ಪೊಲೀಸರ ಕ್ರಮ :

ನಗರದಲ್ಲಿ ರಸ್ತೆ ಬದಿ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಶಾಶ್ವತವಾಗಿ ನಿಲ್ಲಿಸಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗಿದ್ದ ಬಿಡಾಡಿ ವಾಹನಗಳ ತೆರವಿಗೆ ಗ್ರೇಟರ್ ಬೆಂಗಳೂರು ಅಥಾರಿಟಿ ಅಧಿಕಾರಿಗಳು ಮತ್ತು ಬೆಂಗಳೂರು ಸಂಚಾರ ಪೊಲೀಸ್ ಸರು ಜಂಟಿಯಾಗಿ ವಿಶೇಷ ಕಾರ್ಯಾಚರಣೆ ನಡೆಸಿದರು.

ನಗರದ ವಿವಿಧ ಪ್ರದೇಶಗಳಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ರಸ್ತೆ ಮತ್ತು ಪಾದ ಚಾರಿಮಾರ್ಗಗಳನ್ನು ಅತಿಕ್ರಮಿಸಿ ದೀರ್ಘಕಾಲದಿಂದ ನಿಲ್ಲಿಸಿದ್ದ ಕಾರು, ಬೈಕು ಸೇರಿದಂತೆ ಹಲವು ವಾಹನಗಳನ್ನು ಗುರುತಿಸಿ ತೆರವುಗೊಳಿಸಲಾಯಿತು.ಸಾರ್ವಜನಿಕರ ಓಡಾಟಕ್ಕೆ ಅಡ್ಡಿಯಾಗುತ್ತಿದ್ದ ಹಾಗೂ ಸಂಚಾರದಟ್ಟಣೆಗೆ ಕಾರಣವಾಗಿದ್ದ ವಾಹನಗಳ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಂಡರು.

ನಗರದಲ್ಲಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವುದು ಹಾಗೂ ಪಾದ ಚಾರಿಗಳಿಗೆ ಸುರಕ್ಷಿತವಾಗಿ ಓಡಾಡುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲ ವಾಹನಗಳನ್ನು ನಿಲ್ಲಿಸುವವರು ಮತ್ತು ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಮುಂದಿನ ದಿನಗಳಲ್ಲೂ ಇಂತಹ ವಿಶೇಷ ಕಾರ್ಯಚರಣೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಬಿಡಾಡಿ ವಾಹನಗಳ ವಿರುದ್ಧ ಕಾರ್ಯಾಚರಣೆ ನಡುವೆ ಪೊಲೀಸ್ ಠಾಣೆಗಳ ಮುಂದೆಯೇ ನಿಯಮ ಉಲ್ಲಂಘನೆ ? :

ರಸ್ತೆ ಬದಿ ಹಾಗೂ ಪಾದ ಚಾರಿ ಮಾರ್ಗಗಳಲ್ಲಿ ಅಕ್ರಮವಾಗಿ ನಿಲ್ಲಿಸಿದ ವಾಹನಗಳ ವಿರುದ್ಧ ಗ್ರೇಟರ್ ಬೆಂಗಳೂರು ಅಥಾರಿಟಿ ಮತ್ತು ಬೆಂಗಳೂರು ಸಂಚಾರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿರುವ ನಡುವೆಯೇ, ನಗರದ ಕೆಲವು ಪೊಲೀಸ್ ಠಾಣೆಗಳ ಮುಂಭಾಗದಲ್ಲೇ ನಿಯಮಬಾಹಿರವಾಗಿ ವಾಹನಗಳನ್ನು ನಿಲ್ಲಿಸುವುದು ಸಾರ್ವಜನಿಕರ ಗಮನ ಸೆಳೆದಿದೆ.

ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ಸೇರಿದಂತೆ ಬೆಂಗಳೂರು ಹಲವು ಪೊಲೀಸ್ ಠಾಣೆಗಳ ಮುಂಭಾಗದಲ್ಲಿ ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿ ವಾಹನಗಳನ್ನು ನಿಲ್ಲಿಸಿರುವ ದೃಶ್ಯಗಳು ಚರ್ಚೆಗೆ ಗ್ರಾಸವಾಗಿದೆ. ಸಾರ್ವಜನಿಕರಿಗೆ ಅಕ್ರಮ ವಾಹನ ನಿಲುಗಡೆ ಕುರಿತು ನೋಟಿಸ್ ನೀಡಿ, ವಾಹನ ತೆರವುಗೊಳಿಸಲು ಸೂಚಿಸುವ ಪೊಲೀಸರೇ ತಮ್ಮ ಠಾಣೆಗಳ ಮುಂದೆ ನಿಯಮ ಪಾಲಿಸದಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ನಗರದಲ್ಲಿ ಅಕ್ರಮ ವಾಹನ ನಿಲುಗಡೆಯಿಂದ ಸಂಚಾರ ದಟ್ಟಣೆ ಹಾಗೂ ಪಾದಚಾರಿಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂಬ ಕಾರಣಕ್ಕೆ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ಆದರೆ, ಅದೇ ನಿಯಮಗಳು ಸರ್ಕಾರಿ ಕಚೇರಿಗಳು ಹಾಗೂ ಪೊಲೀಸ್ ಠಾಣೆಗಳ ಸುತ್ತಮುತ್ತಲು ಕಟುನೆಟ್ಟಾಗಿ ಜಾರಿಯಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಾನೂನು ಎಲ್ಲರಿಗೂ ಸಮಾನವಾಗಿರಬೇಕು. ಚರ್ಚೆಗೆ ನಿಯಮ ಜಾರಿಗೊಳಿಸುವ ಸಂಸ್ಥೆಗಳೇ ಮೊದಲು ಮಾದರಿಯಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಪೊಲೀಸ್ ಠಾಣೆಗಳ ಮುಂಭಾಗದಲ್ಲಿರುವ ನಿಯಮಬಾಹಿರ ವಾಹನಗಳನ್ನು ತೆರವುಗೊಳಿಸಿ, ಸಾಮಾನವಾಗಿ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

ಅಕ್ರಮ ವಾಹನ ನಿಲುಗಡೆಗೆ ಕಠಿಣ ಕ್ರಮ - ನೋಟಿಸ್, ಕ್ಲಾಂಪ್ , ಟೋಯಿಂಗ್ ಬಳಿಕ ಹರಾಜು ಎಚ್ಚರಿಕೆ :

ರಸ್ತೆ ಬದಿ ಹಾಗೂ ಪಾದಚಾರಿ ಮಾರ್ಗಗಳಲ್ಲಿ ದೀರ್ಘಕಾಲ ಅಕ್ರಮವಾಗಿ ನಿಲ್ಲಿಸಿರುವ ವಾಹನಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ನಗರ ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಅಕ್ರಮ ವಾಹನ ನಿಲುಗಡೆ ಸಂಬಂಧಿಸಿದಂತೆ ನೋಟಿಸ್ , ಕ್ಲಾಂಪ್, ಟೋಯಿಂಗ್ ಮತ್ತು ಅಗತ್ಯವಿದ್ದರೆ ವಾಹನಗಳ ರಾಜು ಪ್ರಕ್ರಿಯೆ ವರೆಗೆ ಕ್ರಮ ಕೈಗೊಳ್ಳಲಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸಾರ್ವಜನಿಕ ರಸ್ತೆಗಳು ಹಾಗೂ ಪಾದ ಚಾರಿಮಾರ್ಗಗಳನ್ನು ಅತಿಕ್ರಮಿಸಿ ಬಿಡಾಡಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರದಟ್ಟನೆ ಹೆಚ್ಚುತ್ತಿರುವುದರ ಜೊತೆಗೆ ಪಾದಚಾರಿಗಳ ಸಂಚಾರಕ್ಕೂ ತೊಂದರೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ ಮತ್ತು ಬೆಂಗಳೂರು ಸಂಚಾರ ಪೊಲೀಸರು ಜಂಟಿಯಾಗಿ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸಚಿವ ಕೃಷ್ಣ ಬೈರೇಗೌಡ ಅವರ ಸೂಚನೆಯಂತೆ, ಮೊದಲ ವಾಹನ ಮಾಲೀಕರಿಗೆ ನೋಟಿಸ್ ನೀಡಲಾಗುತ್ತದೆ. ನಿಗದಿತ ಅವಧಿಯಲ್ಲಿಯೂ ವಾಹನ ತೆರವುಗೊಳಿಸದಿದ್ದರೆ ವಾಹನಗಳಿಗೆ ಕ್ಲಾಂಪ್ ಹಾಕುವುದು, ಬಳಿಕ ಟೋಯಿಂಗ್ ಮೂಲಕ ತೆರವುಗೊಳಿಸಿರುವುದು ಹಾಗೂ ಅಂತಿಮವಾಗಿ ಕಾನೂನು ಬದ್ಧ ಪ್ರಕ್ರಿಯೆಗೆ ಅನುಸರಿಸಿ ಹರಾಜು ನಡೆಸುವ ಕ್ರಮ ಕೈಗೊಳ್ಳಲಾಗುತ್ತದೆ.

ನಗರದಲ್ಲಿ ಅಕ್ರಮ ವಾಹನ ನಿಲುಗಡೆಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕ್ರಮ ಜಾರಿಗೊಳಿಸಲಾಗಿದ್ದು, ಸಾರ್ವಜನಿಕರು ರಸ್ತೆ ಮತ್ತು ಪಾದಾಚಾರಿ ಮಾರ್ಗಗಳಲ್ಲಿ ವಾಹನಗಳನ್ನು ನಿಲ್ಲಿಸದಂತೆ ಸರ್ಕಾರ ಮನವಿ ಮಾಡಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online