Belagavi News :
ತಮಿಳುನಾಡಿನ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸುವ ಬೆಳವಣಿಗೆಯೊಂದು ಬೆಳಕಿಗೆ ಬಂದಿದೆ. ನಟ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ ಸರ್ಕಾರವನ್ನು ಅಸ್ಥಿರಗೊಳಿಸುವ ಸಂಚು ನಡೆದಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ರಾಜ್ಯ ಗುಪ್ತಚರ ಇಲಾಖೆ ತನಿಖೆ ಆರಂಭಿಸಿದೆ.
ಮಾಹಿತಿಯ ಪ್ರಕಾರ, ವಿಧಾನ ಸಭೆಯ ಸ್ಪೀಕರ್ ವಿರುದ್ಧ ಮಂಡಿಸಲು ಉದ್ದೇಶಿಸಲಾಗಿದ್ದ ಅವಿಶ್ವಾಸ ನಿರ್ಣಯದ ವೇಳೆ ನಿರ್ದಿಷ್ಟ ರೀತಿಯಲ್ಲಿ ಮತ ಚಲಾಯಿಸುವಂತೆ ಟಿ ವಿ ಕೆ ಪಕ್ಷದ ಶಾಸಕನೊಬ್ಬನಿಗೆ ಬರೋಬ್ಬರಿ ₹35 ಕೋಟಿ ಆಮಿಷ ವಡ್ಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.
ಪ್ರಕರಣದ ಕುರಿತು ಗುಪ್ತಚರ ಇಲಾಖೆ ಮತ್ತು ಪೊಲೀಸರು ತನಿಖೆ ನಡೆಸುತ್ತಿದ್ದು, ಹಣದ ಆಮಿಷದ ಹಿಂದೆ ಯಾರು ಇದ್ದರು, ಇದರ ಉದ್ದೇಶವೇನು? ಹಾಗೂ ಇನ್ನು ಯಾರಾದರೂ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಕರೆ ಹಾಕಲಾಗುತ್ತಿದೆ.
ಈ ಬೆಳವಣಿಗೆ ತಮಿಳುನಾಡಿನ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಪ್ರಕರಣದ ತನಿಖೆಯ ಮುಂದಿನ ಹಂತದತ್ತ ಎಲ್ಲರ ಗಮನ ನೆಟ್ಟಿದೆ.
ತಮಿಳುನಾಡಿನಲ್ಲಿ TVK ಸರ್ಕಾರ ಉರುಳಿಸುವ ಸಂಚು ಆರೋಪ - ಶಾಸಕನಿಗೆ ₹ 35 ಕೋಟಿ ಆಫರ್, ಮೂವರು ಬಂಧನ :
ತಮಿಳುನಾಡಿನ ರಾಜಕೀಯದಲ್ಲಿ ಸಂಚಲ ಮೂಡಿಸಿರುವ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸುವ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಈ ಪ್ರಕರಣದ ಹಿಂದೆ ಆಡಳಿತಾರೂಢ ಡಿಎಂಕೆ ಪಕ್ಷದ ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವ ವಿ. ಸೆಂಥಿಲ್ ಬಾಲಾಜಿ ಮತ್ತು ಅವರ ಸಹೋದರನ ಕೈವಾಡವಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆದರೆ ಈ ಆರೋಪಗಳು ತನಿಖೆಯ ಹಂತದಲ್ಲಿದ್ದು, ಅಧಿಕೃತವಾಗಿ ನ್ಯಾಯಾಲಯದಲ್ಲಿ ಸಾಬೀತಾಗಬೇಕಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಟಿ ವಿ ಕೆ ಪಕ್ಷದ ಸುಮಾರು 15 ಶಾಸಕರಿಂದ ಏಕಕಾಲಕ್ಕೆ ರಾಜೀನಾಮೆ ಕೊಡಿಸಿ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಈ ಸಂಚುರೂಪಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬೆಳವಣಿಗೆ ತಮಿಳುನಾಡಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಈ ಪ್ರಕರಣ ಬೆಳಕಿಗೆ ಬಂದಿದ್ದು ಕೃಷ್ಣಗಿರಿ ಜಿಲ್ಲೆಯ ಉತ್ತಂಗರೈ ಕ್ಷೇತ್ರದ TVK ಶಾಸಕ ಡಾ.ಎನ್. ಇಳಯರಾಜ ಅವರು ಚೆನ್ನೈ ಪೊಲೀಸ್ ಆಯುಕ್ತರಿಗೆ ನೀಡಿದ ದೂರಿನ ಬಳಿಕ. ದೂರಿನ ಪ್ರಕಾರ, "ಇಂಡಿಯನ್ ಪೊಲಿಟಿಕಲ್ ಡೆಮಾಕ್ರೆಟಿಕ್ ಸ್ಟ್ರೇಟ್ ಜೀಸ್ " ಸಂಸ್ಥೆಯ ಉದ್ಯೋಗಿ ಎಂದು ಪರಿಚಯಿಸಿಕೊಂಡ ತಿರುನಾವಕ್ಕರಿಸು ಎಂಬ ದೂರವಾಣಿ ಮೂಲಕ ಸಂಪರ್ಕಿಸಿ, ವಿಧಾನಸಭೆಯ ಸ್ಪೀಕರ್ ವಿರುದ್ಧ ಮಂಡಿಸಲು ಉದ್ದೇಶಿಸಲಾಗಿದ್ದ ಅವಿಶ್ವಾಸ ನಿರ್ಣಯದ ವೇಳೆ ಸರ್ಕಾರದ ವಿರುದ್ಧ ಮತ ಚಲಾಯಿಸುವಂತೆ ಒತ್ತಾಯಿಸಲಾಗಿದೆ ಎನ್ನಲಾಗಿದೆ.
ಇದಕ್ಕಾಗಿ ಶಾಸಕ ಇಳಯರಾಜ ಅವರಿಗೆ ₹35 ಕೋಟಿ ಆಮಿಷ ಲೀಡರಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಅವರು ಈ ಪ್ರಸ್ತಾವವನ್ನು ತಿರಸ್ಕರಿಸಿದ್ದು, ನಂತರ ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ತಮ್ಮ ಹಾಗೂ ಕುಟುಂಬದವರಿಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.
ಜೂನ್ 29ರಂದು ದಾಖಲಾದ ದೂರಿನ ಆಧಾರದ ಮೇಲೆ ಟ್ರಿಪ್ಲಿಕೇನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಳಿಕ ಪೊಲೀಸರು ಅರುಂಬಾಕ್ಕಂನ ತಿರುನಾವಕ್ಕರಸು, ತಿರುಚಿಯ ನರೇಶ್ ಹಾಗೂ ವೇಡವಾಕ್ಕಂನ ತ್ಯಾಗರಾಜನ್ ಎಂಬ ಮೂವರನ್ನು ಬಂಧಿಸಿದ್ದಾರೆ. ಈ ಮೂವರು ಮಾಜಿ ಸಚಿವ ಸೆಂಥಿಲ್ ಬಾಲಾಜಿ ಮತ್ತು ಅವರ ಸಹೋದರ ವಿ ಅಶೋಕ್ ಕುಮಾರ್ ಅವರ ಸೂಚನೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ.
ತಮಿಳುನಾಡು ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪ - ಡಿಎಂಕೆ ವಿರುದ್ಧ ಟಿವಿಕೆ ನಾಯಕರ ವಾಗ್ದಾಳಿ, ₹35 ಕೋಟಿ ಆಮಿಷ ಪ್ರಕರಣಕ್ಕೆ ಹೊಸ ತಿರುವು :
ಟಿವಿಕೆ ಶಾಸಕನಿಗೆ ₹35 ಕೋಟಿ ಆಮಿಷ ನೀಡಿದ ಆರೋಪದ ಪ್ರಕರಣ ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುಗು ಪಡೆದುಕೊಂಡಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಟಿವಿಕೆ ಪಕ್ಷದ ನಾಯಕ ಸಿ.ಟಿ.ನಿರ್ಮಲ್ ಕುಮಾರ್ ಡಿಎಂಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಲೋ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ನಿರ್ಮಲ್ ಕುಮಾರ್ ಅವರ ಆರೋಪದ ಪ್ರಕಾರ, ಮಾಜಿ ಸಚಿವ ವಿ. ಸೆಂಥಿಲ್ ಬಾಲಾಜಿ ಮತ್ತು ಅವರೊಂದಿಗೆ ಸಂಪರ್ಕ ಹೊಂದಿರುವ ಕೆಲವರು ಈ ಸಂಚಿನಲ್ಲಿ ಭಾಗಿಯಾಗಿದ್ದಾರೆ. ಅಲ್ಲದೆ, TVK ಪಕ್ಷದ ಹಲವು ಶಾಸಕರನ್ನು ಸಂಪರ್ಕಿಸಿ ₹10 ಕೋಟಿ, ₹20 ಕೋಟಿ ಹಾಗೂ ₹50 ಕೋಟಿಯವರೆಗೆ ಆಮಿಷ ಒಡ್ಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಅಲ್ಲದೆ, ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮೀ ಕೂಡ ಈ ಬೆಳವಣಿಗೆಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ ಎಂದು ನಿರ್ಮಲ್ ಕುಮಾರ್ ಆರೋಪಿಸಿದ್ದಾರೆ. ಆದರೆ ಈ ಆರೋಪಗಳಿಗೆ ಸಂಬಂಧಿಸಿದಂತೆ DMK ಅಥವಾ ಎಐಎಡಿಎಂಕೆಯಿಂದ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿದೆ.
ಇದೇ ವೇಳೆ ನಟ ಹಾಗೂ ಟಿವಿಗೆ ನಾಯಕ ವಿಜಯ್ ಮತ್ತು ಮಾಜಿ ಸಚಿವ ಸೆಂಥಿಲ್ ಬಾಲಾಜಿ ನಡುವಿನ ರಾಜಕೀಯ ಭಿನ್ನಾಭಿಪ್ರಾಯವು ಮತ್ತೆ ಚರ್ಚೆಗೆ ಬಂದಿದೆ. ಈ ಹಿಂದೆ ಕರೂರಿನಲ್ಲಿ ವಿಜಯ್ ನಡೆಸಿದ ಚುನಾವಣಾ ಸಂಭವಿಸಿದ್ದ ಪ್ರಕರಣದ ಹಿಂದೆ ರಾಜಕೀಯ ಸಂತು ಇದೆ ಎಂದು ವಿಜಯ ಆರೋಪಿಸಿದ್ದರು. ತಮ್ಮ ರಾಜಕೀಯ ಇಮೇಜ್ ಗೆ ದಕ್ಕೆ ತರುವ ಉದ್ದೇಶದಿಂದ ಈ ಘಟನೆ ನಡೆದಿದೆ ಎಂದು ಅವರು ಆಗ ಹೇಳಿದ್ದರು.
ಪ್ರಸ್ತುತ ₹35 ಕೋಟಿ ಆಮಿಷ ಪ್ರಕರಣದ ತನಿಖೆ ಮುಂದುವರೆದಿದ್ದು, ಈ ಆರೋಪಗಳ ಸತ್ಯಾಸತ್ಯ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆಯ ಮೂಲಕವೇ ಸ್ಪಷ್ಟವಾಗಬೇಕಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ತಮಿಳುನಾಡಿನ ರಾಜಕೀಯ ವಲಯದ ಗಮನ ನೆಟ್ಟಿದೆ.