<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ರಾಜಕೀಯ ವಲಯದಲ್ಲಿ ಸಂಚಲನ : ದೇವೇಗೌಡರ ರಾಜ್ಯಸಭೆ ಟಿಕೆಟ್ ಕೈ ತಪ್ಪಲು ಕಾರಣವೇನು?

ರಾಜಕೀಯ ವಲಯದಲ್ಲಿ ಸಂಚಲನ : ದೇವೇಗೌಡರ ರಾಜ್ಯಸಭೆ ಟಿಕೆಟ್ ಕೈ ತಪ್ಪಲು ಕಾರಣವೇನು?
Summary: Kumaraswamy has revealed the reason behind Deve Gowda losing the Rajya Sabha ticket, and this statement has led to a new debate in state politics. Let's find out what is the real truth behind the ticket distribution...

Belagavi news:

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ದೇವೇಗೌಡರು ರಾಜ್ಯಸಭಾ ಟಿಕೆಟ್ ಗೆ ಅರ್ಜಿಯನ್ನೇ ಸಲ್ಲಿಸಿರಲಿಲ್ಲ ಎಂದು ಹೇಳಿರುವ ಕುಮಾರಸ್ವಾಮಿ, ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಮೂಡಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ ದೇವೇಗೌಡರ ಬಗ್ಗೆ ಕಾಂಗ್ರೆಸ್ಸಿಗರಿಗೆ ಏಕಾಏಕಿ ಅನುಕಂಪ ಮೂಡಿರುವುದು ಆಶ್ಚರ್ಯದ ಸಂಗತಿ ವ್ಯಂಗ್ಯವಾಡಿದ್ದಾರೆ.

ರಾಜ್ಯಸಭಾ ಚುನಾವಣೆಗೆ ಎನ್ ಡಿ ಎ ಅಭ್ಯರ್ಥಿಯಾಗಿ ಒಬಿಸಿ ನಾಯಕ ಪ್ರೊ. ಎಂ ನಾಗರಾಜ್ ಅವರ ಹೆಸರನ್ನು ಬಿಜೆಪಿ ಘೋಷಿಸಿದ ನಂತರ ಕಾಂಗ್ರೆಸ್ ನಾಯಕರು ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಶೇಷವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ್ ಅವರು ದೇವೇಗೌಡರಿಗೆ ಟಿಕೆಟ್ ನೀಡದಿರುವುದನ್ನು ಟೀಕಿಸಿದ್ದರು.

Sponsored

ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ದೇವೇಗೌಡರಿಗೆ ಟಿಕೆಟ್ ಕೈತಪ್ಪಿದ ಪ್ರಶ್ನೆ ಉದ್ಭವಿಸುವುದಿಲ್ಲ. ಅವರು ಸ್ವತಃ ಅರ್ಜಿ ಸಲ್ಲಿಸದ ಕಾರಣ ಈ ವಿಚಾರದಲ್ಲಿ ಅನಗತ್ಯ ರಾಜಕೀಯ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಅವರ ಈ ಹೇಳಿಕೆ ರಾಜ್ಯಸಭಾ ಟಿಕೆಟ್ ವಿಚಾರದ ಬಗ್ಗೆ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಬಿಜೆಪಿ ಜೆಡಿಎಸ್ ಮೈತ್ರಿ ರಾಜಕೀಯದ ಬಗ್ಗೆ ಹೊಸ ಚರ್ಚೆಗೆ ಕಾರಣವಾಗಿದೆ.

ದೇವೇಗೌಡರು ರಾಜ್ಯಸಭೆ ಟಿಕೆಟ್ ಗೆ ಅರ್ಜಿ ಹಾಕಿರಲಿಲ್ಲ:

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯ ತಾಲ್ಲೂಕಿನ ತಗ್ಗ ಹಳ್ಳಿಯಲ್ಲಿ ಮಾತನಾಡಿದ ಅವರು, ದೇವೇಗೌಡರು ರಾಜ್ಯಸಭಾ ಟಿಕೆಟ್ ಗೆ ಅರ್ಜಿಯನ್ನೇ ಸಲ್ಲಿಸಿರಲಿಲ್ಲ ಎಂದು ತಿಳಿಸಿದ್ದಾರೆ.

Sponsored

ಬಿಜೆಪಿ-ಜೆಡಿಎಸ್ ಮೈತ್ರಿ ಅನ್ನು ದುರ್ಬಲಗೊಳಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಕುಮಾರಸ್ವಾಮಿ, "ಈಗ ಕಾಂಗ್ರೆಸ್ಸಿಗರಿಗೆ ದೇವೇಗೌಡರ ಬಗ್ಗೆ ಅನುಕಂಪ ಬಂದಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಭಯ ಶುರುವಾಗಿದೆ. ನಮ್ಮ ನಡುವೆ ಬಿರುಕು ಮೂಡಿಸಲು ಕಾಂಗ್ರೆಸ್ ಯತ್ನಿಸುತ್ತಿದೆ"ಎಂದು ಕಿಡಿಕಾರಿದ್ದಾರೆ.

ದೇವೇಗೌಡರ ರಾಜಕೀಯ ಬದುಕನ್ನು ಉಲ್ಲೇಖಿಸಿದವರು,"ದೇವೇಗೌಡರು ಅಧಿಕಾರಕ್ಕಾಗಿ ಯಾರ ಮನೆ ಬಾಗಿಲಿಗೂ ಹೋಗಿಲ್ಲ. ಅವರ ವಿರುದ್ಧ ಸ್ಪರ್ಧಿಸಲು ಬೇರೆ ಅಭ್ಯರ್ಥಿ ಇರಲಿಲ್ಲ. ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಹಾಕುವುದಿಲ್ಲ ಎಂದು ಬಿಎಸ್ ಯಡಿಯೂರಪ್ಪ ಕರೆ ಮಾಡಿ ತಿಳಿಸಿದರು. ಬಳಿಕ ನಾನು ಒತ್ತಾಯ ಮಾಡಿದ್ದೇವೆ ಗೌಡರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದೆ" ಎಂದು ವಿವರಿಸಿದರು.

ಒಕ್ಕಲಿಗ ಸಮುದಾಯಕ್ಕೆ ಬಿಜೆಪಿ ಅನ್ಯಾಯ ಮಾಡಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೆಟು ನೀಡಿದವರು,"ಒಕ್ಕಲಿಗರಿಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕಾದರೆ ರಾಜ್ಯಸಭೆ ಸ್ಥಾನ ಪಡೆದು ಏನು ಪ್ರಯೋಜನ?"ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಅವರ ಈ ಹೇಳಿಕೆಗಳು ರಾಜ್ಯಸಭಾ ಚುನಾವಣೆ, ಬಿಜೆಪಿ-ಜೆಡಿಎಸ್ ಮೈತ್ರಿ ಹಾಗೂ ಕಾಂಗ್ರೆಸ್ ಟೀಕೆಗಳ ನಡುವಿನ ರಾಜಕೀಯ ಚರ್ಚೆಗೆ ಮತ್ತಷ್ಟು ಇಂಧನ ನೀಡಿವೆ.

Sponsored

ಡಿಕೆಶಿ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು:

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಎಚ್ ಡಿ ಕುಮಾರಸ್ವಾಮಿ ಅವರ ಸಲಹೆ ಪಡೆಯುವುದಾಗಿ ನೀಡಿದ್ದ ಹೇಳಿಕೆಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ತಗ್ಗಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದವರು,"ಸಿಎಂ ಡಿಕೆ ಶಿವಕುಮಾರ್ ಅವರಿಗೆ ನಾನು ಏನು ಸಲಹೆ ನೀಡಲಿ? ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿ ಯಾಗಿ ಏನು ಮಾಡಿದ್ದಾರೆ ಎಂದು ಅವರೇ ಪ್ರಶ್ನಿಸುತ್ತಾರೆ. ಎಲ್ಲದಕ್ಕೂ ಸಾಕ್ಷಿ ಗುಡ್ದೆ ಕೇಳುತ್ತಾರೆ. ನಾನು ಏನು ಮಾಡಿಲ್ಲ ಎಂದಾಗ ನನ್ನ ಬಳಿ ಯಾವ ಸಲಹೆ ಕೇಳುತ್ತಾರೆ?" ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಡಿಕೆಶಿ ಅವರ ರಾಜಕೀಯ ನಡೆ ಬಗ್ಗೆ ಟೀಕಿಸಿದ ಕುಮಾರಸ್ವಾಮಿ,"ಅವರಿಗೆ ಫೋಟೋ ಬೇಕಿದೆ. ಅದಕ್ಕಾಗಿ ಎಲ್ಲೆಡೆ ಹೋಗುತ್ತಿದ್ದಾರೆ" ಎಂದು ಕಿಡಿಕಾರಿದ್ದಾರೆ.

Sponsored

ಮುಖ್ಯಮಂತ್ರಿ ಅವರ ಹೇಳಿಕೆಯನ್ನು ಉಲ್ಲೇಖಿಸಿ,"ಅತಿ ವಿನಯಂ ಧೂರ್ತ ಲಕ್ಷಣಂ" ಎಂಬ ಗಾದೆಯನ್ನು ಬಳಸಿದ ಅವರು, ಡಿಕೆಶಿ ಅವರ ನಡೆ ನುಡಿಗಳ ಬಗ್ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಕುಮಾರಸ್ವಾಮಿ ಅವರ ಈ ಹೇಳಿಕೆ, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್-ಬಿಜೆಪಿ ಮೈತ್ರಿ ನಾಯಕರ ನಡುವಿನ ವಾಕ್ಸಮರಕ್ಕೆ ಮತ್ತಷ್ಟು ವೇದ ನೀಡಿದೆ.

Also Read:

ರಾಜ್ಯಸಭೆ ಟಿಕೆಟ್ ಸಿಗದಿದ್ದಕ್ಕೆ ಈರಣ್ಣ ಕಡಾಡಿ ಸಮರ್ಥನೆ: 'ಇನ್ನೊಂದು ಅವಧಿ ಕೇಳಿದ್ದರೆ ಸ್ವಾರ್ಥಿಯಾಗುತ್ತಿದ್ದೆ'

Sponsored
You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online