Belagavi News:
ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಪ್ರಕರಣ ಇದೀಗ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದೆ. ಪ್ರಕರಣವನ್ನು ಮುಂದಿಟ್ಟುಕೊಂಡು ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿ ಪಕ್ಷ ಬಿಜೆಪಿ ನಡುವೆ ಆರೋಪ ಮತ್ತು ಪ್ರತ್ಯಾರೋಪಗಳು ತೀವ್ರಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಡುವೆ ವಾಕ್ಸಮರ ನಡೆಯುತ್ತಿದೆ.
ಕೈದಿಗಳ ಪರಾರಿ ಪ್ರಕರಣವನ್ನು ಆಧಾರವಾಗಿಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ಟೀಕೆ ನಡೆಸಿದೆ. ವಿಶೇಷವಾಗಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಜೈಲು ಭದ್ರತೆ ವಿಚಾರವಾಗಿ ಸರ್ಕಾರವನ್ನು ಪ್ರಶ್ನಿಸಿ, ಗೃಹ ಇಲಾಖೆಯ ಕಾರ್ಯ ವೈಖರಿಯನ್ನು ಬಿಜೆಪಿ ನಾಯಕರು ಟೀಕಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಟೀಕೆ ಮಾಡುವ ಮೊದಲು ಬಿಜೆಪಿ ನಾಯಕರು ತಮ್ಮ ಆಡಳಿತಾವಧಿಯಲ್ಲಿ ರಾಜ್ಯದ ಜೈಲುಗಳ ಪರಿಸ್ಥಿತಿ ಹೇಗಿತ್ತು ಎಂಬುದನ್ನು ಪರಿಶೀಲಿಸಬೇಕು ಎಂದು ತಿರುಗೇಟು ನೀಡಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲೂ ಜೈಲು ಭದ್ರತೆ ಸಂಬಂಧ ಹಲವು ಪ್ರಕರಣಗಳು ನಡೆದಿದ್ದವು ಎಂಬುದನ್ನು ನೆನಪಿಸಿಕೊಂಡು ನಂತರವೇ ಆರೋಪ ಮಾಡಲಿ ಎಂದು ಅವರು ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಕಲಬುರಗಿ ಜೈಲು ಪರಾರಿ ಪ್ರಕರಣದ ತನಿಖೆ ಮುಂದುವರೆದಿದ್ದು, ಈ ನಡುವೆ ರಾಜಕೀಯ ಆರೋಪ ಮತ್ತು ಪ್ರತ್ಯಾರೋಪಗಳು ತೀವ್ರಗೊಂಡಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಜೈಲು ಪರಾರಿ ಪ್ರಕರಣಕ್ಕೆ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ತಿರುಗೇಟು - 'ನಿಮ್ಮ ಆಡಳಿತದ ಇತಿಹಾಸ ನೆನಪಿಸಿಕೊಳ್ಳಿ' :
ಕಲಬುರಗಿ ಕೇಂದ್ರ ಕಾರಾಗೃಹದಿಂದ ಕೈದಿಗಳು ಪರಾರಿಯಾದ ಪ್ರಕರಣದ ಬಗ್ಗೆ ಬಿಜೆಪಿ ಟೇಕೆಗಳಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದು, ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಜೈಲು ಭದ್ರತಾ ವೈಫಲ್ಯಗಳನ್ನು ಮೊದಲು ನೆನಪಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, 2010ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಪ್ಪಳ ಜಿಲ್ಲಾ ಕಾರಾಗೃಹದಿಂದ 8 ಕೈದಿಗಳು ಪರಾರಿಯಾಗಿದ್ದರು. ರಾಜ್ಯದ ಇತಿಹಾಸದಲ್ಲೇ ಇದು ಅತ್ಯಂತ ದೊಡ್ಡ ಜೈಲು ಪರಾರಿ ಪ್ರಕರಣಗಳಲ್ಲಿ ಒಂದಾಗಿತ್ತು. ಆಗ ನಡೆದ ಘಟನೆಯನ್ನು ಅಂದಿನ ಗೃಹ ಸಚಿವರ ವೈಫಲ್ಯ ಎಂದು ಬಿಜೆಪಿ ಒಪ್ಪಿಕೊಳ್ಳುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ, ಬಿಜೆಪಿ ಆಡಳಿತದ ಅವಧಿಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ವಿಶೇಷ ಸೌಲಭ್ಯಗಳು ದೊರಕುತ್ತಿದ್ದ ಬಗ್ಗೆ ಹಲವು ಸುದ್ದಿಗಳು ಪ್ರಕಟವಾಗಿದ್ದವು ಎಂದು ಉಲ್ಲೇಖಿಸಿದ ಅವರು, ಆ ಬೆಳವಣಿಗೆಗಳನ್ನು ಬಿಜೆಪಿ ಸರ್ಕಾರದ ವೈಫಲ್ಯ ಎಂದು ಒಪ್ಪಿಕೊಳ್ಳಲು ಸಿದ್ಧವೇ ಎಂದು ಪ್ರಶ್ನಿಸಿದ್ದಾರೆ.
ಕಲಬುರಗಿ ಜೈಲು ಪರಾರಿ ಪ್ರಕರಣದ ಬೆನ್ನೆಲೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ ಮತ್ತು ಪ್ರತ್ಯಾರೋಪಗಳು ತೀವ್ರಗೊಂಡಿದ್ದು, ಜೈಲು ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ವಿಚಾರ ರಾಜ್ಯ ರಾಜಕೀಯದಲ್ಲಿ ಪ್ರಮುಖ ಚರ್ಚೆಯ ವಿಷಯವಾಗಿದೆ.
ಪ್ರಿಯಾಂಕ್ ಖರ್ಗೆ ಆರೋಪಕ್ಕೆ ವಿಜಯೇಂದ್ರ ತಿರುಗೇಟು - 'ಜೈಲು ಪರಾರಿ ಘಟನೆ ನಿಮ್ಮ ಆಡಳಿತದ ವೈಫಲ್ಯದ ಕನ್ನಡಿ' :
ಕಲಬುರಗಿ ಕೇಂದ್ರ ಕಾರಾಗೃಹದಿಂದ ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನಡುವೆ ವಾಗ್ವಾದ ಮುಂದುವರೆದಿದೆ.
ಪ್ರಿಯಾಂಕ್ ಖರ್ಗೆ ಬಿಜೆಪಿ ಆಡಳಿತದ ಅವಧಿಯ ಜೈಲು ಘಟನೆಗಳನ್ನು ಪ್ರಸ್ತಾಪಿಸಿ ನೀಡಿದ ಪ್ರತಿಕ್ರಿಯೆಗೆ ಸಾಮಾಜಿಕ ಜಾಲತಾಣದ ಮೂಲಕ ಕೌಂಟರ್ ನೀಡಿದ್ದಾರೆ. ಕಲಬುರಗಿ ಜೈಲಿನಿಂದ ಕೈದಿಗಳು ತಪ್ಪಿಸಿಕೊಂಡಿರುವುದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಉದಾಹರಣೆಯ ಎಂದು ಅವರು ಆರೋಪಿಸಿದ್ದಾರೆ.
ಜೈಲು ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಗೃಹ ಸಚಿವರು ಜವಾಬ್ದಾರಿಯುತವಾಗಿ ನಡೆಸಿಕೊಳ್ಳಬೇಕು ಎಂದು ಒತ್ತಾಯಿಸಿರುವ ವಿಜಯೇಂದ್ರ, ಹಿಂದಿನ ಘಟನೆಗಳನ್ನು ಪ್ರಸ್ತಾಪಿಸುವ ಮೂಲಕ ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.
ಇದೇ ವೇಳೆ, ಗೃಹ ಸಚಿವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ವಿಜಯೇಂದ್ರ, ಮಹತ್ವದ ಇಲಾಖೆಯ ಜವಾಬ್ದಾರಿ ಹೊಂದಿರುವವರು ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಸರ್ಕಾರದ ಅವಧಿಯಲ್ಲಿ ಜೈಲು ವ್ಯವಸ್ಥೆ ಹಾಗೂ ಕಾನೂನು ಸುವ್ಯವಸ್ಥೆ ಬಗ್ಗೆ ಜನರಿಗೆ ಮಾಹಿತಿ ಇದೆ ಎಂದು ಅವರು ಆರೋಪಿಸಿದ್ದಾರೆ.
ಕಲಬುರಗಿ ಜೈಲು ಪರಾರಿ ಪ್ರಕರಣ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ನಾಯಕರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು ತೀವ್ರಗೊಂಡಿದೆ.