<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ಪ್ರದೀಪ್ ಈಶ್ವರ್ ಕಣ್ಣೀರು: ಚಪ್ಪಲಿ ಎಸೆತ ಪ್ರಕರಣದ ಬಳಿಕ ಸಿದ್ದರಾಮಯ್ಯ ಭೇಟಿಯಲ್ಲಿ ಭಾವನಾತ್ಮಕ ಕ್ಷಣ

ಪ್ರದೀಪ್ ಈಶ್ವರ್ ಕಣ್ಣೀರು: ಚಪ್ಪಲಿ ಎಸೆತ ಪ್ರಕರಣದ ಬಳಿಕ ಸಿದ್ದರಾಮಯ್ಯ ಭೇಟಿಯಲ್ಲಿ ಭಾವನಾತ್ಮಕ ಕ್ಷಣ
Summary: In a significant development after the slipper throwing incident, MLA Pradeep Eshwar met former Chief Minister Siddaramaiah and became emotional. The scene of Pradeep Eshwar shedding tears as he expressed his pain and dissatisfaction during the meeting attracted attention.

Belagavi News :

ಬೆಂಗಳೂರು: ತಮ್ಮ ಮೇಲೆ ನಡೆದ ಚಪ್ಪಲಿ ಎಸೆತ ಘಟನೆಗೆ ಸಂಬಂಧಿಸಿದಂತೆ ಶಾಸಕ ಪ್ರದೀಪ್ ಈಶ್ವರ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬಾವುಕರಾದರು. ಘಟನೆಯ ವೇಳೆ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ತಮ್ಮ ಮೇಲೆ ಚಪ್ಪಲಿ ಎಸೆದಿದ್ದಲ್ಲದೆ, ತಮ್ಮ ಮತ್ತು ಕುಟುಂಬದ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ ಎಂದು ವಿವರಿಸುವಾಗ ಪ್ರದೀಪ್ ಈಶ್ವರ್ ಕಣ್ಣೀರು ಹಾಕಿದರು.

ಈ ವೇಳೆ ಸಿದ್ದರಾಮಯ್ಯ ಅವರು ಪ್ರದೀಪ್ ಈಶ್ವರ್ ಅವರಿಗೆ ಧೈರ್ಯ ತುಂಬಿ, " ರಾಜಕೀಯ ಜೀವನದಲ್ಲಿ ಇಂತಹ ಘಟನೆಗಳು ಎದುರಾಗಬಹುದು. ಧೃತಿಗೆಡಬೇಡಿ, ನಿಮ್ಮೊಂದಿಗೆ ನಾವು ಇದ್ದೇವೆ" ಎಂದು ಸಮಾಧಾನ ಹೇಳಿದರು ಎಂದು ತಿಳಿದುಬಂದಿದೆ.

ಬಳಿಕ ಈ ಘಟನೆ ಕುರಿತು ಸಿದ್ದರಾಮಯ್ಯ ಅವರ ದೂರವಾಣಿ ಮೂಲಕ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಚರ್ಚೆ ನಡೆಸಿ, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ಪೊಲೀಸರ ಸಮ್ಮುಖದಲ್ಲೇ ಆಡಳಿತ ಪಕ್ಷದ ಶಾಸಕರಿಗೆ ಇಂತಹ ಘಟನೆ ನಡೆದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕರ್ತವ್ಯ ಲೋಪ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಪ್ರದೀಪ್ ಈಶ್ವರ್: ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಭಾವುಕರಾದರು. ಘಟನೆ ವಿವರಿಸುವ ವೇಳೆ ಕಣ್ಣೀರು ಹಾಕಿದ ಪ್ರದೀಪ್ ಅವರಿಗೆ ಸಿದ್ದರಾಮಯ್ಯ ಧೈರ್ಯ ತುಂಬಿ, ಧೃತಿಗೆಡದಂತೆ ಸಲಹೆ ನೀಡಿದರು. ಜೊತೆಗೆ ಪ್ರಕರಣದ ಕುರಿತು ಗೃಹ ಸಚಿವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿ, ಸಮಗ್ರ ತನಿಖೆ ನಡೆಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ, ಸಿಎಂ ಡಿಕೆ ಶಿವಕುಮಾರ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಪ್ರದೀಪ್ ಈಶ್ವರ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಚಪ್ಪಲಿ ಎಸೆದ ಘಟನೆಯನ್ನು ಖಂಡಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಹಿಂಸಾತ್ಮಕ ಕೃತ್ಯಗಳಿಗೆ ಯಾವುದೇ ಸ್ಥಾನವಿಲ್ಲ ಎಂದು ಹೇಳಿದ್ದು, ವಿರೋಧ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪ್ರದೀಪ್ ಬೆಂಬಲಿಸಿ ಸಿಎಂ ಡಿಕೆಶಿ ಪೋಸ್ಟ್:

ಈ ನಡುವೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಪರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳು ಸಹಜವಾದರೂ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ ಅವರ ಮೇಲೆ ಚಪ್ಪಲಿ ಎಸೆದ ಘಟನೆ ಪ್ರಜಾಪ್ರಭುತ್ವದ ಮೌಲ್ಯಗಳು ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ವಿರೋಧ ಪಕ್ಷಗಳು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಪ್ರಜಾಸತ್ತಾತ್ಮಕ ರೀತಿಯಲ್ಲಿ ವ್ಯಕ್ತಪಡಿಸಬೇಕೇ ಹೊರತು, ಇಂತಹ ಹಿಂಸಾತ್ಮಕ ಕೃತ್ಯಗಳಿಗೆ ಅವಕಾಶ ನೀಡಬಾರದು ಎಂದು ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಒಬ್ಬ ಇವನ್ ನಾಯಕರ ಜನಪ್ರಿಯತೆಯನ್ನು ಸಹಿಸಿಕೊಳ್ಳಲಾಗದೆ ಇಂತಹ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಿದ ಅವರು, ಇದು ರಾಜಕೀಯ ಸಂಸ್ಕೃತಿಯ ಅದೋಗತಿಯನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.

" ಇಂದು ಬಸವಣ್ಣ ಮತ್ತು ಕುವೆಂಪು ಅವರ ಶಾಂತಿ, ಸಹಬಾಳ್ವೆಯ ಕರ್ನಾಟಕ. ಇಲ್ಲಿ ಹಿಂಸಾತ್ಮಕ ಪುಂಡಾಟಿಕೆಗಳಿಗೆ ಯಾವುದೇ ಸ್ಥಾನವಿಲ್ಲ. ಸಾರ್ವಜನಿಕ ಸಭ್ಯತೆಯ ಮಿತಿಯನ್ನು ಮೀರಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಡಿ.ಕೆ ಶಿವಕುಮಾರ್ ತಮ್ಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online