<?= $pageTitle ?>
Logo
ಮುಖಪುಟ ಓದುವುದು ಕೇಳು
Politics

"ಯತ್ನಾಳ್ ಗೆ ಪ್ರದೀಪ್ ಈಶ್ವರ್ ಟಾಂಗ್: 'ಅವರು ಯಾವುದೋ ಒಂದು ಕೋತಿಯ ಬ್ರೀಡ್'!"

"ಯತ್ನಾಳ್ ಗೆ ಪ್ರದೀಪ್ ಈಶ್ವರ್ ಟಾಂಗ್: 'ಅವರು ಯಾವುದೋ ಒಂದು ಕೋತಿಯ ಬ್ರೀಡ್'!"
Summary: Congress MLA Pradeep Ishwar has launched a scathing attack on BJP leader Basanagouda Patil Yatnal, saying "Yatnal is some kind of monkey breed" has sparked a debate in political circles.

belagavi news :

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ದೇಶ ಭಾಷಣದ ಆರೋಪ ಮಾಡಿರುವ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ತಮ್ಮನ್ನು ದೇಶದ್ರೋಹಿ ಎಂದು ಕರೆದಿದ್ದು ಮಾತ್ರವಲ್ಲದೆ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಛಲವಾದಿ ನಾರಾಯಣಸ್ವಾಮಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆದು ದೂರು ನೀಡಿದ್ದಾರೆ.

ಈ ಆರೋಪಗಳಿಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ತಮ್ಮ ವಿರುದ್ಧದ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿ ಹಾಕಿದರು. "ನಾನು ಯಾವುದೇ ದ್ವೇಷ ಭಾಷಣ ಮಾಡಲ್ಲ. ದ್ವೇಷ ಭಾಷಣದ ಪಿತಾಮಹರು ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಇಬ್ಬರು ನಾಯಕರ ನಡುವಿನ ಈ ಮಾತಿನ ಸಮರ ಇದೀಗ ರಾಜ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದ್ದು, ಆರೋಪ ಪ್ರತ್ಯಾರೋಪಗಳ ನಡುವೆ ರಾಜಕೀಯ ವಾತಾವರಣ ಮತ್ತಷ್ಟು ಕಾವೇರಿದೆ ಈ ಬೆಳವಣಿಗೆ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ದ್ವೇಷ ಭಾಷಣದ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

" ಛಲುವಾದಿ ನಾರಾಯಣಸ್ವಾಮಿಯವರನ್ನು ಬುದ್ಧಿವಂತರು ಮತ್ತು ಪ್ರಜ್ಞಾವಂತರು ಎಂದು ಭಾವಿಸಿದ್ದೇನೆ. ಆದರೆ ಅವರು ನೀಡಿರುವ ದೂರು ನೋಡಿದ ಬಳಿಕ ಅವರಿಗೆ ಜ್ಞಾನವಿಲ್ಲ ಎಂಬ ಅನುಮಾನ ಮೂಡಿದೆ. ನನ್ನ ಭಾಷಣದ ಸಂಪೂರ್ಣ ವಿಡಿಯೋ ನೋಡದೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆಯುವುದು ಸರಿಯಲ್ಲ"ಎಂದು ಪ್ರದೀಪ್ ಈಶ್ವರ್ ಕಿಡಿಕಾರಿದರು.

ಇನ್ನು ತಮ್ಮ ಭಾಷಣವನ್ನು ಸಮರ್ಥಿಸಿಕೊಂಡು ಅವರು,"ನಾನು ಭಾಷಣದಲ್ಲಿ 'ಅಂದ ಭಕ್ತರು ಮತ್ತು ದೇಶದ್ರೋಹಿಗಳು ಈ ದೇಶಕ್ಕೆ ಮಾರಕ" ಎಂದು ಹೇಳಿದ್ದೇನೆ ಹೊರತು, ಯಾವುದೇ ವ್ಯಕ್ತಿ ಅಥವಾ ನಾಯಕರ ಹೆಸರನ್ನು ಉಲ್ಲೇಖಿಸಿ, ದೇಶದ್ರೋಹಿ ಎಂದು ಕರೆದಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ರಾಜಕೀಯ ಲಾಭ ಪಡೆಯಲು ಯತ್ನಿಸಲಾಗುತ್ತಿದೆ"ಎಂದು ಸ್ಪಷ್ಟಪಡಿಸಿದರು.

ಈ ಹೇಳಿಕೆಗಳೊಂದಿಗೆ ರಾಜ್ಯ ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪಗಳ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ವಾಕ್ ಸಮರ ಹೊಸ ಹಂತಕ್ಕೆ ತಲುಪಿದೆ.

ಛಲುವಾದಿ ನಾರಾಯಣಸ್ವಾಮಿಯವರ ಮನಸ್ಸಿನಲ್ಲಿ ಇರುವುದನ್ನೇ ಅವರು ಹೊರ ಹಾಕುತ್ತಿದ್ದಾರೆ. ದ್ವೇಷ ಭಾಷಣದ ಮೊದಲ ಪಿತಾಮಹ ಛಲವಾದಿ ನಾರಾಯಣ ಸ್ವಾಮಿ, ಎರಡನೇ ಪಿತಾಮಹ ಬಸನಗೌಡ ಪಾಟೀಲ್ ಯತ್ನಾಳ್ ಎಂದು ಪ್ರದೀಪ್ ಈಶ್ವರ್ ಕಟುವಾಗಿ ಟೀಕಿಸಿದರು.

ಇದೇ ವೇಳೆ ಯತ್ನಾಳ್ ವಿರುದ್ಧ ವಾಗ್ದಾಳಿ ಮುಂದುವರಿಸಿದವರು,"ಯತ್ನಾಳ್ ನೋಡಿದರೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅದು ಯಾವುದೋ ಒಂದು ಕೋತಿಯ ಬ್ರೀಡ್"ಎಂದು ಏಕವಚನದಲ್ಲೇ ಹೇಳಿಕೆ ನೀಡಿದರು. ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದ್ದು, ಪರ ವಿರೋಧ ಚರ್ಚೆಗಳು ಜೋರಾಗಿದೆ.

ಹೇಳಿಕೆಗಳಿಗೆ ಬಿಜೆಪಿ ನಾಯಕರು ಯಾವ ರೀತಿಯ ಪ್ರತಿಕ್ರಿಯೆ ನೀಡಲಿದ್ದಾರೆ ಎಂದು ಕುತೂಹಲ ಮೂಡಿಸಿದ್ದು, ರಾಜ್ಯ ರಾಜಕೀಯದಲ್ಲಿ ವಾಕ್ ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Also Read:

IND vs AFG Match Delay : ಭಾರತ - ಆಫ್ಘಾನಿಸ್ತಾನ್ ಪಂದ್ಯ ಆರಂಭ ತಡವಾಗಲು ಕಾರಣವೇನು?

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online