<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಹೊಸ ಜವಾಬ್ದಾರಿಯ ಬಳಿಕ ಪ್ರಲ್ಹಾದ್ ಜೋಶಿ ಮೊದಲ ಸಭೆ ! ಅಧಿಕಾರಿಗಳಿಗೆ ಕೊಟ್ಟ ಮಹತ್ವದ ಸೂಚನೆಗಳು

ಹೊಸ ಜವಾಬ್ದಾರಿಯ ಬಳಿಕ ಪ್ರಲ್ಹಾದ್ ಜೋಶಿ ಮೊದಲ ಸಭೆ ! ಅಧಿಕಾರಿಗಳಿಗೆ ಕೊಟ್ಟ ಮಹತ್ವದ ಸೂಚನೆಗಳು
Summary: In the first meeting, Pralhad Joshi gave sound advice and instructions to the officials. Important directions from the minister who emphasized speed, transparency and pro-people work in administration.

Belagavi News:

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಡುವೆಯೇ ಕೇಂದ್ರ ಶಿಕ್ಷಣ ಸಚಿವಾಲಯದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡ ಬಳಿಕ ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ ಅವರು ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ರಾಜೀನಾಮೆಯನ್ನು ಅಂಗೀಕರಿಸಿದ ಬಳಿಕ ಶಿಕ್ಷಣ ಇಲಾಖೆಯ ಜವಾಬ್ದಾರಿಯನ್ನು ಬಿಜೆಪಿ ಹಿರಿಯ ನಾಯಕ ಪ್ರಲ್ಹಾದ್ ಜೋಶಿ ಅವರಿಗೆ ವಹಿಸಲಾಗಿದೆ.

ಕೇಂದ್ರದ ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅವರು ಜುಲೈ 26ರಂದು ನವದೆಹಲಿಯ ಕರ್ತವ್ಯ ಭವನದಲ್ಲಿ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕಾರದ ಬಳಿಕ ಅವರು ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

ಮೊದಲ ಸಭೆಯಲ್ಲೇ ಸಚಿವರು ಇಲಾಖೆಯ ಕಾರ್ಯವೈಖರಿ, ಟೀ ಚೀನಾ ಬೆಳವಣಿಗೆಗಳು ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸೇರಿದಂತೆ ಇತ್ತೀಚಿನ ಬೆಳವಣಿಗೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗಳ ವಿಶ್ವಾಸ ಪುನಃ ಸ್ಥಾಪನೆ, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಶಿಕ್ಷಣ ಕ್ಷೇತ್ರದ ಸವಾಲುಗಳ ಕುರಿತು ನೂತನ ಸಚಿವರು ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

NEET ವಿವಾದದ ಬಳಿಕ ಕೇಂದ್ರ ಶಿಕ್ಷಣ ಸಚಿವಾಲಯದ ಜವಾಬ್ದಾರಿ ಬದಲಾಗಿದ್ದು, ಇದೀಗ ಪ್ರಲ್ಹಾದ್ ಜೋಶಿ ಅವರ ಮುಂದಿರುವ ಸವಾಲುಗಳು ಹಾಗೂ ಅವರ ಮುಂದಿನ ಕ್ರಮಗಳ ಬಗ್ಗೆ ಕುತೂಹಲ ಮೂಡಿದೆ.

ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗೆ ವೇಗ ನೀಡೋಣ - ಅಧಿಕಾರಿಗಳಿಗೆ ಪ್ರಲ್ಹಾದ್ ಜೋಶಿ ಸೂಚನೆ :

ಕೇಂದ್ರದ ನೂತನ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಪ್ರಲ್ಹಾದ್ ಜೋಶಿ ಅವರು ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ ಮತ್ತು ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ಹಾಗೂ ಮಾಜಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಸಾರಥ್ಯದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಹಲವು ಮಹತ್ವದ ಬದಲಾವಣೆಗಳು ನಡೆದಿವೆ ಎಂದು ಜೋಶಿ ಹೇಳಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲೂ ವಿದ್ಯಾರ್ಥಿಗಳ ಅಭ್ಯುದಯವನ್ನು ಗಮನದಲ್ಲಿಟ್ಟುಕೊಂಡು, ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕವಾಗಿ ಹಾಗೂ ವೇಗವಾಗಿ ಕೆಲಸ ಮಾಡುವಂತೆ ಸಚಿವಾಲಯದ ಅಧಿಕಾರಿಗಳಿಗೆ ಪ್ರಲ್ಹಾದ್ ಜೋಶಿ ನಿರ್ದೇಶನ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೇಲೆ ವಿಶ್ವಾಸವಿಟ್ಟು ಶಿಕ್ಷಣ ಇಲಾಖೆಯ ಹೆಚ್ಚುವರಿ ಜವಾಬ್ದಾರಿ ನೀಡಿದ್ದಾರೆ ಎಂದು ಹೇಳಿದ ಜೋಶಿ, ಈ ಅವಕಾಶಕ್ಕಾಗಿ ಪ್ರಧಾನಿಗೆ ಧನ್ಯವಾದ ಸಲ್ಲಿಸಿದರು. ಇದೇ ವೇಳೆ ಶಿಕ್ಷಣ ಸಚಿವಾಲಯದ ಉನ್ನತ ಅಧಿಕಾರಿಗಳ ಸಹಕಾರವನ್ನು ಕೋರಿದರು.

NEET ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಬಳಿಕ ಶಿಕ್ಷಣ ಸಚಿವಾಲಯದ ಜವಾಬ್ದಾರಿ ವಹಿಸಿಕೊಂಡಿರುವ ಪ್ರಲ್ಹಾದ್ ಜೋಶಿ ಅವರ ಮುಂದಿನ ಕ್ರಮಗಳ ಬಗ್ಗೆ ಇದೀಗ ಗಮನ ಸೆಳೆಯುತ್ತಿದೆ.

NEET ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕ್ರಮ - ಫಾಸ್ಟ್ ಟ್ರ್ಯಾಕ್ ಕೋರ್ಟ್, ಕಠಿಣ ಶಿಕ್ಷೆಗೆ ಒತ್ತು ಎಂದ ಪ್ರಲ್ಹಾದ್ ಜೋಶಿ :

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕ ಮತ್ತು ಸುರಕ್ಷಿತಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಪರೀಕ್ಷಾ ಸುಧಾರಣೆ ಮತ್ತು ವಿದ್ಯಾರ್ಥಿಗಳ ಹಿತ ಶಕ್ತಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಫಾಸ್ಟ್ ಟ್ರ್ಯಾಕ್ ಕೋರ್ಟ್, ಹತ್ತು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಭಾರಿ ದಂಡದಂತಹ ಕಠಿಣ ಕಾನೂನು ಕ್ರಮಗಳನ್ನು ಜಾರಿ ತರಲಾಗಿದೆ ಎಂದು ಜೋಶಿ ಹೇಳಿದರು.

ದೇಶದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸುವುದು, ಸ್ಪರ್ಧಾತ್ಮಕ ಪರೀಕ್ಷೆಗಳ ಸುರಕ್ಷತೆ ಬಲಪಡಿಸುವುದು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಗೆ ಅವಕಾಶವೇ ಇಲ್ಲದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದರ ಜೊತೆಗೆ, ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಪರೀಕ್ಷಾ ಫಲಿತಾಂಶಗಳನ್ನು ತ್ವರಿತವಾಗಿ ಪ್ರಕಟಿಸುವುದು, ಪರೀಕ್ಷಾ ವ್ಯವಸ್ಥೆಯ ಮೂಲಸೌಕರ್ಯವನ್ನು ಬಲಪಡಿಸುವುದು ಹಾಗೂ ತಂತ್ರಜ್ಞಾನ ಆಧಾರಿತ ಭದ್ರತಾ ವ್ಯವಸ್ಥೆಗಳಿಗೆ ಆದ್ಯತೆ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವ ಜಯಂತ್ ಚೌಧರಿ, ಶಿಕ್ಷಣ ಸಚಿವಾಲಯದ ಕಾರ್ಯದರ್ಶಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online