<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ವಿದ್ಯುತ್ ಇಲ್ಲದೆ ಮೊಬೈಲ್ ಟಾರ್ಚ್ ನಲ್ಲಿ ಗರ್ಭಿಣಿಗೆ ಆಪರೇಷನ್? ಸರ್ಕಾರಿ ಆಸ್ಪತ್ರೆ ವಿಡಿಯೋ ವೈರಲ್

ವಿದ್ಯುತ್ ಇಲ್ಲದೆ ಮೊಬೈಲ್ ಟಾರ್ಚ್ ನಲ್ಲಿ ಗರ್ಭಿಣಿಗೆ ಆಪರೇಷನ್? ಸರ್ಕಾರಿ ಆಸ್ಪತ್ರೆ ವಿಡಿಯೋ ವೈರಲ್
Summary: A case has been reported in which doctors performed surgery on a pregnant woman using mobile phone torch light after a power outage during a surgical procedure at a government hospital.

belagavi news :

ಪಲ್ವಾಲ್: ಸರ್ಕಾರಿ ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಗರ್ಭಿಣಿಗೆ ಶಸ್ತ್ರ ಚಿಕಿತ್ಸೆ; ವಿಡಿಯೋ ವೈರಲ್

ಸರ್ಕಾರಿ ಆಸ್ಪತ್ರೆ ಒಂದರಲ್ಲಿ ಗರ್ಭಿಣಿಯೊಬ್ಬರಿಗೆ ಮೊಬೈಲ್ ಫೋನ್ ಟಾರ್ಚ್ ಬೆಳಕಿನ ಸಹಾಯದಿಂದ ಶಸ್ತ್ರಚಿಕಿತ್ಸೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಪಲ್ವಾಲ್ ಜಿಲ್ಲಾ ಸಿವಿಲ್ ಆಸ್ಪತ್ರೆಯಲ್ಲಿ ನಡೆದಿರುವ ಈ ಘಟನೆ ಆಸ್ಪತ್ರೆಯ ಮೂಲ ಸೌಕರ್ಯ ಮತ್ತು ತುರ್ತು ವ್ಯವಸ್ಥೆಗಳ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಶಸ್ತ್ರ ಚಿಕಿತ್ಸೆ ನಡೆಯುತ್ತಿದ್ದ ವೇಳೆ ವಿದ್ಯುತ್ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ವೈದ್ಯರು ಮೊಬೈಲ್ ಫೋನ್ಗಳ ಬೆಳಕಿನಲ್ಲಿ ಕಾರ್ಯನಿರ್ವಹಿಸಿದ್ದಾರೆ ಎನ್ನಲಾಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಸ್ಪತ್ರೆಯ ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಆರಂಭವಾಗಿದೆ.

ಘಟನೆಯ ಬಳಿಕ ತಾಯಿ ಮತ್ತು ಮಗು ಇಬ್ಬರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಆಸ್ಪತ್ರೆಯಲ್ಲಿ ಅಗತ್ಯ ಮೂಲ ಸೌಕರ್ಯಗಳ ಕೊರತೆ ಮತ್ತು ತುರ್ತು ಸಂದರ್ಭಗಳಲ್ಲಿ ಕೈಕೊಳ್ಳಬೇಕಾದ ಮುನ್ನೆಚ್ಚರಿಕ ಕ್ರಮಗಳ ಬಗ್ಗೆ ಮಹಿಳೆಯ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಕುರಿತು ಪರಿಶೀಲನೆ ನಡೆಸುತ್ತಿದ್ದು, ಆಸ್ಪತ್ರೆಯ ವಿದ್ಯುತ್ ವ್ಯವಸ್ಥೆ, ತುರ್ತು ಸೌಲಭ್ಯಗಳು ಮತ್ತು ಘಟನೆಯ ಸಂದರ್ಭದ ಪರಿಸ್ಥಿತಿಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಪಲ್ವಾಲ್ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತ; ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರು.

ಪಲ್ವಾಲ್ ಜಿಲ್ಲಾ ಸಿವಿಲ್ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬರಿಗೆ ಶಸ್ತ್ರ ಚಿಕಿತ್ಸೆ ನಡೆಸುವ ವೇಳೆ ವಿದ್ಯುತ್ ಕಡಿತಗೊಂಡು, ವೈದ್ಯರು ಮೊಬೈಲ್ ಫೋನ್ ಟಾರ್ಚ್ ಬೆಳಕಿನ ಸಹಾಯದಿಂದ ಶಸ್ತ್ರ ಚಿಕಿತ್ಸೆ ಪೂರ್ಣಗೊಳಿಸಿದ ಘಟನೆ ವರದಿಯಾಗಿದೆ.

ವರದಿಗಳ ಪ್ರಕಾರ, ಗುರುವಾರ ರಾತ್ರಿ ಸುಮಾರು 10 ಗಂಟೆ ವೇಳೆಗೆ ಮಹಿಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ಸಂದರ್ಭದಲ್ಲಿ ಆಪರೇಷನ್ ಥಿಯೇಟರ್ ನ ವಿದ್ಯುತ್ ಸಂಪರ್ಕ ಏಕಾಏಕಿ ಸ್ಥಗಿತಗೊಂಡಿದೆ. ಇದೇ ವೇಳೆ ಆಸ್ಪತ್ರೆಯ ಜನರೇಟರ್ ಮತ್ತು ಬ್ಯಾಟರಿ ಬ್ಯಾಕಪ್ ವ್ಯವಸ್ತೆಗಳು ಕಾರ್ಯನಿರ್ವಹಿಸದ ಕಾರಣ ವೈದ್ಯರು ಮೊಬೈಲ್ ಫೋನ್ಗಳ ಬೆಳಕನ್ನು ಬಳಸಿಕೊಂಡು ಶಾಸ್ತ್ರ ಚಿಕಿತ್ಸೆ ಮುಂದುವರಿಸಿದ್ದಾರೆ. ಎನ್ನಲಾಗಿದೆ.

ಈ ಘಟನೆ ಆಸ್ಪತ್ರೆಗಳಲ್ಲಿನ ತುರ್ತು ವಿದ್ಯುತ್ ವ್ಯವಸ್ಥೆ ಮತ್ತು ಮೂಲ ಸೌಕರ್ಯಗಳ ಸಿದ್ಧತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಶಸ್ತ್ರಚಿಕಿತ್ಸೆ ಕೊಠಡಿ ಅಂತಹ ಅತ್ಯಂತ ಸೂಕ್ಷ್ಮ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಹಾಗೂ ಬ್ಯಾಕಪ್ ವ್ಯವಸ್ಥೆಯ ವೈಫಲ್ಯವು ರೋಗಿಗಳ ಸುರಕ್ಷತೆಗೆ ಅಪಾಯ ಉಂಟುಮಾಡುವ ಸಾಧ್ಯತೆ ಇದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿನ ತಾಂತ್ರಿಕ ಸೌಲಭ್ಯಗಳು, ನಿರ್ವಹಣೆ ಮತ್ತು ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಾಮರ್ಥ್ಯದ ಕುರಿತು ಚರ್ಚೆ ಆರಂಭವಾಗಿದೆ. ಈ ಸಂಬಂಧ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

200 ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ಆಸ್ಪತ್ರೆಗೆ ಪ್ರತಿದಿನ ಸುಮಾರು 2000 ರಿಂದ 3000 ರೋಗಿಗಳು ಚಿಕಿತ್ಸೆಗಾಗಿ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಯ ವೈದ್ಯರು ಪ್ರತಿ ತಿಂಗಳು ಸುಮಾರು 25 ರಿಂದ 30 ಶಾಸ್ತ್ರ ಚಿಕಿತ್ಸೆಗಳನ್ನು ನಡೆಸುತ್ತಿದ್ದು, ಹೆಚ್ಚುತ್ತಿರುವ ರೋಗಿಗಳ ಒತ್ತಡವನ್ನು ಗಮನಿಸಿ 2024ರಲ್ಲಿ ಹಾಸಿಗೆಗಳ ಸಂಖ್ಯೆಯನ್ನು 100 ರಿಂದ 200ಕ್ಕೆ ಹೆಚ್ಚಿಸಲಾಗಿತ್ತು.

ಆದರೆ, ಹಾಸಿಗೆ ಸಾಮರ್ಥ್ಯ ಹೆಚ್ಚಿಸಿದರು ತಜ್ಞ ವೈದ್ಯರ ಕೊರತೆ, ಅಗತ್ಯ ವೈದ್ಯಕೀಯ ಉಪಕರಣಗಳು ಮತ್ತು ಮೂಲ ಸೌಲಭ್ಯಗಳ ಅಭಾವ ಇನ್ನು ಮುಂದುವರೆದಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಇದರಿಂದ ಆಸ್ಪತ್ರೆಯ ಸೇವೆಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗಿದೆ.

ಹಾಟ್ ಲೈನ್ ಸಂಪರ್ಕವಿದ್ದರೂ ವಿದ್ಯುತ್ ಸಮಸ್ಯೆ

ಆಸ್ಪತ್ರೆಯ ವಿದ್ಯುತ್ ಪೂರೈಕೆಯನ್ನು ಹಾರ್ಟ್ ಲೈನ್ ವ್ಯವಸ್ಥೆಗೆ ಸಂಪರ್ಕಿಸಲಾಗಿದೆ ಎನ್ನಲಾಗಿದ್ದರು, ವಿದ್ಯುತ್ ಕಡಿತದ ದೂರುಗಳು ಮುಂದುವರೆದಿವೆ. ವಿದ್ಯುತ್ ವ್ಯಾತ್ಯಯದ ಸಂದರ್ಭಗಳಲ್ಲಿ ಬಳಸಬೇಕಾದ ಜನರೇಟರ್ ಮತ್ತು ಇನ್ವರ್ಟರ್ ಗಳಂತಹ ಪರ್ಯಾಯ ವ್ಯವಸ್ಥೆಗಳು ಹಲವು ಬಾರಿ ವಿಫಲವಾಗುತ್ತಿವೆ ಎಂದು ವರದಿಯಾಗಿದೆ.

ವಿದ್ಯುತ್ ಕಡಿತದಂತಹ ತುರ್ತು ಸಂದರ್ಭಗಳಲ್ಲಿ ಪರ್ಯಾಯ ವ್ಯವಸ್ಥೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದು ರೋಗಿಗಳು ಮತ್ತು ವೈದ್ಯಕೀಯ ಸಿಬ್ಬಂದಿಗೆ ಸಮಸ್ಯೆ ಉಂಟು

ಮಾಡುತ್ತಿದೆ. ಇತ್ತೀಚಿನ ಘಟನೆಗಳ ಬಳಿಕ ಸರ್ಕಾರಿ ಆಸ್ಪತ್ರೆಗಳಲ್ಲಿನ ತುರ್ತು ಸಿದ್ದತೆ ಮತ್ತು ಮೂಲಸೌಕರ್ಯಗಳ ಸುಧಾರಣೆಯ ಅಗತ್ಯದ ಬಗ್ಗೆ ಚರ್ಚೆ ತೀವ್ರಗೊಂಡಿದೆ.

ಪಲ್ವಾಲ್ ಆಸ್ಪತ್ರೆ ಘಟನೆ : ತನಿಖೆಗೆ ಆದೇಶ; ವಿದ್ಯುತ್ ಕಡಿತ ಮತ್ತು ಬ್ಯಾಕಪ್ ವೈಫಲ್ಯದ ಪರಿಶೀಲನೆ

ಜಿಲ್ಲಾ ನಾಗರಿಕ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬರಿಗೆ ಮೊಬೈಲ್ ಫೋನ್ ಟಾರ್ಚ್ ಬೆಳಕಿನಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿದ ಘಟನೆ ಕುರಿತು ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಿಪ್ಯೂಟಿ ಸಿವಿಲ್ ಸರ್ಜನ್ ಡಾ.ಸಂಜಯ್ ಸಿಂಗ್, ಘಟನೆ ತಮ್ಮ ಗಮನಕ್ಕೆ ಬಂದಿದ್ದು, ಆಪರೇಷನ್ ಥಿಯೇಟರ್ ನಲ್ಲಿ ವಿದ್ಯುತ್ ಕಡಿತ ಉಂಟಾಗುವ ಕಾರಣವೇನು ಮತ್ತು ಬ್ಯಾಕಪ್ ವ್ಯವಸ್ಥೆಗಳು ಏಕೆ ಕಾರ್ಯನಿರ್ವಹಿಸಲಿಲ್ಲ ಎಂಬುವುದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

ವಿದ್ಯುತ್ ಪೂರೈಕೆ ವೈಫಲ್ಯ, ಜನರೇಟರ್ ಮತ್ತು ಪರ್ಯಾಯ ವಿದ್ಯುತ್ ವ್ಯವಸ್ಥೆಗಳ ಕಾರ್ಯನಿರ್ವಹಣೆ ಸೇರಿದಂತೆ ಎಲ್ಲಾ ಅಂಶಗಳ ಬಗ್ಗೆ ತನಿಖೆ ನಡೆಸಲಾಗುವುದು. ತನಿಕಾ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಸಂಜಯ್ ಸಿಂಗ್ ತಿಳಿಸಿದ್ದಾರೆ.

ಈ ಘಟನೆ ಬಳಿಕ ಆಸ್ಪತ್ರೆಯ ತುರ್ತು ವ್ಯವಸ್ಥೆಗಳು ಮತ್ತು ಮೂಲ ಸೌಕರ್ಯಗಳ ನಿರ್ವಹಣೆ ಕುರಿತು ಪ್ರಶ್ನೆಗಳು ಎದ್ದಿದ್ದು, ತನಿಕಾ ವರದಿಯ ಮೇಲೆ ಎಲ್ಲರ ಗಮನ ನೆಟ್ಟಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online