Belagavi news:
ರಾಜ್ಯದ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ RSS ಕುರಿತು ನೀಡಿರುವ ಎಚ್ಚರಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾನೂನು ಬದ್ಧ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಪರೋಕ್ಷ ಸಂದೇಶ ನೀಡಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರಕ್ಕೆ ಮತ್ತಷ್ಟು ಕಾವು ಬಂದಿದೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಹಾಗು ಐಟಿಬಿಟಿ ಸಚಿವರಾಗಿದ್ದ ಸಂದರ್ಭದಲ್ಲಿಯೂ RSS ವಿರುದ್ಧ ಬಹಿರಂಗವಾಗಿ ಟೀಕಿಸುತ್ತಿದ್ದ ಪ್ರಿಯಾಂಕ್ ಖರ್ಗೆ, ಇದೀಗ ಗೃಹ ಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕವು ತಮ್ಮ ನಿಲುವನ್ನು ಮುಂದುವರಿಸಿರುವುದು ಗಮನ ಸೆಳೆದಿದೆ.
ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೂಡ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬೆಳವಣಿಗೆಯೊಂದಿಗೆ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮತ್ತೊಂದು ಹಂತಕ್ಕೆ ತಲುಪಿದೆ.
ಪ್ರಿಯಾಂಕ್ ಖರ್ಗೆ ಅವರ ಎಚ್ಚರಿಕೆ ಕಾನೂನು ಪಾಲನೆ ಮತ್ತು ಸಂಘಟನೆಗಳ ನೋಂದಣಿ ಪ್ರಕ್ರಿಯೆ ಕುರಿತದ್ದೇ ಅಥವಾ ರಾಜಕೀಯ ಸಂದೇಶವೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ. ಗೃಹ ಸಚಿವರ ಹೇಳಿಕೆಗೆ ಬಿಜೆಪಿ ನಾಯಕರು ತಿರುಗೇಟು ನೀಡುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಈ ವಿಚಾರ ಮತ್ತಷ್ಟು ರಾಜಕೀಯ ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ.
ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ನೀಡಿರುವ ಈ ಸಂದೇಶ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನವನ್ನು ಮೂಡಿಸಿದ್ದು, RSS, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರಕ್ಕೆ ವೇದಿಕೆ ಸಿದ್ಧವಾಗಿದೆ.
RSS ನೊಂದಣಿ ವಿವಾದಕ್ಕೆ ಹೊಸ ತಿರುವು : ಪ್ರಿಯಾಂಕ್ ಖರ್ಗೆ ಪೋಸ್ಟ್ ಗೆ ಬಿಜೆಪಿ ಆಕ್ರೋಶ:
RSS ನೊಂದಣಿ ವಿಚಾರವನ್ನು ಮುಂದಿಟ್ಟುಕೊಂಡು ಗ್ರಹ ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ಎಕ್ಸ್ ಪೋಸ್ಟ್ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಜೂನ್ 7ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅವರು, ಬಿಜೆಪಿ ನಾಯಕರನ್ನು ಉದ್ದೇಶಿಸಿ ಹಲವು ಪ್ರಶ್ನೆಗಳನ್ನು ಎತ್ತಿದರು.
"ರಾಜ್ಯ ಬಿಜೆಪಿ ನಾಯಕರೇ, ಏಕೆ ಇಷ್ಟು ಚಿಂತೆಗೊಳಗಾಗಿದ್ದೀರಿ? ಗೃಹ ಸಚಿವನಾಗಿ ಅಧಿಕಾರವಹಿಸಿಕೊಂಡು 48 ಗಂಟೆ ಕೂಡ ಆಗಿಲ್ಲ. ನಿಮ್ಮಲ್ಲಿನ ಭಯ , ಆತಂಕ ಮತ್ತು ದುಗುಡ ಈಗಾಗಲೇ ವ್ಯಕ್ತವಾಗುತ್ತಿದೆ. RSS ನ್ನು ಬಳಸಿಕೊಂಡು ನನ್ನ ವಿರುದ್ಧ ನಿಂದನೆ ಮಾಡುತ್ತಿದ್ದೀರಿ, ಜೀವ ಬೆದರಿಕೆ ಹಾಕುತ್ತಿದ್ದೀರಿ. ನಿಮ್ಮ ರಾಜಕೀಯ ಮೇಲಾಧಿಕಾರದ ಸಂಘಟನೆಯ ನೋಂದಣಿಗಾಗಿ ದಾಖಲೆಗಳನ್ನು ಸಿದ್ಧವಾಗಿಡಲು ಹೇಳಿ" ಎಂದು ಪ್ರಿಯಾಂಕ್ ಖರ್ಗೆ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.
ಈ ಹೇಳಿಕೆ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮತ್ತೊಂದು ಸುತ್ತಿನ ವಾಕ್ ಸಮರಕ್ಕೆ ವೇದಿಕೆ ಸಿದ್ಧವಾಗಿದೆ.
ಇದೇ ವೇಳೆ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಸಚಿವ ಶರಣ್ ಪ್ರಕಾಶ್ ಪಾಟೀಲ್ "ಗೃಹ ಸಚಿವರ ಹೇಳಿಕೆಯಲ್ಲಿ ತಪ್ಪೇನಿಲ್ಲ. ಕಾನೂನು ಪ್ರಕಾರ ಕಾರ್ಯ ನಿರ್ವಹಿಸಲು ನೋಂದಣಿ ಅಗತ್ಯ. ನೋಂದಣಿ ಮಾಡಿಕೊಳ್ಳಲು RSS ಗೆ ಏನು ಸಮಸ್ಯೆ? ಯಾರು ಕಾನೂನಿಗಿಂತ ದೊಡ್ಡವರಲ್ಲ" ಎಂದು ಪ್ರತಿಕ್ರಿಯಿಸಿದ್ದಾರೆ.
RSS ನೊಂದಣಿ ವಿಚಾರ ಈಗ ರಾಜ್ಯ ರಾಜಕೀಯದಲ್ಲಿ ಪ್ರಮುಖ ಚರ್ಚೆಯ ವಿಷಯವಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ಆರೋಪ ಪ್ರತ್ಯಾರೋಪಗಳಿಗೆ ಮತ್ತಷ್ಟು ಕಾವು ನೀಡಿದೆ. ಗೃಹ ಸಚಿವರ ಹೇಳಿಕೆ ಹಾಗೂ ಅದಕ್ಕೆ ಬಿಜೆಪಿ ನಾಯಕರು ನೀಡುತ್ತಿರುವ ಪ್ರತಿಕ್ರಿಯೆಗಳು ಮುಂದಿನ ದಿನಗಳಲ್ಲಿ ರಾಜಕೀಯ ವಾತಾವರಣವನ್ನು ಇನ್ನಷ್ಟು ಬಿಸಿಗೊಳಿಸುವ ಸಾಧ್ಯತೆ ಇದೆ.
RSS ವಿವಾದಕ್ಕೆ ಹೊಸ ತಿರುವು : ಪ್ರಿಯಾಂಕ್ ಖರ್ಗೆ ವಿರುದ್ಧ ಕೋಟ ಶ್ರೀನಿವಾಸ್ ಪೂಜಾರಿ ವಾಗ್ದಾಳಿ:
RSS ನೊಂದಣಿ ವಿಚಾರವಾಗಿ ರಾಜ ರಾಜಕೀಯದಲ್ಲಿ ಆರಂಭವಾಗಿರುವ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದೆ ಎಂದು ಕಿಡಿ ಕಾರಿದ್ದಾರೆ.
RSS ಕೇವಲ ಕರ್ನಾಟಕ ಅಥವಾ ಭಾರತಕ್ಕೆ ಸೀಮಿತವಾದ ಸಂಘಟನೆಯ ಅಲ್ಲ. ವಿಶ್ವದ ಐವತ್ತಕ್ಕೂ ಹೆಚ್ಚು ದೇಶಗಳಲ್ಲಿ ಅದರ ಶಾಖೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ ಅವರು ಸಂಘದ ನೋಂದಣಿ ಕುರಿತು ಪ್ರಶ್ನೆಗಳಿಗೆ ಸಂಘದ ಹಿರಿಯರೇ ಉತ್ತರ ನೀಡಲಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ಪ್ರತ್ಯೇಕವಾಗಿ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಇದೇ ವೇಳೆ ಇತಿಹಾಸವನ್ನು ಉಲ್ಲೇಖಿಸಿದ ಕೋಟ ಶ್ರೀನಿವಾಸ ಪೂಜಾರಿ, "RSS ನ್ನು ಜವಾಹರ್ ಲಾಲ್ ನೆಹರು ನಿಷೇಧಿಸಿದ್ದರು. ಬಳಿಕ ಗಣರಾಜ್ಯೋತ್ಸವ ಪಥಸಂಚನದಲ್ಲಿ ಭಾಗವಹಿಸಲು ಆಹ್ವಾನ ನೀಡಬೇಕಾಯಿತು. ಇಂದಿರಾ ಗಾಂಧಿ ಕೂಡ ಸಂಘವನ್ನು ನಿಷೇಧಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಲಿಲ್ಲ" ಎಂದು ಹೇಳಿದರು.
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಲ್ಲರನ್ನೂ ಒಟ್ಟಾಗಿ ಕೊಂಡಯುವ ಬಗ್ಗೆ ಮಾತನಾಡುತ್ತಾರೆ. ಆದರೆ ಅಪಪ್ರಚಾರ ಮಾಡುವ ವ್ಯಕ್ತಿಯನ್ನು ಗೃಹ ಸಚಿವರನ್ನಾಗಿ ಮಾಡಲಾಗಿದೆ ಎಂದು ಆರೋಪಿಸಿದವರು, RSS ಗೆ ಕಿರುಕುಳ ನೀಡುವ ಪ್ರಯತ್ನಗಳ ಬಗ್ಗೆ ಮುಖ್ಯಮಂತ್ರಿ ಗಮನಹರಿಸಬೇಕು ಎಂದು ಆಗ್ರಹಿಸಿದರು.
"ಪ್ರಿಯಾಂಕ್ ಖರ್ಗೆ ತಮ್ಮ ಇತಿಮಿತಿಯೊಳಗೆ ಕೆಲಸ ಮಾಡಬೇಕು. RSS ಯಾವುದೇ ರಾಷ್ಟ್ರ ವಿರೋಧಿ ಚಟುವಟಿಕೆ ನಡೆಸುವ ಸಂಘಟನೆ ಅಲ್ಲ. ಈ ವಿಚಾರವನ್ನು ಪ್ರಿಯಾಂಕ್ ಖರ್ಗೆ ಅರ್ಥ ಮಾಡಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ" ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
RSS ನೊಂದಣಿ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ಆರೋಪ ಮತ್ತು ಪ್ರತ್ಯಾಾರೋಪಗಳು ತೀವ್ರಗೊಂಡಿದ್ದು, ಈ ವಿವಾದ ರಾಜ್ಯರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
Also Read:
ಫುಟ್ಬಾಲ್ ನ ಇಬ್ಬರು ದಿಗ್ಗಜರು: ಫಿಫಾ ವಿಶ್ವ ಕಪ್ ನಲ್ಲಿ ಮೆಸ್ಸಿ ಮತ್ತು ರೊನಾಲ್ಡೊ ಯಾರು ಬೆಸ್ಟ್?