<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನಕ್ಕೆ ಪ್ರಿಯಾಂಕ ಗಾಂಧಿ ಬೆಂಬಲ?

ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನಕ್ಕೆ ಪ್ರಿಯಾಂಕ ಗಾಂಧಿ ಬೆಂಬಲ?
Summary: The debate over the post of Chief Minister has intensified again in Karnataka politics. During a meeting of Congress leaders held in Delhi, news is doing the rounds that Priyanka Gandhi Vadra has expressed support for giving the CM post to Deputy Chief Minister DK Shivakumar.

BELAGAVI NEWS :

ಕರ್ನಾಟಕದ ನಾಯಕತ್ವ ಬದಲಾವಣೆ ವಿಚಾರವಾಗಿ ಅಂತಿಮ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯ ನಡುವೆ ಕಾಂಗ್ರೆಸ್ ಹೈಕಮಾಂಡ್ ಇಂದು ರಾಷ್ಟ್ರ ರಾಜ್ಯಧಾನಿ ಹೊಸ ದಿಲ್ಲಿಯಲ್ಲಿ ಸರಣಿ ಸಭೆಗಳನ್ನು ನಡೆಸಿದೆ.

ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರ ಸಮ್ಮುಖದಲ್ಲಿ,ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಸಭೆ ನಡೆಸಿ ತಮ್ಮ ನಿಲುವು ಮತ್ತು ಬೇಡಿಕೆಗಳನ್ನು ಹೈಕಮಾಂಡ್ ಮುಂದೆ ಮಂಡಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸಭೆಗಳಲ್ಲಿ ನಾಯಕತ್ವ ಬದಲಾವಣೆ,ಸರ್ಕಾರದ ಮುಂದಿನ ಕಾರ್ಯತಂತ್ರ ಮತ್ತು ಪಕ್ಷದ ಒಳಗಿನ ಸಮತೋಲನದ ಕುರಿತಾಗಿ ಚರ್ಚೆಗಳು ನಡೆದಿದೆ ಎಂದು ಮೂಲಗಳು ಹೇಳುತ್ತಿವೆ.ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಶೀಘ್ರದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Sponsored

ಇದೇ ವೇಳೆ,ಕಾಂಗ್ರೆಸ್ ಮೂಲಗಳ ಪ್ರಕಾರ,ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿಯವರು ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಮಾಹಿತಿಯು ಹರಿದಾಡುತ್ತಿದೆ.ಆದರೆ ಈ ಕುರಿತು ಅಧಿಕೃತವಾಗಿ ಯಾವುದೇ ಘೋಷಣೆ ಇನ್ನೂ ಬಂದಿಲ್ಲ.

ಈ ಬೆಳವಣಿಗೆಗಳು ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ತೀವ್ರ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದೆ.

ವರಿಷ್ಠರ ಮುಂದೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಂಡಿಸಿರುವ ಬೇಡಿಕೆಗಳು ಬಾರಿ ಕುತೂಹಲ ಮೂಡಿಸಿದ್ದು,ಸಿದ್ದರಾಮಯ್ಯ ಬಣ ಕೇವಲ ಸಂಪುಟ ಪುನರ್ ರಚನೆ ಬೇಡಿಕೆ ಇಟ್ಟಿದ್ದರೆ,ಡಿಕೆ ಶಿವಕುಮಾರ್ ಬಣ ಮುಖ್ಯಮಂತ್ರಿ ಬದಲಾವಣೆ ಬೇಡಿಕೆ ಮಂಡಿಸಿದೆ.ಈ ಬಗ್ಗೆ ವರಿಷ್ಠರು ಇಬ್ಬರು ನಾಯಕರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿದ್ದು,ಅಂತಿಮ ತೀರ್ಮಾನ ಕೈಗೊಳ್ಳಲು ಮತ್ತೊಂದು ಸುತ್ತಿನ ಸಭೆ ನಡೆಸುವ ನಿರ್ಧಾರಕ್ಕೆ ಬಂದಿದ್ದಾರೆ.

ಈ ಮಧ್ಯೆ ಕಾಂಗ್ರೆಸ್ ಮೂಲಗಳ ಪ್ರಕಾರ,ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸಿದ್ದಾರೆ ಎಂದು ಮಾಹಿತಿ ಹರಿದಾಡುತ್ತಿದೆ.

Sponsored

ವರದಿಗಳಂತೆ,ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ತೊಂದರೆ 2028ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ರಾಜಕೀಯವಾಗಿ ಲಾಭವಾಗಬಹುದು ಎಂಬ ಅಭಿಪ್ರಾಯವನ್ನು ಅವರು ಹೈಕಮಾಂಡ್ ಮುಂದೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಆದಾಗ್ಯೂ,ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಇನ್ನೂ ಬಂದಿಲ್ಲ.

ಇದೇ ಸಂದರ್ಭದಲ್ಲಿ,ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳಲಿದ್ದು,ಈ ಕುರಿತು ದೆಹಲಿಯ ಇಂದಿರಾ ಭವನದಲ್ಲಿ ನಿರಂತರ ಸಭೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.ರಾಜ್ಯನಾಯಕತ್ವ ಹಾಗೂ ಸರ್ಕಾರದ ಭವಿಷ್ಯದ ರೂಪುರೇಷಗಳ ಬಗ್ಗೆ ಉನ್ನತ ಮಟ್ಟದ ಚರ್ಚೆಗಳು ಮುಂದುವರೆದಿವೆ.

ಈ ಬೆಳವಣಿಗೆಗಳು ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಕುತೂಹಲವನ್ನು ಹೆಚ್ಚಿಸಿದೆ.

ಡಿಕೆ ಶಿವಕುಮಾರ್ ಗೆ ಪ್ರಿಯಾಂಕ ಗಾಂಧಿ ಬೆಂಬಲಕ್ಕೆ ಕಾರಣ ಏನು? ಕಾಂಗ್ರೆಸ್ ಮೂಲಗಳ ಪ್ರಕಾರ,ಡಿಕೆ ಶಿವಕುಮಾರ್ ಅವರು ಕರ್ನಾಟಕದ ಪ್ರಭಾವಶಾಲಿ ಒಕ್ಕಲಿಗ ಸಮುದಾಯಕ್ಕೆ ಸೇರಿದ ನಾಯಕರಾಗಿರುವುದು ಒಂದು ಪ್ರಮುಖ ಕಾರಣವಾಗಿದೆ.ಜೊತೆಗೆ,ಅವರು ಪಕ್ಷದ ನಿಷ್ಠಾವಂತ ನಾಯಕರೆಂದು ಪರಿಗಣಿಸಲ್ಪಟ್ಟಿದ್ದು,ರಾಜ್ಯದಲ್ಲಿ ಸಂಘಟನಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Sponsored

ಇದೇ ಹಿನ್ನೆಲೆಯಲ್ಲಿ,ಸಿಎಂ ಸ್ಥಾನಕ್ಕೆ ಅವರು ಬೇಡಿಕೆ ನ್ಯಾಯ ಸಮ್ಮತವಾಗಿದೆ ಎಂಬ ಅಭಿಪ್ರಾಯವನ್ನು ಪ್ರಿಯಾಂಕ ಗಾಂಧಿಯವರು ಪಕ್ಷದ ಪರಿಸ್ತರ ಮುಂದೆ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ,ಈ ಬಗ್ಗೆ ಅವರು ಸಾರ್ವಜನಿಕವಾಗಿ ಯಾವುದೇ ಹೇಳಿಕೆ ನೀಡಿಲ್ಲ.

ಬೆಂಬಲದ ಸುದ್ದಿ ಡಿಕೆ ಶಿವಕುಮಾರ್ ಅವರ ಬೆಂಬಲಿಗ ವಲಯದಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಹೈಕಮಾಂಡ್ ಜೊತೆ ನಾಲ್ವತ್ತು ನಿಮಿಷಗಳ ಕ್ಲೋಸ್ಡ್ ಮೀಟಿಂಗ್ ಮಾಡಿರುವ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ಬದಲು ಸಚಿವ ಸಂಪುಟ ಪುನರ್ ರಚನೆಯ ಬೇಡಿಕೆಗಳನ್ನು ಮಂಡಿಸಿದ್ದಾರೆ.ಇದೇ ರೀತಿ ಹೈಕಮಾಂಡ್ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿರುವ ಡಿಕೆ ಶಿವಕುಮಾರ್,ನಾಯಕತ್ವ ಬದಲಾವಣೆ ಕುರಿತು ತಮ್ಮ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ.

ಇನ್ನು ನಾಯಕತ್ವ ಬದಲಾವಣೆ ವಿಚಾರದಲ್ಲಿ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರು, ಸಚಿವ ಸಂಪುಟ ಪುನರ ರಚನೆಯೇ ಪ್ರಮುಖ ವಿಷಯ ಎಂದು ಹೇಳಿದ್ದಾರೆ.

Sponsored

ಅವರು ಸಚಿವ ಸಂಪುಟ ಪುನ ರಚನೆಗೆ ಸಂಬಂಧಿಸಿದ ಬೇಡಿಕೆಯನ್ನು ಮಾತ್ರ ಮುಂದಿಟ್ಟಿದ್ದು,ನಾಯಕತ್ವ ಬದಲಾವಣೆ ಕುರಿತು ಯಾವುದೇ ಹೇಳಿಕೆ ನೀಡಿಲ್ಲ ಎಂದು ತಿಳಿದು ಬಂದಿದೆ.

ಒಟ್ಟಿನಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಉನ್ನತ ಮಟ್ಟದ ಸಭೆಗಳನ್ನು ನಡೆಸುತ್ತಿದ್ದು,ಕರ್ನಾಟಕದ ನಾಯಕತ್ವ ವಿವಾದಕ್ಕೆ ಅಂತಿಮ ತೆರೆ ಎಳೆಯುವ ಸಾಧ್ಯತೆಗಳಿವೆ.ಆದರೆ ಹೈಕಮಾಂಡ್ ಸಿದ್ದರಾಮಯ್ಯ ಪರವಾಗಿ ನಿಲ್ಲುತ್ತದೆಯೇ ಅಥವಾ ಡಿಕೆ ಶಿವಕುಮಾರ್ ಅವರ ಬೇಡಿಕೆಗೆ ಒಪ್ಪಿಗೆ ನೀಡುತ್ತದೆ ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

Also Read:

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಹೊಸ ಬೆಳವಣಿಗೆ: ಹೈಕೋರ್ಟ್ ವಿಚಾರಣೆ ಮುಂದೂಡಿಕೆ

Sponsored
You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online