<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಪ್ರದೀಪ್ ಈಶ್ವರ್ ಗೆ ಸಾರ್ವಜನಿಕರ ಆಕ್ರೋಶ : ತೋಳು ತಟ್ಟಿದ ಬೆನ್ನಲ್ಲೇ ಚಪ್ಪಲಿ ಎಸೆತ ಘಟನೆ

ಪ್ರದೀಪ್ ಈಶ್ವರ್ ಗೆ ಸಾರ್ವಜನಿಕರ ಆಕ್ರೋಶ : ತೋಳು ತಟ್ಟಿದ ಬೆನ್ನಲ್ಲೇ ಚಪ್ಪಲಿ ಎಸೆತ ಘಟನೆ
Summary: During a program held in Chikkaballapur, a slipper was suddenly thrown at MLA Pradeep Eshwar, who was slapped on the arm and twirled his moustache. The video of the incident went viral and has caused a huge debate in the political circles.

Belagavi News:

ಚಿಕ್ಕಬಳ್ಳಾಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಘಟನೆ ಸಂಚಲನ ಮೂಡಿಸಿದೆ. ಘಟನೆಯಿಂದ ಕಾರ್ಯಕ್ರಮದ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿದ್ದ ಪೊಲೀಸರು ಹಾಗೂ ಕಾರ್ಯಕರ್ತರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಭಾಷಣದ ವೇಳೆ ಶಾಸಕ ಪ್ರದೀಪ್ ಈಶ್ವರ ತೋಳು ತಟ್ಟಿ ಮೀಸೆ ತಿರುಗಿಸುವ ಮೂಲಕ ಮಾತನಾಡುತ್ತಿದ್ದ ಸಂದರ್ಭದಲ್ಲೇ ಏಕಾಏಕಿ ಚಪ್ಪಲಿಯ ಉಸೆಯಲಾಗಿದೆ. ಚಪ್ಪಲಿ ವೇದಿಕೆಯತ್ತ ಎಸೆಯಲ್ಪಟ್ಟಿದ್ದು, ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗುತ್ತಿವೆ.

ಘಟನೆಯ ನಂತರ ಭದ್ರತೆಯನ್ನು ಬಿಗಿಗೊಳಿಸಿದ ಪೊಲೀಸರು ಚಪ್ಪಲಿ ಎಸೆದ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಘಟನೆಯ ಹಿಂದಿನ ಕಾರಣಗಳು ಕುರಿತು ತನಿಖೆ ಮುಂದುವರೆದಿದೆ.

ಈ ಘಟನೆಯ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ವಿವಿಧ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ - ಕಾಂಗ್ರೆಸ್ ಸಂಘರ್ಷ ತೀವ್ರ - ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಪ್ರತಿಭಟನೆ ಉದ್ವಿಗ್ನ ವಾತಾವರಣ:

ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ರಾಜಕೀಯ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರನ್ನು ಕೇಂದ್ರವಾಗಿರಿಸಿಕೊಂಡು ನಡೆದ ಪ್ರತಿಭಟನೆ ಹಾಗೂ ಪರಸ್ಪರ ವಾಗ್ವಾದದಿಂದ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಇತ್ತೀಚಿನ ಬೆಳವಣಿಗೆಗಳು ರಾಜಕೀಯ ವಾತಾವರಣವನ್ನು ಮತ್ತಷ್ಟು ಕಾವೇರಿಸಿದ್ದು, ಎರಡು ಪಕ್ಷಗಳ ನಾಯಕರು ಪರಸ್ಪರ ಆರೋಪ ಮತ್ತು ಪ್ರತ್ಯಾಾರೋಪಗಳಲ್ಲಿ ತೊಡಗಿಸಿದ್ದಾರೆ. ಘಟನೆಯ ವೇಳೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.

ಶಾಸಕ ಪ್ರದೀಪ್ ಈಶ್ವರ ಅವರನ್ನು ಗುರಿಯಾಗಿಸಿಕೊಂಡು ನಡೆದ ಪ್ರತಿಭಟನೆ ಹಾಗೂ ನಂತರ ನಡೆದ ಬೆಳವಣಿಗೆಗಳು ಜಿಲ್ಲೆಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗುತ್ತಿದ್ದು, ಸಾರ್ವಜನಿಕರನ್ನು ಭಾರಿ ಚರ್ಚೆಗೆ ಗ್ರಾಸವಾಗಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ಪರಿಸ್ಥಿತಿಯ ಮೇಲೆ ನಿಗ ವಹಿಸಿದ್ದಾರೆ. ರಾಜಕೀಯ ಉದ್ವಿಗ್ನತೆ ಮತ್ತಷ್ಟು ಹೆಚ್ಚದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಕಾರ್ಯಕ್ರಮದಲ್ಲಿ ಗಲಾಟೆ - ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ:

ಚಿಕ್ಕಬಳ್ಳಾಪುರದಲ್ಲಿ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ರಾಜಕೀಯ ಗದ್ದಲ ಉಂಟಾಗಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಕಾರ್ಯಕ್ರಮ ನಡೆಸುತ್ತಿದ್ದ ವೇಳೆ ಜೆಡಿಎಸ್ ಕಾರ್ಯಕರ್ತರು ಸಭಾಂಗಣಕ್ಕೇ ನುಗ್ಗಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರನ್ನು ವೇದಿಕೆಯಿಂದ ಕೆಳಗಿಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಕಾರ್ಯಕರ್ತರ ಘೋಷಣೆಗಳು ಹಾಗೂ ಪ್ರತಿಭಟನೆಯಿಂದ ಕಾರ್ಯಕ್ರಮ ಅಸ್ತವ್ಯಸ್ತಗೊಂಡಿದ್ದು, ವೇದಿಕೆಯ ಬಳಿ ತೀವ್ರ ವಾಗ್ವಾದವು ನಡೆಯಿತು. ಇದರಿಂದ ಸಭಾಂಗಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಬಳಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ವಾಮೀಜಿ ಮಧ್ಯ ಪ್ರವೇಶಿಸಿ 2 ಪಕ್ಷಗಳ ಕಾರ್ಯಕರ್ತರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ಅವರ ಮನವಿಯ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಕೆಂಪೇಗೌಡ ಕಾರ್ಯಕ್ರಮವನ್ನು ಯಾವುದೇ ಕಹಿತಕರ ಘಟನೆಗಳಿಲ್ಲದೆ ಮುಂದುವರಿಸಲಾಯಿತು.

ಈ ಘಟನೆ ಚಿಕ್ಕಬಳ್ಳಾಪುರ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಸಂಘರ್ಷ ಮತ್ತಷ್ಟು ತೀವ್ರ ಗೊಳ್ಳುವ ಸೂಚನೆ ನೀಡಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಚಿಕ್ಕಬಳ್ಳಾಪುರದಲ್ಲಿ ರಾಜಕೀಯ ಹೈಡ್ರಾಮಾ - ಮೀಸೆ ತಿರುಗಿಸಿ ತೋಳು ತಟ್ಟಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ :

ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ರಾಜಕೀಯ ಸಂಘರ್ಷ ತೀವ್ರಗೊಂಡಿದ್ದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಘಟನೆ ಸಂಚಲನ ಮೂಡಿಸಿದೆ.

ಕೆಂಪೇಗೌಡ ಕಾರ್ಯಕ್ರಮದ ಬಳಿಕ ತಮ್ಮ ವಿರುದ್ಧ ಘೋಷಣೆ ಕೂಗುತ್ತಿದ್ದ ಜೆಡಿಎಸ್ ಕಾರ್ಯಕರ್ತರತ್ತ ಶಾಸಕ ಪ್ರದೀಪ್ ಈಶ್ವರ್ ಮೀಸಿ ತಿರುಗಿಸಿ, ತೋಳು ತಟ್ಟುವ ಮೂಲಕ ಪ್ರತಿಕ್ರಿಯೆ ನೀಡಿದರು ಎನ್ನಲಾಗಿದೆ. ಇದರಿಂದ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿತು.

ಬಳಿಕ ಪ್ರದೀಪ್ ಈಶ್ವರ್ ತಮ್ಮ ಕಾರಿನ ಸನ್ ರೂಫ್ ಮೂಲಕ ಬೆಂಬಲಿಗರಿಗೆ ಕೈಬೀಸುತ್ತ ಮೆರವಣಿಗೆಯಲ್ಲಿ ಸಾಗುತ್ತಿದ್ದ ವೇಳೆ, ಕೆಲವರು ಅವರತ್ತ ಚಪ್ಪಲಿ ಎಸೆದಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಗದ್ದಲ ಉಂಟಾದರೂ, ಪೊಲೀಸರು ತಕ್ಷಣ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಚಪ್ಪಲಿ ಎಸೆದ ಆರೋಪದ ಮೇಲೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

Also Read:

ಬಿಜೆಪಿಯಲ್ಲಿ ಒಳಜಗಳ ಸ್ಪೋಟ: ನಾಯಕರ ವಾಗ್ಯುದ್ಧ ಹೊಸ ಹಂತಕ್ಕೆ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online