<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಮಾದಕ ವಸ್ತು ತಡೆಗಟ್ಟಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ: ನಟ ವಿನಯ್ ರಾಜ್ ಕುಮಾರ್

ಮಾದಕ ವಸ್ತು ತಡೆಗಟ್ಟಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ: ನಟ ವಿನಯ್ ರಾಜ್ ಕುಮಾರ್
Summary: Actor Vinay Rajkumar has called for public participation to control drugs and build a drug-free society. Know his important message related to awareness against drugs, role of youth, responsibility of society and prevention of drug addiction here.

Belagavi News:

ಮೈಸೂರು: ಮಾದಕ ವಸ್ತುಗಳ ನಿಯಂತ್ರಣ ಮತ್ತು ನಶೆಮುಕ್ತ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ ಎಂದು ನಟ ವಿನಯ್ ರಾಜ್ ಕುಮಾರ್ ಅಭಿಪ್ರಾಯಪಟ್ಟರು.

ನಗರ ಪೊಲೀಸ್ ಇಲಾಖೆಯ ವತಿಯಿಂದ ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಆರೋಜಿಸಿದ್ದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ನಡೆದ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ಮಾದಕ ದ್ರವ್ಯಗಳ ಬಳಕೆ ಹೆಚ್ಚುತ್ತಿರುವುದು ಆತಂಕವಾಗಿ ಬೆಳವಣಿಗೆಯಾಗಿದೆ. ಡ್ರಗ್ಸ್ ಸಮಸ್ಯೆಯನ್ನು ಕೇವಲ ಪೋಲಿಸ್ ಇಲಾಖೆಯಿಂದ ನಿಯಂತ್ರಿಸುವುದು ಕಷ್ಟ. ಸಾರ್ವಜನಿಕರು ಜಾಗೃತರಾಗಿದ್ದು. ತಮ್ಮ ಸುತ್ತಮುತ್ತ ನಡೆಯುವ ಮಾದಕ ದ್ರವ್ಯ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

Sponsored

ಮಾದಕ ವ್ಯಸನಕ್ಕೆ ಒಳಗಾದವರನ್ನು ಶಿಕ್ಷೆಸುವುದಕ್ಕಿಂತ ಕೌನ್ಸೆಲಿಂಗ್ ಹಾಗೂ ರಿಹ್ಯಾಬಿಲಿಟೇಷನ್ (Rehabilitation) ಕೇಂದ್ರಗಳ ಮೂಲಕ ಅವರಿಗೆ ಚಿಕಿತ್ಸೆ ಮತ್ತು ಅರಿವು ಮೂಡಿಸಿ ಮುಖ್ಯವಾಹಿನಿಗೆ ತರಬಹುದು. ವಿಶೇಷವಾಗಿ ಯುವಜನರು ಹಾಗೂ ವಿದ್ಯಾರ್ಥಿಗಳು ಮಾದಕ ದ್ರವ್ಯಗಳಿಂದ ಉಂಟಾಗುವ ದುಷ್ಟರಿಣಾಮಗಳ ಬಗ್ಗೆ ಹೆಚ್ಚಿನ ಜಾಗೃತಿ ಹೊಂದುವುದು ಅಗತ್ಯ ಎಂದು ವಿನಯ್ ರಾಜ್ ಕುಮಾರ್ ತಿಳಿಸಿದರು.

ಈ ವೇಳೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಮಕ್ಕಳ ಚಟುವಟಿಕೆಗಳ ಬಗ್ಗೆ ಪೋಷಕರು ಹೆಚ್ಚಿನ ಗಮನಹರಿಸಬೇಕು. ಡ್ರಗ್ಸ್ ಸೇವನೆಯ ಲಕ್ಷಣಗಳು ಕಂಡು ಬಂದರೆ ತಕ್ಷಣ ಸೂಕ್ತ ಚಿಕಿತ್ಸೆ ಮತ್ತು ಸಮಾಲೋಚನೆ ನೀಡುವ ಮೂಲಕ ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಬಹುದು ಎಂದರು.

ಪೊಲೀಸ್ ಇಲಾಖೆ ಪ್ರತಿದಿನ ಡ್ರಾಗ್ಸ್ ಜಾಲದ ವಿರುದ್ಧ ನಿರಂತರ ಕಾರ್ಯಚರಣೆ ನಡೆಸುತ್ತಿದೆ. ಸಾರ್ವಜನಿಕರು ತಮ್ಮ ಪ್ರದೇಶದಲ್ಲಿ ನಡೆಯುವ ಹನುಮಾನಾಸ್ವದ ಮಾದಕ ದ್ರವ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರೆ ಡ್ರಗ್ಸ್ ವಿರುದ್ಧದ ಹೋರಾಟ ಮತ್ತಷ್ಟು ಪರಿಣಾಮಕಾರಿಯಾಗಲಿದೆ ಎಂದು ಅವರು ಮನವಿ ಮಾಡಿದರು.

ನಗರ ಪೊಲೀಸ್ ಇಲಾಖೆಯ ವತಿಯಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ನಡೆದ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

Sponsored

ಇತ್ತೀಚಿನ ದಿನಗಳಲ್ಲಿ ಯಾವಜನರಲ್ಲಿ ಡ್ರಗ್ಸ್ ಸೇವನೆ ಹಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ಸಮಸ್ಯೆಯನ್ನು ಕೇವಲ ಪೊಲೀಸ್ ಇಲಾಖೆಯಿಂದ ನಿಯಂತ್ರಿಸುವುದು ಸಾಧ್ಯವಿಲ್ಲ. ಸಾರ್ವಜನಿಕರು ತಮ್ಮ ಸುತ್ತಮುತ್ತ ನಡೆಯುವ ಮಾದಕ ದ್ರವ್ಯ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ, ಕೌನ್ಸೆಲಿಂಗ್ ಹಾಗೂ ರಿಹ್ಯಾಬಿಲಿಟೇಷನ್ ಕೇಂದ್ರಗಳ ಮೂಲಕ ವ್ಯಸನಕ್ಕೂಳಗಾದವರನ್ನು ಮುಖ್ಯ ವಾಹಿನಿಗೆ ತರಲು ಸಾಧ್ಯ ಎಂದು ಹೇಳಿದರು.

ಯುವಕರು, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಮಾದಕ ದ್ರವ್ಯಗಳ ದುಷ್ಟರಿಣಾಮಗಳ ಬಗ್ಗೆ ಜಾಗೃತರಾಗಿರುವುದು ಅತ್ಯಂತ ಮುಖ್ಯ ಕುಟುಂಬ, ಶಿಕ್ಷಣ ಸಂಸ್ಥೆಗಳು ಹಾಗೂ ಸಮಾಜ ಒಗಟ್ಟಾಗಿ ಕಾರ್ಯನಿರ್ವಹಿಸಿದರೆ ಡ್ರಗ್ಸ್ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದು ವಿನಯ್ ರಾಜ್ ಕುಮಾರ್ ಅಭಿಪ್ರಾಯ ಪಟ್ಟರು.

ಈ ವೇಳೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಪೋಷಕರು ತಮ್ಮ ಮಕ್ಕಳ ಚಟುವಟಿಕೆಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಡ್ರಗ್ಸ್ ಸೇವನೆಯ ಲಕ್ಷಣಗಳು ಕಂಡುಬಂದರೆ ತಕ್ಷಣ ಚಿಕಿತ್ಸೆ ಹಾಗೂ ಸಮಾಲೋಚನೆ ನೀಡುವ ಮೂಲಕ ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಬಹುದು ಎಂದು ಹೇಳಿದರು.

ಪೊಲೀಸ್ ಇಲಾಖೆ ಡ್ರಗ್ಸ್ ಜಾಲದ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ಸಾರ್ವಜನಿಕರು ತಮ್ಮ ಪ್ರದೇಶಗಳಲ್ಲಿ ನಡೆಯುವ ಅನುಮಾನಾಸ್ಪದ ಮಾದಕ ದ್ರವ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರೆ ಡ್ರಗ್ಸ್ ವಿರುದ್ಧದ ಹೋರಾಟ ಮತ್ತಷ್ಟು ಬಲಗೊಳ್ಳಲಿದೆ ಎಂದು ಅವರು ತಿಳಿಸಿದರು.

Sponsored

ಕಾರ್ಯಕ್ರಮದಲ್ಲಿ ಉಪ ಪೊಲೀಸ್ ಆಯುಕ್ತರಾದ ಡಾ.ಹರ್ಷ ಪ್ರಿಯಂವದ, ಸುಂದರ್ ರಾಜ್ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಜಾಗೃತಿ ಜಾಥಾದಲ್ಲಿ ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಪೊಲೀಸ್ ಸಿಬ್ಬಂದಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸರ್ಕಾರದ ಕಟ್ಟುನಿಟ್ಟಿನ ಕ್ರಮ:

ರಾಜ್ಯದಲ್ಲಿ ಮಾದಕ ದ್ರವ್ಯಗಳ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿ ಯುವ ಪೀಳಿಗೆಯನ್ನು ಈ ಪಿಡುಗಿನಿಂದ ರಕ್ಷಿಸಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಇತ್ತೀಚೆಗೆ ತಿಳಿಸಿದ್ದರು.

Sponsored

ನಗರ ಪ್ರದೇಶಗಳಷ್ಟೇ ಅಲ್ಲದೆ ಗ್ರಾಮೀಣ ಭಾಗಗಳಲ್ಲಿಯೂ ಡ್ರಗ್ಸ್ ದುಷ್ಟರಿಣಾಮಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ.ಈ ನಿಟ್ಟಿನಲ್ಲಿ ಶಾಲೆಗಳು, ಕಾಲೇಜುಗಳು, ಕಾರ್ಖಾನೆಗಳು ಹಾಗೂ ಗ್ರಾಮ ಪಂಚಾಯಿತಿಗಳ ಮೂಲಕ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Also Read:

ರಾಜ್ಯದಲ್ಲಿ ಮಳೆಯ ಬರ ಮುಂದುವರಿಕೆ ! ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ? ಇಲ್ಲಿದೆ ಸಂಪೂರ್ಣ ಮಾಹಿತಿ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online