Belagavi News:
ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಗೃಹ ಕಚೇರಿ ಕೃಷ್ಣಾ ಅಧಿಕೃತವಾಗಿ ಕಾರ್ಯಾರಂಭಗೊಂಡಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ಹಾಗೂ ಆಡಳಿತಾತ್ಮಕ ಕಾರ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ಈ ಗ್ರಹ ಕಚೇರಿಯನ್ನು ಆರಂಭಿಸಲಾಗಿದೆ.
"ಕೃಷ್ಣಾ" ಗೃಹ ಕಚೇರಿ ಮೂಲಕ ಜನರೊಂದಿಗೆ ನೇರ ಸಂಪರ್ಕ ಸಾಧಿಸುವುದರ ಜೊತೆಗೆ, ವಿವಿಧ ಇಲಾಖೆಗಳ ಕಾರ್ಯ ಚಟುವಟಿಕೆಗಳ ಮೇಲ್ವಿಚಾರಣೆಯು ಸುಗಮವಾಗಲಿದೆ ಎಂದು ತಿಳಿದುಬಂದಿದೆ. ರಾಜ್ಯದ ಆಡಳಿತ ವ್ಯವಸ್ಥೆಗೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ ಈ ಹೆಜ್ಜೆ ಮಹತ್ವದ್ದಾಗಿದೆ.
ಸಿಎಂ ಡಿಕೆ ಶಿವಕುಮಾರ್ ಅವರ ಈ ಹೊಸ ಗ್ರಹ ಕಚೇರಿ ರಾಜ್ಯ ರಾಜಕೀಯ ವಲಯದಲ್ಲೂ ಗಮನ ಸೆಳೆದಿದ್ದು, ಜನಸೇವೆಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.
ಸಿಎಂ ಡಿಕೆ ಶಿವಕುಮಾರ್ ಗೃಹ ಕಚೇರಿ ಕೃಷ್ಣಾ ಕಾರ್ಯಾರಂಭ - ವಿಶೇಷ ಪೂಜೆ ಮೂಲಕ ಆಡಳಿತಾತ್ಮಕ ಕಾರ್ಯಾಗಳಿಗೆ ಚಾಲನೆ:
ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಧಿಕೃತ ಗೃಹ ಕಚೇರಿ 'ಕೃಷ್ಣಾ' ಇಂದು ಅಧಿಕೃತವಾಗಿ ಕಾರ್ಯ ಆರಂಭ ಮಾಡಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಶೇಷ ಪೂಜೆ ಸಲ್ಲಿಸಿ, ತಮ್ಮ ಆಡಳಿತಾತ್ಮಕ ಕಾರ್ಯಗಳಿಗೆ ಶುಭಾರಂಭ ಮಾಡಿದರು.
ರಾಜ್ಯದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಚುರುಕುಗೊಳಿಸುವ ಹಾಗೂ ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಸಾಧಿಸುವ ಉದ್ದೇಶದಿಂದ 'ಕೃಷ್ಣಾ' ಗೃಹ ಕಚೇರಿಯನ್ನು ಕಾರ್ಯಾಚರಣೆಗೆ ತರಲಾಗಿದೆ. ಪೂಜೆ ನೆರವೇರಿಸಿದ ಬಳಿಕ ಕಚೇರಿಯ ವಿವಿಧ ವಿಭಾಗಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿ, ಅಧಿಕಾರಿಗಳೊಂದಿಗೆ ಪ್ರಾಥಮಿಕ ಸಭೆ ನಡೆಸಿ ಆಡಳಿತಾತ್ಮಕ ವಿಚಾರಗಳ ಕುರಿತು ಚರ್ಚಿಸಿದರು.
'ಕೃಷ್ಣಾ' ಗೃಹ ಕಚೇರಿ ಮೂಲಕ ಸಾರ್ವಜನಿಕರು ಅಹವಾಲುಗಳಿಗೆ ತ್ವರಿತ ಸ್ಪಂದನೆ, ವಿವಿಧ ಇಲಾಖೆಗಳ ಕಾರ್ಯಗಳ ಮೇಲ್ವಿಚಾರಣೆ ಹಾಗೂ ಸರ್ಕಾರದ ಮಹತ್ವದ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಮುಖ್ಯಮಂತ್ರಿ ನಿವಾಸದಲ್ಲೇ ಕಾರ್ಯ ನಿರ್ವಹಿಸುವ ಈ ಕಚೇರಿ ಸರ್ಕಾರದ ದೈನಂದಿನ ಕಾರ್ಯ ಚಟುವಟಿಕೆಗಳಿಗೆ ಪ್ರಮುಖ ಕೇಂದ್ರವಾಗಲಿದೆ ಎಂದು ಹೇಳಲಾಗಿದೆ.
ರಾಜ್ಯದ ಅಭಿವೃದ್ಧಿ, ಜನಪದ ಯೋಜನೆಗಳು ಹಾಗೂ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಗ್ರಹ ಕಚೇರಿ ಮಹತ್ವದ ಪಾತ್ರ ವಹಿಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯ ಆಡಳಿತಕ್ಕೆ ಹೊಸ ಚೈತನ್ಯ ದೊರೆಯಲಿದ್ದು, ಜನಸೇವೆಗೆ ಮತ್ತಷ್ಟು ವೇಗ ಸಿಗಲಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ಕುಮಾರಕೃಪಾ ರಸ್ತೆಯಲ್ಲಿರುವ 'ಕೃಷ್ಣಾ' ಗೃಹ ಕಚೇರಿ ರಾಜ್ಯ ಆಡಳಿತದ ಹೊಸ ಕೇಂದ್ರಬಿಂದು :
ನಗರದ ಕುಮಾರಕೃಪಾ ರಸ್ತೆಯಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಧಿಕೃತ ಗೃಹ ಕಚೇರಿ ಕೃಷ್ಣಾ ಇನ್ನು ಮುಂದೆ ರಾಜ್ಯದ ಆಡಳಿತಾತ್ಮಕ ಚಟುವಟಿಕೆಗಳ ಪ್ರಮುಖ ಕೇಂದ್ರ ಬಿಂದುವಾಗಿ ಕಾರ್ಯನಿರ್ವಹಿಸಲಿದೆ. ಸರ್ಕಾರದ ಮಹತ್ವದ ನಿರ್ಧಾರಗಳು, ಆಡಳಿತಾತ್ಮಕ ಸಭೆಗಳು ಹಾಗೂ ಸಾರ್ವಜನಿಕ ಸಮಸ್ಯೆಗಳತ್ವ ಪರಿಹಾರಕ್ಕೆ ಈ ಕಛೇರಿ ಪ್ರಮುಖ ವೇದಿಕೆಯಾಗಲಿದೆ.
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಶೇಷ ಪೂಜೆ ನೆರವೇರಿಸುವ ಮೂಲಕ ಕಚೇರಿಯ ಕಾರ್ಯಾಚರಣೆಗೆ ಚಾಲನೆ ನೀಡಿದ್ದು, ಜನಸ್ನೇಹಿ ಆಡಳಿತ ಮತ್ತು ವೇಗವಾದ ನಿರ್ಧಾರ ಪ್ರಕ್ರಿಯೆಗೆ ಒತ್ತು ನೀಡುವ ಸಂದೇಶ ರವಾನಿಸಿದ್ದಾರೆ. 'ಕೃಷ್ಣಾ' ಗೃಹ ಕಚೇರಿ ಮೂಲಕ ವಿವಿಧ ಇಲಾಖೆಗಳ ಕಾರ್ಯ ಚಟುವಟಿಕೆಗಳ ಮೇಲ್ವಿಚಾರಣೆ, ಜನರ ಹವಾಲುಗಳ ಸ್ವೀಕಾರ ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು.
ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ಚೈತನ್ಯ ನೀಡುವ ಉದ್ದೇಶದಿಂದ ಆರಂಭವಾಗಿರುವ ಈ ಕಚೇರಿ, ಮುಖ್ಯಮಂತ್ರಿ ಕಚೇರಿಯ ವಿಸ್ತೃತ ಆಡಳಿತ ಕೇಂದ್ರವಾಗಿ ಕಾರ್ಯನಿರ್ವಹಿಸಲಿದ್ದು, ಆಡಳಿತ ಮತ್ತು ಸಾರ್ವಜನಿಕರ ನಡುವೆ ಅಂತರವನ್ನು ಕಡಿಮೆ ಮಾಡುವ ನಿರೀಕ್ಷೆ ಮೂಡಿಸಿದೆ.
ಕೃಷ್ಣಾ ಗೃಹಕಚೇರಿಯಲ್ಲಿ ಅಜ್ಜಯ್ಯನ ಭಾವಚಿತ್ರ - ಎಲ್ಲರ ಗಮನ ಸೆಳೆದ ವಿಶೇಷತೆ :
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಧಿಕೃತ ಗೃಹಕಚೇರಿ ಕೃಷ್ಣಾ ಕಾರ್ಯ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿನ ಹಲವು ವಿಶೇಷ ಅಂಶಗಳು ಗಮನ ಸೆಳೆಯುತ್ತಿವೆ. ಅವುಗಳಲ್ಲಿ ಪ್ರಮುಖವಾಗಿ ಅಜ್ಜಯ್ಯನ ಭಾವಚಿತ್ರವನ್ನು ಕಚೇರಿಯಲ್ಲಿ ಅಳವಡಿಸಿರುವುದು ವಿಶೇಷ ಆಕರ್ಷಣೆಯಾಗಿ ಕಂಡುಬಂದಿದೆ.
ಆಧ್ಯಾತ್ಮಿಕ ನಂಬಿಕೆ ಮತ್ತು ಸಂಸ್ಕೃತಿಯ ಮೇಲಿನ ಗೌರವವನ್ನು ಪ್ರತಿಬಿಂಬಿಸುವಂತೆ ಕಚೇರಿಯಲ್ಲಿ ಅಜ್ಜಯ್ಯನ ಭಾವಚಿತ್ರಕ್ಕೆ ಸ್ಥಾನ ನೀಡಲಾಗಿದೆ. ಕಚೇರಿಯ ಕಾರ್ಯಾ ರಂಭಕ್ಕೂ ಮುನ್ನ ವಿಶೇಷ ಪೂಜೆ ನೆರವೇರಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶುಭ ಸಂಕೇತವಾಗಿ ಭಾವಚಿತ್ರದ ಸಮ್ಮುಖದಲ್ಲಿ ಪ್ರಾರ್ಥನೆ ಸಲ್ಲಿಸಿರುವುದು ಗವನ ಅರ್ಹವಾಗಿದೆ.
'ಕೃಷ್ಣಾ' ಗೃಹ ಕಚೇರಿ ಈಗ ರಾಜ್ಯದ ಆಡಳಿತಾತ್ಮಕ ಚಟುವಟಿಕೆಗಳ ಪ್ರಮುಖ ಕೇಂದ್ರ ಬಿಂದುವಾಗಿದ್ದು, ಕಚೇರಿಯಲ್ಲಿನ ಆಧ್ಯಾತ್ಮಿಕ ಸ್ಪರ್ಶ ಸಾರ್ವಜನಿಕರು ಹಾಗೂ ರಾಜಕೀಯ ವಲಯದವರ ಗಮನ ಸೆಳೆದಿದೆ.
Also Read: