ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್ನ ಚಾರ್ಜ್ಶೀಟ್ ರೆಡಿ ಘಟನೆಗೆ RCB
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ 11 ಜನರ ಸಾವಿಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಿದ್ಧಪಡಿಸಿದ್ದಾರೆ. ಆರ್ಸಿಬಿ, ಕೆಎಸ್ಸಿಎ ಮತ್ತು ಡಿಎನ್ಎ ಸಂಸ್ಥೆಗಳು ಘಟನೆಗೆ ನೇರ ಹೊಣೆ ಎಂದು ತನಿಖೆ ವೇಳೆ ಸಾಬೀತಾಗಿದೆ. ಸರಿಯಾದ ಯೋಜನೆ ಇಲ್ಲದಿರುವುದು, ಟಿಕೆಟ್ ಗೊಂದಲ ಹಾಗೂ ಭದ್ರತಾ ವೈಫಲ್ಯ ಸಾವಿಗೆ ಕಾರಣ ಎಂದು ಚಾರ್ಜ್ಶೀಟ್ನಲ್ಲಿ ತಿಳಿಸಲಾಗಿದೆ. 2,200ಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧವಾಗಿದೆ.
ಬೆಂಗಳೂರು:
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ 11 ಜನರ ಸಾವಿನ ಕೇಸ್ ಸಂಬಂಧ ತನಿಖೆ ಮುಗಿಸಿ ಚಾರ್ಜ್ಶೀಟ್ ಸಲ್ಲಿಕೆಗೆ ಸಿಐಡಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ. 2,200ಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ರೆಡಿಯಾಗಿದ್ದು, ಹನ್ನೊಂದು ಜನರ ಸಾವಿಗೆ ನೇರ ಹೊಣೆ RCB. ತನಿಖೆ ವೇಳೆ RCB, DNA, KSCA ವಿರುದ್ಧ ಹಲವು ಸಾಕ್ಷ್ಯಗಳು ಪತ್ತೆಯಾಗಿದೆ ಎನ್ನಲಾಗಿದೆ.
ಟಿಕೆಟ್ ಬಗ್ಗೆ ಆರ್ಸಿಬಿ ಗೊಂದಲ ಹುಟ್ಟಿಸಿದ್ದೇ, ಘಟನೆಗೆ ಮೊದಲ ಕಾರಣ. ಅಲ್ಲದೇ ಡಿಎನ್ಎ ಕಡೆಯಿಂದ ಯಾವುದೇ ಸೆಕ್ಯುರಿಟಿ ಪ್ಲಾನ್ ಇರಲಿಲ್ಲ. ಖಾಸಗಿ ಸೆಕ್ಯುರಿಟಿ ಏಜೆನ್ಸಿ ಬಳಕೆಯೂ ವಿಫಲವಾಗಿದೆ. ಪೊಲೀಸರ ಜೊತೆ ಕೂಡ ಸರಿಯಾದ ಮಾತುಕತೆ ನಡೆಸದೆ ಕಾರ್ಯಕ್ರಮ ಆಯೋಜನೆ ಮಾಡಿರೋದು ತನಿಖೆ ವೇಳೆ ಗೊತ್ತಾಗಿದೆ ಎನ್ನಲಾಗಿದೆ. ಎಲ್ಲಾ ಗೇಟ್ ಬಳಿಯ ಸಿಸಿಟಿವಿ ಪರಿಶೀಲನೆ, ವಿಡಿಯೋದಲ್ಲಿದ್ದವರ ಹೇಳಿಕೆ, ಪ್ರತೀ ಗೇಟ್ನ ಸೆಕ್ಯುರಿಟಿ, ಡ್ಯೂಟಿಗೆ ಹಾಜರಾಗಿದ್ದ ಪೊಲೀಸರ ಹೇಳಿಕೆಗಳನ್ನ ತನಿಖಾ ತಂಡ ದಾಖಲಿಸಿದೆ. ಗಾಯಾಳು ಹೇಳಿಕೆ, ಗಾಯಾಳುಗಳನ್ನ ಸಾಗಿಸಿದವರ ಹೇಳಿಕೆ ಸೇರಿ ನೂರಾರು ಪ್ರತ್ಯಕ್ಷ ಸಾಕ್ಷಿಗಳ ಮಾಹಿತಿ ಚಾರ್ಜ್ಶೀಟ್ನಲ್ಲಿದೆ.
RCB ತಂಡ 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆದ ಹಿನ್ನಲೆ ತಂಡದ ಆಟಗಾರರು ಬೆಂಗಳೂರಿಗೆ ಬಂದಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆದಿತ್ತು. ಈ ಸಂಭ್ರಮಾಚರಣೆ ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣದ ಬಳಿ ಸೇರಿದ್ದ ಪರಿಣಾಮ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರೆ, ಹಲವರು ಅಸ್ವಸ್ಥಗೊಂಡಿದ್ದರು.
ಚಾರ್ಜ್ ಶೀಟ್ ಸಲ್ಲಿಕೆಗೆ ಹೈಕೋರ್ಟ್ನಿಂದ ಗ್ರೀನ್ ಸಿಗ್ನಲ್ ಹಿನ್ನೆಲೆ ತನಿಖೆ ಮುಗಿಸಿ ಸಿಐಡಿ ಚಾರ್ಜ್ ಶೀಟ್ ಸಿದ್ಧಪಡಿಸಿದೆ. ನೂರಾರು ಪ್ರತ್ಯಕ್ಷ ಸಾಕ್ಷಿ, ಸಿಸಿಟಿವಿ, ಗಾಯಾಳುಗಳ ಹೇಳಿಕೆ ದಾಖಲಿಸಲಾಗಿದ್ದು, RCB ಜೊತೆ KSCA, DNA ಘಟನೆಗೆ ನೇರ ಕಾರಣ ಅನ್ನೋದು ತನಿಖೆ ವೇಳೆ ಬಯಲಾಗಿದೆ. ಹೀಗಾಗಿ ಚಾರ್ಜ್ ಶೀಟ್ನಲ್ಲಿ ಮೂರು ಸಂಸ್ಥೆಗಳನ್ನ ಸಿಐಡಿ ನೇರ ಹೊಣೆ ಮಾಡಿದೆ. ಸರಿಯಾದ ಪ್ಲಾನ್ ಇಲ್ಲದೆಯೇ ಕಾರ್ಯಕ್ರಮ ಆಯೋಜನೆ, ಕಾರ್ಯಕ್ರಮ ಆಯೋಜನೆಗೂ ಮುನ್ನ ಸಭೆ ಸರಿಯಾಗಿ ಮಾಡದಿರುವುದು ಸೇರಿ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡದೇ ಇರುವುದು ತನಿಖೆ ವೇಳೆ ಗೊತ್ತಾಗಿದೆ.
ಇನ್ನಷ್ಟು ಓದಿರಿ:
ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆ