<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Corporate

RRB Recruitment 2026: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ

RRB Recruitment 2026: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ
Summary: A great opportunity has been given to job seekers in the Railway Department. The Railway Recruitment Board (RRB) has invited applications for the filling of 11,127 Assistant Loco Pilot (ALP) posts across the country, and applications are being accepted online from interested and eligible candidates. Here are the details of the application process, eligibility and important dates.

belagavi news:

ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿ ಗಾಗಿ ಭರ್ಜರಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. SSLC ಜೊತೆಗೆ ITI, ಡಿಪ್ಲೋಮಾ ಅಥವಾ ಪದವಿ ಅರ್ಹತೆ ಹೊಂದಿರುವ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಮೇ 15 ರಿಂದ ಜೂನ್ 14ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಆದರ್ಶಕ ವೇತನ, ವಿವಿಧ ಭತ್ಯೆಗಳು ಹಾಗೂ ರೈಲ್ವೆ ಇಲಾಖೆಯಲ್ಲಿ ಸ್ಥಿರ ಉದ್ಯೋಗದ ಅವಕಾಶ ಇರುವುದರಿಂದ, ತಾಂತ್ರಿಕ ಹಿನ್ನೆಲೆಯುಳ್ಳ ಯುವಕರಿಗೆ ಇಂದು ಸುವರ್ಣ ಅವಕಾಶವಾಗಿದೆ.

ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ನಿರುದ್ಯೋಗಿ ಯುವಕರಿಗೆ ರೈಲ್ವೆ ನೇಮಕಾತಿ ಮಂಡಳಿ RRB ಭರ್ಜರಿ ಸಿಹಿ ಸುದ್ದಿ ನೀಡಿದೆ 2026 ನೇ ಸಾಲಿನ ನೇಮಕಾತಿ ಪ್ರಕ್ರಿಯೆಯ ಅಂಗವಾಗಿ ದೇಶಾದ್ಯಂತ ಒಟ್ಟು 11,127 ಸಹಾಯಕ ಲೋಕೋ ಪೈಲೆಟ್ ALP ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

Sponsored

ರೈಲ್ವೆ ಇಲಾಖೆಯ ಈ ಬೃಹತ್ ನೇಮಕಾತಿ ಅಭಿಯಾನವು ತಾಂತ್ರಿಕ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಾಗಿದ್ದು ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಲ್ಲಿ ಹೊಸ ಉತ್ಸಾಹ ಮೂಡಿಸಿದೆ.

ಪ್ರಮುಖ ದಿನಾಂಕಗಳು ಮತ್ತು ಹುದ್ದೆಗಳ ವಿವರ:

ರೈಲ್ವೆ ನೇಮಕಾತಿ ಮಂಡಳಿ (RRB) ಪ್ರಕಟಿಸಿರುವ ಅಧಿಸೂಚನೆಯ ಪ್ರಕಾರ, ದೇಶಾದ್ಯಂತ ಒಟ್ಟು 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿ ನಡೆಯಲಿದೆ. ಈ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಪ್ರಕ್ರಿಯೆ ಮೇ 15 ರಿಂದ ಆರಂಭವಾಗಲಿದ್ದು ಜೂನ್ 14ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ .

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

Sponsored

ಅರ್ಜಿ ಸಲ್ಲಿಸಲ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ (SSLC) ಉತ್ತೀರ್ಣರಾಗಿರಬೇಕು. ಜೊತೆಗೆ ಫಿಲ್ಟರ್, ಎಲೆಕ್ಟ್ರಿಷಿಯನ್, ಮೆಕ್ಯಾನಿಕ್ ಸೇರಿದಂತೆ ಸಂಬಂಧಿತ ಟ್ರೇಡ್ ಗಳಲ್ಲಿ ITI ಪೂರ್ಣಗೊಳಿಸಿರಬಹುದು.

ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಅಥವಾ ಆಟೋಮೊಬೈಲ್ ಇಂಜಿನಿಯರಿಂಗ್ ಡಿಪ್ಲೋಮಾ ಅಥವಾ B.E / B.Tech ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅಭ್ಯರ್ಥಿಗಳ ವಯಸ್ಸು 18ರಿಂದ 30 ವರ್ಷಗಳೊಳಗಿರಬೇಕು. ಸರ್ಕಾರದ ನಿಯಮಾನುಸಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ಆಯ್ಕೆ ಪ್ರಕ್ರಿಯೆ ಹಂತಗಳು:

Sponsored

ಸಹಾಯಕ ಲೋಕೋ ಪೈಲಟ್ ALP ಹುದ್ದೆ ಅತ್ಯಂತ ಜವಾಬ್ದಾರಿಯುತ ವಾಗಿರುವುದರಿಂದ ಅಭ್ಯರ್ಥಿಗಳನ್ನು ಹಲವು ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

ಮೊದಲ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT-1) ನಡೆಲಿದ್ದು, ನಂತರ CBT-2 ಪರೀಕ್ಷೆ ನಡೆಸಲಾಗುತ್ತದೆ. ಈ ಎರಡು ಹಂತಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ CBAT (Atitude Test) ಮೂಲಕ ಮಾನಸಿಕ ಸಾಮರ್ಥ್ಯ ಹಾಗೂ ಕಾರ್ಯನಿರ್ವಹಣಾ ಕೌಶಲ್ಯವನ್ನು ಪರೀಕ್ಷಿಸಲಾಗುತ್ತದೆ.

ಇದ್ದರ ಬಳಿಕ ದಾಖಲೆಗಳ ಪರಿಶೀಲನೆ ಮತ್ತು ಅಂತಿಮವಾಗಿ ಕಟ್ಟುನಿಟ್ಟಾದ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ವಿಶೇಷವಾಗಿ ಲೋಕೋ ಪೈಲಟ್ ಹುದ್ದೆಗೆ ಅಭ್ಯರ್ಥಿಗಳ ದೃಷ್ಟಿ ಸಾಮರ್ಥ್ಯ 'A -1' ಮಾನದಂಡಕ್ಕೆ ಅನುಗುಣ ವಾಗಿರುವುದು ಕಡ್ಡಾಯವಾಗಿದೆ.

Sponsored

ಆಕರ್ಷಕ ವೇತನ ಮತ್ತು ಭತ್ಯೆಗಳು:

ರೈಲ್ವೆ ಇಲಾಖೆಯಲ್ಲಿ ಆಯ್ಕೆಯಾಗುವ ಸಹಾಯಕ ಲೋಕೋ ಪೈಲಟ್ ಗಳಿಗೆ ಉತ್ತಮ ವೇತನ ಹಾಗೂ ಹಲವು ಭತ್ಯೆಗಳು ದೊರೆಯಲಿವೆ. ಆರಂಭಿಕವಾಗಿ ₹19,900 ಮೂಲವೇತನ ನೀಡಲಾಗುತ್ತದೆ. ಇದರ ಜೊತೆಗೆ ತುಟ್ಟಿಭತ್ಯೆ (DA), ಮನೆ ಬಾಡಿಗೆ ಭತ್ಯೆ (HRA) ಹಾಗೂ ರೈಲ್ವೆ ಚಾಲನೆ ಸಮಯದ ಆದಾಯದ ಮೇಲೆ ನೀಡಲಾಗುವ 'ರನ್ನಿಂಗ್ ಭತ್ಯೆ 'ಸೇರಿ ಮಾಸಿಕ ವೇತನವು ₹35,000 ರಿಂದ ₹45,000 ರವರೆಗೆ ಇರಬಹುದು.

ಇದರೊಂದಿಗೆ ರೈಲ್ವೆ ಇಲಾಖೆಯ ವೈದ್ಯಕೀಯ ಸೌಲಭ್ಯಗಳು ಪ್ರಯಾಣ ಸೌಲಭ್ಯಗಳು ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಸಿಬ್ಬಂದಿಗೆ ಒದಗಿಸಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

Sponsored

ಅರ್ಹ ಅಭ್ಯರ್ಥಿಗಳು ಆಯಾ ವಲಯದ ಅಧಿಕೃತ ರೈಲ್ವೆ ನೇಮಕಾತಿ ಮಂಡಳಿಯ (RRB) ವೆಬ್ ಸೈಟಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಪರೀಕ್ಷೆಯ ತಾಂತ್ರಿಕ ಮತ್ತು ಸಾಮಾನ್ಯ ಸಾಮರ್ಥ್ಯವನ್ನು ಆಧರಿಸಿರುವುದರಿಂದ, ಅಭ್ಯರ್ಥಿಗಳು ಈಗಿನಿಂದಲೇ ಪಠ್ಯಕ್ರಮದ ಪ್ರಕಾರ ತಯಾರಿಯನ್ನು ಆರಂಭಿಸುವುದು ಉತ್ತಮ. ಹೆಚ್ಚಿನ ಮಾಹಿತಿಗಾಗಿ ಇಲಾಖೆ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Also Read:

ಬಿಹಾರದಲ್ಲಿ ಪ್ರತಿಭಟನಾ ಕಾರರ ಮೇಲೆ ಲಾಠಿ ಚಾರ್ಜ್

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online