BELAGAVI NEWS :
"ನಾನು ಜನತಾ ಏಜೆಂಟ್, ಮಾಫಿಯಾ ಕಮಿಷನ್' ಏಜೆಂಟ್ ಅಲ್ಲ"-ಡಿಕೆ ಶಿವಕುಮಾರ್ ಗೆ ಆರ್ ಅಶೋಕ್ ತಿರುಗೇಟು.
ರಾಜ್ಯ ರಾಜಕೀಯದಲ್ಲಿ ವಾತ್ಸಮರ ತಾರಕಕ್ಕೇರಿದ್ದು, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. "ಹೌದು, ನಾನು ಏಜೆಂಟ್ ಆಗಿಯೇ ಮಾತನಾಡುತ್ತಿದ್ದೇನೆ. ಆದರೆ ನಿಮ್ಮ ತರಹ ಯಾವುದೋ ಮಾಫಿಯಾ ಹಿತಾಸಕ್ತಿ ಕಾಯುವ ಕಮಿಷನ್ ಏಜೆಂಟ್ ಆಗಿ ಅಲ್ಲ" ಎಂದು ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.
ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, "ಆರ್.ಅಶೋಕ್ ಕಸದ ಮಾಫಿಯಾ ಏಜೆಂಟ್ ಆಗಿ ಮಾತನಾಡುತ್ತಿದ್ದಾರೆ" ಎಂಬ ಸಿಎಂ ಹೇಳಿಕೆಗೆ ಉತ್ತರಿಸಿದ್ದಾರೆ. "ಕರ್ನಾಟಕದ ಏಳುವರೆ ಕೋಟಿ ಕನ್ನಡಿಗರ ಹಕ್ಕಿಗಾಗಿ ಹಾಗೂ ಬೆಂಗಳೂರಿನ ಒಂದುವರೆ ಕೋಟಿ ನಾಗರಿಕರ ಧ್ವನಿಯಾಗಿ ನಿಂತಿರುವ ಜನತಾ ಏಜೆಂಟ್ ನಾನು. ವಿಪಕ್ಷ ನಾಯಕನಾಗಿ ಸರ್ಕಾರದ ಲೂಟಿ ಮತ್ತು ದಂಧೆಯನ್ನು ರಚಿಸುವುದು ನನ್ನ ಸಂವಿಧಾನ ಬದ್ಧ ಕರ್ತವ್ಯ. ಅದಕ್ಕೆ ಯಾರ ಅಪ್ಪನೆಯೂ ಬೇಕಿಲ್ಲ" ಎಂದು ವಾಗ್ದಾಳಿ ದಾಳಿ ನಡೆಸಿದ್ದಾರೆ.
ಇದರ ಜೊತೆಗೆ ಕಾಂಗ್ರೆಸ್ ನ ಆಂತರಿಕ ಬೆಳವಣಿಗೆಗಳನ್ನು ಪ್ರಸ್ತಾಪಿಸಿದ ಅಶೋಕ್, "ಹೈಕಮಾಂಡ್ ಬಾಗಿಲಲ್ಲಿಕಾಡಿ-ಬೇಡಿ, ಅತ್ತು - ಕರೆದು ಕೊನೆಗೂ ಸಿಎಂ ಸ್ಥಾನ ಪಡೆದಿರುವ ನಿಮಗೆ, ವಿಪಕ್ಷಗಳು ಕನಿಷ್ಠ ಹನಿಮೂನ್ ಪ್ರೀರಿಯಡ್ ಕೂಡ ನೀಡುತ್ತಿಲ್ಲ ಎಂಬ ಹತಾಶೆ, ಭಯ ಮತ್ತು ಆತಂಕ ಕಾಡುತ್ತಿರುವುದು ಅರ್ಥವಾಗುತ್ತದೆ" ಎಂದು ವ್ಯಂಗ್ಯವಾಡಿದ್ದಾರೆ.
ಮುಂದುವರೆದು, "ನಿಮ್ಮ ಸ್ವಂತ ಪಕ್ಷದ ಶಾಸಕರೇ ಪ್ರತಿದಿನ ಮಾಧ್ಯಮಗಳ ಮುಂದೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ದೆಹಲಿಗೆ ದಂಡೆತ್ತಿ ಹೋಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಿಮಗೆ ಹನಿಮೂನ್ ಪೀರಿಯಡ್ ಎಲ್ಲಿಂದ ಸಿಗಬೇಕು? ನಿಮ್ಮ ಮನೆಯಲ್ಲಿ ಬೆಂಕಿ ಉರಿಯುತ್ತಿರುವಾಗ ನನ್ನ ಮೇಲೆ ರಾಜಕೀಯ ಗೂಬೆ ಕೂರಿಸಬೇಡಿ" ಎಂದು ಕಿಡಿ ಕಾರಿದ್ದಾರೆ.
ಈ ಹೇಳಿಕೆಗಳ ಮೂಲಕ ರಾಜ್ಯ ರಾಜಕೀಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಆರೋಪ ಪ್ರತ್ಯಾರೋಪಗಳ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಈ ವಾಕ್ಸಮರ ಇನ್ನಷ್ಟು ಕಾವೇರಿಸುವ ಸಾಧ್ಯತೆ ಇದೆ.
ನಮ್ಮ ಪಾರದರ್ಶಕತೆ, ಕಾರ್ಯವೈಕರಿ ಸಹಿಸಲು ಅವರಿಂದ ಸಾಧ್ಯವಾಗುತ್ತಿಲ್ಲ ಎಂಬ ನಿಮ್ಮ ಹೇಳಿಕೆ ಶತಮಾನದ ಅತಿ ದೊಡ್ಡ ಹಾಸ್ಯ. ನಿಮ್ಮ ಹಿನ್ನೆಲೆ ಏನು, ನಿಮ್ಮ'ಆಡಳಿತ ವೈಕರಿ'ಯ ಅಸಲಿ ಚರಿತ್ರೆ ಏನು, ತಾವು ಕಟ್ಟಿಕೊಂಡಿರುವ ಪಾರದರ್ಶಕ ಸಾಮ್ರಾಜ್ಯ ಎಂಥದ್ದು ಎಂಬುದು ಇಡೀ ಕರ್ನಾಟಕಕ್ಕೆ ಗೊತ್ತಿದೆ. ನಿಮ್ಮಿಂದ ಪಾರದರ್ಶಕತೆಯ ಪಾಠ ಕಲಿಯುವ ದೌರ್ಭಾಗ್ಯ ಕನ್ನಡಿಗರಿಗಿಲ್ಲ ಎಂದಿದ್ದಾರೆ.
ಟೆಂಡರ್ ಪ್ರಕ್ರಿಯೆಯಲ್ಲಿನ ಅಕ್ರಮಗಳ ಆರೋಪದ ವಿಚಾರವಾಗಿ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಟೆಂಡರ್ ನಿಯಮಗಳ ಉಲ್ಲಂಘನೆ ಮತ್ತು ಅಕ್ರಮಗಳನ್ನು ಮುಚ್ಚಿಹಾಕಲು ಸರ್ಕಾರವೇ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು, ವರದಿ ಸಲ್ಲಿಕೆಗೆ ನೀಡಿದ್ದ ಒಂದು ಸರ್ಕಾರಕ್ಕೆ ಇಂದು ಮುಕ್ತಾಯವಾಗಿದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅಶೋಕ್, "ಸರ್ಕಾರಕ್ಕೆ ತಾಕತ್ತಿದ್ದರೆ ಹಾಗೂ ಪಾರದರ್ಶಕತೆ ಬಗ್ಗೆ ನಿಜವಾದ ಬದ್ಧತೆ ಇದ್ದರೆ, ಸಮಿತಿಯ ವರದಿಯನ್ನು ಅಡಗಿಸಿಡದೆ ತಕ್ಷಣವೇ ಸಾರ್ವಜನಿಕರ ಮುಂದಿಡಲಿ" ಎಂದು ಸವಾಲು ಹಾಕಿದ್ದಾರೆ.
"ವರದಿಯನ್ನು ಇಡೀ ರಾಜ್ಯದ ಜನರ ಮುಂದೆ ಬಹಿರಂಗಪಡಿಸಿ. ಆಗ ನಿಮ್ಮ ಸರಿ ಮುಖವಾಡ ಕಳಚಿ ಬೀಳಲಿದೆ. ಯಾರ ಕಾರ್ಯ ವೈಕರಿ ಹೇಗಿದೆ, ಯಾರು ಸತ್ಯ ಹೇಳುತ್ತಿದ್ದಾರೆ ಎಂಬುದನ್ನು ಜನರೇ ತೀರ್ಮಾನಿಸುತ್ತಾರೆ" ಎಂದು ಅವರು ಕಿಡಿಕಾರಿದ್ದಾರೆ.
ಸರ್ಕಾರ ಪಾರದರ್ಶಕ ಆಡಳಿತದ ಬಗ್ಗೆ ಮಾತನಾಡಿತಿದೆಯಾದರೂ, ವರದಿಯನ್ನು ಸಾರ್ವಜನಿಕಗೊಳಿಸುಲು ಹಿಂದೇಟು ಹಾಕುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ ಎಂದು ಆರ್ ಅಶೋಕ್ ಆರೋಪಿಸಿದ್ದಾರೆ. ವರದಿ ಬಹಿರಂಗವಾದರೆ ಟೆಂಡರ್ ಪ್ರಕ್ರಿಯೆಯಲ್ಲಿನ ಅಕ್ರಮಗಳ ಸತ್ಯಾಂಶ ಹೊರಬರುವ ಸಾಧ್ಯತೆ ಇದೆ ಎಂಬುದನ್ನು ಅವರು ಸೂಚಿಸಿದ್ದಾರೆ.
ಈ ಹೇಳಿಕೆಯೊಂದಿಗೆ ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ರಾಜಕೀಯ ವಾಕ್ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಸಮಿತಿ ವರದಿ ಬಹಿರಂಗವಾಗುತದೇಯೇ ಎಂಬುವುದು ಇದೀಗ ರಾಜ್ಯ ರಾಜಕೀಯದಲ್ಲಿ ಕುತೂಹಲದ ವಿಷಯವಾಗಿದೆ.
Also Read:
ಕೊಲ್ಲೂರಿಗೆ ಭೇಟಿ ನೀಡಿದ ಸಿಎಂ ಜೋಸೆಫ್ ವಿಜಯ್ : ಅರ್ಚಕರಿಂದ ಮಹತ್ವದ ಮಾಹಿತಿ