<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ದಾಂಡೇಲಿ ಪ್ರವಾಸಿಗರಿಗೆ ಶಾಕ್: ಮೂರು ತಿಂಗಳು ರ್ಯಾಪ್ಟಿಂಗ್, ಸ್ಕೂಬಾ ಡೈವಿಂಗ್ ಬಂದ್

ದಾಂಡೇಲಿ ಪ್ರವಾಸಿಗರಿಗೆ ಶಾಕ್: ಮೂರು ತಿಂಗಳು ರ್ಯಾಪ್ಟಿಂಗ್, ಸ್ಕೂಬಾ ಡೈವಿಂಗ್ ಬಂದ್
Summary: From June 1 to August 31, Dandeli's major adventure activities such as scuba diving and river rafting, including many tourist attractions, have been temporarily closed.

belagavi news :

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಗಾಲದ ಆರಂಭ ಹಾಗೂ ಸಮುದ್ರದ ಪ್ರಕ್ಶುದ್ಧ ವಾತಾವರಣದ ಹಿನ್ನೆಲೆಯಲ್ಲಿ,ಜಿಲ್ಲಾಡಳಿತವು ಮಹತ್ವದ ಮುಂಜಾಗ್ರತಾ ಕ್ರಮ ಕೈಗೊಂಡಿದೆ.ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರು ಜೂನ್ ೧ ರಿಂದ ಆಗಸ್ಟ್ 31 ರವರೆಗೆ ಜಿಲ್ಲೆಯಾದ್ಯಂತ ಎಲ್ಲಾ ಜಲ ಸಾಹಸ ಕ್ರೀಡೆಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಈ ಆದೇಶದ ಅನ್ವಯ ಸ್ಕೂಬಾ ಡೈವಿಂಗ್, ಬೋಟಿಂಗ್, ರಾಫ್ಟಿಂಗ್ ಸೇರಿದಂತೆ ಪ್ರವಾಸಿಗರು ಮತ್ತು ಸಾಹಸ ಪ್ರಿಯರು ಪಾಲ್ಗೊಳ್ಳುವ ಎಲ್ಲಾ ಜಲ ಸಾಹಸ ಚಟುವಟಿಕೆಗಳು ಮುಂದಿನ ಮೂರು ತಿಂಗಳ ಕಾಲ ಸ್ಥಗಿತಗೊಳ್ಳಲಿದೆ.ಮಳೆಗಾಲದಲ್ಲಿ ಸಮುದ್ರದ ಅಲೆಗಳ ತೀವ್ರತೆ ಹೆಚ್ಚಾಗುವುದು,ನದಿಗಳಲ್ಲಿ ನೀರಿನ ಹರಿವು ಅಪಾಯಕಾರಿಯಾಗಿ ಏರಿಕೆಯಾಗುವುದು ಹಾಗೂ ಹವಾಮಾನ ಅನಿಶ್ಚಿತವಾಗಿರುವ ಕಾರಣ ಯಾವುದೇ ಅವಗಡಗಳು ಸಂಭವಿಸದಂತೆ ತಡೆಯುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ.

ಜಿಲ್ಲಾಡಳಿತದ ಪ್ರಕಾರ,ಪ್ರವಾಸಿಗರ ಜೀವ ಮತ್ತು ಸುರಕ್ಷತೆಯನ್ನು ಕಾಪಾಡುವುದು ಮೊದಲ ಆದ್ಯತೆಯಾಗಿದ್ದು,ಈ ಅವಧಿಯಲ್ಲಿ ಜಲ ಸಾಹಸ ಚಟುವಟಿಕೆಗಳನ್ನು ನಡೆಸುವ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು.ನಿಯಮ ಉಲ್ಲಂಘಿಸಿ ಚಟುವಟಿಕೆಗಳನ್ನು ಆಯೋಜಿಸುವವರ ವಿರುದ್ಧ ಕಾನೂನು ಬದ್ಧ ಹಾಗೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಮಳೆಗಾಲದ ಸಮಯದಲ್ಲಿ ಸಮುದ್ರ ತೀರಗಳು ಮತ್ತು ಜಲಾಶಯ ಪ್ರದೇಶಗಳಿಗೆ ಭೇಟಿ ನೀಡಿರುವವರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸುರಕ್ಷತಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ.ಪ್ರತಿ ವರ್ಷದಂತೆ ಈ ಬಾರಿಯೂ ಮಳೆಗಾಲದಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರ ಸುರಕ್ಷತೆಯನ್ನು ಮನದಲ್ಲಿಟ್ಟುಕೊಂಡು ಉತ್ತರ ಕನ್ನಡ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.ಜೂನ್ 1 ರಿಂದ ಆಗಸ್ಟ್ 31ರವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಜಲ ಸಾಹಸ ಕ್ರೀಡೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಅವರ ಆದೇಶದಂತೆ,ಈ ಅವಧಿಯಲ್ಲಿ ಜಿಲ್ಲೆ ಯಾವುದೇ ಭಾಗದಲ್ಲಿ ಜಲ ಚಟುವಟಿಕೆಗಳನ್ನು ನಡೆಸಲು ಅವಕಾಶ ಇರುವುದಿಲ್ಲಅರಬ್ಬಿ ಸಮುದ್ರ ಸೇರಿದಂತೆ ಜಿಲ್ಲೆಯ ಪ್ರಮುಖ ನದಿಗಳು,ಜಲಾಶಯಗಳು ಹಾಗೂ ಇತರೆ ನೀರಿನ ಆಕರಗಳಲ್ಲಿ ನಡೆಯುವ ಎಲ್ಲ ವಾಣಿಜ್ಯ ಮತ್ತು ಸಾಹಸ ಚಟುವಟಿಕೆಗಳಿಗೂ ಈ ನಿಷೇಧ ಅನ್ವಯವಾಗಲಿದೆ.

ಪ್ರವಾಸಿಗರನ್ನು ಹೆಚ್ಚಾಗಿ ಸೆಳೆಯುವ ಪ್ರಸಿದ್ಧ ಸ್ಕೂಬಾ ಡೈವಿಂಗ್,ಶರಾವತಿ ನದಿಯಲ್ಲಿನ ಬೋಟಿಂಗ್ ಹಾಗೂ ದಾಂಡೇಲಿಯ ಕಾಳಿ ನದಿಯಲ್ಲಿ ನಡೆಯುವ ವೈಟ್ ವಾಟರ್ ರ್ಯಾಪ್ಟಿಂಗ್ ಸೇರಿದಂತೆ ಎಲ್ಲಾ ಕಮರ್ಷಿಯಲ್ ವಾಟರ್ ಸ್ಪೋರ್ಟ್ಸ್ ಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟ ಸೂಚನೆ ನೀಡಿದೆ.

ಮಳೆಗಾಲದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವುದು,ನದಿಗಳಲ್ಲಿ ನೀರಿನ ಮಟ್ಟ ಮತ್ತು ಹರಿವಿನ ಎಲ್ಲಾ ಅಪಾಯಕಾರಿಯಾಗಿ ಏರಿಕೆಯಾಗುವುದು ಸಾಮಾನ್ಯ.ಇಂಥ ಸಂದರ್ಭಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ತಡೆಯುವುದು ಮತ್ತು ಮಾನವ ಜೀವಗಳನ್ನು ರಕ್ಷಿಸುವುದು ಈ ನಿರ್ಧಾರದ ಪ್ರಮುಖ ಉದ್ದೇಶವಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 1ರಿಂದ ಜಾರಿಗೆ ಬರುವ ಜಲ ಸಾಹಸ ಕ್ರೀಡೆಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.ನಾಳೆಯಿಂದ ಜಿಲ್ಲೆ ಯಾವುದೇ ಕಡಲ ತೀರ,ನದಿ ತೀರ ಅಥವಾ ಜಲಾಶಯ ಪ್ರದೇಶಗಳಲ್ಲಿ ನಿಯಮ ಮೀರಿ ಜಲ ಸಾಹಸ ಚಟುವಟಿಕೆಗಳನ್ನು ಆಯೋಜಿಸುವುದು ಕಂಡುಬಂದರೆ,ಸಂಬಂಧಿಸಿದ ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ಧ ಕಾನೂನು ರಿತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಎಚ್ಚರಿಕೆ ನೀಡಿದ್ದಾರೆ.

ಮಳೆಗಾಲದ ಸಂದರ್ಭದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವುದರ ಜೊತೆಗೆ ನದಿಗಳಲ್ಲಿ ನೀರಿನ ಹರಿವು ಅಪಾಯಕಾರಿಯಾಗಿ ಏರಿಕೆಯಾಗುತ್ತದೆ.ಹವಾಮಾನದಲ್ಲಿನ ಅನಿಶ್ಚಿತತೆ ಹಾಗೂ ಪ್ರಕೃತಿಯ ವೈಪರೀತ್ಯಗಳಿಂದಅವಗಡಗಳ ಸಂಭವ ಹೆಚ್ಚಿರುವ ಕಾರಣ,ಸಾರ್ವಜನಿಕರ ಹಾಗೂ ಪ್ರವಾಸಿಗರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.

ಜಿಲ್ಲಾ ಆಡಳಿತದ ಪ್ರಕಾರ,ಅರಬ್ಬಿ ಸಮುದ್ರ,ಶರಾವತಿ, ಕಾಳಿ ಸೇರಿದಂತೆ ಜಿಲ್ಲೆಯ ವಿವಿಧ ಜಲಮೂಲಗಳಲ್ಲಿ ಯಾವುದೇ ರೀತಿಯ ವಾಣಿಜ್ಯ ಜಲ ಸಾಹಸ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ.ಪ್ರವಾಸಿಗರು ಹಾಗೂ ಸ್ಥಳೀಯರು ಆಡಳಿತದ ಸೂಚನೆಗಳನ್ನು ಪಾಲಿಸಿ ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

ಪ್ರವಾಸೋದ್ಯಮ ಚಟುವಟಿಕೆಗಳಿಗಿಂತ ಮಾನವ ಜೀವನ ಸುರಕ್ಷತೆಯ ಮುಖ್ಯ ಎಂಬ ನಿಲುವಿನೊಂದಿಗೆ ಜಿಲ್ಲಾಡಳಿತಈ ಮುಂಜಾಗ್ರತಾ ಕ್ರಮ ಜಾರಿಗೊಳಿಸಿದ್ದು,ಮಳೆಗಾಲ ಮುಗಿಯುವವರೆಗೆ ಎಲ್ಲರಿಗೂ ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದೆ.

Also Read :

RCB ಕಪ್ ಗೆಲ್ಲಲಿ ಎಂದು ದಾವಣಗೆರೆಯಲ್ಲಿ ವಿಶೇಷ ಪ್ರಾರ್ಥನೆ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online