Belagavi news:
ರಾಯ್ ಬರೇಲಿ (ಉತ್ತರ ಪ್ರದೇಶ): ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ತೀವ್ರ ಟೀಕೆ ಮಾಡಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿಚಾರವನ್ನು ಉಲ್ಲೇಖಿಸಿ ಮಾತನಾಡಿದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆಗಳು ಇದೀಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿವೆ.
Raebareli ಎರಡು ದಿನಗಳ ಭೇಟಿಗೆ ಆಗಮಿಸಿರುವ ರಾಹುಲ್ ಗಾಂಧಿ, ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ಆಡಳಿತ, ಬೆಲೆ ಏರಿಕೆ ಹಾಗೂ ಆರ್ಥಿಕ ನೀತಿಗಳನ್ನು ತೀವ್ರವಾಗಿ ಟೀಕಿಸಿದರು. ಅವರ ಹೇಳಿಕೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮತ್ತೊಂದು ರಾಜಕೀಯ ವಾಗ್ವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮುಂದಿನ ಕೆಲವು ತಿಂಗಳಲ್ಲಿ ದೇಶವು ಭಾರಿ ಆರ್ಥಿಕ ಸಂಕಷ್ಟವನ್ನು ಎದುರಿಸಲಿದೆ ಎಂದು ಎಚ್ಚರಿಸಿದ್ದಾರೆ.
ಮುಂದಿನ 3- 4 ತಿಂಗಳಲ್ಲಿ ಜನರು ತಮ್ಮ ಜೀವನದಲ್ಲಿ ಹಿಂದೆಂದೂ ನೋಡಿರದ ಮಟ್ಟದ ಹಣದುಬ್ಬರವನ್ನು ಎದುರಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ. ಇಂಧನ ಹಾಗೂ ಅನಿಲ ಸಿಗುವಿಕೆ ಕಷ್ಟವಾಗಬಹುದು, ರೈತರು ರಸಗೊಬ್ಬರ ಖರೀದಿಸಲು ಪರದಾಡಬೇಕಾಗುತ್ತದೆ, ಇದೀಗ ರೈತರು, ಯುವಕರು ಮತ್ತು ಮಹಿಳೆಯರು ಹೆಚ್ಚು ಪರಿಣಾಮ ಕ್ಕೊಳಗಾಗುತ್ತಾರೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ದೇಶವನ್ನು ಆರ್ಥಿಕ ಅಧಃಪತನದತ್ತ ಕೊಂಡೊಯ್ದಿದೆ ಎಂದು ಆರೋಪಿಸಿದ ರಾಹುಲ್ ಗಾಂಧಿ ದೇಶದ ಆರ್ಥಿಕ ಪರಿಸ್ಥಿತಿ ಈಗ ಗಂಭೀರ ಹಂತ ತಲುಪಿದೆ ಎಂದು ಹೇಳಿದರು. ದೇಶವನ್ನು ಬಂಡವಾಳಶಾಹಿಗಳಿಗೆ ಮಾರಲಾಗಿದೆ ಎಂಬ ಆರೋಪವವರು ಮಾಡಿದ್ದಾರೆ.
Raebareli ಭೇಟಿಯ ಸಂದರ್ಭದಲ್ಲಿ ಮಾತನಾಡಿದವರು, ಮುಂದಿನ ದಿನಗಳಲ್ಲಿ ಉಂಟಾಗುವ ಆರ್ಥಿಕ ಬಿರುಗಾಳಿಯಿಂದ ಯಾರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದ್ದು, ಬಳಿಕ ಪ್ರಧಾನಿ ಟಿವಿಯಲ್ಲಿ ಬಂದು ಅಳಲು ತೋಡಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರ ನೀತಿಗಳನ್ನು ತೀವ್ರವಾಗಿ ಟೀಕಿಸಿದ್ದಾರೆ.
"ವಿದೇಶಿ ಪ್ರವಾಸ ಮಾಡಬೇಡಿ, ಚಿನ್ನ ಖರೀದಿಸಬೇಡಿ ಮತ್ತು ಇಂಧನವನ್ನು ಮಿತವ್ಯಯವಾಗಿ ಬಳಸಿ" ಎಂದು ಜನರಿಗೆ ಸಲಹೆ ನೀಡುವ ಪ್ರಧಾನಿ ಮೋದಿ ಅವರು ಈಗ ತಾವೇ ವಿದೇಶ ಪ್ರವಾಸ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಜೊತೆಗೆ ಮತಗಳು ಅಕ್ರಮ, ಜಾತಿ ಜನಗಣತಿ ನಡೆಸಲು ನಿರಾಕರಣೆ ಹಾಗು ದೇಶವನ್ನು ಬಂಡವಾಳಶಾಹಿಗಳಿಗೆ ಮಾರಾಟ ಮಾಡಿದಂತೆ ನಡೆದುಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇದಲ್ಲದೆ, ಆರ್ ಎಸ್ ಎಸ್ ಕುರಿತು ಮಾತನಾಡಿದವರು, Rashtriya Swayamsevak Sangh ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅಂಬೇಡ್ಕರ್ ಅವರ ಪ್ರತಿಮೆಗಳ ಮುಂದೆ ತಲೆ ಬಾಗುವವರೆ ಅವರ ಸಿದ್ಧಾಂತವನ್ನು ಅವಮಾನಿಸುತ್ತಿದ್ದಾರೆ ಎಂದು ಹೇಳಿದ ರಾಹುಲ್, ಸಂವಿಧಾನವನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವನ್ನು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.
ಆಮೇಥಿಗೆ ರಾಹುಲ್ ಗಾಂಧಿ: ರಾಯ್ ಬರೇಲಿಯಲ್ಲಿ ಕಾರ್ಯಕ್ರಮವನ್ನು ಮುಗಿಸಿಕೊಂಡು ಬಳಿಕ ರಾಹುಲ್ ಗಾಂಧಿಯವರು, ತಮ್ಮ ಸಂಸತ್ ಕ್ಷೇತ್ರವಾದ ಅಮೇಠಿಗೆ ತೆರಳಲಿದ್ದಾರೆ. ಅಲ್ಲಿನ ಮುನ್ಶಿಗಂಜ್ ನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ 22 ಲಕ್ಷ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲಾದ ಯುಎಸ್ ಜಿ ಯಂತ್ರವನ್ನು ಉದ್ಘಾಟಿಸಲಿದ್ದಾರೆ. ಗೌರಿಗಂಜ್ ಮತ್ತು ಅಮೇಥಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. ಇದಲ್ಲದೆ, ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಯೋಗೇಂದ್ರ ಮಿಶ್ರ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.
Also Read:
ಜೈಲಿನಲ್ಲೇ ದರ್ಶನ್ ಮದುವೆ ವಾರ್ಷಿಕೋತ್ಸವ: ಪುತ್ರ ವಿನೀಶ್ ಜೊತೆ ಭೇಟಿ ನೀಡಿದ ವಿಜಯಲಕ್ಷ್ಮಿ