<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಪೇಪರ್ ಲೀಕ್ ವಿಚಾರದಲ್ಲಿ ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ತಿರುಗೇಟು : "ಯುವಕರ ಭವಿಷ್ಯ ಹಾಳು ಮಾಡುತ್ತಿದ್ದೀರಿ"

ಪೇಪರ್ ಲೀಕ್ ವಿಚಾರದಲ್ಲಿ ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ತಿರುಗೇಟು : "ಯುವಕರ ಭವಿಷ್ಯ ಹಾಳು ಮಾಡುತ್ತಿದ್ದೀರಿ"
Summary: The Congress leader has taken a dig at the question paper leak and irregularities in the education system. "You are ruining the future of our youth". The political debate over the accountability of the education system has intensified further.

belagavi news :

ಪ್ರಶ್ನೆ ಪತ್ರಿಕೆ ಸೋರಿಕೆ: ಮೋದಿ ಹೇಳಿಕೆಗೆ ರಾಹುಲ್ ಗಾಂಧಿ ತಿರುಗೇಟು, ಶಿಕ್ಷಣ ವ್ಯವಸ್ಥೆ ಕುರಿತು ವಾಗ್ದಾಳಿ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿದ ಹೇಳಿಕೆಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಯುವ ಜನರ ಭವಿಷ್ಯಕ್ಕೆ ಹಾನಿ ಮಾಡುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, "ಯುವ ಜನತೆಯ ಭವಿಷ್ಯ ಹಾಳು ಮಾಡಿದ್ದೇ ನೀವು" ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಎಕ್ಸ್ ಪೋಸ್ಟ್ ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳಿಗೆ ಕಾರಣವಾದವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುವ ಬದಲು ಅವರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದ್ದಾರೆ.

"ನಮ್ಮ ಯುವ ಜನತೆಯ ಭವಿಷ್ಯ ಹಾಳು ಮಾಡುತ್ತಿದ್ದೀರಿ. ಶಿಕ್ಷಣ ವ್ಯವಸ್ಥೆಯ ಸಂಪೂರ್ಣ ನಿಯಂತ್ರಣ ಮತ್ತು ನಾಶಕ್ಕೆ ಅವಕಾಶ ನೀಡಿದ್ದೀರಿ. ಇದಕ್ಕೆ ಕಾರಣವಾದ ಪ್ರತಿಯೊಬ್ಬರನ್ನು ರಕ್ಷಿಸಿದ್ದೀರಿ"ಎಂದು ರಾಹುಲ್ ಗಾಂಧಿ ತಮ್ಮ ಪೋಸ್ಟ್ ನಲ್ಲಿ ಹೇಳಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ತೋರಿಕೆ ಪ್ರಕರಣ, ಪರೀಕ್ಷಾ ಪಾರದರ್ಶಕತೆ ಮತ್ತು ವಿದ್ಯಾರ್ಥಿಗಳು ಭವಿಷ್ಯದ ವಿಚಾರದಲ್ಲಿ ಕೇಂದ್ರ ಸರ್ಕಾರ ಹಾಗೂ ವಿಪಕ್ಷಗಳ ನಡುವೆ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದೆ. ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ಹೆಚ್ಚುತ್ತಿದೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ : ಧರ್ಮೆಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಒತ್ತಾಯ, ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸರ್ಕಾರ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿರುವ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸುವುದು ಮುಖ್ಯ ಎಂದು ಹೇಳಿದ್ದಾರೆ.

ಇದೇ ವೇಳೆ, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕೂಡ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ. ಸಂಸತ್ತಿನಲ್ಲಿ ಈ ವಿಚಾರದ ಕುರಿತು ಮಾತನಾಡುವ ಬದಲು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರಧಾನಿ ಪ್ರತಿಕ್ರಿಯಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

" ದೇಶಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗಳ ಬಗ್ಗೆ ಕಾಳಜಿ ಇದೆ ಎಂದು ತೋರಿಸಲು ಪ್ರಧಾನಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಆದರೆ ಈ ನಡೆ ಸರ್ಕಾರದ ಆತಂಕವನ್ನು ತೋರಿಸುತ್ತದೆ" ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಇದಲ್ಲದೆ, ಮತಗಳ ಕಳ್ಳತನ, ದೇಣಿಗೆಯ ಕಳ್ಳತನ, ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಕಳ್ಳತನ ಸೇರಿದಂತೆ ಹಲವು ವಿಷಯಗಳನ್ನು ಪ್ರಸ್ತಾಪಿಸಿರುವ ಅವರು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿವಿದ್ಯಾರ್ಥಿಗಳ ಪ್ರತಿಭಟನೆ, ಸರ್ಕಾರದ ಕ್ರಮಗಳು ಮತ್ತು ವಿಪಕ್ಷಗಳ ಆರೋಪಗಳು ದೇಶದ ರಾಜಕೀಯ ವಲಯದಲ್ಲಿ ಚರ್ಚೆಯ ಪ್ರಮುಖ ವಿಷಯವಾಗಿವೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ : ತ್ವರಿತ ನ್ಯಾಯಾಲಯಗಳು ಘೋಷಣೆ ಮಾಡಿದ ಪ್ರಧಾನಿ ಮೋದಿ, ಧರ್ಮೇಂದ್ರ ಪ್ರಧಾನ ರಾಜಿನಾಮೆಗೆ ವಿದ್ಯಾರ್ಥಿಗಳ ಪಟ್ಟು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಆಕ್ರೋಶ ಮುಂದುವರೆದಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಹಿತಾಸಕ್ತಿಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿರುವ ಅವರು, ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರಿಗೆ ಕಠಿಣ ಹಾಗೂ ತ್ವರಿತ ಶಿಕ್ಷೆ ನೀಡಲು ತ್ವರಿತಗತಿ ನ್ಯಾಯಾಲಯಗಳ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ತಮ್ಮ ಪೋಸ್ಟ್ ನಲ್ಲಿ ವಿದ್ಯಾರ್ಥಿಗಳ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಮುಖ್ಯವಾದದ್ದು ಯಾವುದು ಇಲ್ಲ ಎಂದು ಉಲ್ಲೇಖಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.ಯುವಜನರ ಭವಿಷ್ಯಕ್ಕೆ ಹಾನಿ ಮಾಡಲು ಯತ್ನಿಸುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ, ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರಪ್ರಧಾನ ಅವರ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ತಿಳಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ಪರೀಕ್ಷಾ ಪಾರದರ್ಶಕತೆ ಮತ್ತು ವಿದ್ಯಾರ್ಥಿಗಳ ಭವಿಷ್ಯದ ವಿಚಾರದಲ್ಲಿ ಸರ್ಕಾರ ಹಾಗೂ ಪ್ರತಿಭಟನಾಕಾರರ ನಡುವೆ ಬಿನ್ನಾಭಿಪ್ರಾಯ ಮುಂದುವರೆದಿದೆ. ತ್ವರಿತ ನ್ಯಾಯ, ಹೊಣೆಗಾರಿಕೆ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗಾಗಿ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online