Belagavi News:
ರಾಯಚೂರು: ಇಬ್ಬರು ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸಿಂಧನೂರು ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಜಿಲ್ಲೆಯ ಸಿಂಧನೂರು ನಗರದ ನಿವಾಸಿ ಬಾಬುಸಾಬ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
8 ಮತ್ತು 9 ವರ್ಷದ ಇಬ್ಬರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆ ಹಾಗೂ ಎಸ್ ಸಿ/ ಎಸ್ ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಉಪವಿಭಾಗೀಯ ಪೊಲೀಸ ಅಧಿಕಾರಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಾಕ್ಪ್ಯಾ ಧಾರಗಳನ್ನು ಸಂಗ್ರಹಿಸಿ ತನಿಖೆಯನ್ನು ಮುಂದುವರಿಸಿದ್ದು, ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಳಿಕ ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ಈ ಘಟನೆ ಸ್ಥಳೀಯರಲ್ಲಿ ಆತಂಕ ಮುಡಿಸಿದ್ದು, ಮಕ್ಕಳ ಸುರಕ್ಷತೆ ಹಾಗೂ ಮಹಿಳೆಯರ ವಿರುದ್ಧದ ಅಪರಾಧಗಳನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ಸಿಂಧನೂರು ನಗರ ಠಾಣೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಮೇ 12ರಂದು ಪ್ರಕರಣ ದಾಖಲಾಗಿದ್ದು. ಸಂತ್ರಸ್ತ ಬಾಲಕಿಯನ್ನು ರಕ್ಷಿಸಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಅಲ್ಲಿ ನೀಡಿದ ಹೇಳಿಕೆಯಲ್ಲಿ, ತಾನು 9ಮತ್ತು 10ನೇ ತರಗತಿಯಲ್ಲಿ ಓದುತ್ತಿದ್ದ ವೇಳೆ ತನ್ನ ತಂದೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರೂ ಎಂದು ಬಾಲಕಿ ಆರೋಪಿಸಿದ್ದಾಳೆ. ಜೊತೆಗೆ, ಪಕ್ಕದ ಮನೆಯ ವ್ಯಕ್ತಿಯೂ ತನ್ನ ಮೇಲೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯಾ ಎಸಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಬಾಲಕಿಯ ಹೇಳಿಕೆಯನ್ನು ಆಧರಿಸಿ ಪ್ರಕರಣದ ದಾಖಲಿಸಿಕೊಂಡ ಪೊಲೀಸರು ತ್ವರಿತ ತನಿಖೆ ನಡೆಸಿ, ಆರೋಪಿಗಳಾದ ತಂದೆ ಹಾಗೂ ಪಕ್ಕದ ಮನೆಯ ನಿವಾಸಿಯನ್ನು ಬಂಧಿಸಿದ್ದಾರೆ. ಬಳಿಕ ಇಬ್ಬರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಪು ಗಿರಿ, ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ (POCSO) ಕಾಯ್ದೆ ಹಾಗೂ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆ ಮತ್ತು ಕಾನೂನು ಜಾಗೃತಿ ಕುರಿತು ಮತ್ತೊಮ್ಮೆ ಚರ್ಚೆ ಆರಂಭವಾಗಿದೆ. ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರ ಬರಲು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Also Read:
ಎಸ್.ಎಸ್.ಎಲ್.ಸಿ ದ್ವಿತೀಯ ಪರೀಕ್ಷೆ ಪಲಿತಾಂಶ ಪ್ರಕಟ : ಬೆಳಗಾವಿ ವಿಭಾಗದಲ್ಲಿ ಹಾವೇರಿ ನಂ.1