Belagavi news:
ಬೆಂಗಳೂರು (ಮೇ 15): ಬಿಸಿಲಿನ ತಾಪದ ನಡುವೆಯೂ ಕರ್ನಾಟಕದ ಹಲವು ಭಾಗಗಳಲ್ಲಿ ವರುಣ ಆರ್ಭಟ ಮುಂದುವರೆದಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 50% ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು - ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿಯು ಬೀಸುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮುಕ್ಕಾಲು ಭಾಗ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದ ಇರುವ ಹಾಗೂ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಹವಾಮಾನ ಇಲಾಖೆ ಸೂಚಿಸಿದೆ.
ಇದೀಗ ಈ ಕುರಿತು ಹವಾಮಾನ ತಜ್ಞರಾದ ಸಿ.ಎಸ್. ಪಾಟೀಲ್ ಅವರು ಖಾಸಗಿ ಮಾಧ್ಯಮ ಒಂದರಲ್ಲಿ ಮಾತನಾಡಿದ್ದು, ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯು ಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಈ ಹವಾಮಾನ ಬದಲಾವಣೆ ಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರಲು ಸಲಹೆ ನೀಡಲಾಗಿದೆ.
ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಅತಿ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ.
ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ್, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ , ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ.
ಅದೇ ರೀತಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಮಳೆನಾಡು ಪ್ರದೇಶಗಳಾದ ಚಿಕ್ಕಮಗಳೂರು , ಹಾಸನ್, ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಸಿ. ಎಸ್. ಪಾಟೀಲ್ ಹೇಳಿದ್ದಾರೆ.
ಗುಡುಗು - ಮಿಂಚು ಸಹಿತ ಗಾಳಿ - ಮಳೆಯಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಜನರು ಎಚ್ಚರಿಕೆಯಿಂದ ಇರಲು ಸಲಹೆ ನೀಡಲಾಗಿದೆ.
Also Read:
ರೈಲ್ವೆ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ