Belagavi news:
ಬೆಂಗಳೂರಿನಲ್ಲಿ ಸುರಿದ ಬಾರಿ ಮಳೆಯಿಂದ ನಗರದಲ್ಲಿ ಸರಣಿ ಅವಾಂತರಗಳು ಉಂಟಾಗಿದ್ದು, ಸಾರ್ವಜನಿಕರ ಸುರಕ್ಷತೆಗೆ ಮಹತ್ವದ ಕ್ರಮಗಳು ಕೈಗೊಳ್ಳಲಾಗಿದೆ. ಅಪಾಯಕಾರಿ ಕಾಂಪೌಂಡ್ ಗೋಡೆಗಳು, ರಸ್ತೆ ಹಾನಿ ಮತ್ತು ನೀರು ನಿಂತ ಸಮಸ್ಯೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ನಿರ್ಧಾರಕ್ಕೆ ಬಂದಿದ್ದು, ಇನ್ಮುಂದೆ ಪುಟ್ ಪಾತ್ ಗಳಲ್ಲಿ ಯಾವುದೇ ವ್ಯಾಪಾರ ನಡೆಸಲು ನಿರ್ಬಂಧ ಹೇರಲಾಗಿದೆ.
ಬೆಂಗಳೂರಿನಲ್ಲಿ ನಿನ್ನೆ ಸಂಜೆ ಸುರಿದ ಭಾರಿ ಮಳೆ ಬೀಗರ ಅನಾಹುತಕ್ಕೆ ಕಾರಣವಾಗಿದ್ದು, ನಗರವನ್ನು ಬೆಚ್ಚಿ ಬೀಳಿಸಿದೆ. ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ ಘಟನೆ ಆತಂಕ ಮೂಡಿಸದೆ. ಈ ದುರ್ಘಟನೆಯ ಬೆನ್ನಲೆ ಸರ್ಕಾರ ತುರ್ತು ಕ್ರಮಗಳಿಗೆ ಮುಂದಾಗಿದ್ದು, ಅಪಾಯಕಾರಿ ಸ್ಥಿತಿಯಲ್ಲಿರುವ ಕಾಂಪೌಂಡ್ ಗೋಡೆಗಳನ್ನು ಗುರುತಿಸಿ ತಕ್ಷಣ ದುರಸ್ತಿ ಸೂಚನೆ ನೀಡಲಾಗಿದೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಫುಟ್ಪಾತ್ಗಳಿಗೆ ಯಾವುದೇ ವ್ಯಾಪಾರ ಚಟುವಟಿಕೆಗಳನ್ನು ನಡೆಸುವುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ನಿಬಂಧ ವಿಧಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸಂಜೆ ಅಬ್ಬರಿಸಿದ ಬಿರುಗಾಳಿ ಮತ್ತು ಹಾಲಿಕಲ್ಲು ಸಹಿತ ಮಳೆ ನಗರದಲ್ಲಿ ಭೀಕರ ಅವಾಂತರ ಗಳನ್ನು ಸೃಷ್ಟಿಸಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಒಂದು ಮಗು ಸೇರಿ ಏಳು ಜನ ಸಾವನ್ನಪ್ಪಿದ ಕಾರಣ ಘಟನೆ ಜನರಲ್ಲಿ ಆತಂಕ ಹುಟ್ಟಿಸಿದೆ. ವ್ಯಾಪಾರ ನಡೆಸುತ್ತಿದ್ದರು ಹಾಗೂ ಖರೀದಿಗೆ ಬಂದಿದ್ದವರು ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಈ ಘಟನೆಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ ಕ್ರಮಗಳನ್ನು ಘೋಷಿಸಿದ್ದು, ಇನ್ನು ಮುಂದೆ ಫುಟ್ಪಾತ್ ಗಳಲ್ಲಿ ಯಾವುದೇ ರೀತಿಯ ವ್ಯಾಪಾರ ನಡೆಸಲು ಅವಕಾಶ ಇರುವುದಿಲ್ಲ ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ. ಜೊತೆಗೆ ಅಪಾಯಕಾರಿ ಸ್ಥಿತಿಯಲ್ಲಿರುವ ಕಾಂಪೌಂಡ್ ಗೋಡೆಗಳನ್ನು ತಕ್ಷಣ ಗುರುತಿಸಿ ಸುರಕ್ಷಿತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಸುರಿದಂತಹ ಭಾರಿ ಮಳೆಯಿಂದ ನಗರಾಧ್ಯಂತ ಉಂಟಾದ ಆವಾಂತರಗಳ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿಧಾನಸೌಧದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಹತ್ವದ ಹೇಳಿಕೆ ನೀಡಿದ್ದಾರೆ. ಮಳೆಯಿಂದಾಗಿ ರಸ್ತೆಗಳಲ್ಲಿ ಬಿದ್ದಿರುವ ಮರದ ಕೊಂಬೆಗಳನ್ನು ತಕ್ಷಣ ತೆರವುಗೊಳಿಸಲು ಪೊಲೀಸರಿಗೆ ಈಗಾಗಲೇ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ನಗರದ ವಿವಿಧ ಭಾಗಗಳಲ್ಲಿ ಉಂಟಾದ ಸಮಸ್ಯೆಗಳ ಸಮಗ್ರ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಎಲ್ಲಾ ಮಾಹಿತಿಯನ್ನು ಕಂಟ್ರೋಲ್ ರೂಂನಲ್ಲಿ ಸಂಗ್ರಹಿಸಿ ನಿರಂತರ ನಿಗ ವಹಿಸಲಾಗುತ್ತಿದೆ ಎಂದು ಹೇಳಿದರು. ಗೋಡಿ ಕುಸಿದ ಪ್ರಕರಣದಲ್ಲಿ ಅಧಿಕಾರಿ ನಿರ್ಲಕ್ಷದ ಬಗ್ಗೆ ತನಿಖೆ ನಡೆಸಲು ಯಾವುದೇ ತಪ್ಪು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂಬ ಸಂದೇಶ ನೀಡಿದ್ದಾರೆ.
ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇನ್ಮುಂದೆ ಫುಟ್ಪಾತ್ ಗಳಲ್ಲಿ ಯಾವುದೇ ರೀತಿಯ ವ್ಯಾಪಾರ ನಡೆಸಲು ಅವಕಾಶ ಇರುವುದಿಲ್ಲವೆಂದು ಡಿಸಿಎಂ ಖಡಕ್ ಸೂಚನೆ ನೀಡಿದ್ದಾರೆ.
ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಭಾರತದ ಸೂಚನೆಗಳನ್ನು ಮಳೆಯ ಆವಾಂತರದಿಂದಾಗಿ ಉಂಟಾದ ಸ್ಥಳಗಳಿಗೆ ನೀಡಿದ್ದಾರೆ. ಗೋಡಿ ಕುಷ್ಟ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷವಿದೆ ಎಂದು ತಕ್ಷಣ ಹೇಳಲು ಸಾಧ್ಯವಿಲ್ಲದಿದ್ದರೂ ಇನ್ಮುಂದೆ ಅಪಾಯಕಾರಿ ಸ್ಥಿತಿಯಲ್ಲಿರುವ ಕಾಂಪೌಂಡ್ ಗೋಡೆಗಳನ್ನು ಮುಂಚಿತವಾಗಿ ಗುರುತಿಸಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಫುಟ್ಪಾತ್ ಗಳಲ್ಲಿ ಯಾವುದೇ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಿಶೇಷವಾಗಿ ವಾಜಪೇಯಿ ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಾರ ಚಟುವಟಿಕೆಗಳನ್ನು ನಿಷೇಧಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮಳೆ ಹಾನಿ ಕುರಿತಂತೆ ಮುಖ್ಯಮಂತ್ರಿ ಸಭೆ ಕರೆದಿದ್ದು ನಗರದಲ್ಲಿನ ಸಮಸ್ಯೆಗಳ ಸಮಗ್ರ ಪಟ್ಟಿಯನ್ನು ಸಿದ್ಧಪಡಿಸಲು ಹಾಗೂ ಕಂಟ್ರೋಲ್ ರೂಮ್ ಮೂಲಕ ನಿಗಾ ವಹಿಸಲು ಸೂಚಿಸಲಾಗಿದೆ. ರಸ್ತೆ ಅಡ್ಡಿ ಯಾಗಿರುವ ಮರದ ಕೊಂಬೆಗಳನ್ನು ತೆರವುಗೊಳಿಸಲು ಒಣಗಿರುವ ಮರಗಳನ್ನು ಕಡೆದು ಸಂಚಾರ ಸುಗಮಗೊಳಿಸಲು ಹಾಗೂ ನೀರು ನಿಂತಿರುವ ಪ್ರದೇಶಗಳನ್ನು ತಕ್ಷಣ ಕ್ಲೀನ್ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಮಳೆಯ ಅಗತ್ಯತೆಯನ್ನು ಉಲ್ಲೇಖಿಸಿದ ಡಿಸಿಎಂ, ಮಳೆ ಸಮರ್ಪಕವಾಗಿ ಬರಬೇಕು ಎಂಬ ಆಶಯ ವ್ಯಕ್ತಪಡಿಸಿದ್ದು ಮಳೆಯ ಪ್ರಮಾಣ ಕಡಿಮೆಯಾದರೆ ವಿದ್ಯುತ್ ಮತ್ತು ಜಲಾಶಯಗಳಿಗೆ ಸಮಸ್ಯ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ. ಈಗಾಗಲೇ ಶರಾವತಿ ಭಾಗದಲ್ಲಿ ನೀರಿನ ಕೊರತೆ ಲಕ್ಷಣಗಳು ಕಾಣಿಸುತ್ತಿದ್ದು ಮೇ 3ರಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.
ಇದೆಲ್ಲದರ ನಡುವೆ ನಗರದಲ್ಲಿನ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲು ಡಿಕೆ ಶಿವಕುಮಾರ್ ನಾಳೆ ಬೆಂಗಳೂರು ಸಿಟಿ ರೌಂಡ್ ನಡೆಸಲಿದ್ದು, ಮಳೆಯಿಂದಾದ ಹಾನಿ ಮತ್ತು ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಪರಿಶೀಲನೆ ನಡೆಸಲಿದ್ದಾರೆ.
Also Read: