Belagavi news:
ಭಾರತೀಯ ಹವಾಮಾನ ಇಲಾಖೆ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಎಚ್ಚರಿಕೆ ಘೋಷಿಸಿದೆ. ದಕ್ಷಿಣ ಒಳನಾಡಿಗೆ ಎಲ್ಲೋ ಅಲರ್ಟ್ ಹಾಗೂ ಉತ್ತರವಳನಾಡಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಬಿರುಗಾಳಿ, ಸಿಡಿಲು ಮತ್ತು ಆಲಿಕಲ್ಲು ಮಳೆಯ ಸಾಧ್ಯತೆ ಇರುವುದಾಗಿ ತಿಳಿಸಲಾಗಿದೆ.
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರೆಯುತ್ತಿರುವ ನಡುವೆಯೇ ವರುಣನ ಆರ್ಭಟ ಆರಂಭವಾಗುವ ಲಕ್ಷಣಗಳು ಕಾಣಿಸಿಕೊಂಡಿವೆ. ಮುಂದಿನ ಕೆಲವು ದಿನಗಳಲ್ಲಿ ಹವಾಮಾನದಲ್ಲಿ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು IMD ತಿಳಿಸಿದೆ.
ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದು, ಕೆಲವು ಸ್ಥಳಗಳಲ್ಲಿ ತೀವ್ರ ಗಾಳಿ ಸಹಿತ ಮಳೆ ದಾಖಲಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜನರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹಾಗೂ ಅನಗತ್ಯವಾಗಿ ಹೊರಗೆ ಸಂಚರಿಸುವುದು ತಪ್ಪಿಸಲು ಸಲಹೆ ನೀಡಲಾಗಿದೆ.
ಇದೇ ವೇಳೆ ರೈತರಿಗೆ ಬೆಳೆಗಳನ್ನು ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಬಿರುಗಾಳಿ ಮತ್ತು ಆಲಿಕಲ್ಲು ಮಳೆಯ ಪರಿಣಾಮ ಕೃಷಿ ಕ್ಷೇತ್ರಕ್ಕೂ ಹಾನಿ ಸಂಭವಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಅಗತ್ಯ ಎಂದು ಇಲಾಖೆ ತಿಳಿಸಿದೆ.
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 16 ರಿಂದ ಮೇ 19 ರವರೆಗೆ ಹವಾಮಾನದಲ್ಲಿ ಭಾರಿ ಏರುಪೇರಾಗುವ ಸಾಧ್ಯತೆ ಇದೆ ಎಂದು ಭಾರತೀಯ ಅವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ 64.5 ಮಿ.ಮೀ ರಿಂದ 115.5 ಮಿ.ಮೀ ವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇರುವುದಾಗಿ ಇಲಾಖೆ ತಿಳಿಸಿದೆ.
ಈ ಹಿನ್ನೆಲೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಕೆಲವಡೆ ಬಿರುಗಾಳಿ ಸಹಿತ ಮಳೆಯು ಸಂಭವಿಸಬಹುದೆಂಬ ಮುನ್ಸೂಚನೆ ನೀಡಲಾಗಿದ್ದು, ಇಂತಹ ಹವಾಮಾನದಲ್ಲಿ ತೀವ್ರ ಏರುಪೇರು ಆಗುವ ಸಾಧ್ಯತೆ ಇದೆ.
ಭಾರಿ ಮಳೆಯ ಪರಿಣಾಮವಾಗಿ ರಸ್ತೆ ಸಂಚಾರ, ಕೃಷಿ ಚಟುವಟಿಕೆಗಳು ಹಾಗೂ ದಿನನಿತ್ಯದ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ರೈತರು ತಮ್ಮ ಬೆಳೆಗಳನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಲಹೆ ನೀಡಲಾಗಿದೆ.
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಬಾರಿ ಗಾಳಿ ಸಹಿತ ಮಳೆ ಯಾಗುವ ಮುನ್ಸೂಚನೆ ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆ ಆಗುವ ಸಾಧ್ಯತೆಯಿದ್ದು, ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸಬಹುದು ಎಂದು ಎಚ್ಚರಿಕೆ ನೀಡಲಾಗಿದೆ.
ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆ ಸಂಭವಿಸುವ ಸಾಧ್ಯತೆಯೂ ಇರುವುದರಿಂದ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನದಲ್ಲಿ ತೀವ್ರ ಏರುಪೇರು ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ತೆಡಿಲು ಮತ್ತು ಬಿರುಗಾಳಿಯ ಅಪಾಯ ಇರುವುದರಿಂದ ಜನರು ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳೆ ನಿಲ್ಲಬಾರದು ಎಂದು ಇಲಾಖೆ ಸಲಹೆಯನ್ನು ನೀಡಿದೆ. ಜೊತೆಗೆ, ಆಲಿಕಲ್ಲು ಮಳೆಯ ಪರಿಣಾಮ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ರೈತರು ತಮ್ಮ ಬೆಳೆಗಳನ್ನು ರಕ್ಷಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಅವಧಿಯಲ್ಲಿ ಅನಗತ್ಯವಾಗಿ ಹೊರಗೆ ಸಂಚರಿಸುವುದನ್ನು ತಪ್ಪಿಸಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಸಾರ್ವಜನಿಕರಿಗೆ ಹವಾಮಾನ ಇಲಾಖೆ ಮನವಿ ಮಾಡಿದೆ.
Also Read: