Belagavi News:
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಸೇಡಿದಂತೆ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಈ ಪ್ರದೇಶಗಳಿಗೆ ಎಲ್ಲೋ ನೀಡಲಾಗಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ವ್ಯಾಪಕ ಮಳೆಯ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಜಾಗರೂಕತೆಯ ಮುನ್ನೆಚ್ಚರಿಕೆಗಳನ್ನು ನೀಡಿದೆ.
ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಜಿಸಲಾಗಿದೆ. ಕರಾವಳಿ ಭಾಗಗಳಲ್ಲಿ ಮಳೆಯ ಬರ ಹೆಚ್ಚುವ ನಿರೀಕ್ಷೆ ಇದ್ದು, ರಾಜ್ಯದ ಹವಾಮಾನದಲ್ಲಿ ಮಹತ್ವದ ಬದಲಾವಣೆಗಳು ಕಂಡುಬರುತ್ತವೆ.
ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಕರ್ನಾಟಕ ಹವಾಮಾನ ಎಚ್ಚರಿಕೆ : ಕರಾವಳಿಗೆ ಆರೆಂಜ್ ಅಲರ್ಟ್ ಜೊತೆಗೆ 9 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ:
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯ ಪರಿಸ್ಥಿತಿ ಮುಂದುವರೆಯುವ ನಿರೀಕ್ಷೆ ಇದೆ.
ಉತ್ತರವನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಸೇರಿದಂತೆ ಒಂಬತ್ತು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಮೀ ವೇಗದ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯ ಸಾಧ್ಯತೆ ಇರುವುದರಿಂದ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬಾಗಲಕೋಟೆ,ಬೀದರ್ , ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯ್ಪುರ್ ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ರಾಜ್ಯದ್ಯಂತ ಬಿರುಗಾಳಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ.
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮಳೆ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಭಾರಿ ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ , ಚಿಕ್ಕಮಗಳೂರು, ಹಾಸನ , ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಆಗುವ ನಿರೀಕ್ಷೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ.
ಈ ವೇಳೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಂದಿರಲು ಸೂಚಿಸಲಾಗಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮೈಸೂರು, ಮಂಡ್ಯ, ಚಾಮರಾಜನಗರ,ರಾಮನಗರ, ಕೋಲಾರ, ಕೊಡಗು, ಚಿತ್ರದುರ್ಗ, ದಾವಣಗೆರೆ , ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಾದ್ಯಂತ ಹವಾಮಾನದಲ್ಲಿ ಬದಲಾವಣೆ ಕಂಡುಬರುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಹೆಚ್ಚುವ ನಿರೀಕ್ಷೆ ಇದೆ.
ರಾಜ್ಯದಲ್ಲಿ ಮುಂಗಾರು ಚುರುಕು ಗೊಂಡಿರುವ ಹಿನ್ನೆಲೆಯಲ್ಲಿ ಮಳೆ ಹಾಗೂ ಸಿಡಿಲಿನ ಸಂದರ್ಭಗಳಲ್ಲಿ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಮಳೆ ಮತ್ತು ಸಿಡಿಲಿನ ಸಮಯದಲ್ಲಿ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಇಂತಹ ಸಂದರ್ಭಗಳಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವುದು ಅತ್ಯಂತ ಅಗತ್ಯವಾಗಿದೆ. ರೈತರು ಹಾಗೂ ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ಸೂಚನೆಗಳು ಗಮನಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರಲಾಗಿದೆ. ಮುಂಗಾರು ಮಳೆಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಾಗರೂಕತೆ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಲಾಗುತ್ತಿದೆ.
Also Read:
ಮಾವು ಪ್ರಿಯರ ಸ್ವರ್ಗವಾದ ಲಾಲ್ ಬಾಗ್ ಮೇಳ! ವಿವಿಧ ರೀತಿಯ ಮಾವಿನ ಹಣ್ಣುಗಳು ಜನರ ಮನ ಗೆದ್ದಿವೆ