Belagavi News :
ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಹಾಗು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿ ಭಾಗಗಳಲ್ಲಿ ಈಗಾಗಲೇ ಹಲವು ದಿನಗಳಿಂದ ಮಳೆಯ ಅಬ್ಬರ ಮುಂದುವರೆದಿದ್ದು, ಇಂದೂ ಸಹ ವರುಣನ ಆರ್ಭಟ ಮುಂದುವರೆಯುವ ನಿರೀಕ್ಷೆ ಇದೆ.
ಇನ್ನು ಬೆಂಗಳೂರು, ಮೈಸೂರು, ಬಾಗಲಕೋಟೆ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಮುಂಗಾರು ಮಳೆ ಹಿನ್ನಲೆಯಲ್ಲಿ ರೈತರು, ಪ್ರಯಾಣಿಕರು ಹಾಗೂ ಸಾರ್ವಜನಿಕರು ಸ್ಥಳೀಯ ಹವಾಮಾನ ಮಾಹಿತಿ ಗಮನಿಸುವಂತೆ ಸಲಹೆ ನೀಡಲಾಗಿದೆ.
Karnataka weather update - ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರಿಕೆ ; ಉತ್ತರ ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ :
ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ಮುಂದಿನ ದಿನಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ, ಬಲವಾದ ಗಾಳಿ ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ :
ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ನಿರೀಕ್ಷೆ ಇದೆ.
ಕರಾವಳಿ ಜಿಲ್ಲೆಗಳ ಜನರು ಹಾಗೂ ಪ್ರವಾಸಿಗರು ಹವಾಮಾನ ಪರಿಸ್ಥಿತಿಯನ್ನು ಗಮನಿಸಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆ ಗಾಳಿ ಹೆಚ್ಚು :
ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಲಘು ಅಥವಾ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸಲಿದೆ.
ಇನ್ನು ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದ್ದರೂ, ಬಲವಾದ ಗಾಳಿ ಬೀಸುವ ಮುನ್ಸೂಚನೆ ಇದೆ.
ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಸಾರ್ವಜನಿಕರು ಹವಾಮಾನ ಬದಲಾವಣೆಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಮಳೆಯ ಸಾಧ್ಯತೆ - ಹಲವು ಜಿಲ್ಲೆಗಳಲ್ಲಿ ಬಲವಾದ ಗಾಳಿ ಎಚ್ಚರಿಕೆ :
ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆಯ ಪರಿಣಾಮ ಮುಂದುವರೆಯಲಿದ್ದು, ಮಲೆನಾಡು ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಯಲು ಸೀಮೆ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆಗಳನ್ನು ಹವಾಮಾನ ಇಲಾಖೆ ನೀಡಿದೆ.
ಮಲೆನಾಡು ಭಾಗಗಳಲ್ಲಿ ಮಳೆ ಸಾಧ್ಯತೆ :
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಲಘು ಮಳೆಯಾಗುವ ನಿರೀಕ್ಷೆಯು ಇದೆ. ಮಲೆನಾಡು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.
ಬಯಲು ಸೀಮೆ ಜಿಲ್ಲೆಗಳಲ್ಲಿ ಗಾಳಿಯ ಅಬ್ಬರ :
ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 km ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಹವಮಾನ ಇಲಾಖೆ ಮುನ್ಸೂಚನೆಯಂತೆ, ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಹಾಗೂ ಗಾಳಿಯ ವಾತಾವರಣ ಮುಂದುವರೆಯಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.