Also Read:
ಬೆಂಗಳೂರು, ಮೇ 18: ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆಯೂ ದಾಖಲಾಗಿದ್ದು, ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡು ಬಂದಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ವ್ಯಕ್ತವಾಗಿದೆ.
ಈ ಬೆಳವಣಿಗೆ ರೈತರಿಗೆ ಸಂತಸ ತಂದಿದ್ದು, ಮುಂಗಾರು ಪೂರ್ವ ಚಟುವಟಿಕೆಗಳಿಗೆ ವೇಗ ಸಿಗಲಿದೆ. ಜೂನ್ ಮೊದಲ ವಾರದಲ್ಲೇ ಮುಂಗಾರು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಕೃಷಿ ಚಟುವಟಿಕೆಗಳು ಚುರುಕುಗಳು ನಿರೀಕ್ಷೆ ಇದೆ.
ಇದೀಗ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಜೂನ್ ಮೊದಲ ವಾರದಲ್ಲಿ ನೈಋತ್ಯ ಮುಂಗಾರು ಆರಂಭವಾಗುವ ನೀರಿಕ್ಷೆಯಿದ್ದು, ಈ ಬಾರಿ ಉತ್ತಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಕೆಲ ಪ್ರದೇಶಗಳಲ್ಲಿ 60 ರಿಂದ 100 ಸೆಂಟಿಮೀಟರ್ ವರೆಗೆ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.
ಮುಂಗಾರು ಬೇಗ ಆರಂಭವಾದರೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದ್ದು, ರೈತರು ಬಿತ್ತನೆ ಕಾರ್ಯಗಳಿಗೆ ಸಜ್ಜಾಗುತ್ತಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಪೂರ್ವ ಮುಂಗಾರು ಚುರುಕುಗೊಂಡಿದ್ದು, ಉತ್ತಮ ಮಳೆಯ ನಿರೀಕ್ಷೆ ಹೆಚ್ಚಾಗಿದೆ..
ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಅವರ ಪ್ರಕಾರ ' ಬಂಗಾಳ್ ಕೊಲ್ಲಿಯಲ್ಲಿ ' ವಿಂಡ್ ಕನ್ವರ್ಜನ್' ಪ್ರಮಾಣ ಹೆಚ್ಚಿಸುವುದರಿಂದ ಗಾಳಿಯ ಚಟುವಟಿಕೆ ಜಾಸ್ತಿಯಾಗಿದ್ದು, ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಮೇ 18ರ ಬಳಿಕ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಅವರು ತಿಳಿಸಿದ್ದು, ಮುಂದಿನ ದಿನಗಳಲ್ಲಿ ಪೂರ್ವ ಮುಂಗಾರು ಮತ್ತಷ್ಟು ಚುರುಕುಗೊಳ್ಳಲಿದೆ ಎಂದಿದ್ದಾರೆ. ಜೊತೆಗೆ ಜುಲೈ ತಿಂಗಳ ವೇಳೆಗೆ ಎಲ್ ನೀನೊ ಪರಿಣಾಮ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ಇದರ ಪರಿಣಾಮ ಹವಮಾನ ಮಾದರಿಗಳ ಮೇಲು ಬೀಳಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಕರ್ನಾಟಕದ ಹವಾಮಾನ, ಮುಂಗಾರು ಚಟುವಟಿಕೆಗಳು ಹಾಗೂ ಮುಂದಿನ ಮಳೆಯ ಸ್ಥಿತಿಗತಿ ಕುರಿತು ಸಿ.ಎಸ್. ಪಾಟೀಲ್ ನೀಡಿರುವ ವಿಶ್ಲೇಷಣೆ ಇದೀಗ ರೈತರ ಹಾಗೂ ಸಾರ್ವಜನಿಕರ ಗಮನ ಸೆಳೆಯುತ್ತಿದೆ.
Also Read:
ಸಿನಿಮಾ ಕ್ಷೇತ್ರದಲ್ಲಿ ಶಿಲ್ಪಾ ಗಣೇಶ್ ಹೊಸ ಹೆಜ್ಜೆ : ಪಿಚ್ಚರ್ ಚಿತ್ರದ ಹಾಡಿಗೆ ಧ್ವನಿ