<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ರಾಜ್ಯದಲ್ಲಿ ಮಳೆಯ ಬರ ಮುಂದುವರಿಕೆ ! ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ ಮಳೆಯ ಬರ ಮುಂದುವರಿಕೆ ! ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ? ಇಲ್ಲಿದೆ ಸಂಪೂರ್ಣ ಮಾಹಿತಿ
Summary: Karnataka weather forecast - There is a possibility of heavy rain in many districts of coastal Karnataka and North Karnataka, and the Meteorological Department has declared an alert in some places. The public has been advised to be careful as there is a possibility of thunder and lightning and strong winds.

Belagavi News:

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಉತ್ತರವಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಹವಾಮಾನ ಇಲಾಖೆ ವರದಿಗಳ ಪ್ರಕಾರ, ಕರಾವಳಿಯ ಉತ್ತರ ಕನ್ನಡ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಗುಡುಗು - ಮಿಂಚು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

Sponsored

ನದಿ, ಹಳ್ಳ- ಕೊಳ್ಳಗಳ ಸಮೀಪ ವಾಸಿಸುವವರು, ರೈತರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರಬೇಕು. ಹವಾಮಾನ ಇಲಾಖೆಯ ಮುಂದಿನ ಮುನ್ಸೂಚನೆಗಳನ್ನು ಗಮನಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕರ್ನಾಟಕ ಕರಾವಳಿಯಲ್ಲಿ ಮಳೆಯ ಅಬ್ಬರ - ಉತ್ತರ ಕನ್ನಡದಲ್ಲಿ ಭಾರಿ ಮಳೆ ಸಾಧ್ಯತೆ, ಮೀನುಗಾರರಿಗೆ ಎಚ್ಚರಿಕೆ:

ಕರಾವಳಿ ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಕೆಲದಿನಗಳ ಕಾಲ ಮಳೆಯ ಅಬ್ಬರ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಪ್ರದೇಶಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಇದೇ ವೇಳೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆ ಆಗುವ ಸಾಧ್ಯತೆ ಇದೆ. ಗುಡುಗು - ಮಿಂಚು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.

Sponsored

ಕರಾವಳಿ ಭಾಗದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ನಿರೀಕ್ಷೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ತೆರಳುವ ಮುನ್ನ ಹವಾಮಾನ ಮಾಹಿತಿಯನ್ನು ಪರಿಶೀಲಿಸಿ ಅಗತ್ಯ ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.

ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ - ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ :

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಕೆಲದಿನಗಳ ಕಾಲ ಮಳೆಯ ಜೊತೆಗೆ ಬಿರುಗಾಳಿಯ ವೇಗವೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುಡುಗು - ಮಿಂಚು ಹಾಗೂ ಗಂಟೆಗೆ 30-40 Km ವೇದದ ಬಲವಾದ ಗಾಳಿಯೊಂದಿಗೆ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ನೀಡಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಗಾಳಿಯ ತೀವ್ರತೆ ಹೆಚ್ಚಿರುವುದರಿಂದ ಸಾರ್ವಜನಿಕರು ಜಾಗರೂಕರ ಆಗಿರಬೇಕು ಎಂದು ಸೂಚಿಸಲಾಗಿದೆ.

Sponsored

ಇದೇ ವೇಳೆ ಬೀದರ್, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬಿರುಗಾಳಿಯ ಹಿನ್ನಲೆಯಲ್ಲಿ ಹಳೆಯ ಕಟ್ಟಡಗಳು, ವಿದ್ಯುತ್ ಕಂಬಗಳು ಹಾಗೂ ಮರಗಳ ಕೆಳಗೆ ನಿಲ್ಲಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಾಹನ ಸವಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ - ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ :

ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

Sponsored

ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಳಗಡೆ ಸಾಧಾರಣ ಮಳೆ ಆಗಲಿದೆ.

ಈ ಭಾಗಗಳಲ್ಲಿ ಕೂಡ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮರಗಳ ಕೆಳಗೆ ನಿಲ್ಲುವುದು ಹಾಗೂ ಹಳೆಯ ಕಟ್ಟಡಗಳ ಸಮೀಪ ಹೋಗುವುದನ್ನು ತಪ್ಪಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಉತ್ತರ ಒಳನಾಡಿನ ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳ ಸಾರ್ವಜನಿಕರು ಹಾಗೂ ರೈತರು ಹವಾಮಾನ ವೈಪರೀತ್ಯದ ಸಮಯದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸಲಹೆ ನೀಡಲಾಗಿದೆ.

ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.

Sponsored

Also Read:

ಪ್ರಧಾನಿ ಮೋದಿ ಅವರ ಎರಡು ದಿನಗಳ ಸೆಶೆಲ್ಸ್ ಪ್ರವಾಸ ಆರಂಭ: ದ್ವಿಪಕ್ಷೀಯ ಬಾಂಧವ್ಯ ಬಲಪಡಿಸುವತ್ತ ಮಹತ್ವದ ಮಾತುಕತೆ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online