<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಜೋಗ ಜಲಪಾತಕ್ಕೆ ಮಳೆಗಾಲದ ಕಳೆ : ಡುಮ್ಮಿಕ್ಕಿ ಹರಿಯುತ್ತಿರುವ ಜಲಧಾರೆಗಳ ಅದ್ಬುತ ದೃಶ್ಯ

ಜೋಗ ಜಲಪಾತಕ್ಕೆ ಮಳೆಗಾಲದ ಕಳೆ : ಡುಮ್ಮಿಕ್ಕಿ ಹರಿಯುತ್ತಿರುವ ಜಲಧಾರೆಗಳ ಅದ್ಬುತ ದೃಶ್ಯ
Summary: As the monsoon rains begin, the Jog Falls in Shimoga are gushing water, attracting tourists with their magnificent views of the water. Here is a stunning view of Jog Falls during the monsoon.

Belagavi News :

ಮುಂಗಾರು ಮಳೆಯ ಆರಂಭದೊಂದಿಗೆ ಜೋಗ ಜಲಪಾತದಲ್ಲಿ ಜಲ ವೈಭವ ಕಳೆಗಟ್ಟಿದ್ದು, ಜಲಪಾತದ ಸೊಬಗನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಮಳೆಯ ಪರಿಣಾಮ ಜೋಗದ ಜಲಧಾರೆಗಳು ಮೈದುಂಬಿ ಹರಿಯುತ್ತಿದ್ದು, ಪ್ರಕೃತಿ ಪ್ರಿಯರನ್ನು ಸೆಳೆಯುತ್ತಿವೆ.

ಸದ್ಯ ಜೋಗ ಜಲಪಾತ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಆದರೂ ಜೋಗ ಅಭಿವೃದ್ಧಿ ಪ್ರಾಧಿಕಾರ ಪ್ರವಾಸಿಗರ ವೀಕ್ಷಣೆಗೆ ಯಾವುದೇ ಅಡ್ಡಿ ಮಾಡಿಲ್ಲ. ಸುರಕ್ಷತಾ ಕ್ರಮಗಳನ್ನು ಕೈಗೊಂಡು ಜಲಪಾತ ವೀಕ್ಷಣೆಗೆ ಅವಕಾಶ ನೀಡಲಾಗಿದ್ದು, ಸಾವಿರಾರು ಮಂದಿ ಜೋಗಕ್ಕೆ ಭೇಟಿ ನೀಡಿ ಪ್ರಕೃತಿಯ ವೈಭವವನ್ನು ಆಸ್ವಾದಿಸುತ್ತಿದ್ದಾರೆ.

ಅಭಿವೃದ್ಧಿ ಕಾಮಗಾರಿಗಳ ನಡುವೆಯೂ ಪ್ರವಾಸಿಗರಿಗೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಿರುವುದು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದೆ. ಮಳೆಗಾಲದಲ್ಲಿ ಜೋಗ ಜಲಪಾತದ ಭವ್ಯ ದೃಶ್ಯವನ್ನು ನೋಡಲು ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಜೋಗ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಎಚ್ಚರಿಕೆಯಿಂದ ವೀಕ್ಷಣೆ ಮಾಡುವಂತೆ ಹಾಗೂ ನಿಗದಿತ ಸ್ಥಳದಲ್ಲಿ ಸಂಚರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಮುಂಗಾರು ಅಬ್ಬರಕ್ಕೆ ಜೋಗ ಜಲಪಾತದಲ್ಲಿ ಜಲ ವೈಭವ - ಶಿವಮೊಗ್ಗದ ಜಲಾಶಯಗಳಿಗೆ ಹೆಚ್ಚಿದ ಒಳಹರಿವು :

ಮುಂಗಾರು ಮಳೆಯ ಆರಂಭದೊಂದಿಗೆ ಶಿವಮೊಗ್ಗ ಜಿಲ್ಲೆಯ ಪ್ರಕೃತಿ ತಾಣಗಳು ಕಳೆಗಟ್ಟಿದ್ದು, ಜೋಗ ಜಲಪಾತವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಮಳೆಯ ಪರಿಣಾಮ ಜೋಗ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಭವ್ಯ ಜಲಧಾರಿಗಳ ದೃಶ್ಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ಜಿಲ್ಲೆಯ ಪ್ರಮುಖ ಜಲಾಶಯಗಳಿಗೂ ಒಳಹರಿವು ಹೆಚ್ಚಾಗುತ್ತಿದೆ. ರಾಜ್ಯದ ಅತ್ಯಂತ ಚಿಕ್ಕ ಅಣೆಕಟ್ಟುಗಳಲ್ಲಿ ಒಂದಾದ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಪ್ರಸ್ತುತವಳ ಹರಿವು 21,747 ಕ್ಯೂಸೆಕ್ ಇದೆ.

ಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ 139.6 ಅಡಿಗಳಷ್ಟಿದ್ದು, ಜಲಾಶಯಕ್ಕೆ 4,135 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಸದ್ಯ ಹೊರ ಅರಿವು ಇಲ್ಲ. ಇನ್ನು ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ 1,751.60 ಅಡಿಗಳಿದ್ದು, ಒಳಹರಿವು 18,486 ಕ್ಯೂಸೆಕ್ ಇದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಸದ್ಯ ಸಾಧಾರಣ ಮಳೆ ಯಾಗುತ್ತಿದ್ದು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಗಳಿಗೆ ನೀರಿನ ಅರಿವು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.

ಜೋಗ ಜಲಪಾತದ ಕುರಿತು ಸ್ಥಳೀಯರಾದ ವ್ಯಕ್ತಿ ಒಬ್ಬರು ಮಾತನಾಡಿದ್ದು, ಈ ಬಾರಿ ಮುಂಗಾರು ಮಳೆ ಸುಮಾರು ಒಂದು ತಿಂಗಳು ತಡವಾಗಿ ಆರಂಭವಾದರೂ, ಬಂದ ಮಳಿಯು ಯೋಗ ಜಲಪಾತದ ವೈಭವವನ್ನು ಮತ್ತೆ ಮರುಕಳಿಸಿದೆ. ಜಲಪಾತದ ಸೌಂದರ್ಯ ಈಗ ಮತ್ತಷ್ಟು ಹೆಚ್ಚಾಗಿದೆ " ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಳೆಗಾಲ ಆರಂಭವಾಗುತ್ತಿದ್ದಂತೆ ಜೋಗ ಜಲಪಾತ ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಿರುವವರ ಸಂಖ್ಯೆ ಹೆಚ್ಚಾಗಿದ್ದು, ಪ್ರಕೃತಿ ಪ್ರಿಯರಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.

ಜೋಗ ಜಲಪಾತ ವೀಕ್ಷಣೆಗೆ ಹುಬ್ಬಳ್ಳಿಯಿಂದ ವಿಶೇಷ - ಪ್ರವಾಸಿಗರಿಗೆ KSRTC ಯಿಂದ ಭರ್ಜರಿ ಸೌಲಭ್ಯ :

ಮುಂಗಾರು ಮಳೆಯೊಂದಿಗೆ ವಿಶ್ವವಿಖ್ಯಾತ ಜೋಗ ಜಲಪಾತ ಮೈದುಂಬಿಕೊಂಡಿದ್ದು, ಜಲಧಾರಿಗಳ ವೈಭವವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರವಾಸಿಗರ ಬೇಡಿಕೆಯ ಮೇರೆಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹುಬ್ಬಳ್ಳಿಯಿಂದ ಜೋಗ ಫಾಲ್ಸ್ ಗೆ ನೇರವಾಗಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದೆ.

ವಾರಾಂತ್ಯದ ದಿನಗಳು ಹಾಗೂ ಸಾರ್ವಜನಿಕ ರಜೆ ದಿನಗಳಲ್ಲಿ ಈ ವಿಶೇಷ ಬಸ್ ಗಳು ಸಂಚರಿಸಲಿದ್ದು, ಎರಡನೇ ಶನಿವಾರ, ನಾಲ್ಕನೇ ಶನಿವಾರ, ಭಾನುವಾರ ಮತ್ತು ರಜಾ ದಿನಗಳಲ್ಲಿ ಪ್ರವಾಸಿಗರಿಗೆ ಈ ಸೌಲಭ್ಯ ಲಭ್ಯವಾಗಲಿದೆ.

ಹುಬ್ಬಳ್ಳಿಯ ಗೋಕುಲ ರಸ್ತೆ ಕೇಂದ್ರ ಬಸ್ ನಿಲ್ದಾಣದಿಂದ ವಿಶೇಷ ಬಸ್ ಗಳು ಹೊರಡಲಿದ್ದು, ಪ್ರಯಾಣದ ವೇಳೆ ಮಾರ್ಗ ಮಧ್ಯದಲ್ಲಿ ಶಿರಸಿ ಮಾರಿಕಾಂಬ ದೇವಸ್ಥಾನ ದರ್ಶನಕ್ಕೂ ಅವಕಾಶ ಕಲ್ಪಿಸಲಾಗಿದೆ. ಬಳಿಕ ಜೋಗ ಜಲಪಾತದಲ್ಲಿ ಪ್ರಕೃತಿ ಸೌಂದರ್ಯ ವೀಕ್ಷಣೆ, ಹುಟ್ಟೋಪಚಾರ ಹಾಗೂ ವಿಶ್ರಾಂತಿಗಾಗಿ ಪ್ರವಾಸಿಗರಿಗೆ ಸಾಕಷ್ಟು ಸಮಯ ನೀಡಲಾಗುತ್ತದೆ.

ಮುಂಗಾರು ಮಳೆಯ ಪರಿಣಾಮ ಜೋಗ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಜಲಪಾತದ ಅಪರೂಪದ ದೃಶ್ಯ ವೈಭವ ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ರಾಜ್ಯದ ವಿವಿಧ ಭಾಗಗಳಿಂದ ಜೋಗ ವೀಕ್ಷಣೆಗೆ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆ ಈ ವಿಶೇಷ ಬಸ್ ಸೇವೆ ಆರಂಭಿಸಿದೆ.

ಈ ಕುರಿತು ಮಾತನಾಡಿದ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣ ಅಧಿಕಾರಿ ಎಚ್ ರಾಮನಗೌಡರ, "ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಜೋಗ ಜಲಪಾತ ವೀಕ್ಷಣೆಗೆ ತೆರಳುವ ಪ್ರವಾಸಿಗರ ಅನುಕೂಲಕ್ಕಾಗಿ ವಾರಾಂತ್ಯ ಹಾಗೂ ಸಾರ್ವಜನಿಕ ರಜಾ ದಿನಗಳಲ್ಲಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ" ಎಂದು ತಿಳಿಸಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online