<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ಸರ್ಕಾರದ ವಿರುದ್ಧ ಆಕ್ರೋಶ? ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಬೆಂಗಳೂರಿನಲ್ಲಿ ಪ್ರತಿಭಟನೆ

ಸರ್ಕಾರದ ವಿರುದ್ಧ ಆಕ್ರೋಶ? ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಬೆಂಗಳೂರಿನಲ್ಲಿ ಪ್ರತಿಭಟನೆ
Summary: The political atmosphere in Bengaluru city is heated, and Ramalinga Reddy supporters have staged protests several times. It is learnt that the supporters who took to the streets, citing various reasons, have expressed anger against the government.

belagavi news :

ರಾಮಲಿಂಗಾ ರೆಡ್ಡಿ ರಾಜೀನಾಮೆ: ಬೆಂಬಲಿಗಳಿಂದ ಕೋರಮಂಗಲದಲ್ಲಿ ಪ್ರತಿಭಟನೆ

ಬೆಂಗಳೂರು, ಜೂನ್ 5: ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿದ ರಾಜೀನಾಮೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಅವರ ಬೆಂಬಲಿಗರು ಬೆಂಗಳೂರಿನ ಕೋರಮಂಗಲದಲ್ಲಿರುವ ಅವರ ಕಚೇರಿದರು ಪ್ರತಿಭಟನೆ ನಡೆಸಿದರು.

"ರಾಮಲಿಂಗಾ ರೆಡ್ಡಿ ಅವರಿಗೆ ಅನ್ಯಾಯವಾಗಿದೆ" ಎಂದು ಘೋಷಣೆಗಳನ್ನು ಕೂಗಿದ ಬೆಂಬಲಿಗರು ಅವರ ನಿರ್ಧಾರಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದರು. ರಾಜೀನಾಮೆಯ ಹಿನ್ನೆಲೆಯಲ್ಲಿ ಪಕ್ಷದ ಒಳಗಿನ ಅಸಮಾಧಾನವೂ ಹೊರ ಬಂದಿದೆ.

Sponsored

ಮೂಲಗಳ ಪ್ರಕಾರ, ಜಲ ಸಂಪನ್ಮೂಲ ಖಾತೆ ನೀಡಲಾಗಿದ್ದರೂ ನಗರಾಭಿವೃದ್ಧಿ ಖಾತೆಗಾಗಿ ರೆಡ್ಡಿ ಆಸಕ್ತಿ ಹೊಂದಿದ್ದರು. ಖಾತೆ ಬದಲಾವಣೆಯಿಂದ ತೃಪ್ತಿ ಇಲ್ಲದ ಕಾರಣ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬೆಳವಣಿಗೆ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು ಮುಂದಿನ ಕ್ರಮಗಳ ಬಗ್ಗೆ ಕುತೂಹಲ ಹೆಚ್ಚಾಗಿದೆ.

ರಾಮಲಿಂಗಾ ರೆಡ್ಡಿ ಬೆಂಬಲಿಗರ ಪ್ರತಿಭಟನೆ ತೀವ್ರ: ಕಾರಿಗೆ ಅಡ್ಡ ಪೊಲೀಸರೊಂದಿಗೆ ನೂಕಾಟ

ರಾಜೀನಾಮೆ ಹಿನ್ನೆಲೆಯಲ್ಲಿ ಕೋರಮಂಗಲದಲ್ಲಿ ನಡೆದ ಪ್ರತಿಭಟನೆ ಮತ್ತಷ್ಟು ತೀವ್ರ ಗೊಂಡಿದೆ. ಪ್ರತಿಭಟನೆಯ ವೇಳೆ ಬೆಂಬಲಿಗರು ರಾಮಲಿಂಗಾ ರೆಡ್ಡಿ ಅವರ ಕಾರಿಗೆ ಅಡ್ಡ ಬಿದ್ದು, "ನ್ಯಾಯ ಬೇಕು" ಎಂದು ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Sponsored

ಈ ಸಂದರ್ಭದಲ್ಲಿ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ - ನೂಕಾಟ ಸಂಭವಿಸಿದೆ. ಪರಿಸ್ಥಿತಿ ಕೆಲಸ ಬಿಗಡಾಯಿಸಿದರೂ ನಂತರ ಪೊಲೀಸರು ನಿಯಂತ್ರಣಕ್ಕೆ ತಂದಿದ್ದಾರೆ.

ಬೆಂಬಲಿಗಳು ಪಕ್ಷದ ಹೈಕಮಾಂಡ್ ಹಾಗೂ ರಾಜನಾಯಕರಿಗೆ ತಕ್ಷಣ ಮಧ್ಯ ಪ್ರವೇಶಿಸಿ ರಾಮಲಿಂಗಾ ರೆಡ್ಡಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರೆ ಈ ಘಟನೆ ರಾಜ್ಯ ರಾಜಕೀಯ ವಲಯದಲ್ಲಿ ಮತ್ತಷ್ಟು ಚಾರ್ಚೆಗೆ ಕಾರಣವಾಗಿದೆ.

Also Read:

ಏಕೆ ರಾಜೀನಾಮೆ ನೀಡಿದರು ರಾಮಲಿಂಗಾರೆಡ್ಡಿ? ಹಿಂದಿನ ನಿಜವಾದ ಕಾರಣವೇನು?

Sponsored
You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online