belagavi news:
ಬೆಂಗಳೂರು: ರಾಜಕೀಯ ಉದ್ದೇಶಗಳಿಗೆ ಧಾರ್ಮಿಕ ಸ್ಥಳಗಳನ್ನು ಬಳಸುವುದು ಸರಿಯಲ್ಲ ಎಂದು ಹೈಕೋರ್ಟ್ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದೆ. ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಶಿವಮೊಗ್ಗದ ದೇವಸ್ಥಾನದಲ್ಲಿ ರಾಜಕೀಯ ಸಭೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಸೇರಿದಂತೆ ಇತರರ ವಿರುದ್ಧ ದಾಖಲಾಗಿರುವ ಪ್ರಕಟಕ್ಕೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ.
ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಅದರ ಆಧಾರದ ಮೇಲೆ ಸಲ್ಲಿಸಲಾದ ಆರೋಪ ಪಟ್ಟಿಯನ್ನು ರದ್ದುಗೊಳಿಸುವಂತಿ ಕೋರಿ ಕೆ .ಎಸ್. ಈಶ್ವರಪ್ಪ ಮತ್ತು ಇತರರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತ್ತು ವಿಚಾರಣೆ ವೇಳೆ ಧಾರ್ಮಿಕ ಕೇಂದ್ರಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸುವುದನ್ನು ನ್ಯಾಯಾಲಯ ತೀವ್ರವಾಗಿ ವಿರೋಧಿಸಿ, ಇಂತಹ ಕ್ರಮಗಳಿಗೆ ವಿರಾಮ ನೀಡಬೇಕು ಎಂದು ಸೂಚಿಸಿತು. ಈ ಹಿನ್ನಲೆಯಲ್ಲಿ ಪ್ರಕರಣಿಕ್ಕೆ ತಾತ್ಕಾಲಿಕ ತಡೆ ನೀಡಲು ನ್ಯಾಯಾಲಯ ನಿರಾಕರಿಸಿ ಮುಂದಿನ ವಿಚಾರನೇ ಎಂದು ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ತಮ್ಮ ವಾದವನ್ನು ಮಂಡಿಸಿ ದೇವಸ್ಥಾನದಲ್ಲಿ ಆಯೋಜಿಸಲಾದ ಸಭೆಯಲ್ಲಿ ಯಾವುದೇ ರಾಜಕೀಯ ಭಾಷೆ ನಡೆದಿಲ್ಲ ಎಂದು ನ್ಯಾಯಾಲಯ ಕ್ಕೆ ತಿಳಿಸಿದರು. ದೂರಿನಲ್ಲಿ ಯಾವ ರೀತಿಯ ರಾಜಕೀಯ ಚಟುವಟಿಕೆ ನಡೆದಿದೆ ಎಂಬುದನ್ನು ಸ್ಪಷ್ಟವಾಗಿ ವಿವರಿಸಲಾಗಿಲ್ಲ ಎಂದು ಅವರು ವಾದಿಸಿದರು. ಇದಲ್ಲದೆ, ಕಾಯದೇಯಡಿ ಅಪರಾಧವಾಗುವಂತಹ ಯಾವುದೇ ಕೃತ್ಯ ನಡೆದಿಲ್ಲ ಎಂಬುದನ್ನು ಉಲ್ಲೇಖಿಸಿದರು. ಪ್ರಕರಣದಲ್ಲಿ ಉಲ್ಲೇಖಿಸಿರುವ 14 ಸಾಕ್ಷಿಗಳ ಪೈಕಿ 13 ಮಂದಿ ಸರ್ಕಾರಿ ಅಧಿಕಾರಿಗಳಾಗಿದ್ದು ಕೇವಲ ಒಬ್ಬನೇ ಪ್ರತ್ಯಕ್ಷ ದರ್ಶಿ ಇದ್ದಾರೆ ಎಂಬ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತಂದರು.
ಈ ಹಿನ್ನೆಲೆಯಲ್ಲಿ ದೇವಾಲಯದ ಅರ್ಚಕ ಹಾಗೂ ಮತ್ತೊಬ್ಬ ಅರ್ಜಿದಾರರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಲು ನ್ಯಾಯಾಲಯವನ್ನು ಮನವಿ ಮಾಡಿದರು.
ಸರ್ಕಾರದ ಪರ ವಕೀಲರು, ದೇವಸ್ಥಾನದಲ್ಲಿ ಸಭೆ ನಡೆಸಲಾಗಿದ್ದು ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಚರ್ಚೆ ನಡೆಸಲಾಗಿದೆ. ಆದರಿಂದ ಧಾರ್ಮಿಕ ಸ್ಥಳದಲ್ಲಿ (ದುರ್ಬಳಕೆ) ತಡೆ ಕಾಯಿದೆ ಅಡಿ ಪ್ರಕರಣ ದಾಖಲಿಸಿರುವುದು ಸರಿಯಾದ ಕ್ರಮವಾಗಿದೆ ಎಂದು ಪೀಠಕ್ಕೆ ವಿವರಿಸಿದರು ವಾದ ಆಲಿಸಿದ ಪೀಠ ವಿಚಾರಣೆಯನ್ನು ಮುಂದೂಡಿತು.
ಪ್ರಕರಣದ ಹಿನ್ನೆಲೆ: 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದ ವೇಳೆ ಶಿವಮೊಗ್ಗದ ಆದಿ ರಂಗನಾಥ ದೇವಾಲಯದಲ್ಲಿ ಮಾಜಿ ಸಚಿವ ಕೆ .ಎಸ್. ಈಶ್ವರಪ್ಪ ಮತ್ತು ಇತರರು ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಸಭೆ ನಡೆಸಿ ಚರ್ಚೆ ನಡೆಸಿದರು ಎಂಬ ಆರೋಪ ಕೇಳಿ ಬಂದಿದೆ. ಈ ವಿಷಯವನ್ನು ಚುನಾವಣಾ ಶಿಕ್ಷಕರು ಗಮನಿಸಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.
ದೂರಿನ ಆಧಾರದ ಮೇಲೆ ಕೆ ಎಸ್ ಈಶ್ವರಪ್ಪ ಸೇರಿದಂತೆ ಒಟ್ಟು 9 ಮಂದಿ ವಿರುದ್ಧ ಧಾರ್ಮಿಕ ಸಂಸ್ಥೆಗಳ ( ದುರ್ಬಳಕೆ ತಡೆ) ಕಾಯ್ದೆ ಅಡಿಯಲ್ಲಿ ಸೆಕ್ಷನ್ 3,6 ಮತ್ತು 7ರಂತೆ ಪ್ರಕರಣ ದಾಖಲಾಗಿದೆ. ಧಾರ್ಮಿಕ ಸ್ಥಳವನ್ನು ರಾಜಕೀಯ ಉದ್ದೇಶಗಳಿಗೆ ಬಳಸಲಾಗಿದೆ ಎಂಬ ಆರೋಪ ಈ ಪ್ರಕರಣದ ಮೂಲವಾಗಿದೆ. ಈ ಪ್ರಕರಣವನ್ನು ಪ್ರಶ್ನಿಸಿ ಕೆ ಎಸ್ ಈಶ್ವರಪ್ಪ ಹಾಗೂ ಇತರ ಆರೋಪಿಗಳು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದು ಪ್ರಕರಣ ರದ್ದು ಪಡೆಸಲು ಮನವಿ ಮಾಡಿದ್ದಾರೆ.
Also Read: