<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ಮನರೇಗಾ ಯೋಜನೆ ಮರುಜಾರಿಗಾಗಿ ನಿರ್ಣಯ : ಸಿಎಂ ಸಿದ್ದರಾಮಯ್ಯ

ಮನರೇಗಾ ಯೋಜನೆ ಮರುಜಾರಿಗಾಗಿ ನಿರ್ಣಯ : ಸಿಎಂ ಸಿದ್ದರಾಮಯ್ಯ
Summary: ಸಿಎಂ ಸಿದ್ದರಾಮಯ್ಯರವರು ಮನರೇಗಾ ಯೋಜನೆ ಮರುಜಾರಿಗೆ ತರುವುದಾಗಿ ನಿರ್ಣಯ ಅಂಗೀಕರಿಸಲು ವಿಧಾನಮಂಡಲದಲ್ಲಿ ವಿಶೇಷ ಅಧಿವೇಶನವನ್ನು ಏರ್ಪಡಿಸಿದ್ದಾರೆ.
belagavi news :

ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ಬಂತು. ಇದು ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ ಎಂದು ಸಿಎಂ ತಿಳಿಸಿದರು.
ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದು ಬಿಜೆಪಿಯವರ ಹುನ್ನಾರ. ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ಬಂತು. ಇದು ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ. ದಲಿತರು, ಮಹಿಳೆಯರು, ರೈತರಿಗೆ ಉದ್ಯೋಗ ಒದಗಿಸುವುದು ಯೋಜನೆ ಉದ್ದೇಶ. ವರ್ಷದಲ್ಲಿ ನೂರು ದಿನ ಉದ್ಯೋಗ ಅವಕಾಶ ಈ ಯೋಜನೆಯಲ್ಲಿ ಸಿಗುತ್ತಿತ್ತು ಎಂದು ವಿವರಿಸಿದರು.

ಈ ಉದ್ಯೋಗವನ್ನೇ ಕಸಿಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದೆ. ಉದ್ಯೋಗದ ಹಕ್ಕು ಇಲ್ಲವಾಗಿಸಿದೆ. ಮಹಾತ್ಮ ಗಾಂಧಿಯವರ ಹೆಸರು ತೆಗೆದು ಗೊಂದಲ ಸೃಷ್ಟಿ ಮಾಡುವ ಹುನ್ನಾರ ಇದಾಗಿದೆ. ಈ ಮೂಲಕ ಮತ್ತೆ ಗಾಂಧಿಯವರನ್ನು ಕೊಲೆ ಮಾಡಲಾಗಿದೆ. ಇದು ಸಂಘ ಪರಿವಾರದವರು ಹೇಳಿ ಕೊಟ್ಟಿರುವ ಪಾಠ. 28 ಕೋಟಿ ದಲಿತರಿಗೆ ಇದರಿಂದ ಅನ್ಯಾಯವಾಗಿದೆ. ನಮ್ಮ ಹೋರಾಟ ತೀವ್ರವಾಗಿ ಇರಬೇಕು. ಬಡವರ ಉದ್ಯೋಗದ ಹಕ್ಕು ಕಸಿದುಕೊಂಡವರಿಗೆ ಪಾಠ ಕಲಿಸಬೇಕು. ಬಡವರು ಆರ್ಥಿಕವಾಗಿ ಸಬಲರಾಗುವುದನ್ನು ಸಂಘ ಪರಿವಾರ ಸಹಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮನರೇಗಾ ಕಾಯಿದೆ ಮತ್ತೆ ಜಾರಿ ಅಗುವ ರೀತಿ ಜನಾಂದೋಲನ ನಡೆಯಬೇಕು. ಪ್ರತಿ ಗ್ರಾಮ ಪಂಚಾಯಿತಿ ಸದಸ್ಯ ನರೇಗಾದಲ್ಲಿ ಕೆಲಸ ಮಾಡುತ್ತಿರುವವರನ್ನು ತಲುಪಬೇಕು. ಈ ವಿಷಯದ ಬಗ್ಗೆ ಜನರನ್ನೂ ಜಾಗೃತಗೊಳಿಸುವ ಕೆಲಸವನ್ನು ಶಾಸಕರು ಮಾಡಬೇಕು. ನಮ್ಮ ಹೋರಾಟ ಜನಾಂದೋಲನವಾಗಿ ರೂಪುಗೊಳ್ಳುವಂತಹ ವಾತಾವರಣ ನಿರ್ಮಾಣ ಆಗಬೇಕಿದೆ. ಕಾಂಗ್ರೆಸ್ ಜಾರಿಗೆ ತಂದ ಕಾರ್ಯಕ್ರಮವನ್ನು ರದ್ಧು ಮಾಡಿ ಉದ್ಯೋಗದ ಹಕ್ಕು ಕಸಿದುಕೊಂಡಿರುವುದು ಸಂವಿಧಾನ ಬಾಹಿರ ಕೆಲಸ ಎಂದು ಆರೋಪಿಸಿದರು.ಗ್ರಾಮೀಣ ಕಾರ್ಮಿಕರ ಉದ್ಯೋಗದ ಹಕ್ಕನ್ನು ರಕ್ಷಿಸಲು AICC ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ "ನರೇಗಾ ಉಳಿಸಿ" ಜನಾಂದೋಲನ ಆಯೋಜಿಸುವ ಕುರಿತಂತೆ ಹೋಟೆಲ್ ಅಶೋಕದಲ್ಲಿ ನಡೆದ ಹಿರಿಯ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಮಾತನಾಡಿದರು. ಈ ವೇಳೆ ವಿಶೇಷ ವಿಧಾನಮಂಡಲ ಅಧಿವೇಶನ ಕರೆಯುವುದಾಗಿ ತಿಳಿಸಿದ್ದಾರೆ.
"ಮೂರು ದಿನ ಜಿಲ್ಲಾ ಕೇಂದ್ರಗಳಲ್ಲಿ ಸಚಿವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡಲಾಗುವುದು. ಪ್ರತಿ ಪಂಚಾಯತಿಗಳಲ್ಲಿ ಜಾಗೃತಿ ಮೂಡಿಸಲಾಗುವುದು. ಮನರೇಗಾ ಬದಲಾವಣೆ ಮೂಲಕ 6000 ಕೋಟಿ ರೂ. ಮೊತ್ತದ ಕಾಮಗಾರಿಯನ್ನು ನಮ್ಮ ರಾಜ್ಯದಿಂದ ಕಸಿದುಕೊಳ್ಳಲಾಗಿದೆ.‌ ಮನರೇಗಾ ಯೋಜನೆಯಲ್ಲಿ ಕೆಲಸ ಮಾಡಿದ ಕಾರ್ಮಿಕರಿಗೆ ಒಂದು ವಾರದಲ್ಲಿ ಕೂಲಿ ಕೊಡುವ ಶಕ್ತಿ ಇತ್ತು. ಇದನ್ನೆಲ್ಲಾ ಮುಗಿಸಿ ಹೊಸ ರೂಪದಲ್ಲಿ ಅನ್ಯಾಯ ಮಾಡಿದ್ದಾರೆ. ಮನರೇಗಾದಲ್ಲಿ 90% ಅನುದಾನ ಕೇಂದ್ರ ಸರ್ಕಾರ ನೀಡುತ್ತಿತ್ತು. ಈಗ 60% ಕೇಂದ್ರ ಸರ್ಕಾರ, 40% ರಾಜ್ಯ ಸರ್ಕಾರ ಕೊಡಬೇಕು ಎಂದು ಬದಲಾವಣೆ ತಂದಿದ್ದಾರೆ. ಇದು ಒಕ್ಕೂಟ ವ್ಯವಸ್ಥೆ ವಿಚಾರವಾಗಿದ್ದು, ಈ ವಿಚಾರಗಳನ್ನ ರಾಜ್ಯಗಳ ಜೊತೆ ಚರ್ಚೆ ಮಾಡಬೇಕಿತ್ತು. ಇದನ್ನೆಲ್ಲಾ ಬಿಟ್ಟು ರಾತ್ರೊ, ರಾತ್ರಿ ಏಕಾಏಕಿಯಾಗಿ ಬದಲಾವಣೆ ಮಾಡಿದ್ದಾರೆ ಎಂದು ಹೇಳಿದರು. ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ರಾಜ್ಯಗಳಿಗೆ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡಲು 2 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಖಾಸಗಿ ಹೋಟೆಲ್​​ನಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು, ಮುಖಂಡರ ಸಭೆ ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮನರೇಗಾ ಯೋಜನೆ ರದ್ದು ಮಾಡಿ, ವಿಬಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿರುವ ಹಿನ್ನಲೆಯಲ್ಲಿ ಇಂದು ಶಾಸಕರು, ಸಂಸದರ ಸಭೆ ನಡೆಸಲಾಗಿದೆ. ವಿಬಿ ಜಿ ರಾಮ್ ಜಿ ಕಾಯ್ದೆ ಹಿಂಪಡೆದು, ಮನರೇಗಾ ವಾಪಸ್ ತರಬೇಕು ಎಂದು ಒತ್ತಾಯಿಸಿ ಹೋರಾಟ ಮಾಡಲು ಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದ್ದೇವೆ" ಎಂದರು.

"ಸದ್ಯದಲ್ಲೇ ಪರಾಜಿತ ಅಭ್ಯರ್ಥಿಗಳು, ಬ್ಲಾಕ್ ಹಾಗೂ ಬೂತ್ ಅಧ್ಯಕ್ಷರ ಸಭೆ ಕರೆಯಲಾಗುವುದು. ಕೇಂದ್ರ ಸರ್ಕಾರದ ಈ ಕಾನೂನು ದೇಶಕ್ಕೆ ಬಹು ದೊಡ್ಡ ಮಾರಕವಾಗಿದ್ದು, ಇದನ್ನು ತೆಗೆದುಹಾಕಿ, ಮನರೇಗಾ ಪುನಃ ಸ್ಥಾಪನೆಗೆ ಬೃಹತ್ ಹೋರಾಟ ನಡೆಸಲಾಗುವುದು. ಗ್ರಾಮ ಪಂಚಾಯತಿ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಹೋರಾಟ ರೂಪಿಸಲಾಗುವುದು. ಜ. 26 ರಿಂದ ಫೆ. 2ರವರೆಗೆ ತಾಲೂಕು ಮಟ್ಟದಲ್ಲಿ 5 ಕಿ.ಮೀ ಪಾದಯಾತ್ರೆ ನಡೆಸಲಾಗುವುದು. ಉದ್ಯೋಗ ಕಾರ್ಡ್ ಹೊಂದಿರುವ ಕಾರ್ಮಿಕರ ಜತೆ ಈ ಪಾದಯಾತ್ರೆ ಮಾಡಲಾಗುವುದು. ಈ ಪಾದಯಾತ್ರೆಯಲ್ಲಿ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ" ಎಂದು ಮಾಹಿತಿ ನೀಡಿದರು.

ಇನ್ನಷ್ಟು ಓದಿರಿ:
ಮಲೆಯಾಳಿ ಭಾಷಾ ಮಸೂದೆ - 2025 ಹಿಂಪಡೆಯುವಿಕೆ - ಸಿ ಎಂ ಸಿದ್ದರಾಮಯ್ಯ
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online