Belagavi News :
ಬೆಳಗಾವಿಯಲ್ಲಿ ಆರ್ ಎಸ್ ಎಸ್ ನ ಮಹತ್ವದ ಸಭೆ ನಡೆಯುತ್ತಿರುವ ನಡುವೆಯೇ , ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ಕೆಪಿಸಿಸಿ ಕಾರ್ಯಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ಸಭೆಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ ಮಾತನಾಡಿ, "ಇವರು ಈ ರೀತಿ ಸಭೆ ಸೇರುತ್ತಾರೋ, ಆಗೆಲ್ಲ ಗಲಭೆಗಳಾಗಿವೆ " ಎಂದು ಆರೋಪಿಸಿದರು. ಅಲ್ಲದೆ, ಈ ಕುರಿತು ಗುಪ್ತಚರ ಇಲಾಖೆಗಳಿಂದಲೂ ಕೆಲವು ಮಾಹಿತಿಗಳು ಬಂದಿವೆ ಎಂದು ಹೇಳಿ, "ಈ ಬಗ್ಗೆ ಇಂಟೆಲಿಜೆನ್ಸ್ ಕಡೆಯಿಂದ ನಮಗೂ ಕೆಲ ಮಾಹಿತಿ ಬಂದಿದೆ. ಸೂಕ್ತ ಸಮಯದಲ್ಲಿ ಹೇಳುತ್ತೇನೆ " ಎಂದು ಹೇಳಿದರು.
ಇದಕ್ಕೂ ಮುನ್ನ ಬಿಕೆ ಹರಿಪ್ರಸಾದ್ ಅವರು, ಬೆಳಗಾವಿಯಲ್ಲಿ ನಡೆಯುತ್ತಿರುವ ಆರ್ ಎಸ್ ಎಸ್ ಸಭೆಯ ಬಗ್ಗೆ ಮಾತನಾಡುತ್ತಾ, ಹಿಂದಿ ಇಂತಹ ಸಭೆಗಳ ನಂತರ ಕೆಲವು ಗಂಭೀರ ಘಟನೆಗಳು ನಡೆದಿದ್ದವು ಎಂದು ಉಲ್ಲೇಖಿಸಿ, ಈ ಬಾರಿ ಬೆಳವಣಿಗೆಗಳ ಮೇಲು ಗಮನವಿದೆ ಎಂಬರ್ಥದ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆ ಬಿಜೆಪಿ ನಾಯಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಪ್ರಿಯಾಂಕ ಖರ್ಗೆ ಅವರ ಬೆಂಬಲದ ಹೇಳಿಕೆಯೊಂದಿಗೆ ಈ ವಿಚಾರ ಮತ್ತಷ್ಟು ರಾಜಕೀಯ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಆರೋಪ - ಪ್ರತ್ಯಾರೋಪಗಳು ಮುಂದುವರೆದಿದೆ.
ಆರ್ ಎಸ್ ಎಸ್ ಸಭೆಗಳ ಕುರಿತು ಪ್ರಿಯಾಂಕ ಖರ್ಗೆ ಹೇಳಿಕೆ ; ಶಾಂತಿ ಕದಡಲು ಯತ್ನಿಸಿದರೆ ಕಠಿಣ ಕ್ರಮದ ಎಚ್ಚರಿಕೆ :
ಆರ್ ಎಸ್ ಎಸ್ ಸಭೆಗಳ ಕುರಿತು ಸಚಿವ ಪ್ರಿಯಾಂಕ ಖರ್ಗೆ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ಸಮಾವೇಶಗಳ ಬಳಿಕ ನಡೆದ ಕೆಲವು ಘಟನೆಗಳನ್ನು ಉಲ್ಲೇಖಿಸಿ, ಅವುಗಳ ಕುರಿತು ಇತಿಹಾಸ ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಪರಿಶೀಲನೆ ಅಗತ್ಯವಿದೆ ಎಂದು ಹೇಳಿದರು.
ಪ್ರಿಯಾಂಕ್ ಖರ್ಗೆ ಮಾತನಾಡಿ, " RSS ಸಮಾವೇಶಗಳಾದ ನಂತರ ಕೊಲೆಗಳು ಮತ್ತು ಇತರೆ ಘಟನೆಗಳು ನಡೆದಿರುವ ಇತಿಹಾಸ ಇದೆ. ವಾಸ್ತವ ಅಂಶಗಳನ್ನು ಪರಿಶೀಲಿಸಿದರೆ, ಇವರು ಈ ರೀತಿ ಸಭೆ ಸೇರುತ್ತಾರೋ ಅವಾಗೆಲ್ಲ ಗಲಬೆಗಳು ನಡೆದಿವೆ. ಈ ಬಗ್ಗೆ ಇಂಟಲಿಜೆನ್ಸ್ ಇಲಾಖೆಯಿಂದಲೂ ಕೆಲ ಮಾಹಿತಿ ಬಂದಿದೆ. ಸೂಕ್ತ ಸಮಯದಲ್ಲಿ ಅದನ್ನು ಬಹಿರಂಗಪಡಿಸುತ್ತೇನೆ" ಎಂದು ಹೇಳಿದರು.
ಇದೇ ವೇಳೆ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮಾತನಾಡಿದ ಅವರು, ಯಾವುದೇ ಸಂಘಟನೆ ಅಥವಾ ಗುಂಪು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಅಥವಾ ಗಲಾಟೆ ನಡೆಸಲು ಯತ್ನಿಸಿದರೆ ಗ್ರಹ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
" ಯಾರೇ ಆಗಲಿ, ಯಾವುದೇ ಸಮಾಜದ ಸಂಘಟನೆ ಆಗಿರಲಿ, ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದರೆ ಸರ್ಕಾರ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಮ್ಮ ಬಳಿ ಕೆಲ್ಲ ಮಾಹಿತಿ ಇದೆ. ಕಾನೂನು ಉಲ್ಲಂಘಿಸುವ ಯಾವುದೇ ಸಂಘಟನೆಯ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು " ಎಂದು ಸಚಿವರು ಹೇಳಿದರು.
ಪ್ರಿಯಾಂಕ್ ಖರ್ಗೆ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರಕ್ಕೆ ಮತ್ತಷ್ಟು ವೇಗ ನೀಡಿದೆ.
ಆರ್ ಎಸ್ ಎಸ್ ಸಭೆ ಕುರಿತು ಬಿ.ಕೆ.ಹರಿಪ್ರಸಾದ್ ಹೇಳಿಕೆ ವಿವಾದ ; ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ :
ಆರ್ ಎಸ್ ಎಸ್ ಸಭೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಬಿಕೆ ಹರಿಪ್ರಸಾದ್ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಅವರ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಬಿಕೆ ಹರಿಪ್ರಸಾದ್, "ಹಿಂದಿ ಆರ್ ಎಸ್ ಎಸ್ ಸಭೆಗಳ ಬಳಿಕ ಎಂ ಎಂ ಕಲಬುರ್ಗಿ ಹಾಗೂ ಗೌರಿ ಲಂಕೇಶ್ ಹತ್ತಿಗಳಂತಹ ಘಟನೆಗಳು ನಡೆದಿದ್ದವು. ಈಗ ಬೆಳಗಾವಿಯಲ್ಲಿ ನಡೆಯುತ್ತಿರುವ ಸಭೆಯ ಬಳಿಕ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು " ಎಂದು ಹೇಳಿದ್ದಾರೆ.
ಈ ಹೇಳಿಕೆ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ನಾಯಕರು ಇದನ್ನು ತೀವ್ರವಾಗಿ ಖಂಡಿಸಿದ್ದಾರೆ. ಹರಿಪ್ರಸಾದ್ ಅವರ ಹೇಳಿಕೆ ಆಧಾರ ರಹಿತ ಹಾಗೂ ಪ್ರಚೋದನಕಾರಿ ಎಂದು ಬಿಜೆಪಿ ಆರೋಪಿಸಿದ್ದು, ಕಾಂಗ್ರೆಸ್ ನಾಯಕರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.
ಇದರ ಬೆನ್ನಲ್ಲೇ ಸಚಿವ ಪ್ರಿಯಂ ಖರ್ಗೆ ಕೂಡ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿ ರಾಜ್ಯದಲ್ಲಿ ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಬೆಳವಣಿಗೆಯಿಂದ ರಾಜ್ಯ ರಾಜಕೀಯದಲ್ಲಿ ಆರೋಪ ಮತ್ತು ಪ್ರತ್ಯಾರೋಪಗಳು ಮತ್ತಷ್ಟು ತೀವ್ರಗೊಂಡಿವೆ.