Belagavi News:
ಶಿವಮೊಗ್ಗ: ನಗರದಲ್ಲಿ ನಂಬರ್ ಪ್ಲೇಟ್ ಇಲ್ಲದೆ ಬೈಕ್ ಚಲಾಯಿಸುತ್ತಿರುವ ಸವಾರರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ ಪಿ) ಭಾರಿ ಮಳೆ ಹಿನ್ನೆಲೆ ನಿಖಿಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಂಚಾರಿ ನಿಯಮ ಉಲ್ಲಂಘಿಸಿ ನಂಬರ್ ಪ್ಲೇಟ್ ತೆಗೆದು ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಶಿವಮೊಗ್ಗ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿಯಾದ ಬಳಿಕ ನಗರದ ಪ್ರಮುಖ ರಸ್ತೆ, ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಕ್ಯಾಮೆರಾಗಳ ಮೂಲಕ ಸಂಚಾರಿ ನಿಯಮ ಉಲ್ಲಂಘಿಸುವ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಪತ್ತೆಯಾಗುತ್ತಿವೆ.
ಸಂಚಾರಿ ನಿಯಮ ಉಲ್ಲಂಘನೆಗೆ ವಿಧಿಸಲಾಗುವ ದಂಡದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕೆಲ ಬೈಕ್ ಸವಾರರು ತಮ್ಮ ವಾಹನಗಳ ಹಿಂಬದಿ ನಂಬರ್ ಪ್ಲೇಟ್ ಗಳನ್ನು ಉದ್ದೇಶಪೂರ್ವಕವಾಗಿ ತೆಗೆದು ಸಂಚರಿಸುತ್ತಿರುವುದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ.
ಈ ರೀತಿಯ ಕೃತ್ಯ ಮೋಟಾರು ವಾಹನ ಕಾಯ್ದೆಯ ಗಂಭೀರ ಉಲ್ಲಂಘನೆಯಾಗಿದ್ದು. ನಂಬರ್ ಪ್ಲೇಟ್ ಇಲ್ಲದೆ ಅಥವಾ ನಿಯಮಬಾಹಿರವಾಗಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ತಪಾಸನೆ ನಡೆಸಿ ದಂಡ ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ ಪಿ ನಿಖಿಲ್ ಎಚ್ಚರಿಕೆ ನೀಡಿದ್ದಾರೆ.
ವಾಹನ ಸವಾರರು ಕಡ್ಡಾಯವಾಗಿ ಮುಂಭಾಗ ಮತ್ತು ಹಿಂಭಾಗದಲ್ಲಿ ಮಾನ್ಯ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಅಳವಡಿಸಿಕೊಂಡು ಸಂಚಾರಿ ನಿಯಮಗಳನ್ನು ಪಾಲಿಸಬೇಕು ಎಂದು ಪೊಲೀಸ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ಎಸ್ ಪಿ ಸೂಚನೆಯಂತೆ ಸಂಚಾರಿ ಪೊಲೀಸ್ ಠಾಣೆಯ ಪಿಐ ದೇವರಾಜ್ ಹಾಗೂ ಅವರ ತಂಡ ಕಡೆದ ಎರಡು ದಿನಗಳಿಂದ ವಿಶೇಷ ತಪಾಸನೆ ನಡೆಸಿದ್ದು, ನಂಬರ್ ಪ್ಲೇಟ್ ಇಲ್ಲದೇ ಸಂಚರಿಸುತ್ತಿದ್ದ ಸುಮಾರು 74 ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವಾಹನಗಳ ವಿರುದ್ಧ ಕೇಂದ್ರ ಮೋಟಾರ್ ವಾಹನ ನಿಯಮಗಳು, 1988 ರ ನಿಯಮ 50 (CMV Rule 50) ಹಾಗೂ ಐಎಂವಿ ಕಾಯ್ದೆಯ ಕಲಂ 177 (IMV Act Section 177) ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಪೊಲೀಸ್ ಇಲಾಖೆ ಮುಂದಿನ ದಿನಗಳಲ್ಲಿಯೂ ನಗರಾಧ್ಯಂತ ಇಂತಹ ವಿಶೇಷ ಕಾರ್ಯಚರಣೆಯನ್ನು ನಿರಂತರವಾಗಿ ಮುಂದುವರಿಸಲಿದ್ದು. ನಂಬರ್ ಪ್ಲೇಟ್ ಇಲ್ಲದೇ ಅಥವಾ ನಿಯಮ ಬಾಹಿರವಾಗಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ನಿಖಿಲ್ ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕರು ತಮ್ಮ ವಾಹನಗಳಿಗೆ ನಿಯಮಾನುಸಾರ ಮುಂಭಾಗ ಮತ್ತು ಹಿಂಭಾಗದಲ್ಲಿ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಅಳವಡಿಸಿಕೊಂಡು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲವಾದರೆ ದಂಡ ಸೇರಿದಂತೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಸ್ ಪಿ ಖಡಕ್ ಎಚ್ಚರಿಕೆ ನೀಡಿದ್ದಾರೆ.