<?= $pageTitle ?>
Logo
ಮುಖಪುಟ ಓದುವುದು ಕೇಳು
Trending

SSLC- 2 ಪರೀಕ್ಷೆಯಲ್ಲಿ ನಿಯಮ ವಿವಾದ: ಹಿಜಾಬ್ ಧರಿಸಿ ಬಂದವರಿಗೆ ಅವಕಾಶ ಇಲ್ಲ!

SSLC- 2 ಪರೀಕ್ಷೆಯಲ್ಲಿ ನಿಯಮ ವಿವಾದ: ಹಿಜಾಬ್ ಧರಿಸಿ ಬಂದವರಿಗೆ ಅವಕಾಶ ಇಲ್ಲ!
Summary: A controversial incident has come to light in which students wearing hijab were denied admission in the SSLC-2 exam. This decision has led to a debate in the education sector and confusion has increased about the rules. Along with this, today's top 4 news stories are also attracting attention, and significant developments have been reported regarding the exam and administrative matters.

Belagavi news:

ಬೆಂಗಳೂರು ಮೇ 18: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಎಸ್ ಎಸ್ ಎಲ್ ಸಿ 2ನೇ ಪರೀಕ್ಷೆ (SSLC 2 EXAM) ಇಂದಿನಿಂದ ಆರಂಭವಾಗಿದೆ. ವಿದ್ಯಾರ್ಥಿಗಳು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.

ಸರ್ಕಾರ ಇತ್ತೀಚಿಗೆ ಧಾರ್ಮಿಕ ಸಂಕೇತಗಳನ್ನು ಧರಿಸಿ ಪರೀಕ್ಷೆ ಬರೆಯುವಾಗ ಕುರಿತು ಹೊಸ ಮಾರ್ಗಸೂಚಿ ಹೊರಡಿಸಿದ್ದು, ಅದರಂತೆ ಜನಿವಾರ, ಶಿವಧಾರ, ಲಿಂಗ, ರುದ್ರಾಕ್ಷಿ ಸೇರಿದಂತೆ ಕೆಲವು ಧಾರ್ಮಿಕ ಸಂಕೇತಗಳನ್ನು ಧರಿಸಲು ಅವಕಾಶ ನೀಡಲಾಗಿದೆ. ಆದರೆ, ಈ ನಿಯಮಗಳ ನಡುವೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯುವ ಕುರಿತು ಸ್ಪಷ್ಟ ನಿರ್ಬಂಧ ಇರುವುದರಿಂದ ಕೆಲವು ಕೇಂದ್ರಗಳಲ್ಲಿ ಗೊಂದಲದ ಪರಿಸ್ಥಿತಿ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ 2ನೇ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ಹಾಜರಾದ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿಲ್ಲ ಎಂಬ ಮಾಹಿತಿ ಹೊರ ಬಂದಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಅಸಮಾಧಾನ ಮತ್ತು ಚರ್ಚೆ ಉಂಟಾಗಿದೆ ಶಿಕ್ಷಣ ಇಲಾಖೆ ಈ ಸಂಬಂಧ ಸ್ಪಷ್ಟ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುತ್ತಿದೆ ಎಂದು ತಿಳಿದುಬಂದಿದೆ.

ಕರ್ನಾಟಕದಾದ್ಯಂತ ಎಸ್ ಎಸ್ ಎಲ್ ಸಿ - 2 ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಲಾಗಿದೆ ಎಂಬ ವಿಷಯ ಚರ್ಚೆಗೆ ಕಾರಣವಾಗಿದೆ. ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಹಾಜರಾಗುತ್ತಿದ್ದು, ಶಿಕ್ಷಣ ಇಲಾಖೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದೆ.

ಎಸ್ ಎಸ್ ಎಲ್ ಸಿ ಮೊದಲ ಪರೀಕ್ಷೆಯಲ್ಲಿಯೇ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ನೀಡಲಾಗಿರಲಿಲ್ಲ ಎಂಬ ವಿಷಯ ಇದೀಗ ಮತ್ತೆ ಚರ್ಚೆಗೆ ಬಂದಿದೆ. ಅದೇ ರೀತಿಯಾಗಿ ಎರಡನೇ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಸರ್ಕಾರದಿಂದ ವಸ್ತ್ರಸಂಹಿತೆ ಕುರಿತು ಯಾವುದೇ ಹೊಸ ಆದೇಶ ಬಂದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಹಿಂದಿನಂತೆಯೇ ಪರೀಕ್ಷಾ ನಿಯಮಗಳನ್ನು ಅನುಸರಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.

ಹಿಜಾಬ್ ಧರಿಸಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಹಿಜಾಬ್ ತೆಗೆದು ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿಯುತವಾಗಿ ಪರೀಕ್ಷೆ ನಡೆಯುವಂತೆ ಕ್ರಮ ಕೈಗೊಳ್ಳಲಾಗಿದೆ.

ಇಂದಿನಿಂದ ಮೇ 25 ರವರೆಗೆ ಎಸ್ ಎಸ್ ಎಲ್ ಸಿ- 2 ಪರೀಕ್ಷೆ ನಡೆಯಲಿದೆ ಈ ವರ್ಷ ಎರಡನೇ ಪರೀಕ್ಷೆಗೆ ಒಟ್ಟು 1,15, 112 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 7,658 ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

Also Read:

10 ವರ್ಷಗಳ ಬಳಿಕ ಕೇರಳದಲ್ಲಿ ಕಾಂಗ್ರೆಸ್ ಸರ್ಕಾರ: ಸತೀಶನ್ ಸಿಎಂ ಆಗಿ ಪದಗ್ರಹಣ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online